ತಾತ್ಕಾಲಿಕ ವೇಳಾಪಟ್ಟಿ ಪ್ರಕಟ : ಎಸ್​ಎಸ್​ಎಲ್​ಸಿ, ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯು 2024 ರ ಮಾರ್ಚ್ 2ರಿಂದ ಆರಂಭಗೊಂಡು ಮಾರ್ಚ್ 22 ಕ್ಕೆ ಮುಕ್ತಾಯವಾಗಲಿದೆ. ಹಾಗೂ ಎಸ್​ಎಸ್​ಎಲ್​ಸಿ ಪರೀಕ್ಷೆಯು ಮಾರ್ಚ್ 25 ರಿಂದ ಏಪ್ರಿಲ್ 6 ರವರೆಗೆ ನಡೆಯಲಿದೆ.2023-24 ನೇ ಸಾಲಿನ ಎಸ್​ಎಸ್​ಎಲ್​ಸಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ 1ರ ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ.2023-24 ನೇ ಸಾಲಿನ ಎಸ್​ಎಸ್​ಎಲ್​ಸಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ 1ರ ತಾತ್ಕಾಲಿಕ ವೇಳಾಪಟ್ಟಿ ಪ್ರಕಟಗೊಂಡಿದೆ. ಎಸ್​ಎಸ್​ಎಲ್​ಸಿ […]

ಹಿರಿಯಡಕ ದೇವಸ್ಥಾನದ ಸಿಬ್ಬಂದಿ ನಾಪತ್ತೆ

ಹಿರಿಯಡಕ: ಹಿರಿಯಡಕ ದೇವಸ್ಥಾನದಲ್ಲಿ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಸಂದೇಶ್ (40) ಎಂಬವರು ನ.29ರಂದು ಬೆಳಿಗ್ಗೆ 10ಗಂಟೆಯಿಂದ ನಾಪತ್ತೆಯಾಗಿದ್ದಾರೆ. ಇವರು ಎಲ್ಲಿಯಾದರೂ ಕಂಡುಬಂದಲ್ಲಿ ಮೊಬೈಲ್ 9241015746 ಸಂಪರ್ಕಿಸುವಂತೆ ಕೋರಲಾಗಿದೆ.

ಬೆಂಗಳೂರು: ಮಕ್ಕಳನ್ನು ಮನೆಗೆ ಕರೆದೊಯ್ದ ಪೋಷಕರು, ಹಲವು ಶಾಲೆಗಳಿಗೆ ಬಾಂಬ್ ಬೆದರಿಕೆ ಸಂದೇಶ

ಬೆಂಗಳೂರು: ನಗರದ 15 ಶಾಲೆಗಳ ಆಡಳಿತ ಮಂಡಳಿಯ ಇ-ಮೇಲ್​ಗೆ ಬೆದರಿಕೆ ಸಂದೇಶಗಳು ಬಂದಿವೆ.ರಾಜಧಾನಿ ಬೆಂಗಳೂರಿನ ಹಲವು ಶಾಲೆಗಳಿಗೆ ಬಾಂಬ್ ಇಟ್ಟಿರುವುದಾಗಿ ದುಷ್ಕರ್ಮಿಗಳು ಇಂದು ಬೆದರಿಕೆ ಹಾಕಿದ್ದಾರೆ. ನಗರದ ಕೆಲವು ಶಾಲೆಗಳಿಗೆ ಇಂದು ಬೆಳಗ್ಗೆ ಇಮೇಲ್ ಮೂಲಕ ‘ಬಾಂಬ್ ಬೆದರಿಕೆ’ ಕರೆಗಳನ್ನು ಕಳುಹಿಸಲಾಗಿದೆ. ಈ ಬಗ್ಗೆ ನಮ್ಮ ಬಾಂಬ್ ಪತ್ತೆ ದಳದವರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಈವರೆಗಿನ ತಪಾಸಣೆಯಿಂದ ಇವು ಸುಳ್ಳು ಕರೆಗಳೆಂದು ಕಂಡುಬರುತ್ತಿದೆ. ಆದಾಗ್ಯೂ ಇಮೇಲ್ ಕಳುಹಿಸಿದ ವ್ಯಕ್ತಿಗಳ ಪತ್ತೆಗೆ ಎಲ್ಲ ಕ್ರಮ ಕೈಗೊಳ್ಳಲಾಗುವುದು ಎಂದು ನಗರ […]

ಸಿಎಂ ಸಿದ್ದರಾಮಯ್ಯ : ಮುಂದಿನ ಐದು ವರ್ಷಗಳಲ್ಲಿ ಭಾರತ, ಕರ್ನಾಟಕ ಏಡ್ಸ್ ಮುಕ್ತವಾಗಲಿ

ಬೆಂಗಳೂರು: ವಿಧಾನಸೌಧದ ಬ್ಯಾಂಕ್ವೆಟ್ ಹಾಲ್​ನಲ್ಲಿ ಆಯೋಜಿಸಲಾಗಿದ್ದ ವಿಶ್ವ ಏಡ್ಸ್ ದಿನ 2023 ಮತ್ತು 25ನೇ ರಜತ ಮಹೋತ್ಸವ ಉದ್ಘಾಟಿಸಿ ಮಾತನಾಡಿದ ಅವರು, “ಇಂದು ವಿಶ್ವ ಏಡ್ಸ್ ದಿನ. ಈ ಸಾಂಕ್ರಾಮಿಕ ರೋಗ ತಡೆಯುವ ಜವಾಬ್ದಾರಿ ಎಲ್ಲರ ಮೇಲಿದೆ. ಈ ರೋಗ 1986ರಲ್ಲಿ ಭಾರತದಲ್ಲಿ ಹಾಗೂ 1987ರಲ್ಲಿ ಕರ್ನಾಟಕದಲ್ಲಿ ಪತ್ತೆಯಾಗಿತ್ತು” ಎಂದರು.”ಮುಂದಿನ ಐದು ವರ್ಷಗಳಲ್ಲಿ ಭಾರತ ಹಾಗೂ ಕರ್ನಾಟಕ ಏಡ್ಸ್ ಮುಕ್ತ ದೇಶ, ರಾಜ್ಯ ಆಗಲಿ. ಈ ದಿಕ್ಕಿನಲ್ಲಿ ಎಲ್ಲರೂ ಒಟ್ಟಾಗಿ ಕಾರ್ಯಪ್ರವೃತ್ತರಾಗಬೇಕು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಏಡ್ಸ್ […]

ಸಿಒಪಿ 28 ಸಭೆಯಲ್ಲಿ ಅಂತರರಾಷ್ಟ್ರೀಯ ನಿಯೋಗವನ್ನು ಮುನ್ನಡೆಸಲಿರುವ ಸಿಎಚ್‌ಡಿ ಗ್ರೂಪ್‌

ಮಂಗಳೂರು: ಸಿಎಚ್‌ಡಿ ಗ್ರೂಪ್‌ ನಿಂದ ಯುಎಇಯ ಸಿಒಪಿ 28 ಸಭೆಯಲ್ಲಿ ಜಾಗತಿಕ ನಿಯೋಗದ ಮುನ್ನಡೆಸುವಿಕೆ ಯುನೈಟೆಡ್‌ ಅರಬ್‌ಎಮಿರೇಟ್ಸ್ನಲ್ಲಿ ಯುಎನ್‌ಎಫ್‌ಸಿಸಿಯ ಸಿಒಪಿ 28 ಸಭೆಯಲ್ಲಿ ಮಂಗಳೂರು ಪ್ರಧಾನ ಕಚೇರಿಯ ಜಾಗತಿಕ ಆರೋಗ್ಯ ಸಂಸ್ಥೆಯಾದ ಸಿಎಚ್‌ಡಿ ಗ್ರೂಪ್‌ ಸಂಸ್ಥೆಯು ಅಂತರರಾಷ್ಟ್ರೀಯ ನಿಯೋಗವನ್ನು ಮುನ್ನಡೆಸಲಿದೆ. ಸಿಒಪಿ 28 ಸಭೆಯು 2023, ನವೆಂಬರ್ 30 ರಿಂದ ಡಿಸೆಂಬರ್ 12ರವರೆಗೆ ಜರುಗಲಿದೆ. ಸಿಎಚ್‌ಡಿ ಗ್ರೂಪ್‌ ಸಂಸ್ಥೆಯು ದಕ್ಷಿಣ ಏಷ್ಯಾ, ಆಫ್ರಿಕಾ ಮತ್ತುಇರಾನ್‌ನಿಂದ 7 ಸದಸ್ಯರನ್ನೊಳಗೊಂಡ ತಜ್ಞರ ನಿಯೋಗವನ್ನು ಮುನ್ನಡೆಸುತ್ತದೆ. ಹಾಗೂ, ಹವಾಮಾನ ಬದಲಾವಣೆಯ ಸಾರ್ವಜನಿಕ […]