ತೆಂಕಪೇಟೆ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವ

ಉಡುಪಿ: ತೆಂಕಪೇಟೆ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನದಲ್ಲಿ ವಾಡಿಕೆಯಂತೆ ವರ್ಷಂಪ್ರತಿ ಜರಗುವ ಕಾರ್ತಿಕ ದೀಪೋತ್ಸವ ಬುಧವಾರದಂದು ಸಂಪನ್ನವಾಯಿತು. ಶ್ರೀ ದೇವರಿಗೆ ವಿಶೇಷ ಅಲಂಕಾರ, ಪಲ್ಲಕಿ ಉತ್ಸವ, ಮಹಾಪೂಜೆ, ಸಮಾರಾಧನೆ, ಸಾವಿರಾರು ಹಣತೆಗಳ ದೀಪಗಳಿಂದ ಅಲಂಕೃತವಾದ ಕೆರೆದೀಪ, ಬಳಿಕ ಪೇಟೆ ಉತ್ಸವ, ಕಟ್ಟೆಪೂಜೆ ನಡೆಯಿತು. ಧಾರ್ಮಿಕ ಪೂಜಾ ವಿಧಾನಗಳನ್ನು ರ್ಚಕರಾದ ವಿನಾಯಕ ಭಟ್ ಹಾಗೂ ದಯಾಘನ್ ಭಟ್ ನೆರವೇರಿಸಿದರು. ನೂರಾರು ಭಕ್ತರು ಸರತಿ ಸಾಲಿನಲ್ಲಿ ಬಂದು ದೇವರ ದರ್ಶನ ಪಡೆದರು ಧನ್ಯರಾದರು. ದೇವಳದ ಆಡಳಿತ ಮೊಕ್ತೇಸರ ಪಿ ವಿ […]

ಹಿರಿಯಡ್ಕ: ಡಿ.2 ಮತ್ತು 3 ರಂದು ರಾಷ್ಟ್ರಮಟ್ಟದ ಆಹ್ವಾನಿತ ತಂಡಗಳ ಕರಾಟೆ ಸ್ಪರ್ಧಾಕೂಟ

ಹಿರಿಯಡ್ಕ: ಕುಬುಡೋ ಬುಡೋಕಾನ್ ಕರಾಟೆ ಡೋ ಅಸೋಸಿಯೇಶನ್ ಕರ್ನಾಟಕ(ರಿ) ವತಿಯಿಂದ 6 ನೇ ರಾಷ್ಟ್ರಮಟ್ಟದ ಆಹ್ವಾನಿತ ತಂಡಗಳ ಕರಾಟೆ ಸ್ಪರ್ಧಾಕೂಟ-2023 ಡಿ.2 ಮತ್ತು 3 ರಂದು ಬೆಳಿಗ್ಗೆ 8 ರಿಂದ ಸಂಜೆ 6 ಗಂಟೆವರೆಗೆ ಹಿರಿಯಡ್ಕದ ಶ್ರೀ ವೀರಭದ್ರ ದೇವಸ್ಥಾನದ ಸಭಾಂಗಣದಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ಶ್ರೀ ಕೃಷ್ಣಮಠದ ಆಶ್ರಯದಲ್ಲಿ 536 ನೇ ಕನಕದಾಸ ಜಯಂತಿ ಆಚರಣೆ

ಉಡುಪಿ: ಉಡುಪಿ ಜಿಲ್ಲಾ ಶ್ರೀಕನಕದಾಸ ಸಮಾಜ ಸಂಘ(ರಿ) ಉಡುಪಿ ಇವರ ಸಹಯೋಗದಲ್ಲಿ ಭಕ್ತ ಕನಕದಾಸರ 536 ನೇ ಜಯಂತಿ ಮಹೋತ್ಸವದ ಸಭಾ ಕಾರ್ಯಕ್ರಮವನ್ನು ಪರ್ಯಾಯ ಶ್ರೀಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಸ್ವಾಮಿಜಿಗಳು ಉದ್ಘಾಟಿಸಿ, ಪಾಳೇಗಾರರಾಗಿದ್ದ ತಿಮ್ಮಪ್ಪ ನಾಯಕ ಲೌಕಿಕ ಸುಖಗಳನ್ನು ತೊರೆದು ದೇವರ ದಾಸರಾಗಿ ದಾಸ ಸಾಹಿತ್ಯಕ್ಕೆ ಅತ್ಯುತ್ತಮ ಕೊಡುಗೆ ನೀಡಿದ ತತ್ವಜ್ಞಾನಿ ಭಕ್ತಕನಕದಾಸರು ವ್ಯಾಸರಾಯರ ಮೆಚ್ಚಿನ ಶಿಷ್ಯರಾಗಿದ್ದು ಮಧ್ವ ತತ್ವಶಾಸ್ತ್ರವನ್ನು ಕಲಿತು ಒಪ್ಪಿಕೊಂಡ ಕನಕದಾಸರು ಉಡುಪಿಯ ಶ್ರೀಕೃಷ್ಣನ ಭಕ್ತರು ಎಂದು ಅನುಗ್ರಹ ಸಂದೇಶ ನೀಡಿದರು. ಸಭೆಯಲ್ಲಿ ಸಮಾಜದ […]

ಅಂತರಾಷ್ಟ್ರೀಯ ಚಲನ ಚಿತ್ರೋತ್ಸವದಲ್ಲಿ ಅಸ್ಮಿತಾಯ್ ಪ್ರದರ್ಶನ

ಅಮೇರಿಕಾದ ಡಿಸಿ ಸೌತ್ ಏಶಿಯನ್ ಫಿಲ್ಮ್ ಫೆಸ್ಟಿವಲಿಗೆ ಕೊಂಕಣಿ ಸಿನೆಮಾ ಮಾಂಡ್ ಸೊಭಾಣ್ ನಿರ್ಮಾಣದ ‘ಅಸ್ಮಿತಾಯ್’ ಕೊಂಕಣಿ ಚಲನಚಿತ್ರವು ಅಮೇರಿಕಾದ ವಾಷಿಂಗ್ಟನ್ ಡಿಸಿಯಲ್ಲಿ ನಡೆಯುವ ಡಿಸಿ ಸೌತ್ ಏಶಿಯನ್ ಫಿಲ್ಮ್ ಫೆಸ್ಟಿವಲಲ್ಲಿ ಡಿಸೆಂಬರ್ 02 ರಂದು ಪೂರ್ವಾಹ್ನ 11.00 ಗಂಟೆಗೆ ಎ ಎಮ್ ಸಿ ಥಿಯೆಟರ್ ನಲ್ಲಿ ಪ್ರದರ್ಶನಗೊಳ್ಳಲಿದೆ. ಸೆಪ್ಟೆಂಬರ್ 15 ರಂದು ತೆರೆಗೆ ಬಂದ ಅಸ್ಮಿತಾಯ್ ಚಲನಚಿತ್ರದ 400ಕ್ಕೂ ಮಿಕ್ಕಿ ದೇಖಾವೆಗಳು ನಡೆದಿದ್ದು ಇದುವರೆಗೆ ವಿಶ್ವದಾದ್ಯಂತ 13 ದೇಶಗಳಲ್ಲಿ ಪ್ರದರ್ಶನಗೊಂಡಿದೆ. ಕೊಂಕಣಿ ಚಲನಚಿತ್ರ ಕ್ಷೇತ್ರದಲ್ಲಿ ಇದೊಂದು […]

ಬ್ರಹ್ಮಾವರ: ಬೈಕ್ ಗೆ ಬಸ್ ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

ಮೃತ ಬೈಕ್ ಸವಾರ ನನ್ನು ಸ್ಥಳೀಯ ಉಪ್ಪಿನಕೋಟೆಯ ಪ್ರೀತಮ್ ಡಿ’ ಸಿಲ್ವ( 30)ಎಂದು ಗುರುತಿಸಲಾಗಿದೆ. ಬೈಕ್ ಸವಾರ ಇಲ್ಲಿನ ಪೆಟ್ರೋಲ್ ಬಂಕ್ ಬಳಿಯಿಂದ ಸರ್ವೀಸ್ ರಸ್ತೆಯಿಂದ ತೆರಳುವಾಗ ಬಸ್ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.