ಕುಲಶೇಕರ: 158 ನೇ ಐಐಸಿಟಿ ಕಂಪ್ಯೂಟರ್‌ ತರಬೇತಿ ಕೇಂದ್ರ ಶುಭಾರಂಭ

ಮಂಗಳೂರಿನ ಸೇಕ್ರೆಡ್ ಹಾರ್ಟ್ ಕರಿಯರ್ ಅಕಾಡೆಮಿ ಶಿಕ್ಷಣ ಸಂಸ್ಥೆಯ ಐಐಸಿಟಿ ಕಂಪ್ಯೂಟರ್‌ ತರಬೇತಿ ಕೇಂದ್ರಗಳು ಭಾರತದಾದ್ಯಂತ ಕಾರ್ಯಾಚರಿಸುತ್ತಿದ್ದು, ಡಿಸೆಂಬರ್ 1 ರಂದು, ಕುಲಶೇಖರದ ಪಿಂಟೋ ಕಾಂಪ್ಲೆಕ್ಸ್ ನಲ್ಲಿ ನೂತನ ಕೇಂದ್ರವು ಉದ್ಘಾಟನೆಗೊಂಡಿತು. ಯಸ್.ಎಚ್.‌ಸಿ ಕರಿಯರ್‌ ಅಕಾಡೆಮಿ, ಬೆಂಗಳೂರು ಇದರ ಆಡಳಿತ ನಿರ್ದೇಶಕಕೆನೆಡಿ ಪಿ ಎ ಡಿಸೋಜ ತಮ್ಮ ಪತ್ನಿ ಹಾಗೂ ಪುತ್ರಿಯರೊಂದಿಗೆ ಸಂಸ್ಥೆಯನ್ನು ಉದ್ಘಾಟಿಸಿ ಸಂಸ್ಥೆಯ ಬಗ್ಗೆ ಕಿರು ಪರಿಚಯವನ್ನು ನೀಡಿದರು. ಕುಲಶೇಖರ ಹೋಲಿ ಕ್ರಾಸ್ ಚರ್ಚಿನ ಧರ್ಮ ಗುರುಗಳಾದ ವಂದನೀಯ ಪಾವ್ಲ್ ಸೆಬೆಸ್ಟಿಯನ್ ಡಿಸೋಜಾ ನೂತನ […]

“ಕೈ” ಹಿಡಿಯಲಿದೆ ತೆಲಂಗಾಣ! ಮಧ್ಯಪ್ರದೇಶ, ರಾಜಸ್ಥಾನ ಛತ್ತೀಸ್ ಗಢದಲ್ಲಿ ಅರಳಲಿದೆ “ಕಮಲ”?

ನವದೆಹಲಿ: ಮಧ್ಯಪ್ರದೇಶ, ಛತ್ತೀಸ್‌ಗಢ, ತೆಲಂಗಾಣ ಮತ್ತು ರಾಜಸ್ಥಾನಗಳ 2023 ರ ವಿಧಾನಸಭಾ ಚುನಾವಣೆಯ ಫಲಿತಾಂಶಗಳು ಹೊರಬಿದ್ದಿದ್ದು. ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್‌ಗಢದಲ್ಲಿ ಬಿಜೆಪಿ ಗೆಲ್ಲುವ ನಿರೀಕ್ಷೆಯಿದ್ದು ತೆಲಂಗಾಣದಲ್ಲಿ ಕಾಂಗ್ರೆಸ್ ಗದ್ದುಗೆಗೆ ಏರುವ ಸಂಭಾವ್ಯತೆಗಳು ನಿಚ್ಚಳವಾಗುತ್ತಿವೆ. ನವೆಂಬರ್ 7 ರಂದು ಮತದಾನ ನಡೆದ ಮಿಜೋರಾಂನ ಮತಗಳ ಎಣಿಕೆಯ ದಿನಾಂಕವನ್ನು ಭಾರತೀಯ ಚುನಾವಣಾ ಆಯೋಗವು ಮುಂದೂಡಿದೆ. ಛತ್ತೀಸ್‌ಗಢದಲ್ಲಿ ಬಿಜೆಪಿ ಅರ್ಧ ಶತಕದ ಗಡಿ ದಾಟಿದೆ. ಅಧಿಕೃತ ECI ಟ್ರೆಂಡ್‌ಗಳಂತೆ 53 ಸ್ಥಾನಗಳಲ್ಲಿ ಮುನ್ನಡೆ ಹೊಂದಿದ್ದು, ಕಾಂಗ್ರೆಸ್ – 34 ರಲ್ಲಿ […]

ಯು.ಎ.ಇ ದುಬೈ- 2023 ಯೂತ್ ಐಕಾನ್ ಅಂತಾರಾಷ್ಟ್ರೀಯ ಪ್ರಶಸ್ತಿಗೆ ಕಾಪು ಸಮಾಜ ಸೇವಕ ಫಾರೂಕ್ ಚಂದ್ರನಗರ ಆಯ್ಕೆ

ಕಾಪು: ಕಳತ್ತೂರು ಬಟರ್ ಫ್ಲೈ ಗೆಸ್ಟ್ ಹೌಸ್ ಮತ್ತು ಪಾರ್ಟಿ ಹಾಲ್ ಚಂದ್ರನಗರ ಇದರ ಮಾಲಕ, ರೋಟರಿ ಕ್ಲಬ್ ಶಿರ್ವ ಇದರ ಅಧ್ಯಕ್ಷ, ಯುವ ನಾಯಕ ಹಾಗೂ ಉದ್ಯಮಿಯಾದ ಮೊಹಮ್ಮದ್ ಫಾರೂಕ್ ಚಂದ್ರನಗರ ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಕಳೆದ 25 ವರ್ಷಗಳಿಂದ ಸಮಾಜ ಸೇವೆಯಲ್ಲಿ ಎಲ್ಲಾ ಜಾತಿಯವರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದು ಗ್ರಾಮ ಮಟ್ಟದ ಜನರಿಗೆ ತನ್ನಿಂದ ಆಗುವ ಸಹಾಯ ಮಾಡುತ್ತ ಕುಡಿಯುವ ನೀರು, ರಸ್ತೆ ನಿರ್ಮಾಣ, ಕೊರೋನಾ ಮಹಾಮಾರಿ ಸಂದರ್ಭ ಸಂತ್ರಸ್ತರಿಗೆ ಸುಮಾರು 6000 ಕ್ಕೂ […]

ಮುದೂರು: ಡಿ. 10 ರಂದು ಬೃಹತ್ ರಕ್ತದಾನ ಶಿಬಿರ

ಮುದೂರು: ಮುದೂರು ವ್ಯವಸಾಯ ಸೇವಾ ಸಹಕಾರ ಸಂಘ ನಿ. ಇವರ ನೇತೃತ್ವದಲ್ಲಿ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ(ರಿ) ಕುಂದಾಪುರ ಇವರ ಸಹಯೋಗದೊಂದಿಗೆ ಡಿ.10 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ರವರೆಗೆ ಮುದೂರು ವ್ಯವಸಾಯ ಸೇವಾ ಸಹಕಾರ ಸಂಘದಲ್ಲಿ ಬೃಹತ್ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ: ಪ್ರಭಾಕರ ಪೂಜಾರಿ- 9902434161/9845824604 ಅವರನ್ನು ಸಂಪರ್ಕಿಸಬಹುದು.