ಬ್ರಹ್ಮಾವರ: ಮಹಿಳೆ ನಾಪತ್ತೆ

ಬ್ರಹ್ಮಾವರ: ಉಡುಪಿ ಜಿಲ್ಲೆಯ ಬ್ರಹ್ಮಾವರ ಇಲ್ಲಿನ ಉಪ್ಪಿನಕೋಟೆಯಲ್ಲಿ ವಾಸವಿದ್ದ ಲಲಿತಾ ಪೂಜಾರಿ (31) ಅವರು ನ. 30ರಿಂದ ನಾಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ. ಬಳಿಕ ಮನೆಯ ಒಳಗಡೆ ಪರಿಶೀಲಿಸುವಾಗ ಚಿಕ್ಕ ಮೂರು ಚೀಟಿಯಲ್ಲಿ ಹಾಗೂ ಪುಸ್ತಕದ ಹಾಳೆಯಲ್ಲಿ ನನ್ನ ಸಾವಿಗೆ ಯಾರೂ ಕಾರಣ ಅಲ್ಲ, ನಾನೇ ಕಾರಣ. ಇಂತಿ ನಿಮ್ಮ ಚಿನ್ನು ಎಂದು ಬರೆದಿಟ್ಟ ಚೀಟಿ ಸಿಕ್ಕಿದೆ. ಈ ಕುರಿತು ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದಲ್ಲಿ ಮುಂದಿನ 24 ಗಂಟೆ ಮಳೆ : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ

ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ರೂಪುಗೊಂಡಿರುವ ಕಡಿಮೆ ಒತ್ತಡದ ಪ್ರದೇಶ ಕ್ರಮೇಣ ವಾಯುವ್ಯ ಕಡೆಗೆ ಚಲಿಸಲಿದೆ. ಇದು ಸೈಕ್ಲೋನಿಕ್ ಚಂಡಮಾರುತದ ರೂಪವನ್ನು ತೆಗೆದುಕೊಳ್ಳುತ್ತದೆ. ತಮಿಳುನಾಡು, ಕೇರಳ ಮತ್ತು ಕರಾವಳಿ ಭಾಗದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಕಳೆದ ವಾರ ಮೋಡ ಕವಿದ ವಾತಾವರಣವಿತ್ತು. ಈ ವಾರ ರಾಜ್ಯದಲ್ಲಿ ಮಳೆಯ ಮುನ್ಸೂಚನೆ ಹೆಚ್ಚಾಗಿದೆ ಎಂದಿದ್ದಾರೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿ ಚಂಡಮಾರುತ ಉಂಟಾಗಿರುವ ಹಿನ್ನೆಲೆ ರಾಜ್ಯದಲ್ಲಿಯೂ ಭೀತಿ ಎದುರಾಗಿದೆ.ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ […]

ಮೈಸೂರಿನಲ್ಲಿ ಮತ್ತೊಬ್ಬ ಮಹಿಳಾ ನರ್ಸ್ ಸಿಐಡಿ ವಶಕ್ಕೆ : ಭ್ರೂಣ ಪತ್ತೆ, ಭ್ರೂಣ ಹತ್ಯೆ ಪ್ರಕರಣ:

ಮೈಸೂರು : ಮೈಸೂರಿನ ಹೃದಯ ಭಾಗದಲ್ಲಿರುವ ಶ್ರೀ ಚಾಮುಂಡೇಶ್ವರಿ ನರ್ಸಿಂಗ್ ಹೋಂನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಉಷಾರಾಣಿಯನ್ನು ಸಿಐಡಿ ವಶಕ್ಕೆ ಪಡೆದಿದೆ. ಮಾತಾ ಆಸ್ಪತ್ರೆಯಲ್ಲಿ ನಡೆದಿರುವ ಹೆಣ್ಣು ಭ್ರೂಣ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ ನರ್ಸ್ ಮಂಜುಳಾ ಎಂಬಾಕೆಯನ್ನು ಈ ಮೊದಲು ವಶಕ್ಕೆ ಪಡೆದಿದ್ದ ಪೊಲೀಸರು, ವಿಚಾರಣೆಗೆ ಒಳಪಡಿಸಿದಾಗ ಉಷಾರಾಣಿ ಕೂಡ ಪ್ರಕರಣದಲ್ಲಿ ಭಾಗಿಯಾಗಿರುವ ಸ್ಫೋಟಕ ಮಾಹಿತಿ ಬೆಳಕಿಗೆ ಬಂದಿದೆ. ಇಡೀ ರಾಜ್ಯವನ್ನು ಬೆಚ್ಚಿ ಬೀಳಿಸಿರುವ ಹೆಣ್ಣು ಭ್ರೂಣ ಪತ್ತೆ ಮತ್ತು ಹತ್ಯೆ ಪ್ರಕರಣದ ಕರಾಳ ಮುಖ ಮತ್ತಷ್ಟು ಅನಾವರಣಗೊಂಡಿದ್ದು, […]

ಡಿಸೆಂಬರ್​ 2ನೇ ವಾರದಲ್ಲಿ ಸುಪ್ರೀಂಕೋರ್ಟ್​ನಿಂದ ತೀರ್ಪು ಪ್ರಕಟ ಸಾಧ್ಯತೆ : 370ನೇ ವಿಧಿ ರದ್ದು ಪ್ರಕರಣ

ಶ್ರೀನಗರ (ಜಮ್ಮು ಮತ್ತು ಕಾಶ್ಮೀರ): ಸಂವಿಧಾನದ 370ನೇ ವಿಧಿ ಮೂಲಕ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದು ಮಾಡಿ, ರಾಜ್ಯವನ್ನು 2 ಕೇಂದ್ರಾಡಳಿತ ಪ್ರದೇಶಗಳನ್ನಾಗಿ ವಿಭಾಗಿಸಿದ್ದರ ವಿರುದ್ಧದ ಅರ್ಜಿಗಳ ಅಂತಿಮ ತೀರ್ಪನ್ನು ಸುಪ್ರೀಂಕೋರ್ಟ್​ ಈ ತಿಂಗಳ (ಡಿಸೆಂಬರ್​) ಎರಡನೇ ವಾರದಲ್ಲಿ ನೀಡುವ ಸಾಧ್ಯತೆ ಇದೆ.ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರ ನೇತೃತ್ವದ ಸಾಂವಿಧಾನಿಕ ಪೀಠ ಪ್ರಕರಣ ವಿಚಾರಣೆಯನ್ನು ಮುಗಿಸಿದ್ದು, ಡಿಸೆಂಬರ್​ ಎರಡನೇ ವಾರದ ಅಂತ್ಯದೊಳಗೆ ತನ್ನ ತೀರ್ಪನ್ನು ಪ್ರಕಟಿಸುವ ಸಾಧ್ಯತೆಯಿದೆ ಎಂದು ಈಟಿವಿ ಭಾರತ್​ಗೆ […]

ಐಸಿಆರ್​ಎ ವರದಿ : ನಿಧಾನವಾಗಲಿದೆ ಐಟಿ ಉದ್ಯೋಗಿಗಳ ನೇಮಕಾತಿ

ನವದೆಹಲಿ: ಕೋವಿಡ್ -19 ಸಾಂಕ್ರಾಮಿಕ ಅಲೆಯ ನಂತರ ಡಿಜಿಟಲೀಕರಣದ ಬೇಡಿಕೆ ವೇಗಗೊಂಡಿದ್ದರಿಂದ, ಭಾರತೀಯ ಐಟಿ ಸೇವಾ ಕಂಪನಿಗಳು ಹಣಕಾಸು ವರ್ಷ 2021 ರ ಎರಡನೇ ತ್ರೈಮಾಸಿಕದಿಂದ ಹಣಕಾಸು ವರ್ಷ 2023 ರ ಎರಡನೇ ತ್ರೈಮಾಸಿಕದವರೆಗೆ ವ್ಯಾಪಕವಾಗಿ ಉದ್ಯೋಗಿಗಳನ್ನು ನೇಮಿಸಿಕೊಂಡಿವೆ ಎಂದು ಕ್ರೆಡಿಟ್ ರೇಟಿಂಗ್ ಏಜೆನ್ಸಿ ಐಸಿಆರ್​ಎ ವರದಿ ತಿಳಿಸಿದೆ.ಮುಂದಿನ ಎರಡು-ಮೂರು ತ್ರೈಮಾಸಿಕಗಳಲ್ಲಿ ಭಾರತದ ಐಟಿ ವಲಯದ ನೇಮಕಾತಿ ಬಹುತೇಕ ಸ್ತಬ್ಧವಾಗುವ ಸಾಧ್ಯತೆಯಿದೆ ಎಂದು ಹೊಸ ವರದಿಯೊಂದು ಸೋಮವಾರ ತಿಳಿಸಿದೆ. ಬೇಡಿಕೆ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಐಟಿ ಕಂಪನಿಗಳು ತಮ್ಮ […]