ಬಂಡುಕೋರರ ಗುಂಡಿನ ಚಕಮಕಿಯಲ್ಲಿ 13 ಜನರ ಹತ್ಯೆ : ಮಣಿಪುರದಲ್ಲಿ ಮತ್ತೆ ಸಂಘರ್ಷ

ಇಂಫಾಲ: ತೆಂಗನೌಪಾಲ್ ಜಿಲ್ಲೆಯ ಲೀತು ಎಂಬ ಗ್ರಾಮದಲ್ಲಿ ಸೋಮವಾರ ಈ ದಾಳಿ ನಡೆದಿದೆ. ಮ್ಯಾನ್ಮಾರ್​ಗೆ ತೆರಳುತ್ತಿದ್ದ ಗುಂಪಿನ ಮೇಲೆ ಬಂಡುಕೋರರ ಪಡೆ ಗುಂಡಿನ ದಾಳಿ ಮಾಡಿದೆ. ಇದರಿಂದ ಸ್ಥಳದಲ್ಲೇ 13 ಮಂದಿ ಪ್ರಾಣ ಬಲಿಯಾಗಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.ಸೋಮವಾರ ನಡೆದ ದಾಳಿಯಲ್ಲಿ 13 ಮಂದಿ ಸಾವನ್ನಪ್ಪಿದ್ದಾರೆ. ಭದ್ರತಾ ಪಡೆಯಿಂದ ಘಟನೆ ನಡೆದ ಗ್ರಾಮದಲ್ಲಿ ಹೈಅಲರ್ಟ್​ ಘೋಷಿಸಲಾಗಿದೆ.ಜನಾಂಗೀಯ ಸಂಘರ್ಷಕ್ಕೀಡಾಗಿ ಹಿಂಸಾಚಾರ ಅನುಭವಿಸಿದ್ದ ಮಣಿಪುರದಲ್ಲಿ ಮತ್ತೆ ಗಲಾಟೆ ಮರುಕಳಿಸಿದೆ. ಕೆಲ ದಿನಗಳಿಂದ ಶಾಂತವಾಗಿದ್ದ ಗುಡ್ಡಗಾಡು ರಾಜ್ಯ ಮಣಿಪುರದಲ್ಲಿ ಮತ್ತೆ […]

ಅಂಚೆ ಕಚೇರಿ ತಿದ್ದುಪಡಿ ಮಸೂದೆ ಅಂಗೀಕಾರ : ಅಂಚೆ ಕಚೇರಿ ಖಾಸಗೀಕರಣ ಇಲ್ಲ- ಕೇಂದ್ರ ಸರ್ಕಾರ

ನವದೆಹಲಿ: ಬದಲಿಗೆ ದೇಶಾದ್ಯಂತ ಸುಮಾರು 5 ಸಾವಿರ ಹೊಸ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಇನ್ನೂ 5746 ಕಚೇರಿಗಳನ್ನು ತೆರೆಯುವ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ಕೇಂದ್ರ ಸರ್ಕಾರ ಸೋಮವಾರ ತಿಳಿಸಿದೆ.ದೇಶದ ಅತ್ಯಂತ ಹಳೆಯ ಸೇವೆಯಾದ ಅಂಚೆ ಕಚೇರಿಯನ್ನು ಖಾಸಗೀಕರಣ ಮಾಡುವುದಿಲ್ಲ.2014 ರಿಂದ 2023 ರ ವರೆಗೆ ಸುಮಾರು 5 ಸಾವಿರ ಅಂಚೆ ಕಚೇರಿಗಳನ್ನು ತೆರೆಯಲಾಗಿದೆ. ಸುಮಾರು 5,746 ಹೊಸ ಕಚೇರಿಗಳನ್ನು ತೆರೆಯುವ ಪ್ರಕ್ರಿಯೆ ಜಾರಿಯಲ್ಲಿದೆ ಎಂದು ಕೇಂದ್ರ ಸರ್ಕಾರ ರಾಜ್ಯಸಭೆಗೆ ತಿಳಿಸಿದೆ. ಅಂಚೆ ಸೇವೆಗಳು ವಿಸ್ತರಣೆ: ಅಂಚೆ ಸೇವೆಗಳು, ಕಚೇರಿಗಳು […]

ತೆಲಂಗಾಣದಲ್ಲಿ ವಾಯುಸೇನೆಯ ತರಬೇತಿ ವಿಮಾನ ಪತನ: ಇಬ್ಬರು ಪೈಲಟ್‌ಗಳು ಮೃತ

ಹೊಸದಿಲ್ಲಿ: ತೆಲಂಗಾಣದ ಮೇದಕ್‌ ಜಿಲ್ಲೆಯಲ್ಲಿ ವಾಯುಸೇನೆಯ ತರಬೇತಿ ವಿಮಾನ ಪತನಗೊಂಡ ಪರಿಣಾಮ ಭಾರತೀಯ ವಾಯುಪಡೆಯ ಇಬ್ಬರು ಪೈಲಟ್‌ಗಳು ಮೃತಪಟ್ಟಿದ್ದಾರೆ. ಅಪಘಾತದ ಕಾರಣವನ್ನು ತಿಳಿಯಲು ತನಿಖೆಗೆ ಆದೇಶಿಸಲಾಗಿದೆ. ಅಪಘಾತ ಸಂಭವಿಸಿದಾಗ ವಿಮಾನವು ವಾಡಿಕೆಯ ತರಬೇತಿಗಾಗಿ ಹೈದರಾಬಾದ್‌ನಲ್ಲಿರುವ ಏರ್ ಫೋರ್ಸ್ ಅಕಾಡೆಮಿಯಿಂದ (ಎಎಫ್‌ಎ) ಹೊರಟಿತ್ತು ಎಂದು ವಾಯುಪಡೆ ತಿಳಿಸಿದೆ. ವಿಮಾನ ಪತನಗೊಂಡಾಗ ಒಬ್ಬ ತರಬೇತುದಾರ ಮತ್ತು ತರಬೇತಿ ನಿರತ ಪೈಲಟ್ ವಿಮಾನದೊಳಗಿದ್ದರು ಮತ್ತು ಇಬ್ಬರೂ ಸಾವನ್ನಪ್ಪಿದ್ದಾರೆ. Pilatus PC 7 Mk II ವಿಮಾನವು ಏಕ-ಎಂಜಿನ್ ವಿಮಾನವಾಗಿದ್ದು, IAF ಪೈಲಟ್‌ಗಳು […]

ಮಿಜೋರಾಂ ಚುನಾವಣಾ ಫಲಿತಾಂಶ: ಆರಂಭಿಕ ಎಣಿಕೆಯಲ್ಲಿ ಝೋರಾಮ್ ಪೀಪಲ್ಸ್ ಮೂವ್ಮೆಂಟ್ ಮುನ್ನಡೆ

ಐಜ್ವಾಲ್: ನವೆಂಬರ್ 7 ರಂದು ಮಿಜೋರಾಂನಲ್ಲಿ 40 ವಿಧಾನಸಭಾ ಸ್ಥಾನಗಳಿಗೆ ನಡೆದ ಚುನಾವಣೆಯ ಮತಎಣಿಕೆಯ ಫಲಿತಾಂಶಗಳಲ್ಲಿ ಝೋರಾಮ್ ಪೀಪಲ್ಸ್ ಮೂವ್ಮೆಂಟ್ (ZPM) 27 ಸೀಟುಗಳಲ್ಲಿ ಮುನ್ನಡೆಯನ್ನು ಸಾಧಿಸಿದೆ. ಮಿಜೋ ನ್ಯಾಷನಲ್ ಫ್ರಂಟ್ (MNF) 10 ಸೀಟುಗಳಲ್ಲಿದ್ದರೆ ಬಿಜೆಪಿ 2 ಸೀಟು ಪಡೆದಿದೆ. 2023 ರ ಮಿಜೋರಾಂ ಚುನಾವಣೆಯು ಝೋರಾಮ್ ಪೀಪಲ್ಸ್ ಮೂವ್ಮೆಂಟ್ ಪಕ್ಷಕ್ಕೆ ಅತ್ಯಂತ ಮಹತ್ವದ್ದಾಗಿದ್ದು ಈ ಬಾರಿ ರಾಜ್ಯದಲ್ಲಿ ಅಧಿಕಾರಕ್ಕೆ ಬರುವ ಗುರಿಯನ್ನು ಹೊಂದಿದೆ. ಆಡಳಿತಾರೂಢ ಮಿಜೋ ನ್ಯಾಷನಲ್ ಫ್ರಂಟ್ ಸದ್ಯದ ಸ್ಥಿತಿಯಲ್ಲಿ ಹಿನ್ನಡೆಯುತ್ತಿದೆ.

ಹಿರಿಯಡ್ಕ: ವ್ಯಕ್ತಿ ನಾಪತ್ತೆ

ಹಿರಿಯಡ್ಕ: ಅಂಜಾರು ಗ್ರಾಮದ ಆಳುಗ್ಗೇಲು ಮನೆ ನಿವಾಸಿ ಸಂದೇಶ್ ರಾವ್ (45) ಎಂಬ ವ್ಯಕ್ತಿಯು ನವೆಂಬರ್ 29 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 4 ಇಂಚು ಎತ್ತರ, ಗೋಧಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಹಿರಿಯಡ್ಕ ಪೊಲೀಸ್ ಠಾಣೆಯ ಉಪ ನಿರೀಕ್ಷಕರನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ