ಡಿ.6 ರಂದು ಪರ್ಯಾಯ ಧಾನ್ಯ ಮುಹೂರ್ತ

ಉಡುಪಿ: ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ತಮ್ಮ ಶಿಷ್ಯರಾದ ಶ್ರೀ ಸುಶ್ರೀಂದ್ರ ತೀರ್ಥ ಶ್ರೀಪಾದರೊಡಗೂಡಿ ನಡೆಸಲಿರುವ ಚತುರ್ಥ ಶ್ರೀಕೃಷ್ಣ ಪೂಜಾ ಪರ್ಯಾಯದ ಚತುರ್ಥ ಮುಹೂರ್ತವಾದ ಧಾನ್ಯ ಮುಹೂರ್ತವು ಶ್ರೀ ಪುತ್ತಿಗೆ ಮಠದಲ್ಲಿ ಡಿ.6 ರಂದು ಬೆಳಗ್ಗೆ 8.20ಕ್ಕೆ ನೆರವೇರಲಿದೆ. ಬೆಳಗ್ಗೆ 7 ಗಂಟೆಗೆ ಶ್ರೀ ಚಂದ್ರಮೌಳೀಶ್ವರ, ಶ್ರೀ ಅನಂತೇಶ್ವರ ಮತ್ತು ಶ್ರೀಕೃಷ್ಣ ದರ್ಶನದ ಅನಂತರ ವಿವಿಧ ಧಾನ್ಯ ಮುಹೂರ್ತ ನಡೆಯಲಿದೆ ಎಂದು ಮಠದ ಪ್ರಕಟಣೆ ತಿಳಿಸಿದೆ.
ನಾವುಂದ: ಉಚಿತ ಆರೋಗ್ಯ ತಪಾಸಣಾ ಶಿಬಿರ
ನವೋದಯ ಗ್ರಾಮವಿಕಾಸ ಚಾರಿಟೇಬಲ್ ಟ್ರಸ್ಟ್ ಮಂಗಳೂರು, ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘ ನಾವುಂದ ಹಾಗೂ ಆದರ್ಶ ಆಸ್ಪತ್ರೆ ಉಡುಪಿ ಇವರ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ನಾವುಂದ ಸ.ಹಿ.ಪ್ರಾ.ಶಾಲೆಯಲ್ಲಿ ನೆಡೆಯಿತು. ಕುಂದಾಪುರ ಉಪವಿಭಾಗಾಧಿಕಾರಿ ರಶ್ಮಿ ಎಸ್ ಆರ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ನೀವೆಷ್ಟೇ ಆರ್ಥಿಕ ಶ್ರೀಮಂತಿಕೆಯಿದ್ದರೂ ಆರೋಗ್ಯ ಶ್ರೀಮಂತಿಕೆಯಿಲ್ಲದಿದ್ದರೆ ನೆಮ್ಮದಿಯ ಜೀವನ ಸಾಗಿಸಲಾಗದು ರಕ್ತದಾನಕ್ಕಿಂತ ಶ್ರೇಷ್ಟ ದಾನ ಇನ್ನೊಂದಿಲ್ಲ. ಆರೋಗ್ಯವಂತ ದೇಹ ಹೊಂದಿರುವ ಪ್ರತಿಯೊಬ್ಬ ವ್ಯಕ್ತಿ ಕನಿಷ್ಟ ವರ್ಷಕ್ಕೊಂದು ಬಾರಿಯಾದರೂ ರಕ್ತದಾನ ಮಾಡುವ […]