ಕುಂದಾಪುರ: ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ವಾರ್ಷಿಕೋತ್ಸವ ಸಮಾರಂಭ
ಕುಂದಾಪುರ: ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭವು ಡಿ.5ರಂದು ನಡೆಯಿತು. ನಿವೃತ್ತ ಪ್ರಾಂಶುಪಾಲರಾದ ಶ್ರೀ. ಎ. ಲಕ್ಷ್ಮೀ ನಾರಾಯಣ ಚಾತ್ರ ಮುಖ್ಯ ಅತಿಥಿಯಾಗಿ ಭಾಗವಹಿಸಿ, ಸ್ಪರ್ಧಾತ್ಮಕ ಹಾಗೂ ವಾರ್ಷಿಕ ಪರೀಕ್ಷೆಯ ಕಡೆಗೆ ಹೆಚ್ಚಿನ ಗಮನ ನೀಡಿ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಲು ವಿದ್ಯಾರ್ಥಿಗಳು ಶ್ರಮಿಸಬೇಕು. ಅಂತಹ ವಾತಾವರಣ ಶ್ರೀ ವೆಂಕಟರಮಣ ಸಂಸ್ಥೆಯಲ್ಲಿ ಇರುವುದರಿಂದ ವಿದ್ಯಾರ್ಥಿಗಳು ಅದಕ್ಕೆ ಸ್ಪಂದಿಸಬೇಕು ಎಂದರು. ಅಧ್ಯಕ್ಷ ಸ್ಥಾನವನ್ನು ವಹಿಸಿದ ಸಂಸ್ಥೆಯ ಕಾರ್ಯದರ್ಶಿ ಕೆ. ರಾಧಾಕೃಷ್ಣ ಶೆಣೈಯವರು ಕಡಿಮೆ ಶುಲ್ಕದಲ್ಲಿ ಮೌಲ್ಯಯುತ ಶಿಕ್ಷಣ […]
ಉಡುಪಿ: ಯುವಕ ನಾಪತ್ತೆ
ಉಡುಪಿ: ಉಡುಪಿ ತಾಲೂಕು ಮೂಡನಿಡಂಬೂರು ಗ್ರಾಮದ ಬಾಡಿಗೆ ಮನೆಯಲ್ಲಿ ವಾಸವಿದ್ದ ಬಸವರಾಜ್ (27) ಎಂಬ ಯುವಕನು ನವೆಂಬರ್ 28 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 6 ಇಂಚು ಎತ್ತರ, ಸಾಧಾರಣ ಮೈಕಟ್ಟು, ಎಣ್ಣೆಕಪ್ಪು ಮೈಬಣ್ಣ, ಉದ್ದಮುಖ ಹೊಂದಿದ್ದು, ಕನ್ನಡ ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಉಡುಪಿ: ಯುವತಿ ನಾಪತ್ತೆ
ಉಡುಪಿ: ಉಡುಪಿ ತಾಲೂಕು ಮೂಡನಿಡಂಬೂರು ಗ್ರಾಮದ ಸಿ.ಟಿ ಬಸ್ ನಿಲ್ದಾಣದ ಬಳಿ ಇರುವ ಪಿ.ಜಿ.ಯಲ್ಲಿ ವಾಸವಿದ್ದ ಅರ್ಚನಾ (19) ಎಂಬ ಯುವತಿಯು ನವೆಂಬರ್ 4 ರಿಂದ ಕಾಣೆಯಾಗಿರುತ್ತಾರೆ. 5 ಅಡಿ 2 ಇಂಚು ಎತ್ತರ, ಸಾಧಾರಣ ಮೈಕಟ್ಟು, ಎಣ್ಣೆ ಕಪ್ಪು ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಹುತಾತ್ಮಯೋಧ ಕ್ಯಾ. ಪ್ರಾಂಜಲ್ ಕುಟುಂಬಕ್ಕೆ ಸರ್ಕಾರ 50 ಲಕ್ಷ ರೂ ಪರಿಹಾರ ಬಿಡುಗಡೆ
ಬೆಂಗಳೂರು: ಜಮ್ಮು ಕಾಶ್ಮೀರದ ರಜೌರಿಯಲ್ಲಿ ಉಗ್ರರೊಂದಿಗಿನ ಕಾಳಗದ ವೇಳೆ ಹುತಾತ್ಮರಾದ ನಾಡಿನ ಹೆಮ್ಮೆಯ ಯೋಧ ಕ್ಯಾಪ್ಟನ್ ಪ್ರಾಂಜಲ್ ಅವರ ಕುಟುಂಬಕ್ಕೆ ರೂ. 50,00,000 ( ಐವತ್ತು ಲಕ್ಷ ) ಪರಿಹಾರಧನವನ್ನು ನಮ್ಮ ಸರ್ಕಾರದಿಂದ ಮಂಜೂರು ಮಾಡಿ ಆದೇಶ ಹೊರಡಿಸಲಾಗಿದೆ. ದೇಶ ರಕ್ಷಣೆಗಾಗಿ ಪ್ರಾಣ ಪಣಕ್ಕಿಟ್ಟು ಶ್ರಮಿಸುವ ಪ್ರತಿಯೊಬ್ಬ ಯೋಧನ ಬಗ್ಗೆ ನಮಗೆ ಅಪಾರ ಗೌರವವಿದೆ. ಹುತಾತ್ಮ ಯೋಧ ಪ್ರಾಂಜಲ್ ಅವರ ತ್ಯಾಗ, ಬಲಿದಾನಕ್ಕೆ ಬೆಲೆಕಟ್ಟಲಾಗದು, ಆದರೆ ದೇಶದ ಕೋಟ್ಯಂತರ ಜನರ ಪರವಾಗಿ ಈ ಹೊತ್ತಿನಲ್ಲಿ ಅವರ ಕುಟುಂಬದ […]
ಐದು ಸಾವಿರಕ್ಕೂ ಅಧಿಕ ಜನರ ತಪಾಸಣೆ : ಬೆಂಗಳೂರಿನ ಹಲವೆಡೆ ಪೊಲೀಸರ ವಿಶೇಷ ಕಾರ್ಯಾಚರಣೆ
ಬೆಂಗಳೂರು:ಇತ್ತೀಚಿನ ದಿನಗಳಲ್ಲಿ ನಗರದ ವೈನ್ ಶಾಪ್, ಬಾರ್ ಆಯಂಡ್ ರೆಸ್ಟೊರೆಂಟ್, ಡಾಬಾ, ಲಾಡ್ಜ್, ಪಬ್, ಬೇಕರಿ / ಟೀ ಶಾಪ್ಗಳ ಬಳಿ ಅಪರಾಧ ಹಿನ್ನೆಲೆಯುಳ್ಳವರ ಚಟುವಟಿಕೆಗಳು, ಗಲಾಟೆ, ಸುಲಿಗೆ ಮುಂತಾದವು ಹೆಚ್ಚುತ್ತಿರುವುದನ್ನು ನಿಯಂತ್ರಿಸುವ ಉದ್ದೇಶದಿಂದ ಈ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು. ಕಾರ್ಯಾಚರಣೆ ಸಂದರ್ಭದಲ್ಲಿ 577 ವೈನ್ ಶಾಪ್ಸ್, 969 ಬಾರ್ ಆಯಂಡ್ ರೆಸ್ಟೋರೆಂಟ್, 704 ಲಾಡ್ಜ್ಗಳು, 1,682 ಬೇಕರಿ, ಪಾನ್ ಶಾಪ್ಗಳ, 715 ಇತರೆ ಜನನಿಬಿಡ ಸ್ಥಳಗಳ ಬಳಿ ಸುಮಾರು 5 ಸಾವಿರಕ್ಕೂ ಅಧಿಕ ಜನರನ್ನು ಹಾಗೂ 4 […]