ಶೆಫಿನ್ಸ್ ಸ್ಪೋಕನ್ ಇಂಗ್ಲೀಷ್ ತರಬೇತಿ ಕಾರ್ಯಕ್ರಮ ಸಂಪನ್ನ

ಉಡುಪಿ: ಶೆಫಿನ್ಸ್ ಎಜುಕೇಶನಲ್ ಅಂಡ್ ಚಾರಿಟೇಬಲ್ ಟ್ರಸ್ಟ್ ನಡೆಸುತ್ತಿರುವ ಸ್ಪೋಕನ್ ಇಂಗ್ಲೀಷ್ ಕಲಿಸುವ ಮೂಲಕ ಕನ್ನಡ ಮಾಧ್ಯಮ ಶಾಲೆ ಉಳಿಸಿ ಆಂದೋಲನದ ಅಂಗವಾಗಿ ಆಯ್ದ ಮೂರು ಶಾಲೆಗಳ ಅತಿಥಿ ಹಾಗೂ ಗೌರವ ಶಿಕ್ಷಕಿಯರಿಗಾಗಿ ಉಡುಪಿಯ ಹಿಂದೀ ಪ್ರಚಾರ ಸಮಿತಿಯ ಸಭಾಂಗಣದಲ್ಲಿ ನಡೆಸಿದ 4 ದಿನಗಳ ಉಚಿತ ಸ್ಪೋಕನ್ ಇಂಗ್ಲೀಷ್ ತರಬೇತಿ ಕಾರ್ಯಕ್ರಮ ಸಂಪನ್ನಗೊಂಡಿತು. ಸಂಪೂರ್ಣ ಚಟುವಟಿಕೆ ಆಧಾರದಲ್ಲಿ ನಡೆಸಲಾಗುತ್ತಿರುವ ಈ ತರಬೇತಿ ಕಾರ್ಯಗಾರವನ್ನು ತರಬೇತುದಾರರಾದ ಮನೋಜ್ಕಡಬ, ಅಕ್ಷತಾ ಶಣೈ ಮತ್ತು ಜಸ್ನಾ ಸುಧೀಶ್ ನಡೆಸಿಕೊಟ್ಟರು. ಅರ್ಪಿತಾ ಬ್ರಹ್ಮಾವರ […]

ಕನ್ನಡ ಆಶು ಭಾಷಣ ಸ್ಪರ್ಧೆ: ಜನತಾ ಪದವಿ ಪೂರ್ವ ಕಾಲೇಜಿನ ಶ್ರುತಿಕಾ ಶೆಟ್ಟಿ ರಾಜ್ಯ ಮಟ್ಟಕ್ಕೆ ಆಯ್ಕೆ

ಹೆಮ್ಮಾಡಿ: ಪದವಿ ಪೂರ್ವ ಶಿಕ್ಷಣ ಇಲಾಖೆಯವರು ಆಯೋಜಿಸಿದ್ದ ಮೈಸೂರು ವಿಭಾಗ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಜನತಾ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಶ್ರುತಿಕಾ ಶೆಟ್ಟಿ ಕನ್ನಡ ಆಶುಭಾಷಣ ಸ್ಪರ್ಧೆಯಲ್ಲಿ ವಿಜೇತಳಾಗಿ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ. ಸಾಧಕ ವಿದ್ಯಾರ್ಥಿನಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

ಹಿರಿಯಡ್ಕ: ಗ್ರೀನ್ ಪಾರ್ಕ್ ಸೆಂಟ್ರಲ್ ಶಾಲೆಯ ವಾರ್ಷಿಕೋತ್ಸವ ಸಮಾರಂಭ

ಹಿರಿಯಡ್ಕ: ಗ್ರೀನ್ ಪಾರ್ಕ್ ಸೆಂಟ್ರಲ್ ಶಾಲೆಯ ವಾರ್ಷಿಕೋತ್ಸವನ್ನು (ಸೀನಿಯರ್ ವಿಭಾಗ) ಬ್ರಹ್ಮಾವರದ ನಿರ್ಮಲ ಆಂಗ್ಲ ಮಾಧ್ಯಮ ಶಾಲೆಯ ಆಡಳಿತಾಧಿಕಾರಿ ರೆ. ಫಾ. ಲೆನ್ಸನ್ ಲಾರೆನ್ಸ್ ಲೋಬೊ ಉದ್ಘಾಟಿಸಿದರು. ಬಳಿಕ ಮಾತನಾಡಿ, ಗ್ರೀನ್ ಪಾರ್ಕ್ ಶಾಲೆಯು ಹಳ್ಳಿ ಪ್ರದೇಶದಲ್ಲಿದ್ದು ವಿದ್ಯಾಭ್ಯಾಸ ನಡೆಸಲು ಅತ್ಯಂತ ಪ್ರಶಸ್ತವಾಗಿದೆ. ತಮ್ಮ ಪ್ರತಿಭೆಗಳನ್ನು ಪ್ರದರ್ಶಿಸಲು ಶಾಲಾ ವಾರ್ಷಿಕೋತ್ಸವವು ಒಂದು ಉತ್ತಮ ವೇದಿಕೆಯಾಗಿರತ್ತದೆ. ಮಕ್ಕಳನ್ನು ಪ್ರೀತಿಯಿಂದ ನೋಡಿಕೊಂಡು ಮೌಲ್ಯಯುತವಾದ ವಿದ್ಯಾಭ್ಯಾಸವನ್ನು ಕೊಟ್ಟು ಪ್ರಜ್ಞಾವಂತರನ್ನಾಗಿ ರೂಪಿಸಬೇಕು ಎಂದು ಹೇಳಿದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಕಲ್ಯಾಣಪುರ ಮಿಲಾಗ್ರಿಸ್ ಕಾಲೇಜಿನ […]

ಡಿ. 14 ರಂದು ಜಿಲ್ಲಾ ಹಾಗೂ ರಾಜ್ಯ ಮಟ್ಟದ ಸಿರಿಧಾನ್ಯ ಪಾಕ ಸ್ಪರ್ಧೆ

ಉಡುಪಿ: ಕೃಷಿ ಇಲಾಖೆಯ ವತಿಯಿಂದ ಅಂತರಾಷ್ಟ್ರೀಯ ಮಟ್ಟದ ಸಿರಿಧಾನ್ಯ ಮತ್ತು ಸಾವಯವ ಮೇಳ ಅಂಗವಾಗಿ ರಾಜ್ಯ ಮಟ್ಟದ ಸಿರಿಧಾನ್ಯ ಪಾಕ ಸ್ಪರ್ಧೆಯ ಪೂರ್ವಭಾವಿಯಾಗಿ ಜಿಲ್ಲಾ ಮಟ್ಟದಲ್ಲಿ ಸಿರಿಧಾನ್ಯ ಪಾಕ ಸ್ಪರ್ಧೆಯನ್ನು ಏರ್ಪಡಿಸಲಾಗಿದ್ದು, ಜಿಲ್ಲೆಯ ಎಲ್ಲಾ ಸಾರ್ವಜನಿಕರು ಭಾಗವಹಿಸಬಹುದಾಗಿದೆ. ಅಭ್ಯರ್ಥಿಗಳು ತಮ್ಮ ಭಾವ ಚಿತ್ರದೊಂದಿಗೆ ಹೆಸರು, ವಿಳಾಸ ಮತ್ತು ತಯಾರಿಸುವ ಖಾದ್ಯ, ಬೇಕಾಗುವ ಸಾಮಗ್ರಿ, ತಯಾರಿಸಲು ಬೇಕಾಗುವ ಸಮಯ ಹಾಗೂ ತಯಾರಿಸುವ ವಿಧಾನದ ಸಂಕ್ಷಿಪ್ತ ಮಾಹಿತಿಯೊಂದಿಗೆ ಅರ್ಜಿಯನ್ನು ಡಿಸೆಂಬರ್ 10 ರ ಒಳಗಾಗಿ ಇ-ಮೇಲ್ [email protected] ಅಥವಾ ಖುದ್ದಾಗಿ/ಪೋಸ್ಟ್ […]

ಪ್ರಸವ ಪೂರ್ವ ಭ್ರೂಣ ಲಿಂಗ ಪತ್ತೆ ಶಿಕ್ಷಾರ್ಹ ಅಪರಾಧ: ಡಾ. ಪ್ರತಾಪ್ ಕುಮಾರ್

ಉಡುಪಿ: ಗರ್ಭಪೂರ್ವ ಮತ್ತು ಪ್ರಸವ ಪೂರ್ವ ಭ್ರೂಣ ಲಿಂಗ ಪತ್ತೆ ಮಾಡುವುದು ಹಾಗೂ ಹೆಣ್ಣು ಭ್ರೂಣ ಹತ್ಯೆ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದ್ದು, ಅಪರಾಧ ಎಸಗಿದವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಮಟ್ಟದ ಪ್ರಸವ ಪೂರ್ವ ಭ್ರೂಣಲಿಂಗ ಪತ್ತೆ ಕಾಯಿದೆ ಸಲಹಾ ಸಮಿತಿಯ ಅಧ್ಯಕ್ಷ ಡಾ. ಪ್ರತಾಪ್ ಕುಮಾರ್ ಹೇಳಿದರು. ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಯವರ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರಸವ ಪೂರ್ವ ಭ್ರೂಣಲಿಂಗ ಪತ್ತೆ […]