ಹಫೀಜ್ ಸಯೀದ್ ನ ಆಪ್ತ ಹಂಝ್ಲಾ ಅದ್ನಾನ್ ಅಜ್ಞಾತ ಬಂದೂಕುಧಾರಿಗಳ ಗುಂಡಿಗೆ ಬಲಿ

ಕರಾಚಿ: ಡಿಸೆಂಬರ್ 2 ಮತ್ತು 3 ರ ಮಧ್ಯರಾತ್ರಿ ಲಷ್ಕರ್-ಎ-ತೊಯ್ಬಾ ಭಯೋತ್ಪಾದಕ ಹಂಝ್ಲಾ ಅದ್ನಾನ್ ನನ್ನು ಪಾಕಿಸ್ತಾನದ ಕರಾಚಿಯಲ್ಲಿರುವ ಆತನ ನಿವಾಸದ ಬಳಿ ಅಜ್ಞಾತ ಬಂದೂಕುಧಾರಿಗಳು ಗುಂಡಿಕ್ಕಿ ಕೊಂದಿದ್ದಾರೆ. ನಂತರ ಆತನನ್ನು ಪಾಕಿಸ್ತಾನದ ಸೇನೆಯು ಕರಾಚಿಯ ಆಸ್ಪತ್ರೆಗೆ ಕರೆದೊಯ್ದಿದ್ದು, ಮಂಗಳವಾರ (ಡಿಸೆಂಬರ್ 5) ದಂದು ಆತ ನಿಧನನಾಗಿದ್ದಾನೆ ಎಂದು ವರದಿಯಾಗಿದೆ. ಅದ್ನಾನ್ ಅಹ್ಮದ್ ಅಲಿಯಾಸ್ ಹಂಝ್ಲಾ ಅದ್ನಾನ್ ಲಷ್ಕರ್-ಎ-ತೊಯ್ಬಾ ಮುಖ್ಯಸ್ಥ ಹಫೀಜ್‌ಗೆ ಅತ್ಯಂತ ಆಪ್ತನಾಗಿದ್ದ. ಡಿಸೆಂಬರ್ 2 ರ ರಾತ್ರಿ, ಅಜ್ಞಾತ ಬಂಧೂಕುದಾರಿಗಳು ದಾಳಿ ನಡೆಸಿದ್ದಾರೆ. ಹಂಝ್ಲಾ […]
ಉಡುಪಿ: ರಾಷ್ಟೀಯ ಆರೋಗ್ಯ ಅಭಿಯಾನದ ಅಡಿಯಲ್ಲಿ ವಿವಿಧ ಹುದ್ದೆಗಾಗಿ ಅರ್ಜಿ ಆಹ್ವಾನ

ಉಡುಪಿ: ಜಿಲ್ಲೆಯ ರಾಷ್ಟೀಯ ಆರೋಗ್ಯ ಅಭಿಯಾನದ ಅಡಿಯಲ್ಲಿ ಕಾರ್ಕಳ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಖಾಲಿಯಿರುವ ಹೆರಿಗೆ ತಜ್ಞರು-01 ಹುದ್ದೆ, ತಾಲೂಕು ಸಾರ್ವಜನಿಕ ಆಸ್ಪತ್ರೆ ಕುಂದಾಪುರದಲ್ಲಿ 5 ಹಾಗೂ ಕಾರ್ಕಳದಲ್ಲಿ 1 ಸೇರಿದಂತೆ ಒಟ್ಟು ವೈದ್ಯಾಧಿಕಾರಿಗಳು-06 ಹುದ್ದೆ, ಆಡಿಯೋಮೆಟ್ರಿಕ್ ಅಸಿಸ್ಟೆಂಟ್ -01 ಹುದ್ದೆ, ಜಿಲ್ಲಾ ಆಸ್ಪತ್ರೆಯಲ್ಲಿ ಖಾಲಿ ಇರುವ ಯಂಗ್ ಹಿಯರಿಂಗ್ ಇಂಪೈರಡ್ ಚಿಲ್ಡ್ರನ್ ಇನ್ಸ್ ಟ್ರಕ್ಟರ್ -01 ಹುದ್ದೆ ಹಾಗೂ ಉಡುಪಿಯ ನಗರ ಆರೋಗ್ಯ ಕೇಂದ್ರದಲ್ಲಿ ಖಾಲಿ ಇರುವ ಎಲ್.ಹೆಚ್.ವಿ-1 ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲು […]
ಸಮುದ್ರದೊಳಗಿನ ಈ ವಿಶೇಷ ಖನಿಜದಿಂದ ಭೂಗ್ರಹದ ಮೇಲೆ ಇಂಗಾಲದ ಪ್ರಮಾಣ ಇಳಿಕೆ? ಭೂಮಿಯನ್ನು ತಂಪಾಗಿಸುವ ಆ ಖನಿಜ ಯಾವುದು?

ನ್ಯೂಯಾರ್ಕ್: ಕೇಂಬ್ರಿಡ್ಜ್ ನ ಮ್ಯಾಸಚೂಸೆಟ್ಸ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (MIT) ಯ ಭೂವಿಜ್ಞಾನಿಗಳು “ಸ್ಮೆಕ್ಟೈಟ್” ಎಂದು ಕರೆಯಲ್ಪಡುವ ವಿಶೇಷ ರೂಪದ ಮಣ್ಣಿನ ಖನಿಜವನ್ನು ಗುರುತಿಸಿದ್ದಾರೆ. ಇದು ಲಕ್ಷಾಂತರ ವರ್ಷಗಳಿಂದ ಇಂಗಾಲವನ್ನು ಸೆರೆಹಿಡಿಯುವ ಮತ್ತು ಸಂಗ್ರಹಿಸುವ ಗಮನಾರ್ಹ ಸಾಮರ್ಥ್ಯವನ್ನು ಹೊಂದಿದೆ ಮತ್ತಿದು ನಮ್ಮ ಭೂಗ್ರಹವನ್ನು ತಂಪಾಗಿಸುವಲ್ಲಿ ಮಹತ್ವದ ಪಾತ್ರವನ್ನು ವಹಿಸುತ್ತದೆ ಎಂದು ಅಂದಾಜಿಸಲಾಗಿದೆ. ಸಮುದ್ರದ ತಳದ ಸಂಕೀರ್ಣ ಪದರಗಳಲ್ಲಿ ಕಂಡುಬರುವ, ಸ್ಮೆಕ್ಟೈಟ್‌ನ ಸಮರೂಪ ತರಹದ ರಚನೆಯು ಸಾವಯವ ಇಂಗಾಲವನ್ನು ಹಿಡಿದಿಡುವಲ್ಲಿ ಪ್ರವೀಣವಾಗಿದೆ. ಈ ಪ್ರಕ್ರಿಯೆಯು ಭೂತಟ್ಟೆಗಳ ಚಲನೆಯ ಉದಯದಿಂದಲೂ […]
ಡಿ.7 ರಿಂದ ಕಟೀಲು ಯಕ್ಷಗಾನ ಮಂಡಳಿಯ ಆರು ಮೇಳಗಳ ತಿರುಗಾಟ; ಒಟ್ಟು 1002 ಸೇವೆಯಾಟ ಪ್ರದರ್ಶನ

ಕಿನ್ನಿಗೋಳಿ: ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯ ಆರು ಮೇಳಗಳ ತಿರುಗಾಟ ಡಿ. 7 ರಿಂದ ಪ್ರಾರಂಭವಾಗಲಿದೆ. ಸಂಜೆ 5.15 ಗಂಟೆಗೆ ದೇವಸ್ಥಾನದಲ್ಲಿ ತಾಳಮದ್ದಳೆ ಕಾರ್ಯಕ್ರಮ ನಡೆಯಲಿದೆ. ಸಂಜೆ 6.45 ರಿಂದ ಕಲಾವಿದರಿಗೆ ಗೆಜ್ಜೆ ಹಸ್ತಾಂತರ, ರಾತ್ರಿ 8.30ಕ್ಕೆ ಚೌಕಿ ಪೂಜೆ, ಬಳಿಕ ಆರು ರಂಗಸ್ಥಳಗಳಲ್ಲಿ ಏಕಕಾಲಕ್ಕೆ ಪೂರ್ವರಂಗ ಪ್ರದರ್ಶನ, 10.30ಕ್ಕೆ ಪಾಂಡವಾಶ್ವಮೇಧ ಯಕ್ಷಗಾನ ಬೆಳಗ್ಗಿನ ಜಾವದವರೆಗೆ ನಡೆಯಲಿದೆ ಎಂದು ಕಟೀಲು ದೇವಳದ ಆಡಳಿತ ಮಂಡಳಿಯ ಅಧ್ಯಕ್ಷ ಸನತ್ ಕುಮಾರ್ ಶೆಟ್ಟಿ ತಿಳಿಸಿದ್ದಾರೆ. ಈ […]
ಉಡುಪಿಯಲ್ಲಿ ಅಗಲಿದ ಅರ್ಜುನ ಆನೆಗೆ ಶ್ರದ್ಧಾಂಜಲಿ

ಉಡುಪಿ: ಮೈಸೂರು ದಸರಾದಲ್ಲಿ ಅಂಬಾರಿ ಹೊರುತ್ತಿದ್ದ ಅರ್ಜುನ ಆನೆಗೆ ಶ್ರದ್ಧಾಂಜಲಿ ಸಲ್ಲಿಸುವ ಕಾರ್ಯಕ್ರಮವು ನಗರದ ಮಾರುತಿ ವೀಥಿಕಾದಲ್ಲಿ ಮಂಗಳವಾರ ನಡೆಯಿತು. ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು ಅವರ ನೇತೃತ್ವದಲ್ಲಿ ಅಗಲಿದ ಆನೆ ಅರ್ಜುನನಿಗೆ ಮೌನ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಅರಣ್ಯಅಧಿಕಾರಿಗಳು, ನಾಗರಿಕ ಸಮಿತಿಯ ಕಾರ್ಯಕರ್ತರು, ಪ್ರಾಣಿಪ್ರೀಯರು, ಸಾರ್ವಜನಿಕರು ಪುಷ್ಪನಮನ ಸಲ್ಲಿಸಿದರು. ಈ ಸಂದರ್ಭ ವಲಯ ಅರಣ್ಯಾಧಿಕಾರಿ ವಾರಿಜಾಕ್ಷಿ, ಉಪ ವಲಯ ಅರಣ್ಯಾಧಿಕಾರಿಗಳಾದ ಗುರುರಾಜ್, ಜೀವನದಾಸ್, ಗಸ್ತು ಅರಣ್ಯ ಪಾಲಕರಾದ ಕೇಶವ ಪೂಜಾರಿ, ಚರಣ್ […]