ಡಿ. 11 ರಂದು ಸಾಂಕ್ರಾಮಿಕ ರೋಗಶಾಸ್ತ್ರಜ್ಞ ಹುದ್ದೆಗೆ ನೇರ ಸಂದರ್ಶನ

ಉಡುಪಿ: ಪ್ರಸಕ್ತ ಸಾಲಿನಲ್ಲಿ ರಾಷ್ಟೀಯ ಆರೋಗ್ಯ ಅಭಿಯಾನದಡಿ ಜಿಲ್ಲಾ ಸರ್ವೇಕ್ಷಣಾ ಘಟಕದಐ.ಡಿ.ಎಸ್.ಪಿ ಕಾರ್ಯಕ್ರಮದಲ್ಲಿ ಕುಂದಾಪುರದ ಸಾರ್ವಜನಿಕ ಆರೋಗ್ಯ ಘಟಕಕ್ಕೆ ಅಗತ್ಯವಿರುವ ಸಾಂಕ್ರಾಮಿಕ ರೋಗಶಾಸ್ತ್ರಜ್ಞ ಹುದ್ದೆಯನ್ನು ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ಅಭ್ಯರ್ಥಿಗಳಿಗೆ ಡಿಸೆಂಬರ್ 11 ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 1.30 ರ ವರೆಗೆ ನಗರದ ಜಿಲ್ಲಾ ಸರ್ವೇಕ್ಷಣಾಧಿಕಾರಿ ಕಚೇರಿಯಲ್ಲಿ ನೇರ ಸಂದರ್ಶನ ನಡೆಯಲಿದೆ. ಸ್ನಾತಕೋತ್ತರ ಪದವಿಯೊಂದಿಗೆ ವೈದ್ಯಕೀಯ ಪದವೀಧರರು/ ಪ್ರಿವೆಂಟಿವ್ ಮತ್ತು ಸೋಶಿಯಲ್ ಮೆಡಿಸಿನ್‌ನಲ್ಲಿ ಡಿಪ್ಲೊಮಾ/ ಸಾರ್ವಜನಿಕ ಆರೋಗ್ಯ ಅಥವಾ ಸಾಂಕ್ರಾಮಿಕ ರೋಗ ಶಾಸ್ತ್ರ […]

ಯುವಕರಲ್ಲಿ ಹೆಚ್ಚುತ್ತಿರುವ ಹೃದಯಾಘಾತ: ರಾಷ್ಟ್ರವ್ಯಾಪಿ CPR ತಂತ್ರ ಕಲಿಕಾ ಅಭಿಯಾನಕ್ಕೆ ಚಾಲನೆ ನೀಡಿದ ಕೇಂದ್ರ ಆರೋಗ್ಯ ಇಲಾಖೆ

ನವದೆಹಲಿ: ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಯುವ ಜನತೆ ಸೇರಿದಂತೆ ವಯಸ್ಕರಲ್ಲಿ ಹೃದಯಾಘಾತದ ಪ್ರಕರಣಗಳು ಹೆಚ್ಚುತ್ತಿರುವ ಕಾರಣ ರಾಷ್ಟ್ರವ್ಯಾಪಿ CPR ತಂತ್ರವನ್ನು ಕಲಿಸುವ ಅಭಿಯಾನವನ್ನು ಪ್ರಾರಂಭಿಸಿದೆ. ಕಾರ್ಡಿಯೋಪಲ್ಮನರಿ ಪುನರುಜ್ಜೀವನವನ್ನು CPR ಎಂದೂ ಕರೆಯುತ್ತಾರೆ. ಇದು ವ್ಯಕ್ತಿಯ ಹೃದಯ ಬಡಿತ ಅಥವಾ ಉಸಿರಾಟ ನಿಂತಾಗ ಮಾಡುವ ತುರ್ತು ಜೀವ ಉಳಿಸುವ ವಿಧಾನವಾಗಿದೆ. CPR ದೇಹದ ಪ್ರಮುಖ ಅಂಗಗಳಿಗೆ ರಕ್ತದ ಹರಿವು ಮತ್ತು ಆಮ್ಲಜನಕೀಕರಣವನ್ನು ನಿರ್ವಹಿಸಲು ಎದೆಯ ಸಂಕೋಚನ ಮತ್ತು ಕೃತಕ ಉಸಿರಾಟದ ಸಂಯೋಜನೆಯನ್ನು ಒಳಗೊಂಡಿರುತ್ತದೆ. ಡಿಸೆಂಬರ್ […]

ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ

ಕುಂದಾಪುರ: ಡಿ. 5ರಂದು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನ ಸಂಸ್ಥಾಪಕರ ದಿನಾಚರಣೆಯನ್ನು ಆಚರಿಸಲಾಯಿತು. ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಭಂಡಾರ್ಕಾರ್ಸ್ ಆರ್ಟ್ಸ್ ಮತ್ತು ಸೈನ್ಸ್ ಕಾಲೇಜು ಟ್ರಸ್ಟ್ ನ ಅಧ್ಯಕ್ಷ ಗುರೂಜಿ ಶಾಂತಾರಾಮ್ ಭಂಡಾರ್ಕರ್ ಮಾತನಾಡಿ, ಪ್ರತಿದಿನವು ಇತರರನ್ನು ಗೆಲ್ಲಿಸಿ. ನಿತ್ಯವೂ ಮನೆ ಮನಸು ಕನಸಿನಲ್ಲಿ ನಿಮ್ಮ ಕೆಲಸ ಕಾರ್ಯಗಳಲ್ಲಿ ಇತರರು ಜಯ ಗಳಿಸಬೇಕು. ನಿಮಗೂ ಬದುಕಿನಲ್ಲಿ ಸಾರ್ಥಕತೆಯ ಅನುಭವವಾಗುತ್ತದೆ. ಆಗ ಜಗತ್ತು ನಿಮ್ಮ ವಶವಾಗುತ್ತದೆ. ಪ್ರತಿ ವರ್ಷ ನಮ್ಮ ತಂದೆಯವರಾದ ಎ.ಎಸ್.ಭಂಡಾರ್ಕಾರ್ ಅವರ ಸಂಸ್ಮರಣೆ ಮಾಡುವ ನಿಮಗೆ ಚಿರುಋಣಿ […]

ಶಿರಸಿ: ಸಾಹಿತ್ಯ ಅಕಾಡೆಮಿ ಹೊಸದೆಹಲಿ ವತಿಯಿಂದ ಕಥಾಸಂಧಿ ಸಾಹಿತ್ಯ ಕಾರ್ಯಕ್ರಮ

ಶಿರಸಿ: ನಾನು ಕಾಲ್ಪನಿಕ ಕತೆಗಳನ್ನು ಬರೆಯುವುದಿಲ್ಲ. ನನ್ನ ಹೆಚ್ಚಿನ ಕತೆಗಳು ಸಮಾಜಿಕ ಅಸಮಾನತೆ, ಶೋಷಣೆಯ ಹಿನ್ನೆಲೆಯಲ್ಲೇ ಹುಟ್ಟಿಕೊಂಡಿವೆ. ನಾಗರಿಕ ಸಮಾಜದಲ್ಲಿ ಇಂದಿಗೂ ಅಸ್ಪೃಶ್ಯತೆಯ ಪಿಡುಗು ಚಾಲ್ತಿಯಲ್ಲಿರುವುದು ಶೋಚನೀಯ ಎಂದು ಕಥಾಕಾರ, ಗೋವಾ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ. ಪ್ರಕಾಶ್ ಪರ್ಯೆಂಕರ್ ಅಭಿಪ್ರಾಯಪಟ್ಟರು. ಅವರು ಸಾಹಿತ್ಯ ಅಕಾಡೆಮಿ, ಹೊಸದೆಹಲಿ ಶಿರಸಿಯ ನರೇಬೈಲ್‌ನಲ್ಲಿ ಚಂದನ ಪದವಿ ಪೂರ್ವ ಕಾಲೇಜಿನ ಸಹಭಾಗಿತ್ವದೊಂದಿಗೆ ಡಿ. 4 ರಂದು ಆಯೋಜಿಸಿದ್ದ ಕಥಾಸಂಧಿ ಮತ್ತು ಸಂವಾದ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು. ಗ್ರಾಮಾಂತರ ಪ್ರದೇಶಗಳಲ್ಲಿ ಈಗಲೂ ಚಾಲ್ತಿಯಲ್ಲಿರುವ ಅಸ್ಪೃಶ್ಯತೆ ಮತ್ತು […]

ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ವಾರ್ಷಿಕೋತ್ಸವ ಸಮಾರಂಭ

ಕುಂದಾಪುರ: ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭವು ಡಿ. 05 ರಂದು ನಡೆಯಿತು. ನಿವೃತ್ತ ಪ್ರಾಂಶುಪಾಲ ಎ. ಲಕ್ಷ್ಮೀ ನಾರಾಯಣ ಚಾತ್ರ ಮುಖ್ಯ ಅತಿಥಿಯಾಗಿ ಭಾಗವಹಿಸಿ, ಸ್ಪರ್ಧಾತ್ಮಕ ಹಾಗೂ ವಾರ್ಷಿಕ ಪರೀಕ್ಷೆಯ ಕಡೆಗೆ ಹೆಚ್ಚಿನ ಗಮನ ನೀಡಿ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಲು ವಿದ್ಯಾರ್ಥಿಗಳು ಶ್ರಮಿಸಬೇಕು. ಅಂತಹ ವಾತಾವರಣ ಶ್ರೀ ವೆಂಕಟರಮಣ ಸಂಸ್ಥೆಯಲ್ಲಿ ಇರುವುದರಿಂದ ವಿದ್ಯಾರ್ಥಿಗಳು ಅದಕ್ಕೆ ಸ್ಪಂದಿಸಬೇಕು ಎಂದರು. ಅಧ್ಯಕ್ಷ ಸ್ಥಾನವನ್ನು ವಹಿಸಿದ ಸಂಸ್ಥೆಯ ಕಾರ್ಯದರ್ಶಿ ಕೆ. ರಾಧಾಕೃಷ್ಣ ಶೆಣೈ ಮಾತನಾಡಿ, ಕಡಿಮೆ ಶುಲ್ಕದಲ್ಲಿ […]