ಉಡುಪಿ: ಕೋಟ್ಪಾ ದಳದಿಂದ ದಾಳಿ: ದಂಡ ವಸೂಲಿ
ಉಡುಪಿ: ಉಡುಪಿ ತಾಲೂಕಿನಲ್ಲಿ ಕೋಟ್ಪಾ ಕಾಯಿದೆಯನ್ನು ಅನುಷ್ಠಾನಗೊಳಿಸವ ನಿಟ್ಟಿನಲ್ಲಿ ತಾಲೂಕು ತಂಬಾಕು ನಿಯಂತ್ರಣ ತನಿಖಾ ದಳದ ವತಿಯಿಂದ ನಗರದ ಬಿ.ಎಸ್.ಎನ್.ಎಲ್ ಕಚೇರಿ ಬಳಿ, ಮೀನು ಮಾರುಕಟ್ಟೆ ಮತ್ತು ಉಡುಪಿ ಕೋರ್ಟ್ ರಸ್ತೆ ಮುಂತಾದ ಕಡೆಗಳಲ್ಲಿ ತಂಬಾಕು ಮಾರಾಟದ ಅಂಗಡಿ, ಹೋಟೆಲ್, ಬಾರ್ ಮತ್ತು ರೆಸ್ಟೋರೆಂಟ್‌ಗಳ ಮೇಲೆ ದಾಳಿ ನಡೆಸಿ, ಸೆಕ್ಷನ್ 4, 6(ಎ) ಮತ್ತು 6(ಬಿ) ಅಡಿಯಲ್ಲಿ 26 ಪ್ರಕರಣ ದಾಖಲಿಸಿ, 4300 ರೂ. ದಂಡ ವಸೂಲಿ ಮಾಡಲಾಯಿತು. ಈ ಸಂದರ್ಭದಲ್ಲಿ ಉಡುಪಿ ತಾಲೂಕು ಆರೋಗ್ಯಾಧಿಕಾರಿ ಡಾ. […]
ಸಾಲಿಗ್ರಾಮ: ಕನ್ನಡ ನಾಮಫಲಕ ಅಳವಡಿಕೆ ಕಡ್ಡಾಯ
ಉಡುಪಿ: ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿರುವ ಉದ್ದಿಮೆದಾರರು ಅಂಗಡಿ, ಮುಂಗಟ್ಟು, ಹೋಟೆಲ್ ಹಾಗೂ ಕಂಪನಿಗಳು ಉದ್ಯಮದಲ್ಲಿ ಕನ್ನಡದ ನಾಮಫಲಕವನ್ನು ಅಳವಡಿಸುವುದು ಕಡ್ಡಾಯವಾಗಿದ್ದು, ಇತರೇ ಭಾಷೆಯ ನಾಮಫಲಕಕ್ಕಿಂತ ಕನ್ನಡದ ನಾಮಫಲಕಗಳನ್ನು ದೊಡ್ಡದಾಗಿ ಅಳವಡಿಸುವಂತೆ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ: ನಗರಸಭೆ ಉಪಚುನಾವಣೆ – ವೇಳಾಪಟ್ಟಿ ಪ್ರಕಟ
ಉಡುಪಿ, ಡಿ.8: ನಗರ ಸ್ಥಳೀಯ ಸಂಸ್ಥೆಗಳ ಉಪ ಚುನಾವಣೆ – 2023 ಕ್ಕೆ ಸ೦ಬ೦ಧಿಸಿದ೦ತೆ, ಉಡುಪಿ ನಗರಸಭೆಯ 13 ನೇ ಮೂಡುಪೆರಂಪಳ್ಳಿ ವಾರ್ಡಿನ ಸಾಮಾನ್ಯ ಮಹಿಳೆ ಮೀಸಲಾತಿ ಸದಸ್ಯ ಸ್ಥಾನಕ್ಕೆ ಉಪಚುನಾವಣೆ ನಡೆಸಲು ಚುನಾವಣಾ ವೇಳಾಪಟ್ಟಿಯನ್ನು ನಿಗದಿಪಡಿಸಿ, ರಾಜ್ಯ ಚುನಾವಣಾ ಆಯೋಗವು ಅಧಿಸೂಚನೆ ಹೊರಡಿಸಿರುತ್ತದೆ. ನಾಮಪತ್ರಗಳನ್ನು ಸಲ್ಲಿಸಲು ಡಿಸೆಂಬರ್ 15 ಕೊನೆಯ ದಿನವಾಗಿದ್ದು, ಡಿ. 16 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ಡಿ. 18 ಕೊನೆಯ ದಿನವಾಗಿದೆ. ಡಿ. 27 ರಂದು ಬೆಳಗ್ಗೆ 7 […]
ಉಡುಪಿ: ಹಾಸ್ಟೆಲ್ ವಾರ್ಡನ್ ನಾಪತ್ತೆ
ಉಡುಪಿ: ಉಡುಪಿಯ ರೆಸಿಡೆನ್ಸಿಯಲ್ ಸ್ಕೂಲ್ ಒಂದರ ಹಾಸ್ಟೆಲ್ ವಾರ್ಡನ್ ಗುಣಕರ (32) ಎಂಬ ವ್ಯಕ್ತಿಯು ಡಿಸೆಂಬರ್ 6 ರಂದು ಹಾಸ್ಟೆಲ್ ನಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 4 ಇಂಚು ಎತ್ತರ, ಸಪೂರ ಮೈಕಟ್ಟು, ಗೋಧಿ ಮೈಬಣ್ಣ, ಉದ್ದಮುಖ ಹೊಂದಿದ್ದು, ಕನ್ನಡ, ಇಂಗ್ಲೀಷ್ ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ನಿಧನ
ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಇಂದು (ಡಿ.8) ಕೊನೆಯುಸಿರೆಳೆದಿದ್ದಾರೆ. ವಯೋ ಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ನಟಿ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಲೀಲಾವತಿ ಸುಮಾರು 50 ವರ್ಷಗಳ ಕಾಲ ಚಿತ್ರರಂಗಕ್ಕೆ ಸೇವೆ ಸಲ್ಲಿಸಿದ್ದರು. ತಮ್ಮ ಜೀವಿತಾವಧಿಯಲ್ಲಿ ಸುಮಾರು 600ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿರೋ ಲೀಲಾವತಿ ಪುತ್ರ ವಿನೋದ್ ರಾಜ್ ಹಾಗೂ ಅವರ ಕುಟುಂಬವನ್ನು ಅಗಲಿದಿದ್ದಾರೆ. ಡಾ.ರಾಜ್‌ಕುಮಾರ್, ವಿಷ್ಣುವರ್ಧನ್ ಸೇರಿದಂತೆ ಕನ್ನ ಚಿತ್ರರಂಗದ ಗಣ್ಯರೊಂದಿಗೆ ನಟಿಸಿ ಪ್ರೇಕ್ಷಕರ ಮೆಚ್ಚುಗೆ ಗಳಿಸಿದ್ದರು. ಸಿನಿಮಾದ ಜೊತೆ ಜೊತೆಗೆ ಸಮಾಜ […]