ಅಂತಿಮ ದರ್ಶನಕ್ಕೆ ಹರಿದು ಬಂದ ಅಭಿಮಾನಿಗಳು : ರವೀಂದ್ರ ಕಲಾಕ್ಷೇತ್ರದಲ್ಲಿ ಲೀಲಾವತಿ ಪಾರ್ಥಿವ ಶರೀರ

ಬೆಂಗಳೂರು: ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನ: ರವೀಂದ್ರ ಕಲಾಕ್ಷೇತ್ರದಲ್ಲಿ ಸಾರ್ವಜನಿಕರು, ಗಣ್ಯರು, ಅಭಿಮಾನಿಗಳು ಲೀಲಾವತಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆಯುತ್ತಿದ್ದಾರೆ. 11 ಗಂಟೆಯಿಂದ ಇಲ್ಲಿ ಪಾರ್ಥಿವ ಶರೀರದ ದರ್ಶನಕ್ಕೆ ಅನುವು ಮಾಡಿಕೊಡಲಾಗಿದೆ. ಸರಿ ಸುಮಾರು 2 ಗಂಟೆಯವರೆಗೆ ಲೀಲಾವತಿ ಅವರ ಪಾರ್ಥಿವ ಶರೀರದ ಸಾರ್ವಜನಿಕ ದರ್ಶನ ಪಡೆದುಕೊಳ್ಳಬಹುದಾಗಿದೆ. ರವೀಂದ್ರ ಕಲಾಕ್ಷೇತ್ರದಲ್ಲಿ ಬಿಗಿ ಪೊಲೀಸ್ ಬಂದ್ ಬಸ್ತೋ ಕೈಗೊಳ್ಳಲಾಗಿದೆ.ಕನ್ನಡ ಚಿತ್ರರಂಗದಲ್ಲಿ ಬಹುಕಾಲ ಛಾಪು ಮೂಡಿಸಿದ್ದ ಹಿರಿಯ ನಟಿ ಲೀಲಾವತಿ ಅವರು ನಿನ್ನೆ ಸಂಜೆ ವಯೋಸಹಜ ಕಾಯಿಲೆಯಿಂದ […]
ಶಿರಸಿ ಹೆದ್ದಾರಿಯಲ್ಲಿ ಬಸ್ ಮತ್ತು ಕಾರು ಢಿಕ್ಕಿ: ಮದುವೆ ಸಂಭ್ರಮದಲ್ಲಿದ್ದ ಒಂದೇ ಮನೆಯ ಐವರು ಸದಸ್ಯರ ದಾರುಣ ಸಾವು

ಶಿರಸಿ: ಕುಮಟಾ ಶಿರಸಿ ಹೆದ್ದಾರಿಯ ಶಿರಸಿಯ ಬಂಡಲ ಬಳಿ ಶುಕ್ರವಾರ ಸರಕಾರಿ ಬಸ್ ಮತ್ತು ಕಾರಿನ ನಡುವೆ ಡಿಕ್ಕಿ ಸಂಭವಿಸಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನ ಕಿನ್ನಿಕಂಬಳದ ಐವರು ಸಾವನ್ನಪ್ಪಿದ್ದು, ಮದುವೆ ಸಂಭ್ರಮದಲ್ಲಿದ್ದ ಮನೆಯಲ್ಲಿ ನೀರವ ಮೌನ ಆವರಿಸಿದೆ. ಕಿನ್ನಿಕಂಬಳದ ಪಿ.ರಾಮಕೃಷ್ಣ ರಾವ್ (69), ಪತ್ನಿ ವಿದ್ಯಾಲಕ್ಷ್ಮೀ ರಾವ್ (64), ರಾಮಕೃಷ್ಣ ರಾವ್ ಅವರ ತಮ್ಮನ ಪತ್ನಿ ಪುಷ್ಪಾ ಎಂ.ರಾವ್ (57), ಅವರ ತಮ್ಮನ ಮಗ ಸುಹಾಸ್ (30), ಭಾವ ಅರವಿಂದಾಕ್ಷ (27) ಶಿರಸಿಯ ರಾಘವೇಂದ್ರ […]
ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಡಾ.ಎಚ್.ಎಸ್.ಶೆಟ್ಟಿ ಇವರಿಗೆ ಗೌರವಾಭಿನಂದನೆ

ಉಡುಪಿ: ಪರ್ಯಾಯ ಶ್ರೀಕೃಷ್ಣಾಪುರ ಮಠದ ಆಶ್ರಯದಲ್ಲಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ,ಬೆಂಗಳೂರು, ಯಕ್ಷಗಾನ ಕಲಾರಂಗ(ರಿ) ಉಡುಪಿ, ಯಕ್ಷಶಿಕ್ಷಣ ಟ್ರಸ್ಟ್(ರಿ) ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ, ಕಿಶೋರ ಯಕ್ಷಗಾನ ಸಂಭ್ರಮ- 2023 ದ ಕಾರ್ಯಕ್ರಮದ ಸಂದರ್ಭದಲ್ಲಿ, ಯಕ್ಷಶಿಕ್ಷಣ ಟ್ರಸ್ಟ್ ನ ಗೌರವಾಧ್ಯಕ್ಷ ಪರ್ಯಾಯ ಶ್ರೀಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರು, ಶಿಕ್ಷಣ ಕ್ಷೇತ್ರಕ್ಕೆ ಉದಾರ ದಾನ ನೀಡಿದ ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಡಾ.ಎಚ್.ಎಸ್.ಶೆಟ್ಟಿ ಇವರನ್ನು ಗೌರವಿಸಿ ಅಭಿನಂದಿಸಿದರು. ಸಮಾರಂಭದಲ್ಲಿ ಸ್ಥಾಪಕ ಅಧ್ಯಕ್ಷ ಮಾಜಿ ಶಾಸಕ […]
ಕಲ್ಯಾಣಪುರ: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ದೀಪೋತ್ಸವ

ಕಲ್ಯಾಣಪುರ: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಾರ್ತಿಕ ಮಾಸದ 132 ನೇ ವರ್ಷದ ವಾರ್ಷಿಕ ದೀಪೋತ್ಸವವು ಗುರುವಾರದಂದು ಸಂಪನ್ನಗೊಂಡಿತು. ಧಾರ್ಮಿಕ ಪೂಜಾ ವಿಧಾನಗಳನ್ನು ಅರ್ಚಕ ನಾಗರಾಜ್ ಅಡಿಗ ನೆರವೇರಿಸಿದರು. ದೇವಳದ ಮೊಕ್ತೇಸರ ಕೆ. ವಿ. ರಾವ್ ಅವರ ಮಾರ್ಗದರ್ಶನದಲ್ಲಿ ಶ್ರೀದೇವರ ಸನ್ನಿಧಿಯಲ್ಲಿ ರಂಗಪೂಜೆ ನಡೆಯಿತು. ಬಳಿಕ ನಾಗರಾಜ್ ಶೇಟ್ ತಂಡದಿಂದ ಭಜನಾ ಕಾರ್ಯಕ್ರಮ ನಡೆಯಿತು. ಮಹಾ ಪೂಜೆಯ ಬಳಿಕ ಪ್ರಸಾದ ವಿತರಿಸಲಾಯಿತು. ನೂರಾರು ಭಕ್ತರು ದೇವರ ದರ್ಶನ ಪಡೆದರು.
ಡಿ.13 ರಂದು ಬನ್ನಾಡಿ ಬ್ರಹ್ಮ ಬೈದರ್ಕಳ ಕಂಬಳ

ಕುಂದಾಪುರ: ಡಿ.13 ರಂದು ಬನ್ನಾಡಿ ಬ್ರಹ್ಮ ಬೈದರ್ಕಳ ಕಂಬಳವು ಜರಗಲಿದ್ದು, ಬೆಳಿಗ್ಗೆ 10.20 ಕ್ಕೆ ಕಂಬಳ ಮುಹೂರ್ತ ನಡೆಯಲಿದ್ದು, ಮಧ್ಯಾಹ್ನ 2 ರಿಂದ 6 ರವರೆಗೆ ಕೋಣಗಳ ಓಟ ನಡೆಯಲಿದೆ ಎಂದು ಕಂಬಳ ಗದ್ದೆ ಮನೆಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.