ಬಿಎಸ್​ಇ ನಿಫ್ಟಿ 90 & ಸೆನ್ಸೆಕ್ಸ್​ 377 ಅಂಕ ಕುಸಿತ

ಮುಂಬೈ : ಭಾರತದ ಷೇರು ಮಾರುಕಟ್ಟೆಗಳು ಮಂಗಳವಾರ ಕುಸಿತದೊಂದಿಗೆ ವಹಿವಾಟು ಕೊನೆಗೊಳಿಸಿವೆ ಚಿಲ್ಲರೆ ಹಣದುಬ್ಬರ ದತ್ತಾಂಶ ಪ್ರಕಟವಾಗುವ ಮುನ್ನ ಇಂಧನ ಷೇರುಗಳ ಮೌಲ್ಯ ಕುಸಿತದಿಂದಾಗಿ ಬೆಂಚ್ ಮಾರ್ಕ್ ಷೇರು ಮಾರುಕಟ್ಟೆ ಸೂಚ್ಯಂಕಗಳು ಮಂಗಳವಾರ ಕೆಳಮಟ್ಟದಲ್ಲಿ ಕೊನೆಗೊಂಡವು.. ಇಂದು ಬಿಎಸ್‌ಇ ಸೆನ್ಸೆಕ್ಸ್ 377.50 ಪಾಯಿಂಟ್ಸ್ ಕುಸಿದು 69,551.03 ಕ್ಕೆ ತಲುಪಿದ್ದರೆ, ಎನ್‌ಎಸ್‌ಇ ನಿಫ್ಟಿ-50 90 ಪಾಯಿಂಟ್ಸ್ ಕುಸಿದು 20,900 ಕ್ಕೆ ತಲುಪಿದೆ. ಹೆಚ್ಚಿನ ವಿಶಾಲ ಮಾರುಕಟ್ಟೆ ಸೂಚ್ಯಂಕಗಳು ಇಳಿಕೆಯೊಂದಿಗೆ ಕೊನೆಗೊಂಡವು. ಇತರ ವೈಯಕ್ತಿಕ ಷೇರುಗಳಲ್ಲಿ ಸ್ಪೈಸ್ ಜೆಟ್ ಷೇರುಗಳು […]

ಗಾಯಕ್ವಾಡ್​ ಬದಲಿಗೆ ಗಿಲ್​ ಕಣಕ್ಕೆ : ಟಾಸ್​ ಗೆದ್ದ ದಕ್ಷಿಣ ಆಫ್ರಿಕಾ ಬೌಲಿಂಗ್​ ಆಯ್ಕೆ

ಗ್ಕೆಬರ್ಹಾ (ದಕ್ಷಿಣ ಆಫ್ರಿಕಾ): ತುಂತುರು ಮಳೆ ಮತ್ತು ಮೋಡದ ನಡುವೆಯೇ ಎರಡನೇ ಪಂದ್ಯದ ಟಾಸ್​ ಗೆದ್ದ ದಕ್ಷಿಣ ಆಫ್ರಿಕಾ ಬೌಲಿಂಗ್​ ಆಯ್ದುಕೊಂಡಿದೆ.ಮೊದಲ ಪಂದ್ಯ ಮಳೆಗೆ ಆಹುತಿ ಆಯುತು. 2024ರ ಟಿ20 ವಿಶ್ವಕಪ್​ ತಯಾರಿ ಹಿನ್ನೆಲೆಯಲ್ಲಿ ದಕ್ಷಿಣ ಆಫ್ರಿಕಾ ಮತ್ತು ಭಾರತದ ನಡುವೆ 3 ಪಂದ್ಯಗಳ ಸರಣಿ ನಡೆಯುತ್ತಿದೆ. ಸೇಂಟ್ ಜಾರ್ಜ್ ಪಾರ್ಕ್​ ಮೈದಾನದಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡದ ನಡುವಿನ ಎರಡನೇ ಟಿ20 ಪಂದ್ಯ ನಡೆಯುತ್ತಿದ್ದು, ಟಾಸ್​ ಗೆದ್ದ ಹರಿಣಗಳ ನಾಯಕ ಬೌಲಿಂಗ್​ ಆಯ್ಕೆ ಮಾಡಿಕೊಂಡಿದ್ದಾರೆ. […]

13,308 ಉದ್ಯೋಗ ಸೃಷ್ಟಿ ನಿರೀಕ್ಷೆ : ರಾಜ್ಯದಲ್ಲಿ 34,115 ಕೋಟಿ ಹೂಡಿಕೆಗೆ ಅನುಮೋದನೆ

ಬೆಳಗಾವಿ:ಸಿಎಂ ಅಧ್ಯಕ್ಷತೆಯಲ್ಲಿ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಮಂಗಳವಾರ ನಡೆದ ಉನ್ನತ ಮಟ್ಟದ ಒಪ್ಪಿಗೆ ನೀಡುವ ಸಮಿತಿಯ ಸಭೆಯಲ್ಲಿ, ಹೆಚ್ಚುವರಿ ರೂ 13,911 ಕೋಟಿ ಮೊತ್ತದ ಬಂಡವಾಳ ಹೂಡಿಕೆ ಮಾಡುವ ಫಾಕ್ಸ್‌ಕಾನ್‌ ಕಂಪನಿ ಪ್ರಸ್ತಾವನೆಗೆ ಅನುಮೋದನೆ ನೀಡಲಾಗಿದೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ತಿಳಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡುವ ಸಮಿತಿಯ ಸಭೆಯಲ್ಲಿ, ಒಟ್ಟು 34,115 ಕೋಟಿ ರೂ ಮೊತ್ತದ ಬಂಡವಾಳ ಹೂಡಿಕೆ 14 ಉದ್ಯಮಗಳ ಸ್ಥಾಪನೆಗೆ ಅನುಮೋದನೆ ನೀಡಲಾಯಿತು.ಮುಖ್ಯಮಂತ್ರಿ […]

ಕದನ ವಿರಾಮಕ್ಕೆ ಒತ್ತಾಯಿಸುವ ಕರಡು ನಿರ್ಣಯದ ಪರ ಮತ ಚಲಾಯಿಸಿದ ಭಾರತ : ಇಸ್ರೇಲ್-ಹಮಾಸ್ ಯುದ್ಧ

ವಿಶ್ವಸಂಸ್ಥೆ: ಇಸ್ರೇಲ್- ಹಮಾಸ್ ಯುದ್ಧದಲ್ಲಿ ತಕ್ಷಣದ ಮಾನವೀಯ ಕದನ ವಿರಾಮಕ್ಕೆ ಒತ್ತಾಯಿಸಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ (ಯುಎನ್​ಜಿಎ) ಈಜಿಪ್ಟ್ ಮಂಡಿಸಿದ ಕರಡು ನಿರ್ಣಯದ ಪರವಾಗಿ ಭಾರತ ಮತ ಚಲಾಯಿಸಿದೆ.ಇಸ್ರೇಲ್-ಹಮಾಸ್ ಸಂಘರ್ಷದಲ್ಲಿ ತಕ್ಷಣದ ಮಾನವೀಯ ಕದನ ವಿರಾಮ ಮತ್ತು ಎಲ್ಲಾ ಒತ್ತೆಯಾಳುಗಳನ್ನು ಬೇಷರತ್ತಾಗಿ ಬಿಡುಗಡೆ ಮಾಡುವಂತೆ ಒತ್ತಾಯಿಸುವ ವಿಶ್ವಸಂಸ್ಥೆಯ ಜನರಲ್ ಅಸೆಂಬ್ಲಿಯಲ್ಲಿ ಕರಡು ನಿರ್ಣಯದ ಪರವಾಗಿ ಭಾರತ ಮತ ಹಾಕಿದೆ. ಅಲ್ಜೀರಿಯಾ, ಬಹ್ರೇನ್, ಇರಾಕ್, ಕುವೈತ್, ಓಮನ್, ಕತಾರ್, ಸೌದಿ ಅರೇಬಿಯಾ, ಯುನೈಟೆಡ್ ಅರಬ್ ಎಮಿರೇಟ್ಸ್ ಮತ್ತು ಪ್ಯಾಲೆಸ್ಟೈನ್ […]

ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ಭಾಷಾ ವಿಷಯಗಳ ಕಾರ್ಯಾಗಾರ.

ಕುಂದಾಪುರ: ಡಿ.11 ರಂದು ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ಕನ್ನಡ, ಹಿಂದಿ ಹಾಗೂ ಸಂಸ್ಕೃತ ಭಾಷೆಯನ್ನು ಅಧ್ಯಯನ ಮಾಡುವ ವಿದ್ಯಾರ್ಥಿಗಳಿಗೆ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು. ಸಂಪನ್ಮೂಲ ವ್ಯಕ್ತಿಯಾಗಿ ಕನ್ನಡ ವಿಷಯದಲ್ಲಿ ತೆಂಕನಿಡಿಯೂರು ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವಿಶ್ವನಾಥ ಕರಬ ಹಾಗೂ ಹಿಂದಿ ವಿಷಯದ ಬಗ್ಗೆ ಸಂಪನ್ಮೂಲ ವ್ಯಕ್ತಿ ಯಾಗಿ ಹಿರಿಯಡ್ಕ ಪದವಿ ಪೂರ್ವ ಕಾಲೇಜಿನ ಹಿಂದಿ ಉಪನ್ಯಾಸಕರಾದ ಡಾ. ಅನಂತ ರಾಮ್ ನಾಯಕ್, ಸಂಸ್ಕೃತ ವಿಷಯದ ಕುರಿತು ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಸಂಸ್ಕೃತ […]