ಮಲಾಡ್ ಕನ್ನಡ ಸಂಘದ ವತಿಯಿಂದ ಒಳಾಂಗಣ ಕ್ರೀಡಾ ಸ್ಪರ್ಧೆ
ಮಲಾಡ್: ಯುವಕರಲ್ಲಿ ಸಂಘದ ಕಾರ್ಯ ಚಟುವಟಿಕೆಯ ಜೊತೆಗೆ ಕ್ರೀಡಾಸಕ್ತಿ ಬೆಳೆಯಬೇಕೆಂಬ ಉದ್ದೇಶದಿಂದ ಮಲಾಡ್ ಕನ್ನಡ ಸಂಘವು ಪ್ರತಿವರ್ಷ ಸಂಘದ ಸದಸ್ಯರ ಮಕ್ಕಳಿಗೆ ಮತ್ತು ಯುವಕರಿಗೆ ಒಳಾಂಗಣ ಕ್ರೀಡಾ ಸ್ಪರ್ಧೆಯನ್ನು ಆಯೋಜಿಸುತ್ತಾ ಬಂದಿದೆ. ಕ್ರೀಡೆ ಮನಸ್ಸನ್ನು ಕ್ರಿಯಾಶೀಲಗೊಳಿಸುವ ಮೂಲಕ ಸ್ಪರ್ಧಾತ್ಮಕ ಮನೋಭಾವವನ್ನು ಬೆಳೆಸುತ್ತದೆ ಜೊತೆಗೆ ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಕ್ರೀಡೆ ಸ್ಫೂರ್ತಿಯಾಗಿದೆ ಎಂದು ಮಲಾಡ್ ಕನ್ನಡ ಸಂಘದ ಅಧ್ಯಕ್ಷ ನ್ಯಾಯವಾದಿ ಜಗದೀಶ್ ಎಸ್ ಹೆಗ್ಡೆ ಅಭಿಪ್ರಾಯಪಟ್ಟರು. ಡಿ. 10 ರಂದು ಮಲಾಡ್ ಮಾರ್ವೆ ರೋಡ್ ನ ಯುನಿಟಿ […]
ಕಲ್ಯಾಣಪುರ: ಡಿ. 17 ರಿಂದ ಶ್ರೀ ವೆಂಕಟರಮಣ ದೇವಳದಲ್ಲಿ ಅಹೋರಾತ್ರಿ ಭಜನಾ ಸಪ್ತಾಹ
ಕಲ್ಯಾಣಪುರ: ಶ್ರೀ ವೆಂಕಟರಮಣ ದೇವಳದಲ್ಲಿ ಶ್ರೀ ವಿಠೋಬಾ ರುಖುಮಾಯಿ ಸನ್ನಿಧಿಯಲ್ಲಿ ಡಿ. 17 ರಿಂದ ಭಜನಾ ಸಪ್ತಾಹ ಆರಂಭಗೊಂಡು ಡಿ. 24 ವರೆಗೆ ನಡೆಯಲಿದೆ. ಊರ ಪರವೂರ ಭಜನಾ ತಂಡಗಳು ಅಹೋರಾತ್ರಿ ಭಜನೆ ನಡೆಸಲಿವೆ. ಡಿ. 17 ರ ಬೆಳ್ಳಿಗೆ 8 ಗಂಟೆಗೆ ಸಾಮೂಹಿಕ ಪ್ರಾರ್ಥನೆ ಬಳಿಕ ದೀಪ ಪ್ರಜ್ವಲನೆಯೊಂದಿಗೆ 95 ನೇ ವರ್ಷದ ಭಜನಾ ಮಹೋತ್ಸವ ಆರಂಭ ಗೊಳ್ಳಲಿದೆ. ದೇವರಿಗೆ ಪ್ರತಿ ದಿನ ವಿಶೇಷ ಹೂವಿನ ಅಲಂಕಾರ, ರಾತ್ರಿ ಪೇಟೆ ಉತ್ಸವ ನಡೆಯಲಿದೆ. ಪ್ರತಿದಿನ ಸಂಜೆ […]
ರಾಜ್ಯದಲ್ಲಿ ಹೆಚ್ಚುವರಿ 13,911 ಕೋಟಿ ಮೊತ್ತದ ಬಂಡವಾಳ ಹೂಡಿಕೆಗೆ ಸರ್ಕಾರದ ಅನುಮೋದನೆ
ಬೆಳಗಾವಿ: ರಾಜ್ಯದಲ್ಲಿ ಹೆಚ್ಚುವರಿಯಾಗಿ 13,911 ಕೋಟಿ ಮೊತ್ತದ ಬಂಡವಾಳ ಹೂಡಿಕೆ ಮಾಡುವ ಫಾಕ್ಸ್ಕಾನ್ ಪ್ರಸ್ತಾವನೆಯನ್ನು ಸರ್ಕಾರವು ಅನುಮೋದಿಸಿದೆ. ಸೆಮಿ ಕಂಡಕ್ಟರ್ ಕ್ಷೇತ್ರದ ದೈತ್ಯ ಸಂಸ್ಥೆಯಾಗಿರುವ ಫಾಕ್ಸ್ಕಾನ್, ಈಗಾಗಲೇ ರಾಜ್ಯದಲ್ಲಿ 8,000 ಕೋಟಿ ಬಂಡವಾಳ ಹೂಡಿಕೆ ಮಾಡಲು ಅನುಮೋದನೆ ಪಡೆದಿದೆ. ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆದ ಸಭೆಯಲ್ಲಿ ಅನುಮೋದನೆ ನೀಡಲಾಯಿತು. ಜೆಎಸ್‌ಡಬ್ಲ್ಯು ರಿನ್ಯೂ ಎನರ್ಜಿ ಫೋರ್ ಲಿಮಿಟೆಡ್ (ರೂ 4,960 ಕೋಟಿ ), ಜೆಎಸ್‌ಡಬ್ಲ್ಯು ಸ್ಟೀಲ್ ಲಿಮಿಟೆಡ್ (ರೂ 3,804 ಕೋಟಿ ), ಟೊಯೊಟಾ ಕಿರ್ಲೋಸ್ಕರ್ ಮೋಟರ್ ಪ್ರೈವೇಟ್ […]
ಭತ್ತ ಖರೀದಿ ನೋಂದಣಿ ಪ್ರಕ್ರಿಯೆ ಪ್ರಾರಂಭ; ಖರೀದಿ ಕೇಂದ್ರ ಸ್ಥಾಪನೆ
ಉಡುಪಿ: ಕೇಂದ್ರ ಸರ್ಕಾರವು ಪ್ರಸಕ್ತ ಸಾಲಿನಲ್ಲಿ ಸಾಮಾನ್ಯ ಭತ್ತಕ್ಕೆ ಪ್ರತಿ ಕ್ವಿಂಟಾಲ್ ಗೆ ರೂ.2183 ಹಾಗೂ ಗ್ರೇಡ್ ಎ ಭತ್ತಕ್ಕೆ ರೂ.2203 ಕನಿಷ್ಠ ಬೆಂಬಲ ಬೆಲೆಯನ್ನು ನಿಗದಿಪಡಿಸಿದ್ದು, ಜಿಲ್ಲೆಯ ರೈತರಿಂದ ಪ್ರತಿ ಎಕರೆಗೆ ಗರಿಷ್ಠ 25 ಕ್ವಿಂಟಾಲ್ ನಂತೆ ಪ್ರತಿ ರೈತರಿಂದ ಗರಿಷ್ಠ 40 ಕ್ವಿಂಟಾಲ್ ಭತ್ತವನ್ನು ನಿಯಮಾನುಸಾರ ಖರೀದಿಸಲು ಮತ್ತು ರೈತರಿಗೆ ನೋಂದಣಿ ಕೇಂದ್ರಗಳನ್ನು ತೆರೆದು ನೋಂದಣಿ ಪ್ರಕ್ರಿಯೆಯನ್ನು ಪ್ರಾರಂಭಿಸಲು ಅವಕಾಶ ಕಲ್ಪಿಸಲಾಗಿರುತ್ತದೆ. ಭತ್ತ ಖರೀದಿಸಲು ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತವನ್ನು […]
ಜಮ್ಮು-ಕಾಶ್ಮೀರದ 370 ನೇ ವಿಧಿ ರದ್ದತಿ ಪರ ಸುಪ್ರೀಂ ಕೋರ್ಟ್ ತೀರ್ಪು ಸತ್ಯಕ್ಕೆ ಸಂದ ಜಯ: ದಾವೂದ್ ಅಬೂಬಕ್ಕರ್
ಉಡುಪಿ: ಭಾರತದ ಅವಿಭಾಜ್ಯ ಅಂಗ ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿ ಅಲ್ಲಿನ ನಾಗರಿಕರ ಬದುಕಿಗೆ ಸುರಕ್ಷತೆ ಒದಗಿಸುವ 370 ನೇ ವಿಧಿ ರದ್ದತಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರಕಾರವು ಕೈಗೊಂಡ ಐತಿಹಾಸಿಕ ನಿರ್ಣಯವನ್ನು ಸುಪ್ರೀಂ ಕೋರ್ಟ್ ಪಂಚ ಸದಸ್ಯ ಪೀಠವು ಎತ್ತಿ ಹಿಡಿದಿರುವುದು ಸತ್ಯಕ್ಕೆ ಸಂದ ಜಯ ಎಂದು ಉಡುಪಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷ ದಾವೂದ್ ಅಬೂಬಕ್ಕರ್ ಹೇಳಿದ್ದಾರೆ. ಉನ್ನತ ನ್ಯಾಯಾಲಯದ ತೀರ್ಪು ಸತ್ಯಕ್ಕೆ ಸಂದ ಜಯ, ನ್ಯಾಯ ಸಮ್ಮತ ತೀರ್ಪಿನಿಂದ ದೇಶದ ಏಕತೆ […]