ಮಥುರಾದ ಶಾಹಿ ಈದ್ಗಾ ಮಸೀದಿಯ ಸಮೀಕ್ಷೆಗೆ ಆಯೋಗ ರಚನೆಗೆ ಅಲಹಾಬಾದ್ ಹೈಕೋರ್ಟ್ ಒಪ್ಪಿಗೆ
ಅಲಹಾಬಾದ್: ಭಗವಾನ್ ಶ್ರೀಕೃಷ್ಣನ ಜನ್ಮಸ್ಥಳ ಮಥುರಾದಲ್ಲಿ ಕೃಷ್ಣ ದೇವಸ್ಥಾನದ ಪ್ರದೇಶದಲ್ಲಿ ಶಾಹಿ ಈದ್ಗಾ ಮಸೀದಿ ನಿರ್ಮಿಸಲಾಗಿದ್ದು, ಈ ಬಗ್ಗೆ ಹಿಂದೂ ಪರ ಅರ್ಜಿದಾರರು ದೇವಾಲಯ ಸಂಕೀರ್ಣದ ವೈಜ್ಞಾನಿಕ ಸಮೀಕ್ಷೆ ಮಾಡಲು ಅನುಮತಿ ಕೋರಿ ಅಲಹಾಬಾದ್ ಹೈಕೋರ್ಟಿನಲ್ಲಿ ಅರ್ಜಿ ಸಲ್ಲಿಸಿದ್ದರು. ಶಾಹಿ ಈದ್ಗಾ ಮಸೀದಿ ಸಂಕೀರ್ಣವನ್ನು ಪರಿಶೀಲಿಸಲು ಆಯೋಗವನ್ನು ನೇಮಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ಗುರುವಾರ ಅಂಗೀಕರಿಸಿದೆ. ಅರ್ಜಿದಾರರ ಪರ ವಕೀಲ ರಂಜನಾ ಅಗ್ನಿಹೋತ್ರಿ ಮಾಧ್ಯಮದ ಜೊತೆ ಮಾತನಾಡಿ, ಸ್ಥಳವನ್ನು ಸಮೀಕ್ಷೆ ಮಾಡಲು ಆಯೋಗವನ್ನು ನೇಮಿಸಬೇಕೆಂಬ […]
ಮಣಿಪಾಲ: ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ವತಿಯಿಂದ ಸರಕಾರಿ ಕೈಗಾರಿಕಾ ಕಾಲೇಜಿನಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ
ಮಣಿಪಾಲ: ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಮಣಿಪಾಲ ವಲಯ ವತಿಯಿಂದ ಮಣಿಪಾಲದ ಸರಕಾರಿ ಕೈಗಾರಿಕಾ ತರಬೇತಿ ಕಾಲೇಜಿನಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದ ಉಡುಪಿ ತಾಲೂಕು ಜನಜಾಗ್ರತಿ ವೇದಿಕೆ ಅಧ್ಯಕ್ಷ ಸತ್ಯಾನಂದ ನಾಯಕ್ ಮಾತನಾಡಿ, ಯೋಜನೆಯ ಹಲವಾರು ಸೌಲಭ್ಯಗಳು, ಸಮಾಜಕ್ಕೆ ಯೋಜನೆಯಿಂದ ಆಗಿರುವ ಪ್ರಯೋಜನಗಳು ಮತ್ತು, ಸ್ವಾಸ್ತ್ಯ ಸಂಕಲ್ಪದ ಉದ್ದೇಶವನ್ನು ತಿಳಿಸಿದರು. ಸಂಪನ್ಮೂಲ ವ್ಯಕ್ತಿ ಬಾಳಿಗಾ ಆಸ್ಪತ್ರೆಯ ಹಿರಿಯ ವೈದ್ಯೆ ಡಾ. ಸೌಜನ್ಯ ಮಾತನಾಡಿ, ದುಶ್ಚಟಗಳಿಂದ ಆಗುವ […]
ಉಡುಪಿ: ತಾಲೂಕು ಸಾಹಿತ್ಯ ಸಮ್ಮೇಳನದ ಬಿತ್ತಿಪತ್ರ ಸಚಿವರಿಂದ ಲೋಕಾರ್ಪಣೆ.
ಉಡುಪಿ: ತಾಲೂಕು ಸಮ್ಮೇಳನಗಳಿಗೆ ನೀಡುವ ಅನುದಾನವನ್ನು ಸ್ಥಗಿತಗೊಳಿಸಿಲ್ಲ. ಮುಂದಿನ ದಿನಗಳಲ್ಲಿ ಈ ಬಗ್ಗೆ ಪರಿಶೀಲಿಸಿ ಕಾರ್ಯಗತ ಗೊಳಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ಖಾತೆ ಸಚಿವ ಶ್ರೀ ಶಿವರಾಜ್ ಸಂಗಪ್ಪ ತಂಗಡಗಿ ಹೇಳಿದರು. ಅವರು ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ಉಡುಪಿ ತಾಲೂಕು ಘಟಕದ ವತಿಯಿಂದ ಡಿಸೆಂಬರ್ 30, ಶನಿವಾರದಂದು ಮಣಿಪಾಲದ ಶಿವಪ್ಪಾಡಿ ಉಮಾಮಹೇಶ್ವರ ದೇವಸ್ಥಾನದ ಶ್ರೀ ರಮಾನಂದ ಸ್ಮೃತಿ ಮಂಟಪದಲ್ಲಿ ನಡೆಯಲಿರುವ ಉಡುಪಿ ತಾಲೂಕು 14ನೆ […]
ಫೆಬ್ರವರಿಯಲ್ಲಿ ಮಾರುಕಟ್ಟೆಗೆ ಬರಲಿದೆ ಮಹೀಂದ್ರಾ SUV ಮಾದರಿ XUV300 ನ ನವೀಕರಿಸಿದ ಆವೃತ್ತಿ
ಮಹೀಂದ್ರಾ ತನ್ನ ಕಾಂಪ್ಯಾಕ್ಟ್ SUV ಮಾದರಿಯಾದ XUV300 ನ ನವೀಕರಿಸಿದ ಆವೃತ್ತಿಯನ್ನು ಬಿಡುಗಡೆ ಮಾಡಲು ಸಜ್ಜಾಗಿದೆ. XUV300 ತನ್ನ ವಿಭಾಗದಲ್ಲಿ ಟಾಟಾ ನೆಕ್ಸಾನ್, ಮಾರುತಿ ಬ್ರೆಝಾ ಮತ್ತು ಹ್ಯುಂಡೈ ವೆನ್ಯೂನಂತಹ ಇತರ ವಾಹನಗಳೊಂದಿಗೆ ಸ್ಪರ್ಧಿಸುತ್ತದೆ. ಆಟೋಕಾರ್ ಇಂಡಿಯಾ ಪ್ರಕಾರ ಫೆಬ್ರವರಿ 2024 ರಲ್ಲಿ ಮಹೀಂದ್ರಾ ತನ್ನ ಹೊಸ XUV300 ಅನ್ನು ಪರಿಚಯಿಸುವ ಸಾಧ್ಯತೆಯಿದೆ. ಮತ್ತು ಅದೇ ಸಮಯದಲ್ಲಿ ಬೆಲೆ ವಿವರಗಳನ್ನು ಬಹಿರಂಗಪಡಿಸಲಾಗುತ್ತದೆ. ಅದಕ್ಕೂ ಮುನ್ನ ನವೀಕರಿಸಿದ XUV400 EV ಯು ಬಿಡುಗಡೆ ಹೊಂದುವ ಸಾಧ್ಯತೆ ಇದೆ ಎನ್ನಲಾಗಿದೆ. […]
ಡಿ. 27 ರಂದು ಜಿಲ್ಲಾ ಮಟ್ಟದ ಕೈಗಾರಿಕಾ ಸ್ಪಂದನ ಕಾರ್ಯಕ್ರಮ
ಉಡುಪಿ: ಜಿಲ್ಲಾಮಟ್ಟದ ಕೈಗಾರಿಕಾ ಸ್ಪಂದನ ಕಾರ್ಯಕ್ರಮವು ಡಿಸೆಂಬರ್ 27 ರಂದು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆಯಲಿದ್ದು, ಕಾರ್ಯಕ್ರಮದಲ್ಲಿ ಕೈಗಾರಿಕಾ ಪ್ರದೇಶಗಳಲ್ಲಿ ಅಗತ್ಯವಿರುವ ಮೂಲಭೂತ ಸೌಕರ್ಯ ಹಾಗೂ ಉದ್ದಿಮೆದಾರರ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ಬಗ್ಗೆ ಚರ್ಚಿಸಲಾಗುವುದು. ಜಿಲ್ಲೆಯ ಕೈಗಾರಿಕೋದ್ಯಮಿಗಳು ತಮ್ಮ ಅಹವಾಲು ಹಾಗೂ ಸಲಹೆಗಳಿದ್ದಲ್ಲಿ ಡಿಸೆಂಬರ್ 20 ರ ಒಳಗಾಗಿ ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ಶಿವಳ್ಳಿ ಕೈಗಾರಿಕಾ ಪ್ರದೇಶ, ಮಣಿಪಾಲ, ಉಡುಪಿ ಇವರಿಗೆ ಲಿಖಿತವಾಗಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0820-2575650 ಅನ್ನು ಸಂಪರ್ಕಿಸಬಹುದಾಗಿದೆ ಎಂದು […]