ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯನ್ನು ಅರ್ಹರಿಗೆ ಪ್ರಾಮಾಣಿಕವಾಗಿ ತಲುಪಿಸಿ: ಡಾ. ಕೆ ವಿದ್ಯಾಕುಮಾರಿ

ಉಡುಪಿ: ಜಿಲ್ಲೆಯಲ್ಲಿ ಸಾಂಪ್ರದಾಯಿಕ ಕರ ಕುಶಲ ಕಲೆಯಲ್ಲಿ ತೊಡಗಿರುವ ಕುಶಲಕರ್ಮಿಗಳನ್ನು ಪ್ರೋತ್ಸಾಹಿಸಲು ಜಾರಿಗೆ ತಂದಿರುವ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಕಾರ್ಯವನ್ನು ಅಧಿಕಾರಿಗಳು ಪ್ರಾಮಾಣಿಕವಾಗಿ ಮಾಡಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು. ಅವರು ಬುಧವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ ಅನುಷ್ಠಾನ ಕುರಿತ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಸರಕಾರ ಕುಶಲಕರ್ಮಿಗಳಿಗೆ ಕೌಶಲ್ಯಾಭಿವೃದ್ಧಿ ತರಬೇತಿ ನೀಡುವುದರ ಜೊತೆಗೆ […]

ಕೊಡಗು ಜಿಲ್ಲೆಯ ಸಹಕಾರಿ ಸಂಘಗಳ ಸದಸ್ಯರಿಂದ ಬ್ರಹ್ಮಾವರ ವ್ಯವಸಾಯ ಸೇವಾ ಸಹಕಾರ ಸಂಘಕ್ಕೆ ಭೇಟಿ

ಬ್ರಹ್ಮಾವರ: ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ ಅಧ್ಯಕ್ಷ ಕೊಂಡದೇರ ಪಿ ಗಣಪತಿ ಮತ್ತು ಆಡಳಿತ ಮಂಡಳಿಯ ಸದಸ್ಯರು, ಟೌನ್ ಕೋ ಆಪರೇಟಿವ್ ಬ್ಯಾಂಕ್‌ನ ಅಧ್ಯಕ್ಷರು ಹಾಗೂ ಕೊಡಗು- ಮಡಿಕೇರಿಯ ಎಲ್ಲಾ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘಗಳ ಅಧ್ಯಕ್ಷರು ಹಾಗೂ ನಿರ್ದೇಶಕರ ಸಹಿತ ಸುಮಾರು 80 ಸದಸ್ಯರು ಡಿ. 8 ರಂದು ಬ್ರಹ್ಮಾವರ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಯನ ಪ್ರವಾಸ ಕೈಗೊಂಡು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಸಂಘದ ವ್ಯವಹಾರದ ಅಭಿವೃದ್ಧಿ ಕುರಿತು ಸಂಘದ ಅಧ್ಯಕ […]

ಶಬರಿಮಲೆ ಅಯ್ಯಪ್ಪ ದೇವಾಲಯದಲ್ಲಿ ಜನದಟ್ಟಣೆ: ಪೊಲೀಸರಿಂದ ಅವಕಾಶ ನಿರಾಕರಣೆ; ಭಕ್ತರಿಂದ ರಸ್ತೆ ತಡೆದು ಪ್ರತಿಭಟನೆ

ಕೊಚ್ಚಿ: ಪ್ರಸಿದ್ಧ ಶಬರಿಮಲೆ ಅಯ್ಯಪ್ಪ ದೇವಾಲಯದಲ್ಲಿ ಈ ವರ್ಷ ಅಯ್ಯಪ್ಪ ವೃತಧಾರಿಗಳ ಭಾರೀ ಜನಸಂದಣಿ ಕಂಡು ಬರುತ್ತಿದ್ದು, ದೇಗುಲದಲ್ಲಿ ಮೂಲಭೂತ ಸೌಕರ್ಯಗಳು ಮತ್ತು ಸುರಕ್ಷತಾ ಕ್ರಮಗಳ ಕೊರತೆಯ ಬಗ್ಗೆ ಯಾತ್ರಾರ್ಥಿಗಳು ದೂರಿದ್ದಾರೆ. ಯಾತ್ರಾರ್ಥಿಗಳ ವಿಪರೀತ ದಟ್ಟಣೆಯನ್ನು ಕಂಡು ಆಂಧ್ರಪ್ರದೇಶ, ತಮಿಳುನಾಡು, ತ್ರಿಶೂರ್, ಕೋಝಿಕ್ಕೋಡ್ ಮತ್ತು ಮಲಪ್ಪುರಂ ಮುಂತಾದ ಸ್ಥಳಗಳಿಂದ ಹಲವಾರು ಭಕ್ತರು ದೇಗುಲ ಪ್ರವಾಸವನ್ನು ನಿಲ್ಲಿಸಿ ಮನೆಗೆ ಮರಳಿದ್ದಾರೆ ಎಂದು ಸ್ಥಳೀಯ ವರದಿಗಳು ತಿಳಿಸಿವೆ. ಪೊಲೀಸರು ವಾಹನಗಳನ್ನು ತಡೆದಿದ್ದು ಪ್ರವಾಸಿಗರನ್ನು ಗಂಟೆಗಳ ಕಾಲ ಕಾಯುವಂತೆ ಮಾಡಲಾಗಿತ್ತು ಇದರಿಂದ […]

ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ಭಾಷಾ ವಿಷಯಗಳ ಕಾರ್ಯಾಗಾರ

ಕುಂದಾಪುರ: ಡಿ.11 ರಂದು ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ಕನ್ನಡ, ಹಿಂದಿ ಹಾಗೂ ಸಂಸ್ಕೃತ ಭಾಷೆಯನ್ನು ಅಧ್ಯಯನ ಮಾಡುವ ವಿದ್ಯಾರ್ಥಿಗಳಿಗೆ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು. ಸಂಪನ್ಮೂಲ ವ್ಯಕ್ತಿಯಾಗಿ ಕನ್ನಡ ವಿಷಯದಲ್ಲಿ ತೆಂಕನಿಡಿಯೂರು ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವಿಶ್ವನಾಥ ಕರಬ ಹಾಗೂ ಹಿಂದಿ ವಿಷಯದ ಬಗ್ಗೆ ಸಂಪನ್ಮೂಲ ವ್ಯಕ್ತಿ ಯಾಗಿ ಹಿರಿಯಡ್ಕ ಪದವಿ ಪೂರ್ವ ಕಾಲೇಜಿನ ಹಿಂದಿ ಉಪನ್ಯಾಸಕರಾದ ಡಾ. ಅನಂತ ರಾಮ್ ನಾಯಕ್, ಸಂಸ್ಕೃತ ವಿಷಯದ ಕುರಿತು ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಸಂಸ್ಕೃತ […]

ಕಟಪಾಡಿ: ಡಿ.17 ರಂದು ಹೈಟೆಕ್ ಮೆಡಿಕೇರ್ ಆಸ್ಪತ್ರೆಯ ಸಂಸ್ಥಾಪಕ ದಿನಾಚರಣೆ ಅಂಗವಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರ

ಕಟಪಾಡಿ: ಶ್ರೀ ವಿಶ್ವನಾಥ ಕ್ಷೇತ್ರ ಕಟಪಾಡಿ ಇದರ ಆಶ್ರಯದಲ್ಲಿ ಹೈಟೆಕ್ ಮೆಡಿಕೇರ್ ಆಸ್ಪತ್ರೆ ಅಂಬಲಪಾಡಿ ಇದರ ಸಂಸ್ಥಾಪಕರ ದಿನಾಚರಣೆಯ ಅಂಗವಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರವು ಡಿ.17 ರಂದು ಭಾನುವಾರ ಬೆಳಿಗ್ಗೆ 9:30 ರಿಂದ ಮಧ್ಯಾಹ್ನ 1 ಗಂಟೆವರೆಗೆ ಕಟಪಾಡಿಯ ಶ್ರೀ ವಿಶ್ವನಾಥ ಕ್ಷೇತ್ರದಲ್ಲಿ ನಡೆಯಲಿರುವುದು. ಹೈಟೆಕ್ ಆಸ್ಪತ್ರೆಯ ಮೆಡಿಸಿನ್ ವಿಭಾಗ, ಸ್ತ್ರೀರೋಗ ವಿಭಾಗ, ಕಿವಿ, ಮೂಗು ಗಂಟಲು ವಿಭಾಗಗಳ ಖ್ಯಾತ ವೈದ್ಯರಿಂದ ತಪಾಸಣೆ ನಡೆಸಲಾಗುವುದು. ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕಾಗಿ ಪ್ರಕಟಣೆ ತಿಳಿಸಿದೆ.