ಚಿಕ್ಕಮಗಳೂರಿನ ಪ್ರವಾಸಿ ತಾಣಗಳಿಗೆ ಆರು ದಿನಗಳ ಕಾಲ ನಿಷೇಧ!

ಚಿಕ್ಕಮಗಳೂರು: ಡಿ.17 ರಿಂದ 26 ರವರೆಗೆ ಚಿಕ್ಕಮಗಳೂರಿನಲ್ಲಿ ನಡೆಯುವ ದತ್ತ ಜಯಂತಿ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ದತ್ತಪೀಠ, ಮುಳ್ಳಯ್ಯನಗಿರಿ, ಗಾಳಿಕೆರೆ, ಮಾಣಿಕ್ಯದಾರ, ಸೀತಾಳ್ಳಯ್ಯನಗಿರಿ ಸೇರಿದಂತೆ ಹಲವು ತಾಣಗಳಿಗೆ ಜಿಲ್ಲಾಡಳಿತ ಪ್ರವಾಸಿಗರನ್ನು ನಿರ್ಬಂಧಿಸಿ ಆದೇಶ ಹೊರಡಿಸಿದೆ. ಕಾಫಿನಾಡಿನ ಪ್ರಮುಖ ಪ್ರವಾಸಿ ತಾಣಗಳಿಗೆ 6 ದಿನಗಳ ಕಾಲ ನಿಷೇಧ ವಿಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಹೌದು, ಡಿಸೆಂಬರ್ 22 ರಿಂದ 26ರ ವರೆಗೆ ಚಂದ್ರದ್ರೋಣ ಪರ್ವತಗಳ ಸಾಲಿನ ಪ್ರಮುಖ ತಾಣಗಳಿಗೆ ಪ್ರವಾಸಿಗರನ್ನು ನಿಷೇಧಿಸಲಾಗಿದೆ.ಈ ಬಗ್ಗೆ ಮಾತನಾಡಿರುವ ಬಜರಂಗದಳ ಪ್ರಾಂತ ಸಂಚಾಲಕ […]

ಚಿಲ್ಲರೆ ಮಾರುಕಟ್ಟೆಯಲ್ಲಿ ಬೆಳ್ಳುಳ್ಳಿ ದರ ಏರಿಕೆ : ಮಳೆ ಕೊರತೆ

ಬೆಂಗಳೂರು: ನಗರದ ಯಶವಂತಪುರ ಈರುಳ್ಳಿ, ಆಲೂಗಡ್ಡೆ ಬೆಳ್ಳುಳ್ಳಿ ಮಾರುಕಟ್ಟೆಯಲ್ಲಿ ಮಧ್ಯಪ್ರದೇಶ ಮತ್ತು ಗುಜರಾತ್​ನಿಂದ ನಿತ್ಯ ಮೂರು ಸಾವಿರದಿಂದ ನಾಲ್ಕು ಸಾವಿರ ಚೀಲದಷ್ಟು ಬೆಳ್ಳುಳ್ಳಿ ಬರುತ್ತಿತ್ತು. ಆದರೆ, ಈ ಬಾರಿ ನಿರೀಕ್ಷಿತ ಫಸಲು ಬರದ ಕಾರಣ ಉತ್ತಮ ದರ್ಜೆಯ ಹೈಬ್ರಿಡ್ ಬೆಳ್ಳುಳ್ಳಿ ದರ 260 ರೂಪಾಯಿಗೆ ಏರಿಕೆ ಕಂಡಿರುವುದರಿಂದ ರಿಟೇಲ್ ದರ ಕೂಡ ಹೆಚ್ಚಾಗಿದ್ದು, ಇದರಿಂದ ಗ್ರಾಹಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಚಿಲ್ಲರೆ ಮಾರುಕಟ್ಟೆಯಲ್ಲಿ ನಾಟಿ ಬೆಳ್ಳುಳ್ಳಿಯ ದರ ಒಂದು ಕೆಜಿಗೆ 400 ರೂಪಾಯಿ ತಲುಪಿದ್ದು, ಹೈಬ್ರಿಡ್ ಬೆಳ್ಳುಳ್ಳಿ ಧಾರಣೆಯು […]

704 ಪ್ರವಾಸಿಗರ ಆಗಮನ : ನವ ಮಂಗಳೂರು ಬಂದರಿಗೆ ಎರಡನೇ ವಿದೇಶಿ ಪ್ರವಾಸಿ ಹಡಗು

ಮಂಗಳೂರು: ಈ ಋತುವಿನ ಎರಡನೇ ಪ್ರವಾಸಿ ಹಡಗು ಗುರುವಾರ ನವ ಮಂಗಳೂರು ಬಂದರಿಗೆ ಆಗಮಿಸಿ ತೆರಳಿದೆ. ಫ್ರೆಡ್ ಓಲ್ಸೆನ್ ಕ್ರೂಸ್ ಲೈನ್ಸ್ ಹಡಗು “MS BOLETTE” ನಿನ್ನೆ ಬೆಳಗ್ಗೆ 8 ಗಂಟೆಗೆ ನವ ಮಂಗಳೂರು ಬಂದರಿಗೆ ಆಗಮಿಸಿತ್ತು. ಇದು ನವ ಮಂಗಳೂರು ಬಂದರಿನಲ್ಲಿರುವ ಬರ್ತ್ ನಂ.04 ರಲ್ಲಿ ಲಂಗರು ಹಾಕಿತ್ತು. ಹಡಗಿನ ಒಟ್ಟಾರೆ ಉದ್ದವು 238 ಮೀಟರ್ ಮತ್ತು 62,735 ಒಟ್ಟು ಟನ್ನೇಜ್ ಮತ್ತು 8.1 ಮೀಟರ್ ಕರಡು ಸಾಗಿಸುವ ಸಾಮರ್ಥ್ಯ ಹೊಂದಿದೆ. ಹಡಗಿನಿಂದ ಇಳಿಯುವಾಗ ಪ್ರಯಾಣಿಕರಿಗೆ […]

25 ಸುರಕ್ಷತಾ ವೈಶಿಷ್ಟ್ಯಗಳೊಂದಿಗೆ ಟೆಕ್-ಲೋಡೆಡ್ SUV ಸೋನೆಟ್ ಫೇಸ್ ಲಿಫ್ಟ್ ಅನಾವರಣಗೊಳಿಸಿದ ಕಿಯಾ

ಕಿಯಾ ಅಂತಿಮವಾಗಿ ಸೋನೆಟ್‌ನ ನವೀಕರಿಸಿದ ಆವೃತ್ತಿಯನ್ನು ಅನಾವರಣಗೊಳಿಸಿದೆ. ಈ ಪರಿಷ್ಕರಿಸಿದ ಸೋನೆಟ್ ಹೆಚ್ಚು ಬಲಯುತ ಮತ್ತು ಸ್ಪೋರ್ಟಿಯರ್ ಆಗಿದೆ, ಇದು ಸಂಪೂರ್ಣ ಚಲನಶೀಲತೆಯ ಪರಿಹಾರವನ್ನು ಹುಡುಕುತ್ತಿರುವ ಆಧುನಿಕ ದಂಪತಿಗಳು ಮತ್ತು ಟೆಕ್-ಸ್ಯಾವಿ ವೃತ್ತಿಪರರ ಅಗತ್ಯಗಳನ್ನು ಪೂರೈಸುವ ಗುರಿಯನ್ನು ಹೊಂದಿದೆ. KIA ಸೋನೆಟ್ ಫೇಸ್‌ಲಿಫ್ಟ್: ADAS ಅತ್ಯಾಧುನಿಕ ವೈಶಿಷ್ಟ್ಯಗಳೊಂದಿಗೆ ನಿರ್ಮಾಣ ಮಾಡಲಾದ ಹೊಸ ಸೋನೆಟ್ ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್ (ADAS) ಅಡಿಯಲ್ಲಿ 10 ಸ್ವಾಯತ್ತ ವೈಶಿಷ್ಟ್ಯಗಳನ್ನು ಹೊಂದಿದೆ. ಮುಂಭಾಗದ ಘರ್ಷಣೆ ತಪ್ಪಿಸುವ ಸಹಾಯ (FCA) ಲೀಡಿಂಗ್ ವೆಹಿಕಲ್ […]

60 ಲಕ್ಷ ರೂ. ಮೌಲ್ಯದ ಚಿನ್ನ ಮಂಗಳೂರು ವಿಮಾನ ನಿಲ್ದಾಣದಲ್ಲಿ ವಶ

ಮಂಗಳೂರು: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 60 ಲಕ್ಷ ರೂ.ಏರ್​ ಇಂಡಿಯಾ ಎಕ್ಸ್‌ಪ್ರೆಸ್​ ವಿಮಾನದ ಮೂಲಕ ದುಬೈನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದ 3 ಪ್ರಯಾಣಿಕರಿಂದ ಕಸ್ಟಮ್ಸ್ ಅಧಿಕಾರಿಗಳು ಅಕ್ರಮ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. ಮೌಲ್ಯದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಡಿಸೆಂಬರ್​ 11 ರಂದು ಏರ್​ ಇಂಡಿಯಾ ಎಕ್ಸ್‌ಪ್ರೆಸ್​ ವಿಮಾನ ಮೂಲಕ ದುಬೈನಿಂದ ಮಂಗಳೂರಿಗೆ ಪ್ರಯಾಣಿಸಿದ್ದ 3 ಪ್ರಯಾಣಿಕರನ್ನು ಮಂಗಳೂರು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ತಡೆದು ಪರಿಶೀಲನೆ ನಡೆಸಿದಾಗ ಅಕ್ರಮ ಚಿನ್ನ ಸಾಗಾಟ ಪತ್ತೆಯಾಗಿದೆ. ಇದೇ […]