ಹೊಸಬೆಳಕು ಆಶ್ರಮದ ನೂತನ ಕಟ್ಟಡದ ವಿದ್ಯುತ್ ಸಂಪರ್ಕಕ್ಕೆ ಚಾಲನೆ
ಬೈಲೂರು: ಕೌಡೂರಿನಲ್ಲಿ ಹೊಸಬೆಳಕು ಆಶ್ರಮದ ನೂತನ ಕಟ್ಟಡದ ಕಾಮಗಾರಿ ನಡೆಯುತ್ತಿದ್ದು, ಈ ನಿಟ್ಟಿನಲ್ಲಿ ನೂತನವಾಗಿ ನಿರ್ಮಿಸಿದ ಕೊಳವೆ ಬಾವಿಗೆ ಪಂಪ್ ಅಳವಡಿಕೆ ಹಾಗೂ ವಿದ್ಯುತ್ ಸಂಪರ್ಕಕ್ಕೆ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಸಂಸ್ಥೆಯ ಗೌರವಾಧ್ಯಕ್ಷ ಉಡುಪಿ ಯು. ವಿಶ್ವನಾಥ ಶೆಣೈ ಚಾಲನೆ ನೀಡಿದರು. ಸಮಾಜ ಸೇವಕರಾದ ರವೀಂದ್ರ ನಾಯಕ್ ಹಾಗೂ ಹೊಸಬೆಳಕು ಸೇವಾ ಟ್ರಸ್ಟ್ ಸಂಸ್ಥಾಪಕ ವಿನಯಚಂದ್ರ, ತನುಲಾ ತರುಣ್, ಜಯರಾಮ್ ಪಾಟ್ಕರ್, ದೇವದಾಸ ಕಾಮತ್ ಹಾಗೂ ಹೊಸಬೆಳಕು ಸಂಸ್ಥೆಯ ನಿವಾಸಿಗಳು ಉಪಸ್ಥಿತರಿದ್ದರು.
ಗೃಹರಕ್ಷಕ ದಳದ ಗೌರವ ಸಮಾದೇಷ್ಟರ ಹುದ್ದೆಗಾಗಿ ಅರ್ಜಿ ಆಹ್ವಾನ
ಉಡುಪಿ: ಉಡುಪಿ ಗೃಹರಕ್ಷಕ ದಳದ ಗೌರವ ಸಮಾದೇಷ್ಟರ ಹುದ್ದೆಯ ಭರ್ತಿಗೆ ಇಚ್ಛೆಯುಳ್ಳ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜನವರಿ 15 ಕೊನೆಯ ದಿನವಾಗಿದ್ದು ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾಧಿಕಾರಿಗಳ ಕಛೇರಿಯನ್ನು ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಿದೆ.
ದತ್ತ ಜಯಂತಿ ಕಾರ್ಯಕ್ರಮ ಹಿನ್ನಲೆ: ಲಘ ವಾಹನಗಳಲ್ಲಿ ಸಂಚರಿಸಲು ಸೂಚನೆ
ಉಡುಪಿ: ಚಿಕ್ಕಮಗಳೂರು ಜಿಲ್ಲೆಯಲ್ಲಿ ಡಿಸೆಂಬರ್ 24 ರಿಂದ 26ರ ವರೆಗೆ ನಡೆಯಲಿರುವ ದತ್ತಜಯಂತಿ ಕಾರ್ಯಕ್ರಮದ ಹಿನ್ನಲೆಯಲ್ಲಿ ಭಕ್ತಾದಿಗಳು ಮತ್ತು ಸಾರ್ವಜನಿಕರ ಸುರಕ್ಷತೆ ಹಾಗೂ ವಾಹನಗಳ ಸುಗಮ ಸಂಚಾರ ಹಿತದೃಷ್ಟಿಯಿಂದ ಜಿಲ್ಲೆಯಿಂದ ಕಾರ್ಯಕ್ರಮಕ್ಕೆ ಹೋಗಲಿರುವ ಭಕ್ತಾದಿಗಳು ಮತ್ತು ಸಾರ್ವಜನಿಕರು ಭಾರಿ ವಾಹನಗಳ ಬದಲಿಗೆ ಲಘ ವಾಹನಗಳಲ್ಲಿ ಸಂಚರಿಸುವಂತೆ ಜಿಲ್ಲಾಧಿಕಾರಿಗಳ ಕಛೇರಿಯ ಪ್ರಕಟನೆಯಲ್ಲಿ ತಿಳಿಸಲಾಗಿದೆ.
‘ಕೆಎಸ್‌ಆರ್‌ಟಿಸಿ’ ಬಳಕೆಗೆ ಸಂಬಂಧಿಸಿದಂತೆ ಕೇರಳ ವಿರುದ್ಧದ ಕಾನೂನು ಹೋರಾಟದಲ್ಲಿ ಕರ್ನಾಟಕಕ್ಕೆ ಜಯ
ಚನ್ನೈ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ‘ಕೆಎಸ್‌ಆರ್‌ಟಿಸಿ’ ಹೆಸರು ಬಳಸಲು ಯಾವುದೇ ಕಾನೂನು ನಿಷೇಧವಿಲ್ಲ ಎಂದು ಮದ್ರಾಸ್ ಹೈಕೋರ್ಟ್ ಹೇಳಿದೆ. KSRTC ಯ ವಿಶೇಷ ಬಳಕೆಗಾಗಿ ಕೇರಳ RTC ಹಕ್ಕನ್ನು ನ್ಯಾಯಾಲಯ ವಜಾಗೊಳಿಸಿದೆ. ಎರಡೂ ರಾಜ್ಯ ಸಾರಿಗೆ ನಿಗಮಗಳು ದಶಕಗಳಿಂದ ಸಂಕ್ಷಿಪ್ತ ರೂಪವನ್ನು ಬಳಸುತ್ತಿವೆ. ಕರ್ನಾಟಕ SRTC ಸಂಕ್ಷಿಪ್ತ ರೂಪ ಮತ್ತು ಅದರ ಲೋಗೋವನ್ನು ಪೇಟೆಂಟ್‌ಗಳು, ವಿನ್ಯಾಸಗಳು ಮತ್ತು ಟ್ರೇಡ್‌ಮಾರ್ಕ್‌ಗಳ ನಿಯಂತ್ರಕ ಜನರಲ್‌ನಲ್ಲಿ ನೋಂದಾಯಿಸಿದೆ. ಸಂಸ್ಥೆಯು ‘KSRTC’ ಸಂಕ್ಷಿಪ್ತ ಬಳಕೆಗಾಗಿ ಟ್ರೇಡ್ ಮಾರ್ಕ್ ಪ್ರಮಾಣ ಪತ್ರವನ್ನು […]
ಸಂಸತ್ತಿನಲ್ಲಿ ಭದ್ರತಾ ಲೋಪ: ತನಿಖೆ ಚುರುಕು ಗೊಳಿಸಿದ ಪೊಲೀಸರು; ಮಾಸ್ಟರ್ ಮೈಂಡ್ ವಶಕ್ಕೆ
ನವದೆಹಲಿ: ಸಂಸತ್ತಿನ ಮೇಲೆ 2001 ರ ಭಯೋತ್ಪಾದಕ ದಾಳಿಯ ವಾರ್ಷಿಕೋತ್ಸವದ ದಿನವಾದ ಡಿಸೆಂಬರ್ 13 ರಂದು ನಡೆದ ಸಂಸತ್ತಿನ ಭದ್ರತಾ ಉಲ್ಲಂಘನೆಯ ಪ್ರಕರಣ ಕುರಿತು ದೆಹಲಿ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಘಟನೆಯ ‘ಮಾಸ್ಟರ್ ಮೈಂಡ್’ ಲಲಿತ್ ಝಾನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ತಮ್ಮ ಯೋಜನೆಯ ವಿವರಗಳನ್ನು ಪೊಲೀಸರಿಗೆ ಬಹಿರಂಗಪಡಿಸಿರುವ ಆತ, ಇದರಲ್ಲಿ ‘ಪ್ಲಾನ್ ಎ ಮತ್ತು ಪ್ಲಾನ್ ಬಿ’ ಕೂಡ ಸೇರಿತ್ತು ಎಂದಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ. ಝಾ ಮತ್ತು ಬಂಧಿತರಾಗಿರುವ ಇತರ ಐವರು, […]