‘ವಿಷಪ್ರಾಶನ’;ದ ಹಿನ್ನೆಲೆ ತೀವ್ರ ಅಸ್ವಸ್ಥಗೊಂಡಿದ್ದ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಕರಾಚಿ ಆಸ್ಪತ್ರೆಗೆ ದಾಖಲು
ಕರಾಚಿ (ಪಾಕಿಸ್ತಾನ): ಭೂಗತ ಪಾತಕಿ ಮತ್ತು ಭಾರತದ ಮೋಸ್ಟ್ ವಾಂಟೆಡ್ ಗ್ಯಾಂಗ್ಸ್ಟರ್ ದಾವೂದ್ ಇಬ್ರಾಹಿಂಗೆ ‘ವಿಷಪ್ರಾಶನ’ ಮಾಡಿಸಲಾಗಿದ್ದು, ಆತನನ್ನು ಪಾಕಿಸ್ತಾನದ ಕರಾಚಿಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಮೂಲಗಳ ಪ್ರಕಾರ ಆಸ್ಪತ್ರೆಯಲ್ಲಿ ದಾವೂದ್ ಇಬ್ರಾಹಿಂನನ್ನು ಬಿಗಿ ಭದ್ರತೆಯಲ್ಲಿ ಇರಿಸಲಾಗಿದೆ. ಅಲ್ಲದೆ ಭೂಗತ ಪಾತಕಿಯು ಗಂಭೀರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾನೆ ಎಂದು ಮೂಲಗಳು ತಿಳಿಸಿವೆ. ಆಸ್ಪತ್ರೆಯ ಸಂಪೂರ್ಣ ಮಹಡಿಯನ್ನೇ ಇಬ್ರಾಹಿಂಗೆ ಮೀಸಲಿಡಲಾಗಿದೆ. ಅವನ ಹತ್ತಿರದ ಕುಟುಂಬ ಸದಸ್ಯರು ಮತ್ತು ಸಂಬಂಧಪಟ್ಟ ವೈದ್ಯರನ್ನು ಹೊರತುಪಡಿಸಿ ಹೊರಗಿನಿಂದ ಯಾರಿಗೂ ಅವಕಾಶ ನೀಡುತ್ತಿಲ್ಲ. […]
ಬೆಳಗಾವಿ ಮಹಿಳೆ ವಿವಸ್ತ್ರ ಪ್ರಕರಣ ಕುರಿತು ಹೈಕೋರ್ಟ್ ಸಲಹೆ : ಮೌನ ವಹಿಸಿದ್ದ ಗ್ರಾಮಸ್ಥರಿಗೆ ದಂಡ ವಿಧಿಸುವ ಕಾನೂನು ರೂಪಿಸುವಂತೆ ಅಭಿಪ್ರಾಯ
ಬೆಂಗಳೂರು : ಗ್ರಾಮದಲ್ಲಿ ಅಮಾನವೀಯ ಕೃತ್ಯ ನಡೆಯುತ್ತಿದ್ದರೂ ಅದನ್ನು ತಡೆಯದೆ ಮೌನವಾಗಿದ್ದ ಇಡೀ ಗ್ರಾಮಸ್ಥರಿಗೆ ದಂಡ ವಿಧಿಸಬಹುದಾದ ಸಾಮೂಹಿಕ ಜವಾಬ್ದಾರಿ ನಿಗದಿಪಡಿಸುವ ಮಾದರಿಯಲ್ಲಿ ಯೋಜನೆ ಅಥವಾ ಕಾನೂನು ರೂಪಿಸಲು ರಾಜ್ಯ ಹೈಕೋರ್ಟ್ ಸರ್ಕಾರಕ್ಕೆ ಮೌಖಿಕ ಸಲಹೆ ನೀಡಿದೆ.ಬೆಳಗಾವಿಯಲ್ಲಿ ಮಹಿಳೆಯೊಬ್ಬರನ್ನು ವಿವಸ್ತ್ರಗೊಳಿಸಿ ವಿದ್ಯುತ್ ಕಂಬಕ್ಕೆ ಕಟ್ಟಿ ಥಳಿಸಿದ ಪ್ರಕರಣ ಸಂಬಂಧ ಮೌನ ವಹಿಸಿದ್ದ ಇಡೀ ಗ್ರಾಮದವರಿಗೆ ಶಿಕ್ಷೆ ಅಥವಾ ದಂಡ ವಿಧಿಸಬಹುದಾದ ಯೋಜನೆ ರೂಪಿಸುವಂತೆ ಹೈಕೋರ್ಟ್ ಅಭಿಪ್ರಾಯ ವ್ಯಕ್ತಪಡಿಸಿದೆ. ವಿಚಾರಣೆ ವೇಳೆ ನ್ಯಾಯಪೀಠ, ಬ್ರಿಟಿಷ್ ಆಡಳಿತದಲ್ಲಿ ವಿಲಿಯಂ ಬೆಂಟಿಂಕ್ […]
ಮೀನುಗಾರರಿಗೆ ಆರೋಗ್ಯ ಸಮಸ್ಯೆಯಾದರೆ ಬರುತ್ತೆ ಬೋಟ್ ಆಂಬ್ಯುಲೆನ್ಸ್ : ಕಡಲಮಕ್ಕಳಿಗೆ ನೆರವು
ಮಂಗಳೂರು: ಕರಾವಳಿ ಕರ್ನಾಟಕದ ಪ್ರಮುಖ ವಾಣಿಜ್ಯ ವಹಿವಾಟು ಮತ್ಸೋದ್ಯಮ ವಾರ್ಷಿಕವಾಗಿ ಸಾವಿರಾರು ಕೋಟಿ ರೂಪಾಯಿ ವಹಿವಾಟು ಹೊಂದಿದೆ. ಮೀನುಗಾರಿಕೆಯ ಈ ಉದ್ಯಮದಲ್ಲಿ ಸಾವಿರಾರು ಮಂದಿ ತೊಡಗಿಸಿಕೊಂಡಿದ್ದಾರೆ. ಕಡಲಿನಾಳಕ್ಕೆ ಹೋಗಿ ಮೀನುಗಾರಿಕೆ ನಡೆಸುವಾಗ ಕಡಲಮಕ್ಕಳಿಗೆ ಆರೋಗ್ಯ ಸಮಸ್ಯೆ ಎದುರಾದರೆ ಶೀಘ್ರ ಚಿಕಿತ್ಸೆಗೆ ಕರೆದುಕೊಂಡು ಬರುವ ವ್ಯವಸ್ಥೆ ಇಲ್ಲ. ಈ ಹಿನ್ನೆಲೆಯಲ್ಲಿ ಉಳ್ಳಾಲ ವಲಯ ನಾಡದೋಣಿ ಮತ್ತು ಗಿಲ್ನೆಟ್ ಮೀನುಗಾರರ ಸಂಘ ಹೊಸ ಪ್ರಯತ್ನವೊಂದನ್ನು ಮಾಡಿದೆ.ಮೀನುಗಾರಿಕೆ ವೇಳೆ ಮೀನುಗಾರರಿಗೆ ಆರೋಗ್ಯದ ಸಮಸ್ಯೆ ಉಂಟಾದರೆ ಶೀಘ್ರ ಚಿಕಿತ್ಸೆಗೆ ಕರೆದೊಯ್ಯಲು ಆಂಬ್ಯುಲೆನ್ಸ್ ಬೋಟ್ […]
ರಘುರಾಮ್ ರಾಜನ್ : ಶೇ.6ರಷ್ಟು ಜಿಡಿಪಿ ಇದ್ದರೆ 2047ರಲ್ಲೂ ಭಾರತ ಕೆಳಮಧ್ಯಮ ಆರ್ಥಿಕತೆಯ ರಾಷ್ಟ್ರ
ಹೈದರಾಬಾದ್: ಜನಸಂಖ್ಯೆ ಬೆಳವಣಿಗೆಯು ದೇಶದ ಆರ್ಥಿಕ ಪ್ರಗತಿಯ ಮೇಲೆ ಪರಿಣಾಮ ಬೀರುತ್ತದೆ. ಅಂದರೆ ವಯಸ್ಸಾದ ಜನಸಂಖ್ಯೆ ಹೊರೆಯಾಗುತ್ತದೆ. ಕಳೆದ ಎರಡು ತ್ರೈಮಾಸಿಕಗಳಲ್ಲಿ ದೇಶದ ಜಿಡಿಪಿ ಬೆಳವಣಿಗೆಯು ಶೇ 7.5ರಷ್ಟು ದಾಖಲಾಗಿದೆ. ಈಗಿನ ಕಾರ್ಮಿಕ ಬಲ ಮತ್ತು ಮಹಿಳೆಯರ ಪಾಲ್ಗೊಳ್ಳುವಿಕೆಯನ್ನು ತಾಳೆ ಹಾಕಿದರೆ, ಇದು ತುಂಬಾ ಕಡಿಮೆ. ಇದು ಜಿ20 ರಾಷ್ಟ್ರಗಳಲ್ಲಿಯೇ ಅತ್ಯಂತ ಕಡಿಮೆ ಎಂದು ರಾಜನ್ ವಿವರಿಸಿದರು. 2047ರ ವೇಳೆಗೆ ಭಾರತ ಅಭಿವೃದ್ಧಿಶೀಲ ಮತ್ತು ಸಿರಿವಂತ ರಾಷ್ಟ್ರವಾಗಿ ಬೆಳೆಯಬೇಕಾದರೆ, ಈಗಿನ ಆರ್ಥಿಕ ಪ್ರಗತಿ ಸಾಕಾಗದು ಎಂದು ಭಾರತೀಯ […]
ಬಿಜೆಪಿ ಅಭಿಯಾನ : ಶ್ರೀರಾಮ ಮೂರ್ತಿ ಪ್ರಾಣ ಪ್ರತಿಷ್ಠಾಪನೆಗೂ ಮುನ್ನ ಮನೆ-ಮನೆಗೆ ಆಮಂತ್ರಣ
ನವದೆಹಲಿ: ಭಾರತೀಯ ಜನತಾ ಪಕ್ಷದ ಸದಸ್ಯರು ನಗರಾದ್ಯಂತ ಮನೆ ಮನೆಗೆ ತೆರಳಿ ಅಯೋಧ್ಯೆಯ ರಾಮ ಮಂದಿರವನ್ನು ವಿಧ್ಯುಕ್ತವಾಗಿ ಉದ್ಘಾಟಿಸಿದ ನಂತರ ಭೇಟಿ ನೀಡುವಂತೆ ಜನರನ್ನು ಆಹ್ವಾನಿಸಲಿದ್ದಾರೆ ಎಂದು ದೆಹಲಿಯ ಬಿಜೆಪಿ ಅಧ್ಯಕ್ಷ ವೀರೇಂದ್ರ ಸಚ್ದೇವ ಅವರು ಭಾನುವಾರ ಹೇಳಿದ್ದಾರೆ.ಅಯೋಧ್ಯೆಯ ಭವ್ಯ ಶ್ರೀರಾಮ ಮಂದಿರದಲ್ಲಿ ಮೂರ್ತಿ ಪ್ರಾಣ ಪ್ರತಿಷ್ಠಾಪನೆಗೆ ಸಿದ್ಧತೆಗಳು ಭರದಿಂದ ಸಾಗಿವೆ. ಜನವರಿ 22 ರಂದು ಅಯೋಧ್ಯೆಯ ರಾಮಮಂದಿರದ ಗರ್ಭ ಗೃಹದಲ್ಲಿ ರಾಮ ಲಲ್ಲಾ (ಬಾಲ ರಾಮ) ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಆಗಲಿದೆ. ಅಯೋಧ್ಯೆಯಲ್ಲಿ ಹೊಸದಾಗಿ ನಿರ್ಮಿಸಲಾಗುತ್ತಿರುವ […]