ಐಪಿಎಲ್ ಹರಾಜು: 24.75 ಕೋಟಿ ರೂ ಗೆ ಕೆಕೆಆರ್ ಪಾಲಾದ ಸ್ಟಾರ್ಕ್; 20.50 ಕೋಟಿಗೆ ಕಮಿನ್ಸ್ ಎಸ್.ಆರ್.ಎಚ್ ಪಾಲು!!
ದುಬೈ: ಆಸ್ಟ್ರೇಲಿಯದ ನಾಯಕ ವೇಗದ ಬೌಲರ್ ಪ್ಯಾಟ್ ಕಮಿನ್ಸ್ ಐಪಿಎಲ್ ನಲ್ಲಿ ದಾಖಲೆ ಮೊತ್ತಕ್ಕೆ ಸನ್‌ರೈಸರ್ಸ್ ಹೈದರಾಬಾದ್ ಪಾಲಾಗಿದ್ದಾರೆ. ವಿಶ್ವ ಕಪ್ ವಿಜೇತ ನಾಯಕ ಬರೋಬ್ಬರಿ 20.50 ಕೋಟಿ ರೂ ಬೆಲೆಗೆ ಎಸ್.ಆರ್.ಎಚ್ ಪಾಲಾಗಿದ್ದಾರೆ. ಕಮಿನ್ಸ್ ಅವರ ಸಹ ಆಟಗಾರ ಮತ್ತು ಆಸ್ಟ್ರೇಲಿಯಾದ ವಿಶ್ವಕಪ್ ಫೈನಲ್ ಹೀರೋ ಟ್ರಾವಿಸ್ ಹೆಡ್ ಅವರನ್ನು ಎಸ್‌ಆರ್‌ಹೆಚ್ ₹6.80 ಕೋಟಿಗೆ ಪಡೆದುಕೊಂಡಿದೆ. ಆಸ್ಟ್ರೇಲಿಯಾ ಬೌಲರ್ ಮಿಶೆಲ್ ಸ್ಟಾರ್ಕ್ ಅವರು ತಮ್ಮ ನಾಯಕನ ದಾಖಲೆಯನ್ನು ಮುರಿದು 24.75 ಕೋಟಿ ರೂ ಗಳಿಗೆ ಕೆ.ಕೆ.ಆರ್ […]
ಉಪರಾಷ್ಟ್ರಪತಿಗಳನ್ನು ಅಣಕವಾಡಿದ ತೃಣಮೂಲ ಕಾಂಗ್ರೆಸ್ ಸಂಸದ ಕಲ್ಯಾಣ್ ಬ್ಯಾನರ್ಜಿ: ನಾಚಿಕೆಗೇಡಿನ ಸಂಗತಿ ಎಂದ ಜಗದೀಪ್ ಧಂಖರ್
ನವದೆಹಲಿ: ತೃಣಮೂಲ ಕಾಂಗ್ರೆಸ್ ಸಂಸದ ಕಲ್ಯಾಣ್ ಬ್ಯಾನರ್ಜಿ ಸಂಸತ್ತಿನ ಹೊರಗೆ ಉಪರಾಷ್ಟ್ರಪತಿ ಜಗದೀಪ್ ಧಂಖರ್ ಅವರನ್ನು ಅನುಕರಣೆ ಮಾಡಿ ಅಣಕಿಸಿರುವುದನ್ನು ರಾಜ್ಯಸಭಾ ಅಧ್ಯಕ್ಷರಾಗಿರುವ ಜಗದೀಪ್ ಧಂಖರ್ ಮಂಗಳವಾರ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಲೋಕಸಭೆ ಮತ್ತು ರಾಜ್ಯಸಭೆಯ ಪ್ರತಿಪಕ್ಷಗಳ ಸಂಸದರನ್ನು ಸಾಮೂಹಿಕ ಅಮಾನತುಗೊಳಿಸಿರುವುದನ್ನು ವಿರೋಧಿಸಿ ಸಂಸತ್ತಿನ ಹೊರಗೆ ಪ್ರತಿಭಟನೆ ನಡೆಸುತ್ತಿರುವ ಪ್ರತಿಪಕ್ಷಗಳ ಸಂಸದರ ಮಧ್ಯೆ ತೃಣಮೂಲ ಕಾಂಗ್ರೆಸ್ ಸಂಸದ ಕಲ್ಯಾಣ್ ಬ್ಯಾನರ್ಜಿ ಉಪರಾಷ್ಟ್ರಪತಿಗಳ ಅನುಕರಣೆ ಮಾಡಿ ಅಣಕಿಸುತ್ತಿದ್ದು, ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅದನ್ನು ಮೊಬೈಲ್ ಫೋನ್ ನಲ್ಲಿ […]
ಹೋಟೆಲ್, ಫಾಸ್ಟ್ ಫುಡ್ ಅಂಗಡಿಗಳಲ್ಲಿ ಹಾನಿಕಾರಕ ಬಣ್ಣ ಅಥವಾ ರಾಸಾಯನಿಕ ಬಳಸುವಂತಿಲ್ಲ: ನಗರಸಭೆ
ಉಡುಪಿ: ಜಿಲ್ಲೆಯ ಹೊಟೇಲ್ ಮಾಲಕರು ಹಾಗೂ ಫಾಸ್ಟ್ ಫುಡ್ ಅಂಗಡಿಯವರು ತಮ್ಮ ಉದ್ಯಮದಲ್ಲಿಹಾನಿಕಾರಕ ಬಣ್ಣ, ಟೆಸ್ಟಿಂಗ್ ಪೌಡರ್, ರಾಸಾಯನಿಕ ಹಾಗೂ ಪೇಪರ್ ಪ್ಲೇಟ್, ಪೇಪರ್ ಗ್ಲಾಸ್ ಮತ್ತು ಟಿಶ್ಯೂಗಳನ್ನು ಬಳಸದೇ ಮರುಬಳಕೆಯ ವಸ್ತುಗಳಾದ ಸ್ಟೀಲ್ ಲೋಟ, ಸ್ಟೀಲ್ ತಟ್ಟೆಗಳನ್ನು ಕಡ್ಡಾಯವಾಗಿ ಬಳಸಿ ತ್ಯಾಜ್ಯವನ್ನು ಕಡಿಮೆ ಮಾಡಬೇಕು. ನಗರಸಭೆಯ ಪೌರಾಯುಕ್ತ, ಪರಿಸರ ಅಭಿಯಂತರ, ಕಿರಿಯ ಆರೋಗ್ಯ ನಿರೀಕ್ಷಕ, ಸ್ಯಾನೀಟರಿ ಸೂಪರ್‌ವೈಸರ್ ಹಾಗೂ ಪೌರಕಾರ್ಮಿಕರು ಈಗಾಗಲೇ ನಗರದ ಹಲವು ಕಡೆ ದಾಳಿ ನಡೆಸಿ, ಹಾನಿಕಾರಕ ಬಣ್ಣ, ಟೇಸ್ಟಿಂಗ್ ಪೌಡರ್‌ನ್ನು ವಶಪಡಿಸಿಕೊಂಡು […]
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಲಾಂಛನದಲ್ಲಿ ಕನ್ನಡ ಬಳಕೆ
ಬೆಂಗಳೂರು : ಕೆಂಪೇಗೌಡ ಅಂತಾರಾಷ್ಟ್ರೀಯ ನಿಲ್ದಾಣದ ಲಾಂಛನವು ಸಂಪೂರ್ಣ ಆಂಗ್ಲ ಭಾಷೆಯಲ್ಲಿತ್ತು. ಈ ಬಗ್ಗೆ ತಮ್ಮ ಗಮನಕ್ಕೆ ಬರುತ್ತಿದ್ದಂತೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ್ ತಂಗಡಗಿ ಅವರು ವಿಮಾನ ನಿಲ್ದಾಣದ ಅಧಿಕಾರಿಗಳಿಗೆ ಪತ್ರ ಬರೆಯುವಂತೆ ಪ್ರಾಧಿಕಾರಕ್ಕೆ ಸೂಚಿಸಿದ್ದರು. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸೂಚನೆ ಬೆನ್ನಲ್ಲೇ ಎಚ್ಚೆತ್ತ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಅಧಿಕಾರಿಗಳು ನಿಲ್ದಾಣದ ಲಾಂಛನದಲ್ಲಿ ಕನ್ನಡವನ್ನು ಬಳಸಿಕೊಂಡಿದ್ದಾರೆ.ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ಧಾಣದ ಲಾಂಛನದಲ್ಲಿ ಕನ್ನಡ ಬಳಕೆ ಮಾಡಿಕೊಳ್ಳಲಾಗಿದೆ. ಅದರಂತೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ […]
ಲೋಕಸಭಾ ಚುನಾವಣೆ ಹಿನ್ನೆಲೆ ತೆಲಂಗಾಣದಿಂದ ಸ್ಪರ್ಧಿಸುವಂತೆ ಸೋನಿಯಾಗೆ ಕಾಂಗ್ರೆಸ್ ಒತ್ತಾಯ
ಹೈದರಾಬಾದ್ (ತೆಲಂಗಾಣ): ರಾಜ್ಯ ವಿಧಾನ ಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಕಾಂಗ್ರೆಸ್ 2024ರ ಲೋಕಸಭೆ ಚುನಾವಣೆಗೆ ರಾಜ್ಯದ 17 ಲೋಕಸಭಾ ಕ್ಷೇತ್ರಗಳ ಪೈಕಿ ಒಂದರಿಂದ ಸ್ಪರ್ಧಿಸಲು ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಮನವಿ ಮಾಡಿದೆ.2024ರ ಲೋಕಸಭಾ ಚುನಾವಣೆಯ ವೇಳೆ ತೆಲಂಗಾಣದಿಂದ ಸ್ಪರ್ಧಿಸ ಬೇಕು ಎಂದು ರಾಜ್ಯ ಕಾಂಗ್ರೆಸ್‌ನ ರಾಜಕೀಯ ವ್ಯವಹಾರಗಳ ಸಮಿತಿ ನಿರ್ಣಯ ತೆಗೆದುಕೊಂಡಿದೆ. ಸೋಮವಾರ ನಡೆದ ತೆಲಂಗಾಣ ಕಾಂಗ್ರೆಸ್ ತನ್ನ ರಾಜಕೀಯ ವ್ಯವಹಾರಗಳ ಸಮಿತಿ ಸಭೆಯಲ್ಲಿ ಈ ನಿರ್ಣಯವನ್ನು ಅಂಗೀಕರಿಸಲಾಗಿದೆ. ತೆಲಂಗಾಣ […]