ಬೆಂಗಳೂರು ಟನೆಲ್ ಯೋಜನೆಗೆ ನೆರವು ನೀಡಲು ಮನವಿ : ನಿರ್ಮಲಾ ಸೀತಾರಾಮನ್ ಭೇಟಿಯಾದ ಅವರನ್ನು ಡಿಕೆಶಿ
ದೆಹಲಿ/ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಇಂದು ದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ಬೆಂಗಳೂರು ಸಂಬಂಧಿತ ಮೂರು ಪ್ರಮುಖ ಯೋಜನೆಗಳಿಗೆ ಅನುದಾನ ನೀಡುವಂತೆ ಮನವಿ ಸಲ್ಲಿಸಿದ್ದಾರೆ.ರಾಜ್ಯದ ಪ್ರಮುಖ ಮೂರು ಯೋಜನೆಗಳು ಮತ್ತು ಬೆಂಗಳೂರಿನ ಅಭಿವೃದ್ಧಿಗೆ ಅನುದಾನ ನೀಡುವಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಇಂದು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ನಗರ ಸುರಂಗ ಮಾರ್ಗ: ವಿಶೇಷವಾಗಿ ಉದ್ದೇಶಿತ ಬೆಂಗಳೂರು ಸುರಂಗ ಮಾರ್ಗಕ್ಕೆ ಅನುದಾನ ನೀಡುವಂತೆ ಡಿಕೆಶಿ […]
ಹಿರಿಯ ಬಹುಭಾಷಾ ನಟಿ ಹೇಮಾ ಚೌಧರಿ ಆಸ್ಪತ್ರೆಗೆ ದಾಖಲು
ಭಾರತೀಯ ಚಿತ್ರರಂಗದ ಹಿರಿಯ ನಟಿ ಹೇಮಾ ಚೌಧರಿ ಅವರು ಮೆದುಳಿನ ರಕ್ತಸ್ರಾವದಿಂದ (ಬ್ರೈನ್ ಹ್ಯಾಮರೇಜ್) ಬಳಲುತ್ತಿದ್ದು, ಬೆಂಗಳೂರಿನ ಬ್ಯಾಪ್ಟಿಸ್ಟ್ ಆಸ್ಪತ್ರೆಗೆ ದಾಖಲಿಸಲಾಗಿದೆ.ಹೇಮಾ ಚೌಧರಿ ಅವರ ದೇಹ ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ ಎಂದು ತಿಳಿದು ಬಂದಿದೆ. ಪುತ್ರ ಐರ್ಲ್ಯಾಂಡ್‌ನಲ್ಲಿದ್ದಾರೆ. ಕುಟುಂಬಸ್ಥರು ಮಗನ ಬರುವಿಕೆಗಾಗಿ ಕಾಯುತ್ತಿದ್ದಾರೆ. ಎರಡು ದಿನಗಳ ಹಿಂದೆ ಬ್ರೈನ್ ಹ್ಯಾಮರೇಜ್ ಆಗಿದ್ದು, ತೀವ್ರ ನಿಗಾ ಘಟಕದಲ್ಲಿ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ ಎಂದು ಕುಟುಂಬ ಮೂಲಗಳು ಮಾಹಿತಿ ನೀಡಿವೆ. ಹೇಮಾ ಚೌಧರಿ ದಕ್ಷಿಣ ಭಾರತ ಚಲನಚಿತ್ರರಂಗದ ಹೆಸರಾಂತ ಕಲಾವಿದೆ. ಕನ್ನಡ […]
2023ರಲ್ಲಿ ಇಸ್ರೋ ಅಪ್ರತಿಮ ಸಾಧನೆ : ಚಂದ್ರಯಾನ-3 ಯಶಸ್ವಿ, ಸೂರ್ಯನತ್ತ ಪಯಣ
ಹೈದರಾಬಾದ್: 2023ರ ವರ್ಷವು ಭಾರತದ ಬಾಹ್ಯಾಕಾಶ ಸಂಶೋಧನೆಯಲ್ಲಿ ಮಹತ್ವದ ಮೈಲಿಗಲ್ಲು ಎಂದು ಹೇಳಿದರೆ ಅತಿಶಯೋಕ್ತಿಯಾಗಲಾರದು.2023ನೇ ವರ್ಷವು ಭಾರತದ ಬಾಹ್ಯಾಕಾಶ ಸಂಶೋಧನೆಯಲ್ಲಿ ಮಹತ್ವದ ವರ್ಷವಾಗಿ ದಾಖಲಾಗಿದೆ. ಇಸ್ರೋದ ಸಾಧನೆ ಮತ್ತು ಮುಂದಿನ ಗುರಿಗಳ ಬಗ್ಗೆ ಒಂದು ಅವಲೋಕನ. ಚಂದ್ರನ ದಕ್ಷಿಣ ಧ್ರುವದಲ್ಲಿ ಸಾಫ್ಟ್ ಲ್ಯಾಂಡಿಂಗ್ ಮಾಡಿದ ಮೊದಲ ರಾಷ್ಟ್ರ ಮತ್ತು ಒಟ್ಟಾರೆ ಚಂದ್ರನ ಮೇಲಿಳಿದ ನಾಲ್ಕನೇ ರಾಷ್ಟ್ರವಾಗಿ ಭಾರತ ಹೊರಹೊಮ್ಮಿತು. ಯುನೈಟೆಡ್ ಸ್ಟೇಟ್ಸ್, ಸೋವಿಯತ್ ಒಕ್ಕೂಟ ಮತ್ತು ಚೀನಾ ನಂತರ ಭಾರತದ ಸಾಧನೆ ಅಪ್ರತಿಮವಾದುದು. ವಿಕ್ರಮ್ ಲ್ಯಾಂಡರ್ ಮತ್ತು […]
ಹುಲಿ ಉಗುರು ಸಹಿತ ಅರಣ್ಯ ಜೀವಿ ವಸ್ತುಗಳನ್ನು ಹಿಂದಿರುಗಿಸಲು ಕೊನೆಯ ಅವಕಾಶ ನೀಡಲು ಚಿಂತನೆ
ಬೆಂಗಳೂರು: ಹುಲಿ ಉಗುರು ಸಹಿತ ಅರಣ್ಯ ಜೀವಿ ವಸ್ತುಗಳನ್ನು ಹಿಂದಿರುಗಿಸಲು ಕೊನೆಯ ಅವಕಾಶ ನೀಡಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ. ಹುಲಿ ಉಗುರು ಸೇರಿದಂತೆ ಅರಣ್ಯ ಜೀವಿ ವಸ್ತುಗಳನ್ನು ಒಪ್ಪಿಸಿ ಮುಂಬರುವ ಆಪತ್ತು ತಪ್ಪಿಸಲು ಅವಕಾಶ ನೀಡಲು ಸರ್ಕಾರ ಮುಂದಾಗಿದೆ. ಅರಣ್ಯ ಇಲಾಖೆಗೆ ಒಪ್ಪಿಸುವ ಹಾಗೂ ಕಾನೂನಾತ್ಮಕ ವಿಷಯಗಳ ಬಗ್ಗೆ ಸಚಿವ ಈಶ್ವರ್ ಖಂಡ್ರೆ ಸಮಾಲೋಚನೆ ನಡೆಸಿದ್ದಾರೆ. ಜನರು ತಮ್ಮಲ್ಲಿರುವ ವನ್ಯಜೀವಿ ವಸ್ತುಗಳನ್ನು ಕರ್ನಾಟಕ ಅರಣ್ಯ ಇಲಾಖೆಗೆ ಒಪ್ಪಿಸುವಂತೆ ನಿಯಮ ಜಾರಿಗೆ ತರಲು ಚಿಂತಿಸಲಾಗುತ್ತಿದೆ. ಎಜಿ ಶಶಿಕಿರಣ್ […]
ಡೆಲಿವರಿ ಬಾಯ್ ಗಳು ಗಿಗ್ ಕಾರ್ಮಿಕ ವಿಮಾ ಯೋಜನೆಯಲ್ಲಿ ನೋಂದಾಯಿಸಲು ಕಾರ್ಮಿಕ ಇಲಾಖೆ ಸೂಚನೆ
ಉಡುಪಿ: ಸ್ವಿಗ್ಗಿ, ಝೋಮ್ಯಾಟೋಗಳಲ್ಲಿ ಫುಡ್ ಡೆಲಿವರಿ ಮಾಡುವ ಹಾಗೂ ಇ-ಕಾಮರ್ಸ್ ಸಂಸ್ಥೆಗಳಾದ ಅಮೇಜಾನ್, ಬಿಗ್ ಬಾಸ್ಕೆಟ್, ಫ್ಲಿಪ್ ಕಾರ್ಟ್ ಸಂಸ್ಥೆಗಳಲ್ಲಿ ಪೂರ್ಣಕಾಲಿಕ ಹಾಗೂ ಅರೆಕಾಲಿಕ ಡೆಲಿವರಿ ನೌಕರರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಗಿಗ್ ಕಾರ್ಮಿಕರುಗಳು ಸರಕು ಸೇವೆಗಳನ್ನು ನಿಗದಿತ ಸಮಯಕ್ಕೆ ಸರಿಯಾಗಿ ವಾಹನಗಳಲ್ಲಿ ವಿತರಿಸುವ ಸಂದರ್ಭದಲ್ಲಿ ಅಪಘಾತಕ್ಕೆ ತುತ್ತಾಗುವ ಸಾಧ್ಯತೆ ಇದ್ದು, ಅಪಘಾತದಿಂದ ಮರಣ ಅಥವಾ ಸಂಪೂರ್ಣ ಅಥವಾ ಶಾಶ್ವತ ದುರ್ಬಲತೆ ಹೊಂದಿದ್ದಲ್ಲಿ ಅವರು ಹಾಗೂ ಅವರ ಅವಲಂಬಿತರು ಆರ್ಥಿಕ ಸಂಕಷ್ಟಕ್ಕೆ ಒಳಗಾಗುತ್ತಾರೆ. ಇಂತಹ ಸಂದರ್ಭದಲ್ಲಿ ಗಿಗ್ ಕಾರ್ಮಿಕರುಗಳಿಗೆ […]