ವಲಯ-1 ರ ಪರವಾನಿಗೆ ಹೊಂದಿರುವ ಆಟೋ ರಿಕ್ಷಾ ಚಾಲಕರ ನಿಲುಗಡೆ ಕುರಿತು ಪ್ರಕಟಣೆ
ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ವಲಯ-1 ರ ಪರವಾನಿಗೆ ಹೊಂದಿರುವ ಆಟೋ ಚಾಲಕರು ಆಟೋ ಸ್ಟ್ಯಾಂಡಿನಲ್ಲಿ ನಿಲ್ಲಿಸಿ, ಬಾಡಿಗೆ ಮಾಡಿದರೆ ಆ ಸ್ಟ್ಯಾಂಡಿನ ಚಾಲಕರು ದಬ್ಬಾಳಿಕೆ ಮಾಡುತ್ತಿರುವುದಾಗಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪ್ರಾದೇಶಿಕ ಸಾರಿಗೆ ಕಚೇರಿಗೆ ಸಾಕಷ್ಟು ದೂರುಗಳು ಬಂದಿರುತ್ತವೆ. ಸಾರಿಗೆ ಪ್ರಾಧಿಕಾರದಿಂದ ಪರವಾನಿಗೆ ನೀಡುವ ಸಂದರ್ಭದಲ್ಲಿ ಆಟೋರಿಕ್ಷಾಗಳನ್ನು ನಿರ್ದಿಷ್ಟ ನಿಲ್ದಾಣದಲ್ಲಿ ನಿಲುಗಡೆ ಮಾಡುವ ಕುರಿತು ಯಾವುದೇ ಷರತ್ತನ್ನು ವಿಧಿಸಿರುವುದಿಲ್ಲ. ಆದುದರಿಂದ ಉಡುಪಿ ತಾಲೂಕು ವಲಯ-1 ರ ಪರವಾನಿಗೆ ಹೊಂದಿರುವ ಆಟೋ ರಿಕ್ಷಾಗಳು ನಗರದ ಯಾವುದೇ ರಿಕ್ಷಾ […]
INDIA ಬಣ ಪ್ರಧಾನಿ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಖರ್ಗೆ ಹೆಸರು ಪ್ರಸ್ತಾಪಿಸಿದ ಮಮತಾ ಬ್ಯಾನರ್ಜಿ; ಗೆಲ್ಲುವ ಬಗ್ಗೆ ಗಮನಹರಿಸಿ ಎಂದ ಖರ್ಗೆ
ನವದೆಹಲಿ: ಮಂಗಳವಾರ ಇಲ್ಲಿ ನಡೆದ Indian National Developmental, Inclusive Alliance (INDIA) ಸಭೆಯಲ್ಲಿ ಡಿಸೆಂಬರ್ 31 ರೊಳಗೆ ಬಣವು ತನ್ನ ಸೀಟು ಹಂಚಿಕೆಯನ್ನು ಅಂತಿಮಗೊಳಿಸುತ್ತದೆ ಎಂಬ ಸಲಹೆಗಳ ನಡುವೆ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಮೈತ್ರಿ ಪಕ್ಷದ ಪ್ರಧಾನ ಮಂತ್ರಿಯಾಗಿ ಪ್ರಸ್ತಾಪಿಸಿದ್ದಾರೆ. ಅವರು ಭಾರತದ ಮೊದಲ ದಲಿತ ಪ್ರಧಾನಿಯಾಗಬಹುದು ಎಂದು ಬ್ಯಾನರ್ಜಿ ಹೇಳಿರುವುದನ್ನು ಹಿರಿಯ ವಿರೋಧ ಪಕ್ಷದ ನಾಯಕರೊಬ್ಬರು ಉಲ್ಲೇಖಿಸಿದ್ದಾರೆ. […]
ಉಡುಪಿ: ಯುವತಿ ನಾಪತ್ತೆ
ಉಡುಪಿ: ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಕುಂಜಿಬೆಟ್ಟು ನಿವಾಸಿ ನೇತ್ರಾವತಿ (19) ಎಂಬ ಯುವತಿಯು ಡಿಸೆಂಬರ್ 18 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 4 ಅಡಿ 5 ಇಂಚು ಎತ್ತರ, ಸಾಧಾರಣ ಮೈಕಟ್ಟು, ಎಣ್ಣೆಕಪ್ಪು ಮೈಬಣ್ಣ, ಕೋಲು ಮುಖ ಹೊಂದಿದ್ದು, ಕನ್ನಡ ಹಾಗೂ ಇಂಗ್ಲೀಷ್ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಡಿ. 27 ರಿಂದ 30ರವರೆಗೆ ಮಣಿಪಾಲ ಪದವಿಪೂರ್ವ ಕಾಲೇಜಿನ ಅಮೃತ ಮಹೋತ್ಸವ- ‘ಅಮೃತ ಪರ್ವ’ ಸಂಭ್ರಮ
ಉಡುಪಿ: ಮಣಿಪಾಲ ಹಾಗೂ ಉಡುಪಿ ಸುತ್ತಲಿನ ಮಕ್ಕಳ ವಿದ್ಯಾಭ್ಯಾಸಕ್ಕಾಗಿ 1948ರಲ್ಲಿ ಪ್ರಾರಂಭಗೊಂಡ ಮಣಿಪಾಲ ಪದವಿ ಪೂರ್ವ ಕಾಲೇಜು ಇದೀಗ 75 ವರ್ಷಗಳನ್ನು ಪೂರ್ಣಗೊಳಿಸಿದ್ದು, ಅಮೃತ ಮಹೋತ್ಸವದ ಸಂಭ್ರಮದಲ್ಲಿದೆ. ಈ ಹಿನ್ನೆಲೆಯಲ್ಲಿ ಡಿ. 27 ರಿಂದ 30 ರವರೆಗೆ ‘ಅಮೃತ ಪರ್ವ’ವನ್ನು ಆಚರಿಸಲಾಗುತ್ತಿದೆ ಎಂದು ಕಾಲೇಜಿನ ಪ್ರಾಂಶುಪಾಲೆ ರೂಪ ಎಲ್.ಭಟ್ ತಿಳಿಸಿದ್ದಾರೆ. ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 1970ರವರೆಗೆ ಇದು ಮಣಿಪಾಲ ಹೈಸ್ಕೂಲ್ ಆಗಿದ್ದು, 1971ರಿಂದ ಪದವಿ ಪೂರ್ವ ತರಗತಿಗಳು ಪ್ರಾರಂಭಗೊಂಡು ಮಣಿಪಾಲ ಜೂನಿಯರ್ ಕಾಲೇಜಾಗಿ ಮೇಲ್ದರ್ಜೆಗೇರಿತು. […]
ತಲ್ಲೂರು ಫ್ಯಾಮಿಲಿ ಟ್ರಸ್ಟ್ ವತಿಯಿಂದ ವಿಶೇಷ ಮಕ್ಕಳ ಶಾಲೆಯಲ್ಲಿ ಮಣಿಪಾಲ ಆರೋಗ್ಯ ಕಾರ್ಡ್ ವಿತರಣೆ
ಉಡುಪಿ: ತಲ್ಲೂರು ಫ್ಯಾಮಿಲಿ ಟ್ರಸ್ಟ್ ವತಿಯಿಂದ ನಡೆಸಲಾಗುತ್ತಿರುವ ಮಣಿಪಾಲ ಆರೋಗ್ಯ ಕಾರ್ಡ್ ನ ವಿತರಣಾ ಕಾರ್ಯಕ್ರಮವು ಡಿ.19 ರಂದು ನಾರಾಯಣ ವಿಶೇಷ ಮಕ್ಕಳ ಶಾಲೆಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮಣಿಪಾಲ ಆರೋಗ್ಯ ಕಾರ್ಡ್ ನ ಮಾರ್ಕೆಟಿಂಗ್ ಡಿಪಾರ್ಟ್ ಮೆಂಟ್ ನ ಸಿಬ್ಬಂದಿಗಳಾದ ಅನಿಲ್, ಮೋಹನ್ ಹಾಗೂ ಶ್ರೀ ಅಕ್ಷಯ್, ಮಣಿಪಾಲ್ ಆರೋಗ್ಯ ಕಾರ್ಡ್ ನ ಪ್ರತಿನಿಧಿ ರಕ್ಷಿತ್ ಕುಮಾರ್ ಶೆಟ್ಟಿ ಹಾಗೂ ತಲ್ಲೂರು ಫ್ಯಾಮಿಲಿ ಟ್ರಸ್ಟ್ ನ ಮ್ಯಾನೇಜಿಂಗ್ ಟ್ರಸ್ಟಿ ಸುರೇಶ್. ಟಿ ಉಪಸ್ಥಿತರಿದ್ದರು. ಮಾರ್ಕೆಟಿಂಗ್ ವಿಭಾಗದ ಮೋಹನ್ […]