ನಾವು ಹಿಂದುಗಳಾಗಿ ಉಳಿದರೆ ಮಾತ್ರ ದೇಶ ರಾಮರಾಜ್ಯವಾಗುತ್ತದೆ: ಪೇಜಾವರ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ

ಉಡುಪಿ: ನಾವು ಹಿಂದುಗಳಾಗಿ ಉಳಿದರೆ ಮಾತ್ರ ರಾಮಮಂದಿರ ಮಂದಿರವಾಗಿ ಉಳಿಯುತ್ತದೆ. ಈ ದೇಶ ರಾಮರಾಜ್ಯವಾಗುತ್ತದೆ ಎಂದು ಉಡುಪಿ ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನ ತೀರ್ಥಸ್ವಾಮೀಜಿ ಹೇಳಿದ್ದಾರೆ. ಉಡುಪಿ ಪೇಜಾವರ ಮಠದ ಮುಂಭಾಗದಲ್ಲಿ ಅಭಿಮಾನಿಗಳಿಂದ ನಡೆದ 60ನೇ ವರ್ಷದ ಷಷ್ಠ್ಯಬ್ಧ ಸಮಾರಂಭದಲ್ಲಿ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿದರು. ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಬೇಕು. ಮಕ್ಕಳ ಮೂಲಕ ಸಂಸ್ಕೃತಿ ಉಳಿಸುವ ಕಾರ್ಯ ನಿರಂತರ ನಡೆಯುತ್ತದೆ. ಮಂದಿರ ಮಾತ್ರವಲ್ಲ ರಾಮ ರಾಜ್ಯದ ಕನಸು ಕೂಡ ನನಸಾಗಬೇಕು. ರಾಮಭಕ್ತರೆಲ್ಲ ದೇಶಭಕ್ತರಾಗಬೇಕು ಎಂದರು. ಸಮಾರಂಭವನ್ನು […]

ಕ್ರಿಯೇಟಿವ್‌ ಶಿಕ್ಷಣ ಪ್ರತಿಷ್ಠಾನದ ನಿನಾದ ತ್ರೈಮಾಸಿಕ ಪತ್ರಿಕೆ ಬಿಡುಗಡೆ ಕಾರ್ಯಕ್ರಮ

ಕಾರ್ಕಳ: ಕ್ರಿಯೇಟಿವ್‌ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಹೊರತರಲಾಗುತ್ತಿರುವ ತ್ರೈಮಾಸಿಕ ಪತ್ರಿಕೆ “ನಿನಾದ” ಸಂಚಿಕೆ-5 ಅನ್ನು ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕ ವರ್ಗದವರ ಸಮ್ಮುಖದಲ್ಲಿ ಬಿಡುಗಡೆಗೊಳಿಸಲಾಯಿತು. ಲಿಂಗಪ್ಪ ಮತ್ತು ರತ್ನಾ ಲಿಂಗಪ್ಪ ದಂಪತಿಗಳು ತ್ರೈಮಾಸಿಕ ಪತ್ರಿಕೆಯನ್ನು ಅನಾವರಣಗೊಳಿಸಿದರು. ವಿದ್ಯಾ ಸಂಸ್ಥೆಯ ಸಂಸ್ಥಾಪಕ ಅಶ್ವತ್‌ ಎಸ್‌. ಎಲ್‌ ಮಾತನಾಡಿ ನಿನಾದ ಪತ್ರಿಕೆ ವಿದ್ಯಾರ್ಥಿಗಳಿಗೆ, ಯುವ ಬರಹಗಾರರಿಗೆ ಉತ್ತಮವಾದ ವೇದಿಕೆ ಒದಗಿಸುತ್ತಿದೆ. ಬೆಳೆಯುವ ಸಿರಿ ಮೊಳಕೆಯಲ್ಲಿ ಎಂಬಂತೆ ಒಳ್ಳೆಯ, ಚಿಂತನಾತ್ಮಕ ಅಂಶಗಳನ್ನು ಬೆಳೆಸಲು ಹಾಗೂ ಕ್ರಿಯಾಶೀಲ ಮನಸ್ಸುಗಳನ್ನು ಕಟ್ಟಲು ಕ್ರಿಯೇಟಿವ್‌ ಎಂದಿಗೂ ಸಿದ್ಧವಾಗಿದೆ. […]