ಪುತ್ತಿಗೆ ಪರ್ಯಾಯ: ಚಪ್ಪರ ಮುಹೂರ್ತ ಸಂಪನ್ನ
ಉಡುಪಿ: ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರ ತೀರ್ಥರ ಚತುರ್ಥ ಪರ್ಯಾಯೋತ್ಸವದ ಅಂಗವಾಗಿ ಚಪ್ಪರ ಮುಹೂರ್ತವು ಬುಧವಾರ ನಡೆಯಿತು. ರಾಘವೇಂದ್ರ ಕೊಡಂಚ ಅವರ ಪೌರೋಹಿತ್ಯದಲ್ಲಿ, ಚಪ್ಪರ ನಿರ್ವಹಣೆಯ ರಾಜೇಶ್ , ಮುಚ್ಚೂರು ರಾಮಚಂದ್ರ ಭಟ್, ನಾಗರಾಜ್ ಉಪಾಧ್ಯ, ಮಠದ ಮೇಸ್ತ್ರಿ ಪದ್ಮನಾಭ ಇವರಿಗೆ ಮುಹೂರ್ತ ಪ್ರಸಾದ ನೀಡಲಾಯಿತು. ಸಮಿತಿಯ ಕಾರ್ಯಾಧ್ಯಕ್ಷ ರಘುಪತಿ ಭಟ್ ಪರ್ಯಾಯ ಪ್ರಚಾರ ವಾಹನದ ಭಿತ್ತಿಚಿತ್ರಗಳನ್ನು ಬಿಡುಗಡೆ ಮಾಡಿದರು. ಮಠದ ದಿವಾನರಾದ ನಾಗರಾಜ ಆಚಾರ್ಯ, ಪ್ರಸನ್ನ ಆಚಾರ್ಯ, ಕೋಶಾಧಿಕಾರಿ ರಂಜನ್ ಕಲ್ಕೂರ್ , ಕಾರ್ಯದರ್ಶಿ ರಾಘವೇಂದ್ರ […]
ಉಜ್ವಲ ಗ್ಯಾಸ್ ಇದ್ದವರಿಗೆ ಮಾತ್ರ ಆಧಾರ್ ದೃಢೀಕರಣ ಕಡ್ಡಾಯ.
ಉಡುಪಿ: ಅಡುಗೆ ಅನಿಲ ಸಂಪರ್ಕ ಇರುವವರು ಡಿ.31ರೊಳಗೆ ಗ್ಯಾಸ್ ಏಜೆನ್ಸಿಗೆ ಹೋಗಿ ಕೆವೈಸಿ ಮಾಡಿಸಿದರೆ ಮಾತ್ರ ಸಬ್ಸಿಡಿ ಸಿಗುತ್ತದೆ ಎನ್ನುವ ಸಂದೇಶ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಆಧಾರ್ ದೃಢೀಕರಣವು ಉಜ್ವಲ ಗ್ಯಾಸ್ ಸಂಪರ್ಕ ಪಡೆದಿರುವವರಿಗೆ ಮಾತ್ರ ಕಡ್ಡಾಯ. ಉಳಿದವರಿಗೆ ಗ್ಯಾಸ್ ಸಬ್ಸಿಡಿ ಬಗ್ಗೆ ಪ್ರಸ್ತುತ ಯಾವುದೇ ಘೋಷಣೆ ಆಗಿಲ್ಲ. ಗ್ಯಾಸ್ ಬಳಕೆದಾರರು ಯಾವುದೇ ಗೊಂದಲಕ್ಕೆ ಒಳಗಾಗಬಾರದು ಎಂದು ಆಹಾರ ಇಲಾಖೆಯ ಉಪ ನಿರ್ದೇಶಕರು ಸ್ಪಷ್ಟ ಪಡಿಸಿದ್ದಾರೆ.
JN.1 ಉಪತಳಿ ಉಪಟಳ: ಎರಡನೇ ಸ್ಥಾನದಲ್ಲಿ ರಾಜ್ಯ; ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ
ಬೆಂಗಳೂರು: ಕೊರೋನಾ ರೂಪಾಂತರಿ ಜೆಎನ್ 1 ಉಪತಳಿ ಉಪಟಳ ಹೆಚ್ಚುತ್ತಿದ್ದು ರಾಜ್ಯದಲ್ಲಿ ಮೂವರು ಬಲಿಯಾಗಿದ್ದಾರೆ. ಕೋವಿಡ್ ಆತಂಕ ದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ಮಹತ್ವದ ಸಭೆ ನಡೆಯಲಿದೆ. ಆರೋಗ್ಯ ಇಲಾಖೆಯ ಸಚಿವರು, ಅಧಿಕಾರಿಗಳು ಹಾಗೂ ತಾಂತ್ರಿಕ ಸಲಹಾ ಸಮಿತಿಯ ಸದಸ್ಯರೂ ಈ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಕೇಂದ್ರ ಆರೋಗ್ಯ ಸಚಿವಾಲಯವು ಸಾರ್ವಜನಿಕ ಆರೋಗ್ಯ ಸನ್ನದ್ಧತೆ ಕುರಿತು ನಡೆಸಿದ ಪರಿಶೀಲನಾ ಸಭೆಯಲ್ಲಿ ಬಹಿರಂಗಪಡಿಸಿದ ಅಂಕಿ ಅಂಶಗಳ ಪ್ರಕಾರ ಡಿಸೆಂಬರ್ 20 ರವರೆಗೆ ಒಟ್ಟು ಸಕ್ರಿಯ ಕೋವಿಡ್ -19 […]
ನಿಟ್ಟೂರಿನ ರಾಜ್ಯ ಮಹಿಳಾ ನಿಲಯದಲ್ಲಿ ಎರಡು ಜೋಡಿಗಳಿಗೆ ಕೂಡಿ ಬಂತು ಕಂಕಣ ಭಾಗ್ಯ
ಉಡುಪಿ: ನಿಟ್ಟೂರಿನ ರಾಜ್ಯ ಮಹಿಳಾ ನಿಲಯದಲ್ಲಿ ಡಿಸೆಂಬರ್ 19 ರ ಸಂಜೆ ಮಂಗಳವಾರದಿಂದ ಬುಧವಾರ ಮಧ್ಯಾಹ್ನದವರೆಗೆ ಮದುವೆ ಸಂಭ್ರಮ ಕಳೆ ಕಟ್ಟಿತ್ತು. ಸಂಜೆ ಮೆಹಂದಿ ಕಾರ್ಯಕ್ರಮ ನಡೆದರೆ, ಬೆಳಗ್ಗೆ ಎರಡು ಜೋಡಿಗಳ ವಿವಾಹ ಮಹೋತ್ಸವವು ಅಧಿಕಾರಿಗಳು, ಗಣ್ಯರು ಹಾಗೂ ಕುಟುಂಬಸ್ಥರ ಸಮ್ಮುಖದಲ್ಲಿ ಸಾಂಪ್ರದಾಯಿಕವಾಗಿ ನಡೆಯಿತು. ವಿವಾಹ ನಿಶ್ಚಯ ಕಾರ್ಯಕ್ರಮ ಜಿಲ್ಲಾಡಳಿತದ ನೇತೃತ್ವದಲ್ಲಿ ಕಳೆದ ಎರಡು ತಿಂಗಳಿನಿಂದ ವರರ ಆರೋಗ್ಯ, ಗುಣ ನಡತೆ, ಅವರ ಆದಾಯ ಮತ್ತಿತರ ವಿವರಗಳನ್ನು ಕಲೆ ಹಾಕುವುದರೊಂದಿಗೆ ಜಿಲ್ಲಾಡಳಿತ, ವರಂದಿರ ಗುರು ಹಿರಿಯರು ಒಪ್ಪಿಗೆನೀಡಿದರು. […]
ಕಿಶೋರ ಯಕ್ಷಗಾನ ಸಂಭ್ರಮ ಸಮಾರೋಪ ಸಮಾರಂಭ
ಉಡುಪಿ: ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಎರಡು ವಾರಗಳ ಪರ್ಯಂತ ನಡೆದ ಕಿಶೋರ ಯಕ್ಷಗಾನ ಸಂಭ್ರಮದ ಸಮಾರೋಪ ಸಮಾರಂಭ ರಾಜಾಂಗಣದಲ್ಲಿ ನಡೆಯಿತು. 28 ಶಾಲೆಗಳ ಸುಮಾರು 860 ವಿದ್ಯಾರ್ಥಿಗಳು ಕಿಶೋರ ಯಕ್ಷಗಾನ ಸಂಭ್ರಮದಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಪರ್ಯಾಯ ಶ್ರೀಕೃಷ್ಣಾಪುರ ಮಠಾಧೀಶರಾದ ಶ್ರೀ ವಿದ್ಯಾಸಾಗರತೀರ್ಥ ಸ್ವಾಮೀಜಿ, ಈ ಕಲೆ ಮಕ್ಕಳನ್ನು ಸಂಸ್ಕೃತಿ ಸಂಪನ್ನರಾಗಿಸುವಲ್ಲಿ ಮಹತ್ತ್ವದ ಪಾತ್ರ ವಹಿಸಿದೆ. ಯಕ್ಷ ಶಿಕ್ಷಣ ಟ್ರಸ್ಟ್ ಇದನ್ನು ನಿರಂತರ ಮುಂದುವರಿಸಿಕೊಂಡು ಬರಲಿ ಎಂದು ಆಶೀರ್ವದಿಸಿದರು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಶಾಸಕಯಶ್‍ಪಾಲ್ ಎ. […]