ರಾಜ್ಯ ಸರ್ಕಾರದಿಂದ ‘ಕೋವಿಡ್’ ನಿಯಂತ್ರಣಕ್ಕೆ ಸಂಪುಟ ಉಪಸಮಿತಿ ರಚನೆ
ಬೆಂಗಳೂರು : ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ನಾಲ್ವರು ಸಚಿವರನ್ನು ಒಳಗೊಂಡ ಸಂಪುಟ ಉಪಸಮಿತಿಯನ್ನು ರಾಜ್ಯ ಸರ್ಕಾರ ರಚನೆ ಮಾಡಿದೆ. ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಸಂಪುಟ ಉಪಸಮಿತಿ ರಚನೆ ಮಾಡಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಸರ್ಕಾರ ಸಕಲ ಸಿದ್ದತೆ ಕೈಗೊಂಡಿದೆ. ಇದೀಗ ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಸಂಪುಟ ಉಪಸಮಿತಿ ರಚನೆ ಮಾಡಿದೆ.ಸಚಿವ ದಿನೇಶ್ ಗುಂಡೂರಾವ್ ಅವರನ್ನು ಕಮಿಟಿ ಅಧ್ಯಕ್ಷರನ್ನಾಗಿ ಮಾಡಲಾಗಿದ್ದು, ಉಪ ಸಮಿತಿಯಲ್ಲಿ […]
ಸರ್ಕಾರದಿಂದ ಕುಡಿಯುವ ‘ನೀರಿನ ತೆರಿಗೆ’ ಹೆಚ್ಚಳ : ರಾಜ್ಯದ ಜನತೆಗೆ ವಾಟರ್ ಶಾಕ್
ಬೆಂಗಳೂರು : ಕೈಗಾರಿಕೆಗಳಿಗೆ ಕೆರೆ, ನಾಲೆ, ಜಲಾಶಯಗಳಿಂದ ಒದಗಿಸುವ ನೀರಿನ ಕರ ಹೆಚ್ಚಳ ಮಾಡಲು ರಾಜ್ಯ ಸಚಿವ ಸಂಪುಟ ಸಭೆ ನಿರ್ಧರಿಸಿದೆ. ಪ್ರತಿ ಎಂಸಿಎಫ್ಟಿ ನೀರಿಗೆ ಇದೆ ಸದ್ಯದ 50,000 ರೂ.ರಾಜ್ಯದ ಜನತೆಗೆ ವಾಟರ್ ಶಾಕ್ ಎದುರಾಗಿದ್ದು, ಸರ್ಕಾರ ಕುಡಿಯುವ ನೀರಿನ ತೆರಿಗೆ ಹೆಚ್ಚಳ ಮಾಡಿದೆ. ರಾಜಧನ, ಇದನ್ನು 3 ಲಕ್ಷ ರೂ.ಗೆ ಹೆಚ್ಚಿಸಲು ಸಂಪುಟ ಸಭೆ ತೀರ್ಮಾನ ಮಾಡಿದೆ. ಹೊಸ ತೆರಿಗೆ ಪ್ರಕಾರ ಗೃಹ ಬಳಕೆ ನೀರಿಗೆ ಪ್ರತಿ MCFTಗೆ (Million Cubic Feet) 320 […]
ಡಿ.23ರಂದು ‘ಅಮೃತ ಸಂಗಮ’ ಎಂಜಿಎಂ ಕಾಲೇಜಿನ ಹಳೆವಿದ್ಯಾರ್ಥಿಗಳ ಸಮಾವೇಶ
ಉಡುಪಿ: ಉಡುಪಿ ಎಂಜಿಎಂ ಕಾಲೇಜಿನ ಅಮೃತ ಮಹೋತ್ಸವದ ಪ್ರಯುಕ್ತ ‘ಅಮೃತ ಸಂಗಮ’ ಹಳೆವಿದ್ಯಾರ್ಥಿಗಳ ಸಮಾವೇಶವನ್ನು ಇದೇ ಡಿ.23ರಂದು ಹಮ್ಮಿಕೊಳ್ಳಲಾಗಿದೆ ಎಂದು ಕಾರ್ಯಕ್ರಮದ ಪ್ರಧಾನ ಸಂಘಟಕ ಪ್ರೊ.ಎಂ.ಎಲ್.ಸಾಮಗ ತಿಳಿಸಿದ್ದಾರೆ. ಎಂಜಿಎಂ ಕಾಲೇಜಿನ ರವೀಂದ್ರ ಮಂಟಪದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಲೇಜು ಸ್ಥಾಪನೆಗೊಂಡ 1949ರಿಂದ ಇದುವರೆಗಿನ ಎಲ್ಲಾ ಹಳೆ ವಿದ್ಯಾರ್ಥಿಗಳು ಒಟ್ಟು ಸೇರಿ ಒಂದು ದಿನದ ಸಂಭ್ರಮ, ಸಡಗರವನ್ನು ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಆಚರಿಸಲಿದ್ದಾರೆ ಎಂದರು. ಡಿ. 23ರಂದು ಬೆಳಿಗ್ಗೆ 9:30ಕ್ಕೆ ಡಾ.ಟಿಎಂಎ ಪೈ ಪುತ್ಥಳಿಗೆ ಗೌರವಾರ್ಪಣೆಯೊಂದಿಗೆ ಕಾರ್ಯಕ್ರಮ ಆರಂಭಗೊಳ್ಳಲಿದೆ. […]
ಉಡುಪಿ: ಪೆರಂಪಳ್ಳಿ ವಾರ್ಡಿನ ಉಪಚುನಾವಣೆಗೆ ಕಾಂಗ್ರೆಸ್ ಮುಖಂಡರಿಂದ ಬಿರುಸಿನ ಮತಪ್ರಚಾರ.
ಉಡುಪಿ: ಉಡುಪಿ ನಗರಸಭೆಯ 13ನೇ ಪೆರಂಪಳ್ಳಿ ವಾರ್ಡಿನ ಉಪಚುನಾವಣೆಯು ಡಿ.27 ಬುಧವಾರದಂದು ನಡೆಯಲಿದ್ದು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಶ್ರೀಮತಿ ಶ್ರುತಿ ಅವರ ಪರವಾಗಿ ಕಾಂಗ್ರೆಸ್ ಮುಖಂಡರಾದ ಪ್ರಸಾದ್‌ರಾಜ್ ಕಾಂಚನ್, ರಮೇಶ್ ಕಾಂಚನ್, ಕುಶಲ್ ಶೆಟ್ಟಿ, ಗೀತಾ ವಾಘ್ಲೆ, ಜ್ಯೋತಿ ಹೆಬ್ಬಾರ್, ಪ್ರಖ್ಯಾತ್ ಶೆಟ್ಟಿ ಅವರು ಮನೆ ಮನೆಗಳಿಗೆ ತೆರಳಿ ಕರ್ನಾಟಕ ರಾಜ್ಯ ಸರ್ಕಾರದ ಜನಪರ ಯೋಜನೆ ಹಾಗೂ ಗ್ಯಾರಂಟಿಗಳ ಬಗ್ಗೆ ತಿಳಿಸಿ ಮತಯಾಚನೆ ಮಾಡಿದರು. ಈ ಸಂದರ್ಭದಲ್ಲಿ ನಾಯಕರಾದ ಗಣೇಶ್ ನೆರ್ಗಿ, ಸತೀಶ್ ಕೊಡವೂರು, ಲಕ್ಷ್ಮಣ್ ಪೂಜಾರಿ, […]
ಡಿ.24: ಅಮೃತ ಭಾರತಿ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಅಮೃತ ವೈಭವ – ಹೊನಲು ಬೆಳಕಿನ ಸಾಂಸ್ಕೃತಿಕ ಉತ್ಸವ
ಹೆಬ್ರಿ: ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಡಿ. 24 ರಂದು ಸಂಜೆ 6 ಗಂಟೆಗೆ ಅಮೃತ ವೈಭವ – ಹೊನಲು ಬೆಳಕಿನ ಸಾಂಸ್ಕೃತಿಕ ಉತ್ಸವ ನಡೆಯಲಿದೆ. ಅಮೃತ ಭಾರತಿ ಟ್ರಸ್ಟ್ ಅಧ್ಯಕ್ಷ ಸಿಎ ಎಂ. ರವಿರಾವ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿರುವರು. ಮುಖ್ಯ ಅತಿಥಿಗಳಾಗಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ರಾಜ್ಯ ಸಭಾ ಸದಸ್ಯ ಲೆಹರ್ ಸಿಂಗ್, ವಿಧಾನ ಪರಿಷತ್ ಸದಸ್ಯ ಕೋಟಾ ಶ್ರೀನಿವಾಸ್ ಪೂಜಾರಿ, ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್, […]