ಉಡುಪಿ: ಹೃದಯಾಘಾತಕ್ಕೆ ಪಿಯುಸಿ ವಿದ್ಯಾರ್ಥಿ ಮೃತ್ಯು..!
ಉಡುಪಿ: ಚಿಕ್ಕ ವಯಸ್ಸಿನಲ್ಲಿಯೇ ಹೃದಯಾಘಾತಕ್ಕೆ ಮರಣವಾಗುವ ಸುದ್ದಿಗಳು ಕೇಳಿಬರುತ್ತಿದೆ. ಚಿಕ್ಕಮಗಳೂರಿನಲ್ಲಿ 7ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಹೃದಯಾಘಾತದಿಂದ ಮೃತಪಟ್ಟ ಘಟನೆಯ ಬೆನ್ನಿಗೇ ಪ್ರಥಮ ಪಿಯುಸಿ ವಿದ್ಯಾರ್ಥಿಯೊಬ್ಬ ಹೃದಯಾಘಾತದಿಂದ ಮೃತಪಟ್ಟ ಘಟನೆ ಉಡುಪಿಯಲ್ಲಿ ನಡೆದಿದೆ. ಕಲ್ಯಾಣಪುರದ ಮಿಲಾಗ್ರಿಸ್ ಪಿಯು ಕಾಲೇಜಿನ ಪ್ರಥಮ ಪಿಯುಸಿ ಓದುತ್ತಿದ್ದ ಅಫ್ಕಾರ್ (17) ಮೃತ ವಿದ್ಯಾರ್ಥಿ. ಅಫ್ಕಾರ್ ಹುಟ್ಟಿನಿಂದ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಎಂದು ಮನೆಯವರು ತಿಳಿಸಿದ್ದಾರೆ. ಡಿಸೆಂಬರ್ 6ರಂದು ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆದಿದ್ದ ಬಾಲಕ ಕಳೆದ 18ರಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದ. […]
ಚಿತ್ರನಟಿ ಸಾಯಿ ಪಲ್ಲವಿ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ
ಉಡುಪಿ: ದಕ್ಷಿಣ ಭಾರತದ ಪ್ರಸಿದ್ಧ ಚಿತ್ರನಟಿ ಸಾಯಿ ಪಲ್ಲವಿ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದ್ದಾರೆ. ಖಾಸಗಿ ಕಾರ್ಯ ನಿಮಿತ್ತ ಕರಾವಳಿಗೆ ಬಂದಿರುವ ಚಿತ್ರನಟಿ ಕನಕ ನವಗ್ರಹ ಕಿಂಡಿಯ ಮೂಲಕ ಕೃಷ್ಣ ದೇವರ ದರ್ಶನ ಪಡೆದಿದ್ದಾರೆ. ನಂತರ ಕಾಣಿಯೂರು ಮಠಕ್ಕೆ ತೆರಳಿ ಶ್ರೀ ವಿದ್ಯಾ ವಲ್ಲಭ ತೀರ್ಥ ಸ್ವಾಮೀಜಿ ಅವರಿಂದ ಆಶೀರ್ವಾದ ಪಡೆದರು. ಮಠಕ್ಕೆ ಭೇಟಿ ನೀಡಿದ ಸಾಯಿ ಪಲ್ಲವಿ ಅವರನ್ನು ಶ್ರೀ ಕೃಷ್ಣ ಮಠದ ವತಿಯಿಂದ ಗೌರವಿಸಲಾಯಿತು.
ಮಲ್ಪೆ: ಮೀನುಗಾರಿಕೆಗೆ ತೆರಳಿದ್ದ ದೋಣಿ ಮುಳುಗಡೆ – 8 ಮಂದಿಯ ರಕ್ಷಣೆ
ಮಲ್ಪೆ: ಮೀನುಗಾರಿಕೆಗೆ ತೆರಳಿದ್ದ ದೋಣಿ ಮುಳುಗಡೆಗೊಂಡಿದ್ದ ಪರಿಣಾಮ ಅದರಲ್ಲಿದ್ದ 8 ಮಂದಿ ಮೀನುಗಾರರನ್ನು ಬೇರೆ ಬೋಟ್ ನವರು ರಕ್ಷಿಸಿದ ಘಟನೆ ನಡೆದಿದೆ. ಡಿ.12ರಂದು ರಾತ್ರಿ ಕಡೆಕಾರು ರಕ್ಷಣಾ ಸಂಸ್ಥೆಯ ಶ್ರೀ ನಾರಾಯಣ ಎಂಬ ಬೋಟ್ ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿತ್ತು. ಆದರೆ ಡಿಸೆಂಬರ್ 19 ರಂದು ಬೆಳಗ್ಗೆ ಸಮುದ್ರದಲ್ಲಿ ಮಲ್ಪೆಯಿಂದ 26 ಮಾರು ಆಳದಲ್ಲಿ ದೋಣಿ ಮುಳುಗಡೆಗೊಂಡಿದೆ. ಬೆಳಗ್ಗೆ 6.30ರ ಸುಮಾರಿಗೆ ಮೀನುಗಾರಿಕೆ ನಡೆಸುತ್ತಿದ್ದ ವೇಳೆ ನೀರಿನಡಿಯಲ್ಲಿ ಯಾವುದೋ ವಸ್ತು ದೋಣಿಯ ತಳ ಒಡೆದು ನೀರು ನುಗ್ಗಲು […]
ವಿದ್ಯಾರ್ಥಿ ವೇತನ: ಅವಧಿ ವಿಸ್ತರಣೆ
ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ 1ನೇ ತರಗತಿಯಿಂದ 8ನೇ ತರಗತಿಯ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್ ಮತ್ತು ಪಾರ್ಸಿ ಜನಾಂಗದ ವಿದ್ಯಾರ್ಥಿಗಳಿಂದ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದಲ್ಲಿ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕೆ ವೆಬ್ಸೈಟ್ https://ssp.karnataka.gov.in ನಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಡಿಸೆಂಬರ್ 31 ರ ವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್ಸೈಟ್ https://ssp.karnataka.gov.in, ಸಹಾಯವಾಣಿ ಸಂಖ್ಯೆ: 8277799990 ಅಥವಾ ಉಡುಪಿ ದೂ.ಸಂಖ್ಯೆ: 0820-2574596, ಕಾರ್ಕಳ ದೂ.ಸಂಖ್ಯೆ: 08258-231101 […]
ಉಡುಪಿ: ನಳ್ಳಿ ನೀರಿನ ಶುಲ್ಕ ಪಾವತಿಗೆ ಸೂಚನೆ
ಉಡುಪಿ: ಉಡುಪಿ ನಗರಸಭೆಯ ನಳ್ಳಿ ನೀರಿನ ಸಂಪರ್ಕ ಪಡೆದುಕೊಂಡಿರುವ ಗ್ರಾಹಕರು ತಮ್ಮ ನೀರಿನ ಬಳಕೆ ಶುಲ್ಕವನ್ನು ಬಾಕಿ ಇರಿಸಿಕೊಂಡಿದ್ದಲ್ಲಿ 2024 ರ ಜನವರಿ 5 ರ ಒಳಗಾಗಿ ಪಾವತಿಸಬೇಕು. ತಪ್ಪಿದ್ದಲ್ಲಿ ಯಾವುದೇ ಮುನ್ಸೂಚನೆ ನೀಡದೇ ನಳ್ಳಿ ನೀರಿನ ಸಂಪರ್ಕವನ್ನು ಕಡಿತಗೊಳಿಸಲಾಗುವುದು ಎಂದು ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.