ಉಡುಪಿ: ಕ್ರೀಡಾ ಪ್ರೋತ್ಸಾಹಧನ – ಅರ್ಜಿ ಆಹ್ವಾನ

ಉಡುಪಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕ್ರೀಡಾ ಪ್ರೋತ್ಸಾಹಧನ ಸೌಲಭ್ಯ ಪಡೆಯಲು 2023 ರ ಜನವರಿ 1 ರಿಂದ ಡಿಸೆಂಬರ್ 31 ರ ವರೆಗೆ ರಾಜ್ಯ ಮತ್ತು ರಾಷ್ಟ್ರ ಮಟ್ಟದ ಕ್ರೀಡಾಕೂಟದ ವೈಯಕ್ತಿಕ ಹಾಗೂ ಗುಂಪು ಸ್ಪರ್ಧೆಯಲ್ಲಿ ಭಾಗವಹಿಸಿದ ಹಾಗೂ ಪದಕ ಪಡೆದ ಅರ್ಹ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು 2024 ರ ಜನವರಿ 6 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ […]

ಸರ್ಕಾರಿ ಶಾಲಾ ಶಿಕ್ಷಕರು ಮಕ್ಕಳ ಇಂಗ್ಲಿಷ್ ಕಲಿಕೆಗಾಗಿ ದೇಣಿಗೆ ನೀಡಲು ಮುಂದಾಗಬೇಕು: ಮನೋಜ್ ಕಡಬ

ಉಡುಪಿ: ಕಾರ್ಕಳ ತಾಲೂಕು ಯರ್ಲಪಾಡಿ ಸರಕಾರಿ ಸಂಯುಕ್ತ ಪ್ರೌಢ ಶಾಲೆಯಲ್ಲಿ ಉಡುಪಿಯ ಶೆಫಿನ್ಸ್ ವತಿಯಿಂದ ನಡೆಯುತ್ತಿರುವ ಶಾಲಾ ಮಕ್ಕಳ ಸ್ಪೋಕನ್ ಇಂಗ್ಲಿಷ್ ತರಬೇತಿ ಕಾರ್ಯಕ್ರಮಕ್ಕೆ ಮಕ್ಕಳ ಪುಸ್ತಕಗಳಿಗಾಗಿ 25,550 ರೂ ದೇಣಿಗೆ ನೀಡಿದ ಶಾಲಾ ಮುಖ್ಯೋಪಾಧ್ಯಾಯಿನಿ ಸುನಂದಾ ಎಲ್. ಎಸ್ ಇತರ ಸರಕಾರಿ ನೌಕರರಿಗೆ ಮತ್ತು ಕನ್ನಡ ಮಾಧ್ಯಮ ಶಾಲೆಗಳಲ್ಲಿ ಓದಿ ಬದುಕು ಕಟ್ಟಿಕೊಳ್ಳುತ್ತಿರುವವರಿಗೆ ಮಾದರಿಯಾಗಿದ್ದಾರೆ. ಶಾಲೆಯಲ್ಲಿ ನಡೆದ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಅವರನ್ನು ಶೆಫಿನ್ಸ್ ಸಂಸ್ಥೆಯ ಮತ್ತು ಶಾಲಾಭಿವೃದ್ಧಿ ಸಮಿತಿಯ ಪರವಾಗಿ ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ […]

ಮೂಡುಪರೆಂಪಳ್ಳಿ ವಾರ್ಡ್ ಬಿಜೆಪಿ ಅಭ್ಯರ್ಥಿ ಪರವಾಗಿ ಕೆ. ಉದಯ ಕುಮಾರ್ ಶೆಟ್ಟಿ ಮತಯಾಚನೆ

ಉಡುಪಿ: ಉಡುಪಿ ನಗರಸಭೆ ವ್ಯಾಪ್ತಿಯ ಮೂಡುಪರೆಂಪಳ್ಳಿ ವಾರ್ಡಿಗೆ ನಡೆಯುವ ಉಪ ಚುನಾವಣೆಯ ಪ್ರಯುಕ್ತ ಚುನಾವಣಾ ಪ್ರಚಾರ ಅಭಿಯಾನದಲ್ಲಿ ಬಿಜೆಪಿ ಅಭ್ಯರ್ಥಿ ಅನಿಟಾ ಬೆಲಿಡಾ ಡಿ’ಸೋಜಾ ಪರವಾಗಿ ಮಂಗಳೂರು ವಿಭಾಗ ಪ್ರಭಾರಿ ಕೆ. ಉದಯ ಕುಮಾರ್ ಶೆಟ್ಟಿ ಇವರು ಮನೆ ಮನೆಗೆ ತೆರಳಿ ಮತಯಾಚನೆ ನಡೆಸಿದರು. ಜಿಲ್ಲಾ ಬಿಜೆಪಿ ಉಪಾಧ್ಯಕ್ಷೆ ಗೀತಾಂಜಲಿ ಸುವರ್ಣ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ರಶ್ಮಿತಾ ಬಾಲಕೃಷ್ಣ ಶೆಟ್ಟಿ, ನಗರಸಭಾ ಸದಸ್ಯರಾದ ರಜನಿ ಮಂಜುನಾಥ್ ಹೆಬ್ಬಾರ್, ಗಿರೀಶ್ ಅಂಚನ್, […]

ಕರಕರಿ ಫ್ರೆಂಡ್ಸ್ ಸೇವಾ ಬಳಗದ 55 ನೇ ಸೇವಾ ಯೋಜನೆಯಾಗಿ ಆಂಬ್ಯುಲೆನ್ಸ್ ಲೋಕಾರ್ಪಣೆ ಮತ್ತು ಸನ್ಮಾನ ಕಾರ್ಯಕ್ರಮ

ಕಾರ್ಕಳ: ಕರಕರಿ ಫ್ರೆಂಡ್ಸ್ ಸೇವಾ ಬಳಗ (ರಿ) ಇದರ ವತಿಯಿಂದ 55 ನೇ ಸೇವಾ ಯೋಜನೆಯಾಗಿ ಆಂಬ್ಯುಲೆನ್ಸ್ ಲೋಕಾರ್ಪಣೆ ಮತ್ತು ಸನ್ಮಾನ ಕಾರ್ಯಕ್ರಮವು ಬೈಲೂರು ಶ್ರೀ ಮಾರಿಯಮ್ಮ ಸಭಾಭವನದಲ್ಲಿ ಡಿ.24 ರಂದು ಬೆಳಿಗ್ಗೆ 11 ಗಂಟೆಯಿಂದ ನಡೆಯಲಿದೆ. ಆಂಬ್ಯುಲೆನ್ಸ್ ಅನ್ನು ಶಾಸಕ ವಿ.ಸುನಿಲ್ ಕುಮಾರ್ ಅವರು ಲೋಕಾರ್ಪಣೆಗೊಳಿಸಲಿದ್ದಾರೆ. ಬಳಗದ ಅಧ್ಯಕ್ಷ ಹಾಗೂ ವಕೀಲ ಸದಾನಂದ ಸಾಲಿಯಾನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಮುಂಬೈ ವಕೀಲ ಭೋಜ ನಾರಾಯಣ ಪೂಜಾರಿ, ಉದ್ಯಮಿ ಕೃಷ್ಣರಾಜ್ ಹೆಗ್ಡೆ, ಬಳಗದ ಸಲಹೆಗಾರ ಸುಮಿತ್ ಶೆಟ್ಟಿ […]