ಉಡುಪಿ: ನಗರಸಭೆ ಉಪಚುನಾವಣೆ – ಸಂತೆ, ಜಾತ್ರೆ ನಿಷೇಧ

ಉಡುಪಿ: ನಗರ ಸ್ಥಳೀಯ ಸಂಸ್ಥೆಗಳಲ್ಲಿ ವಿವಿಧ ಕಾರಣಗಳಿಂದ ತೆರವಾದ ಖಾಲಿ ಸ್ಥಾನಗಳಿಗೆ ಡಿಸೆಂಬರ್ 27 ರಂದು ಚುನಾವಣೆ ನಡೆಯಲಿದ್ದು, ಮತದಾನದ ಸಂದರ್ಭದಲ್ಲಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಹಾಗೂ ಸಾರ್ವಜನಿಕರು ಮತ ಚಲಾಯಿಸಲು ಅನುಕೂಲವಾಗುವಂತೆ, ಅಂದು ಬೆಳಗ್ಗೆ 6 ಗಂಟೆಯಿಂದ ಮತದಾನ ಮುಕ್ತಾಯವಾಗುವವರೆಗೆ ಮತದಾನ ನಡೆಯುವ ಉಡುಪಿ ನಗರಸಭೆಯ 13 ನೇ ಮೂಡು ಪೆರಂಪಳ್ಳಿ ವಾರ್ಡ್ ವ್ಯಾಪ್ತಿಯಲ್ಲಿ ಸಂತೆ ಮತ್ತು ಎಲ್ಲಾ ತರಹದ ಜಾತ್ರೆಗಳನ್ನು ಹಾಗೂ ಪೂರ್ವಾನುಮತಿ ಪಡೆಯದೇ ಉತ್ಸವಗಳನ್ನು ನಡೆಸುವುದನ್ನು ನಿಷೇಧಿಸಿ, ಜಿಲ್ಲಾಧಿಕಾರಿ ಹಾಗೂ […]

ಯುವನಿಧಿ ಯೋಜನೆಗೆ ಅರ್ಹ ಪ್ರತಿಯೊಬ್ಬ ಫಲಾನುಭವಿಗಳು ಅರ್ಜಿ ಸಲ್ಲಿಸಿ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ: ಯುವ ಜನರ ಶ್ರೇಯೋಭಿವೃದ್ಧಿಗೆ ಸರಕಾರ ಜಾರಿಗೆ ತಂದಿರುವ ಯುವನಿಧಿ ಯೋಜನೆಗೆ ಅರ್ಹ ಪ್ರತಿಯೊಬ್ಬ ಫಲಾನುಭವಿಗಳು ಅರ್ಜಿ ಸಲ್ಲಿಸಿ, ಈ ಯೋಜನೆಯ ಲಾಭ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ವತಿಯಿಂದ ಜಾರಿಗೆ ತಂದಿರುವ ಯುವನಿಧಿ ಯೋಜನೆಯ ಪೋಸ್ಟರ್ ಅನ್ನು ಬಿಡುಗಡೆ ಮಾಡಿ ಮಾತನಾಡುತ್ತಿದ್ದರು. ಯುವ ಜನತೆಯ ಉಜ್ವಲ ಭವಿಷ್ಯಕ್ಕಾಗಿ ಸರ್ಕಾರ ಜಾರಿಗೆ ತಂದಿರುವ ಯುವನಿಧಿ […]

ವಿಶ್ವ ವಿಖ್ಯಾತ ಹಂಪಿ ಉತ್ಸವಕ್ಕೆ ದಿನಾಂಕ ನಿಗದಿ: ರಾಜ್ಯ ಸರ್ಕಾರ

ಬೆಂಗಳೂರು :ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆಬ್ರವರಿ 2 ರಿಂದ ಮೂರು ದಿನಗಳ ಕಾಲ ಹಂಪಿ ಉತ್ಸವ ನಡೆಸಲು ಒಪ್ಪಿಗೆ ನೀಡಿದ್ದು, ಮೊದಲ ದಿನ ಉತ್ಸವ ಉದ್ಘಾಟನೆ ಮಾಡಲಿದ್ದಾರೆ. ಜಿಲ್ಲೆಯ ಎಲ್ಲ ಜನಪ್ರತಿನಿಧಿ ಗಳು, ಸಂಘಟನೆಗಳು ಹಾಗೂ ಸಾಂಸ್ಕೃತಿಕ ವಲಯದವರನ್ನು ಜತೆಗೂಡಿಸಿಕೊಂಡು ಉತ್ಸವ ಯಶಸ್ವಿಗೊಳಿಸಲು ತಿಳಿಸಿದ್ದಾರೆ. ಹಂಪಿ ಉತ್ಸವ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಯ ಶಾಸಕರು ಸೇರಿ ಜನಪ್ರತಿನಿಧಿಗಳನ್ನು ಒಳಗೊಂಡಂತೆ ಸದ್ಯದಲ್ಲೇ ಸಭೆ ಸಹ ನಡೆಸಲಿದ್ದಾರೆ.ವಿಶ್ವ ವಿಖ್ಯಾತ ಹಂಪಿ ಉತ್ಸವ ಫೆಬ್ರವರಿ 2 ರಿಂದ ಮೂರು ದಿನಗಳ […]

ಉಡುಪಿ ಉತ್ಸವದಲ್ಲಿ ದೊರೆಯಲಿದೆ ಸಮುದ್ರದೊಳಗಿರುವ ಅನುಭೂತಿ: ಮೀನು ಸುರಂಗದಲ್ಲಿದೆ ವೈವಿಧ್ಯಮಯ ಮೀನುಗಳ ಲೋಕ…

ಉಡುಪಿ: ನ್ಯಾಶನಲ್ ಕನ್ಸ್ಯೂಮರ್ ಫೇರ್ (ಎನ್ ಸಿಎಫ್) ಉಡುಪಿ ವತಿಯಿಂದ ಕರಾವಳಿ ಬೈಪಾಸ್ ಬಳಿಯ ರಾ.ಹೆ. 66ರ ಸನಿಹದ ಶಾರದಾ ಇಂಟರ್ ನ್ಯಾಶನಲ್ ಹೋಟೆಲ್ ಸಮೀಪದ 10 ಎಕರೆ ಜಾಗದಲ್ಲಿ ಆರಂಭಗೊಂಡ ಬೃಹತ್ ವಸ್ತು ಪ್ರದರ್ಶನ, ಮನೋರಂಜನೆ, ಸಾಂಸ್ಕೃತಿಕ ಮೇಳ ಒಳಗೊಂಡ ಉಡುಪಿ ಉತ್ಸವದಲ್ಲಿ ನೀರೊಳಗಿನ ಮೀನು ಸುರಂಗ ಪ್ರದರ್ಶನ ಜನಾಕರ್ಷಣೆಯ ಕೇಂದ್ರವಾಗಿದೆ. ಇಲ್ಲಿ ಆಟವಾಡಲು ಇಟಾಲಿಯನ್ ಟೊರಾಟೊರಾ, ಡ್ರ್ಯಾಗನ್ ಕಾರ್, ತ್ರಿಡಿ ಸಿನಿಮಾ, ಜಾಯಿಂಟ್ ವ್ಹೀಲ್, ಡ್ರ್ಯಾಗನ್ ವ್ಹೀಲ್, ಬ್ರೇಕ್ ಡ್ಯಾನ್ಸ್, ಮಿನಿ ಟ್ರೈನ್, ಹಿಪ್ಟೋಸ್ಲೈಡ್, […]

ಅರಬ್ಬೀ ಸಮುದ್ರದಲ್ಲಿ ವಾಣಿಜ್ಯ ಹಡಗುಗಳ ಮೇಲೆ ದಾಳಿ ತಡೆಯಲು ಮೂರು ಯುದ್ದನೌಕೆಗಳನ್ನು ನಿಯೋಜಿಸಿದ ಭಾರತೀಯ ನೌಕಾಪಡೆ

ನವದೆಹಲಿ: ಭಾರತೀಯ ನೌಕಾಪಡೆಯ ಸ್ಫೋಟಕ ಸಶಸ್ತ್ರಪಡೆ ವಿಲೇವಾರಿ ತಂಡವು ಸೋಮವಾರ ಮುಂಬೈ ಬಂದರಿಗೆ ಆಗಮಿಸಿದ ವ್ಯಾಪಾರಿ ನೌಕೆ ಎಂವಿ ಕೆಮ್ ಪ್ಲುಟೊದ ವಿವರವಾದ ತಪಾಸಣೆ ನಡೆಸಿತು. ಭಾರತದ ಪಶ್ಚಿಮ ಕರಾವಳಿಯಲ್ಲಿ ಅರಬ್ಬೀ ಸಮುದ್ರದಲ್ಲಿ ಹೊಸ ಮಂಗಳೂರು ಬಂದರಿಗೆ ಈ ಹಡಗು ತೆರಳುತ್ತಿದ್ದಾಗ ಡ್ರೋನ್‌ನಿಂದ ದಾಳಿ ಮಾಡಿದ ಘಟನೆಯ ಎರಡು ದಿನಗಳ ನಂತರ ಈ ತಪಾಸಣೆ ನಡೆದಿದೆ. ಅರಬ್ಬೀ ಸಮುದ್ರದಲ್ಲಿ ವಾಣಿಜ್ಯ ಹಡಗುಗಳ ಮೇಲಿನ ದಾಳಿಗಳ ಹಿನ್ನೆಲೆಯಲ್ಲಿ, ಭಾರತೀಯ ನೌಕಾಪಡೆಯು ಕಣ್ಗಾವಲಿಗಾಗಿ P-8I ದೀರ್ಘ-ಶ್ರೇಣಿಯ ಗಸ್ತು ವಿಮಾನವನ್ನು ಮತ್ತು […]