ಕಲ್ಯಾಣಪುರ: 71 ವರ್ಷದ ವೃದ್ಧ ವ್ಯಕ್ತಿಯಿಂದ ಕ್ರಿಸ್ಮಸ್ ವಿಶೇಷ ಕಲಾಕೃತಿ
ಕಲ್ಯಾಣಪುರ: ಇಲ್ಲಿನ 71 ವರ್ಷದ ಓವೆನ್ ರೋಡಿಗ್ರೆಸ್ ಎಂಬವರು ಕಳೆದ ಹಲವು ವರ್ಷಗಳಿಂದ ನಿರಂತರವಾಗಿ ತಮ್ಮದೇ ಕಲ್ಪನೆಯಲ್ಲಿ ಏಸು ಕ್ರಿಸ್ತನ ಜನ್ಮದಿನವನ್ನು ಆಚರಿಸುತ್ತಿದ್ದಾರೆ. ಈ ಬಾರಿ ವಿಶೇಷ ಆಕರ್ಷಣೆಯಾಗಿ ರೈಲು ಬಂಡಿಯಲ್ಲಿ ಸಂತ ಮೋಟಿವ್ ರಚನೆ ಮಾಡಿದ್ದು ಇಲ್ಲಿನ ಧರ್ಮ ಗುರುಗಳು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಇವರ ಪ್ರತಿಭೆಯನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಕಳೆದ 10 ವರ್ಷಗಳಿಂದ ಥರ್ಮಾಕೋಲ್ ಶೀಟ್ ಬಳಸಿ ವಿವಿಧ ಬಣ್ಣ ಬಳಿದು ಏಸು ಕ್ರಿಸ್ತನ ಜೀವನ ಚರಿತ್ರೆಯ ಕಲಾಕೃತಿಗಳನ್ನು ಮನೆಯ ಆವರಣದಲ್ಲಿ ಪ್ರದರ್ಶಿಸಿದ್ದಾರೆ. […]
ದೂರದ ಅಮೇರಿಕಾದಲ್ಲಿ ಹೃದಯಾಘಾತದಿಂದ ಮೃತ ಪಟ್ಟ ಮಗ: 3 ಗಂಟೆಗಳಲ್ಲಿ ಹೆತ್ತವರ ಪಾಸ್ ಪೋರ್ಟ್ ನವೀಕರಿಸಿದ ಬೆಂಗಳೂರು ಪ್ರಾದೇಶಿಕ ಪಾಸ್ ಪೋರ್ಟ್ ಕಚೇರಿ
ಬೆಂಗಳೂರು: ದೂರದ ಅಮೇರಿಕಾದಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ಆಗಿದ್ದ ಮಗ ಹೃದಯಾಘಾತದಿಂದ ಮೃತಪಟ್ಟಿದ್ದು, ಬೆಂಗಳೂರಿನಲ್ಲಿದ್ದ ಆತನ ಹೆತ್ತವರಿಗೆ 3 ಗಂಟೆಗಳಲ್ಲಿ ಪಾಸ್ ಪೋರ್ಟ್ ನೀಡಿದ ಬೆಂಗಳೂರು ಪ್ರಾದೇಶಿಕ ಪಾಸ್ ಪೋರ್ಟ್ ಕಚೇರಿ ಕ್ಷಿಪ್ರ ಕಾರ್ಯಾಚರಣೆಗೆ ಮಾದರಿಯಾಗಿದೆ. 70 ವರ್ಷದ ಯಲಹಂಕಾ ನಿವಾಸಿಗಳಾದ ರಂಗರಾಜು ಮತ್ತು ಗೀತಾ ದಂಪತಿ ತಮ್ಮ ಪುತ್ರನ ಅಂತ್ಯಕ್ರಿಯೆ ನಡೆಸಲು ಬುಧವಾರ ಬೆಳಿಗ್ಗೆ ಕೆಐಎಎಲ್ ನಿಂದ ಟೆಕ್ಸಾಸ್ ಗೆ ಪ್ರಯಾಣಿಸಿದ್ದಾರೆ. ವೃದ್ಧ ದಂಪತಿಯ ಸಂಬಂಧಿ ಹಾಗೂ ಪಾಸ್ ಪೋರ್ಟ್ ಪಡೆಯಲು ಸಹಕರಿಸಿದ ಆರ್ ಎನ್ […]
ಫೆ.28 ರೊಳಗೆ ರಾಜಧಾನಿಯ ಎಲ್ಲ ವಾಣಿಜ್ಯ ಮಳಿಗೆಗಳಲ್ಲಿ ಶೇ. 60ರಷ್ಟು ಕನ್ನಡ ನಾಮಫಲಕ ಕಡ್ಡಾಯ: ಬಿಬಿಎಂಪಿ ನಿರ್ದೇಶನ
ಬೆಂಗಳೂರು: ನಗರದ ಆರ್ಟಿರಿಯಲ್ ಹಾಗೂ ಸಬ್ ಆರ್ಟಿರಿಯಲ್ ರಸ್ತೆಗಳಲ್ಲಿನ ವಾಣಿಜ್ಯ ಮಳಿಗೆಗಳ ಸಮೀಕ್ಷೆ ನಡೆಸಿ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಭಾಷೆ ಬಳಸದ ಅಂಗಡಿಗಳಿಗೆ ನೋಟಿಸ್ ಜಾರಿ ಮಾಡುವಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಅಧಿಕಾರಿಗಳಿಗೆ ಮಂಗಳವಾರ ಸೂಚನೆ ನೀಡಿದ್ದಾರೆ. ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಅನುಷ್ಠಾನಗೊಳಿಸುವ ಕುರಿತು ಮಂಗಳವಾರ ಸಭೆ ನಡೆಸಿ ನಗರದ ಎಲ್ಲಾ ಅಂಗಡಿ ಮುಂಗಟ್ಟುಗಳು, ಹೋಟೆಲ್ ಗಳು, ಮಾಲ್ ಸೇರಿದಂತೆ ಇನ್ನಿತರೆ […]
ಕೋವಿಡ್ ಪಾಸಿಟಿವ್ ರೋಗಿಗಳಿಗೆ ಏಳು ದಿನಗಳ ಹೋಮ್ ಐಸೋಲೇಶನ್ ಕಡ್ಡಾಯಗೊಳಿಸಿದ ರಾಜ್ಯ ಸರ್ಕಾರ
ಬೆಂಗಳೂರು: ಕರ್ನಾಟಕದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿದ್ದಂತೆ ರಾಜ್ಯ ಆರೋಗ್ಯ ಇಲಾಖೆಯು ಕೋವಿಡ್ ಪಾಸಿಟಿವ್ ರೋಗಿಗಳಿಗೆ ಏಳು ದಿನಗಳ ಹೋಮ್ ಐಸೋಲೇಶನ್ ಅನ್ನು ಕಡ್ಡಾಯಗೊಳಿಸಿದೆ. ಪ್ರಸ್ತುತ, ರಾಜ್ಯವು JN.1 ರೂಪಾಂತರದ 34 ಪ್ರಕರಣಗಳನ್ನು ಹೊಂದಿದೆ. ಸುದ್ದಿ ಸಂಸ್ಥೆ ಎ.ಎನ್.ಐ ಯೊಂದಿಗೆ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂ ರಾವ್, ಸರ್ಕಾರವು ಉತ್ತಮ ಸಿದ್ಧತೆಯನ್ನು ಹೊಂದಿದೆ ಮತ್ತು ಯಾವುದೇ “ಆತಂಕಕಾರಿ” ಬೆಳವಣಿಗೆ ಇಲ್ಲ ಎಂದು ಹೇಳಿದ್ದಾರೆ. 430 ಸಕ್ರಿಯ ಪ್ರಕರಣಗಳು ಪತ್ತೆಯಾಗಿದ್ದು, ಅವುಗಳಲ್ಲಿ 400 ಹೋಂ ಐಸೋಲೇಶನ್ ನಲ್ಲಿದೆ ಮತ್ತು […]
ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ರಾಜ್ಯ ಮಟ್ಟದ ಪ್ರಬಂಧ ಹಾಗೂ ಭಿತ್ತಿ ಚಿತ್ರ ರಚನೆ ಸ್ಪರ್ಧೆ
ಉಡುಪಿ: ರಾಷ್ಟ್ರೀಯ ಮತದಾರರ ದಿನಾಚರಣೆ -2024 ರ ಅಂಗವಾಗಿ ರಾಜ್ಯ ಮಟ್ಟದ ಕನ್ನಡ ಮತ್ತು ಆಂಗ್ಲ ಭಾಷೆಯಲ್ಲಿ ಪ್ರತ್ಯೇಕವಾಗಿ ಪ್ರಬಂಧ ಸ್ಪರ್ಧೆ ಹಾಗೂ ಭಿತ್ತಿ ಚಿತ್ರ ರಚನೆ ಸ್ಪರ್ಧೆಗಳನ್ನು ಡಿಸೆಂಬರ್ 28 ರಂದು ಬೆಳಗ್ಗೆ 11.30 ರಿಂದ ಮಧ್ಯಾಹ್ನ 1.30 ರ ವರೆಗೆ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಕಚೇರಿಯ K-SWAN ವೀಡಿಯೋ ಕಾನ್ಫ್ರೆನ್ಸ್ ಸಭಾಂಗಣದಲ್ಲಿ ಆಯೋಜಿಸಲಾಗುತ್ತಿದೆ. ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ಪ್ರೌಢಶಾಲೆ, ಪದವಿ ಪೂರ್ವ/ ಪಾಲಿಟೆಕ್ನಿಕ್/ ತತ್ಸಮಾನ ಹಾಗೂ ಪದವಿ/ ತಾಂತ್ರಿಕ/ವೈದ್ಯಕೀಯ […]