ಉದ್ಯಾನ ನಗರಿಯಲ್ಲಿ ಜ. 7 ರಂದು ರಾಜ್ಯ ಮಟ್ಟದ ಚೆಸ್ ಪಂದ್ಯಾವಳಿ
ಬೆಂಗಳೂರು: ನಗರದ ಪ್ರತಿಷ್ಠಿತ ಯೂನಿವರ್ಸಲ್ ಸ್ಕೂಲ್ ಆಫ್ ಅಡ್ಮಿನಿಸ್ಟ್ರೇಷನ್ ಯುನಿವರ್ಸಲ್ ಫಸ್ಟ್ ಏಜ್ ಮಕ್ಕಳ ರಾಜ್ಯ ಮಟ್ಟದ ಚೆಸ್ ಪಂದ್ಯಾವಳಿಯನ್ನು ಜನವರಿ 7 ರಂದು ಆಯೋಜಿಸಿದೆ. ಸುಮಾರು 400 ಉದಯೋನ್ಮುಖ ಚೆಸ್ ಆಟಗಾರರು ಈ ಪಂದ್ಯಾವಳಿಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ. ವಿವಿಧ ನಾಗರಿಕ ಸೇವಾ ಸ್ಪರ್ಧಾತ್ಮಕ ಪರೀಕ್ಷೆಗಳು ಮತ್ತು ರಾಷ್ಟ್ರೀಯ ಮಟ್ಟದ ಪ್ರವೇಶ ಪರೀಕ್ಷೆಗಳ ತರಬೇತಿಗೆ ಪ್ರಸಿದ್ದವಾಗಿರುವ ಯೂನಿವರ್ಸಲ್ ಸ್ಕೂಲ್ ಆಫ್ ಅಡ್ಮಿನಿಸ್ಟ್ರೇಷನ್ ಆಯೋಜಿಸುತ್ತಿರುವ ಈ ಚೆಸ್ ಪಂದ್ಯಾವಳಿ ಅಂದು ಬೆಳಿಗ್ಗೆ 9 ಗಂಟೆಗೆ ಪ್ರಾರಂಭವಾಗಲಿದೆ. ಪಂದ್ಯಾವಳಿಯ ಒಟ್ಟು […]
ಹರಿದ್ವಾರದ ಜಿಲ್ಲಾ ನ್ಯಾಯಾಲಯದ ಆವರಣದೊಳಕ್ಕೆ ನುಗ್ಗಿದ ಗಜರಾಜ: ಅನಿರೀಕ್ಷಿತ ಘಟನೆಯಿಂದ ಗಲಿಬಿಗೊಂಡ ಜನತೆ
ದೆಹರಾದೂನ್: ಉತ್ತರಾಖಂಡದ ಹರಿದ್ವಾರದಲ್ಲಿ ಬುಧವಾರ ಕಾಡಾನೆಯೊಂದು ನ್ಯಾಯಾಲಯದ ಆವರಣದೊಳಕ್ಕೆ ನುಗ್ಗಿದ್ದರಿಂದ ಕೋರ್ಟಿನಲ್ಲಿ ಗೊಂದಲ ಉಂಟಾಗಿದೆ. ಹರಿದ್ವಾರದ ರೋಶನಾಬಾದ್ ಪ್ರದೇಶದ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ಈ ಘಟನೆ ನಡೆದಿದೆ. ಕಾಡಾನೆಯು ಸಮೀಪದ ರಾಜಾಜಿ ಹುಲಿ ಸಂರಕ್ಷಿತಾರಣ್ಯದಿಂದ ನುಸುಳಿದೆ ಎಂದು ನಂಬಲಾಗಿದ್ದು, ಜಿಲ್ಲಾಧಿಕಾರಿಗಳ ಕಚೇರಿ ಮತ್ತು ನ್ಯಾಯಾಲಯದ ಆವರಣವನ್ನು ದಾಟಿ ಅವ್ಯವಸ್ಥೆಯನ್ನು ಸೃಷ್ಟಿಸಿದೆ. ಆನೆ ತನ್ನ ಅನಿರೀಕ್ಷಿತ ಭೇಟಿಯ ಸಮಯದಲ್ಲಿ ಗೇಟ್‌ಗಳನ್ನು ಮುರಿದು ಗೋಡೆಗೆ ಹಾನಿ ಮಾಡಿದೆ ಎಂದು ಪ್ರತ್ಯಕ್ಷದರ್ಶಿಗಳು ವರದಿ ಮಾಡಿದ್ದಾರೆ. ಅನಿರೀಕ್ಷಿತ ಪರಿಸ್ಥಿತಿಗೆ ಅಧಿಕಾರಿಗಳು ಶೀಘ್ರವಾಗಿ […]
ಜನಪ್ರಿಯ ತಮಿಳು ನಟ ವಿಜಯಕಾಂತ್ ನಿಧನ
ಚೆನ್ನೈ: ಡಿಎಂಡಿಕೆ ಸಂಸ್ಥಾಪಕ ನಾಯಕ ಮತ್ತು ಜನಪ್ರಿಯ ತಮಿಳು ನಟ ವಿಜಯಕಾಂತ್ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಗುರುವಾರ ಚೆನ್ನೈನಲ್ಲಿ ನಿಧನರಾದರು. ಅವರಿಗೆ 71 ವರ್ಷ ವಯಸ್ಸಾಗಿತ್ತು. ಪಕ್ಷದ ಅಧಿಕೃತ ಎಕ್ಸ್ ಹ್ಯಾಂಡಲ್‌ನಲ್ಲಿ ಪೋಸ್ಟ್ ಮೂಲಕ ವಿಜಯಕಾಂತ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಮತ್ತು ಉಸಿರಾಟದ ತೊಂದರೆಯಿಂದ ಬಳಲುತ್ತಿರುವ ನಂತರ ವೆಂಟಿಲೇಟರ್ ನಲ್ಲಿ ಇರಿಸಲಾಗಿದೆ ಎಂದು ಪಕ್ಷವು ತಿಳಿಸಿತ್ತು. ಅವರ ಪಾರ್ಥಿವ ಶರೀರವನ್ನು ಅವರ ನಿವಾಸಕ್ಕೆ ತರಲಾಗಿದ್ದು, ಶೀಘ್ರದಲ್ಲೇ ಡಿಎಂಡಿಕೆ ಕಚೇರಿಗೆ ಕೊಂಡೊಯ್ಯಲಾಗುವುದು. ‘ಕ್ಯಾಪ್ಟನ್’ ಎಂದು ವ್ಯಾಪಕವಾಗಿ ಕರೆಯಲ್ಪಡುವ ವಿಜಯಕಾಂತ್ […]
ಡಿ. 29-30 ರಂದು ಉಡುಪಿ ಆಟೋ ಎಕ್ಸ್‌ಪೋ-2023: ಬನ್ನಿ ಭಾಗವಹಿಸಿ… ಚಿನ್ನ ಗೆಲ್ಲುವ ಅವಕಾಶ ಪಡೆಯಿರಿ….
ಉಡುಪಿ: ಜಿಲ್ಲಾ ಆಟೋಮೊಬೈಲ್ ಡೀಲರ್ ಅಸೋಸಿಯೇಶನ್ ಮತ್ತು ಉಡುಪಿ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರೀಸ್ ಆಶ್ರಯದಲ್ಲಿ ಮಣಿಪಾಲ ಆಟೋ ಕ್ಲಬ್ ಸಹಕಾರದಲ್ಲಿ ಡಿ. 29 ಮತ್ತು 30ರಂದು ಬೆಳಗ್ಗೆ 8.30ರಿಂದ ರಾತ್ರಿ 8ರ ತನಕ ಎಂಜಿಎಂ ಕಾಲೇಜಿನ ಕ್ರೀಡಾಂಗಣದಲ್ಲಿ ‘ಉಡುಪಿ ಆಟೋ ಎಕ್ಸ್‌ಪೋ-2023’ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದ ವಿವರ: ಡಿ. 29ರಂದು ಬೆಳಗ್ಗೆ 10 ಗಂಟೆಗೆ ಕೇಂದ್ರ ಕೃಷಿ ಖಾತೆ ಸಹಾಯಕ ಸಚಿವೆ ಶೋಭಾ ಕರಂದ್ಲಾಜೆ ಎಕ್ಸ್‌ಪೋಗೆ ಚಾಲನೆ ನೀಡಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ‘ಭಾರತದಲ್ಲಿ ಆಟೋಮೋಬೈಲ್’ […]
ಉಡುಪಿ: ತಾಲೂಕು ಸಾಹಿತ್ಯ ಸಮ್ಮೇಳನ ಉದ್ಘಾಟಕರಾಗಿ ಡಾ. ನಾ ಸೋಮೇಶ್ವರ ಭಾಗಿ
ಉಡುಪಿ: ಉಡುಪಿ ತಾಲೂಕು 14ನೇ ಕನ್ನಡ ಸಾಹಿತ್ಯ ಸಮ್ಮೇಳನ ಡಿ. 30 ರಂದು ಮಣಿಪಾಲದ ಶಿವಪಾಡಿ ದೇವಸ್ಥಾನದ ರಮಾನಂದ ಸ್ಮೃತಿ ಮಂಟಪದಲ್ಲಿ ನಡೆಯಲಿದ್ದು, ಉದ್ಘಾಟನಾ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಕನ್ನಡದ ಹಿರಿಯ ಸಾಹಿತಿ, ದೂರದರ್ಶನದ ‘ಥಟ್ ಅಂತ ಹೇಳಿ’ ಕಾರ್ಯಕ್ರಮದ ನಿರೂಪಕ ಡಾ. ನಾ ಸೋಮೇಶ್ವರ ಅವರು ಆಗಮಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.