ಮೈಸೂರು ಸಾಹಸಸಿಂಹ ಡಾಕ್ಟರ್ ವಿಷ್ಣುವರ್ಧನ್ ಅವರ 14 ನೇ ವರ್ಷದ ಪುಣ್ಯಸ್ಮರಣೆ
ಮೈಸೂರು: ಕನ್ನಡ ಸಿನಿಮಾರಂಗದ ಮೇರುನಟ, ಸಾಹಸಸಿಂಹ ಡಾಕ್ಟರ್ ವಿಷ್ಣುವರ್ಧನ್ ಅವರು ನಮ್ಮನ್ನು ಅಗಲಿ 14 ವರ್ಷಗಳು ಕಳೆದಿವೆ. ಡಾ. ವಿಷ್ಣುವರ್ಧನ್ ಅವರ 14 ನೇ ವರ್ಷದ ಪುಣ್ಯಸ್ಮರಣೆ ಬೆಂಗಳೂರು ಹಾಗೂ ಮೈಸೂರಿನಲ್ಲಿ ನಡೆಯಿತು. ರಾಜ್ಯದ ವಿವಿಧ ಭಾಗಗಳಲ್ಲಿ ಅಭಿಮಾನಿಗಳು ವಿಷ್ಣುದಾದಾ ಹೆಸರಿನಲ್ಲಿ ಅನ್ನದಾನ, ರಕ್ತದಾನ ಶಿಬಿರಗಳನ್ನು ಆಯೋಜಿಸಿದರು. ವಿಷ್ಣು ಅವರ ಅಂತ್ಯಕ್ರಿಯೆ ನಡೆದ ಅಭಿಮಾನ್ ಸ್ಟುಡಿಯೋದಲ್ಲಿ ದಾದಾನ ಅಭಿಮಾನಿಗಳು ವಿಶೇಷ ಪೂಜೆ ನೆರವೇರಿಸಿದ್ದಾರೆ. ಪುಣ್ಯತಿಥಿ ಅಂಗವಾಗಿ ಹಲವು ಕಡೆಗಳಲ್ಲಿ ರಕ್ತದಾನ, ನೇತ್ರದಾನ, ಅನ್ನದಾನ ಮುಂತಾದ ಸಾಮಾಜಿಕ ಕೆಲಸಗಳನ್ನು […]
ಬೈಂದೂರು: ರಾಜ್ಯ ಸರ್ಕಾರಿ ನಿವೃತ್ತ ನೌಕರರ ಉಚಿತ ಆರೋಗ್ಯ ತಪಾಸಣೆ ಕಾರ್ಯಕ್ರಮ
ಬೈಂದೂರು: ಕರ್ನಾಟಕ ರಾಜ್ಯ ಸರಕಾರಿ ನಿವೃತ್ತ ನೌಕರರ ಸಂಘ ಬೈಂದೂರು ತಾಲ್ಲೂಕು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಮುದಾಯ ಆರೋಗ್ಯ ಕೇಂದ್ರ ಬೈಂದೂರು ಸಹಯೋಗದೊಂದಿಗೆ ಬೈಂದೂರಿನಲ್ಲಿ ನಿವೃತ್ತ ನೌಕರರಿಗೆ ರಕ್ತ ತಪಾಸಣೆ ಮತ್ತು ಗುಂಪು ವರ್ಗೀಕರಣ, ಸಿಹಿಮೂತ್ರ ತಪಾಸಣೆ, ರಕ್ತದೊತ್ತಡ ತಪಾಸಣೆ, ಮತ್ತಿತರ ರೋಗ ತಪಾಸಣೆ ನಡೆಸಿ ಸೂಕ್ತ ಚಿಕಿತ್ಸೆ ಮತ್ತು ಆರೋಗ್ಯ ಸಲಹೆ ನೀಡಲಾಯಿತು. ಆಡಳಿತ ವೈದ್ಯಾಧಿಕಾರಿ ಡಾ.ರಾಜೇಶ್ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿ ನಿವೃತ್ತ ನೌಕರರು ತಮ್ಮ ಆರೋಗ್ಯಕದ ಕಡೆಗೆ ಲಕ್ಷವಿಡಬೇಕು […]
ಉಡುಪಿ: ಟ್ಯಾಂಕರ್ ಢಿಕ್ಕಿ – ಪಾದಚಾರಿಯೋರ್ವ ಸ್ಥಳದಲ್ಲೇ ಮೃತ್ಯು
ಉಡುಪಿ: ಟ್ಯಾಂಕರ್ ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಉದ್ಯಾವರದಲ್ಲಿ ನಿನ್ನೆ ರಾತ್ರಿ ನಡೆದಿದೆ. ಮೃತರನ್ನು ಉಡುಪಿ ಕಲ್ಲೂರು ನಿವಾಸಿ ಜಯ ದೇವಾಡಿಗ (64) ಎಂದು ಗುರುತಿಸಲಾಗಿದೆ. ಇವರು ಪಿತ್ರೋಡಿಯ ಹೋಲೋ ಬ್ಲಾಕ್ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಇಂದು ಸಂಜೆ ಕೆಲಸ ಮುಗಿಸಿ ಭಗವತಿ ಹಾರ್ಡ್‌ವೇರ್ ಮುಂಭಾಗದಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಉಡುಪಿ ಕಡೆಗೆ ತೆರಳುತ್ತಿದ್ದ ಟ್ಯಾಂಕರ್ ಡಿಕ್ಕಿ ಹೊಡೆದಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಉಡುಪಿ: ಖ್ಯಾತ ಛಾಯಾಗ್ರಾಹಕ ಗಣೇಶ್ ಶೆಟ್ಟಿ ಕೀಳಂಜೆ ನಿಧನ
ಉಡುಪಿ: ಉಡುಪಿಯ ಖ್ಯಾತ ಛಾಯಾಗ್ರಾಹಕ ಗಣೇಶ್ ಶೆಟ್ಟಿ ಕೀಳಂಜೆ ಅವರು ಅಲ್ಪಕಾಲದ ಅಸೌಖ್ಯದಿಂದ ನಿಧನ ಹೊಂದಿದರು. ಅವರಿಗೆ 46 ವಯಸ್ಸಾಗಿತ್ತು. ಹಾವಂಜೆ ಗ್ರಾಮದ ಕೀಳಂಜೆಯ ನಿವಾಸಿ ಆಗಿರುವ ಗಷೇಶ್ ಅವರು, ಉಡುಪಿ ಕಾಂಗ್ರೆಸ್ ಮುಖಂಡ ಜಯಶೆಟ್ಟಿ ಬನ್ನಂಜೆ ಸಹೋದರರಾಗಿದ್ದಾರೆ. ಮೃತರು ಪತ್ನಿ ಹಾಗೂ ಪುತ್ರಿ ರಾಷ್ಟೀಯ ಕರಾಟೆಪಟು ರಿಯಾ ಜಿ ಶೆಟ್ಟಿ ಅವರನ್ನು ಅಗಲಿದ್ದಾರೆ. ಛಾಯಾಗ್ರಾಹಕರಾಗಿ ಹೆಚ್ಚಿನ ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡಿದ್ದಾರೆ.