ಅಯೋಧ್ಯೆ ರಾಮ ಮಂದಿರ ಲೋಕಾರ್ಪಣೆ: ರಾಜ್ಯ ಸರಕಾರ ಜನವರಿ 22 ರಂದು ಸಾರ್ವತ್ರಿಕ ರಜೆ ಘೋಷಣೆ ಮಾಡುವಂತೆ ಮುಖ್ಯಮಂತ್ರಿಗಳಿಗೆ ಉಡುಪಿ ಯಶ್ ಪಾಲ್ ಸುವರ್ಣ ಮನವಿ

ಉಡುಪಿ: ಸಮಸ್ತ ಹಿಂದೂಗಳ ಶ್ರದ್ಧಾ ಕೇಂದ್ರವಾಗಿ 500 ವರ್ಷಗಳ ಕನಸು ನನಸಾಗುವ ಸಮಸ್ತ ಭಾರತೀಯರ ಪಾಲಿಗೆ ಅತ್ಯಂತ ಪವಿತ್ರ ದಿನವಾಗಿ ಅಯೋಧ್ಯೆ ಶ್ರೀ ರಾಮ ಮಂದಿರದ ಲೋಕಾರ್ಪಣೆಯ ಭಾವನಾತ್ಮಕ ಐತಿಹಾಸಿಕ ಕ್ಷಣವನ್ನು ಮನೆ ಮನಗಳಲ್ಲಿ ಆಚರಿಸಲು ಜನವರಿ 22 ರಂದು ಸಾರ್ವತ್ರಿಕ ರಜೆ ಘೋಷಣೆ ಮಾಡುವಂತೆ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯರವರಿಗೆ ಉಡುಪಿ ಶಾಸಕ ಶ್ರೀ ಯಶ್ ಪಾಲ್ ಸುವರ್ಣ ಮನವಿ ಮಾಡಿದ್ದಾರೆ. ಜನವರಿ 22 ರಂದು ಪ್ರಧಾನಿ ಶ್ರೀ ನರೇಂದ್ರ ಮೋದಿಯವರ ಉಪಸ್ಥಿತಿಯಲ್ಲಿ ಶ್ರೀ ರಾಮ ದೇವರ […]

ಹಿರಿಯಡಕ: ಅಪರಿಚಿತ ವಾಹನ ಢಿಕ್ಕಿ – ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತ್ಯು

ಹಿರಿಯಡಕ: ಉಡುಪಿ ಜಿಲ್ಲೆಯ ಹಿರಿಯಡಕ ಅಂಜಾರು ಶೇಡಿಗುರಿ ಎಂಬಲ್ಲಿ ವ್ಯಕ್ತಿಯೊಬ್ಬರು ರಸ್ತೆಯ ಬದಿಯಲ್ಲಿ ನಡೆದುಕೊಂಡು ಹೋಗುವಾಗ ಅಪರಿಚಿತ ವಾಹನ ಢಿಕ್ಕಿ ಹೊಡೆದು ಪರಾರಿಯಾಗಿದೆ. ಅದರ ಪರಿಣಾಮ ಆ ವ್ಯಕ್ತಿಯು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಮೃತಪಟ್ಟ ವ್ಯಕ್ತಿ ನಾರಾಯಣ ಎಂದು ತಿಳಿಯಲಾಗಿದೆ. ಪಾದಚಾರಿಗೆ ಅಪರಿಚಿತ ವಾಹನ ಅತೀವೇಗದಲ್ಲಿ ಬಂದು ಢಿಕ್ಕಿ ಹೊಡೆದು ಪರಾರಿಯಾಗಿದ್ದು, ಆದರೆ ಢಿಕ್ಕಿಯಾದ ರಭಸದಲ್ಲಿ ಆ ವ್ಯಕ್ತಿಯ ತಲೆ ನುಜ್ಜುಗುಜ್ಜಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಘಟನೆ ಸ್ಥಳಕ್ಕೆ ಹಿರಿಯಡಕ ಪೊಲೀಸರು ಭೇಟಿ ನೀಡಿ […]

ಮಲ್ಪೆ: ಸಿರಿಧಾನ್ಯಗಳ ಬಳಕೆಯಿಂದ ಉತ್ತಮ ಆರೋಗ್ಯ – ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ: ಸಿರಿಧಾನ್ಯಗಳು ಉತ್ತಮ ಪೋಷಕಾಂಶಗಳನ್ನು ಹೊಂದುವುದರ ಜೊತೆಗೆ ಆರೋಗ್ಯ ಸಮಸ್ಯೆಗಳನ್ನು ನಿವಾರಿಸುವ ಶಕ್ತಿಯನ್ನು ಹೊಂದಿವೆ. ಇವುಗಳ ಬಳಕೆಯಿಂದ ಜನಸಾಮಾನ್ಯರು ಉತ್ತಮ ಆರೋಗ್ಯ ಹೊಂದಲು ಸಾಧ್ಯ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ತಿಳಿಸಿದರು. ಅವರು ರವಿವಾರ ಮಲ್ಪೆ ಕಡಲ ತೀರದಲ್ಲಿ ಜಿಲ್ಲಾಡಳಿತ, ಜಿಲ್ಲ ಪಂಚಾಯತ್, ಕೃಷಿ ಇಲಾಖೆ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಹಯೋಗದೊಂದಿಗೆ ಅಂತರಾಷ್ಟ್ರೀಯ ಸಿರಿಧಾನ್ಯ ಮತ್ತು ಸಾವಯವ ಮೇಳ – 2024 ರ ಅಂಗವಾಗಿ ಗ್ರಾಹಕರಲ್ಲಿ ಮುಂದಿನ ಪೀಳಿಗೆಗೆ […]

ಉಡುಪಿ: ಹಾವೇರಿ ಮೂಲದ ವ್ಯಕ್ತಿ ನಾಪತ್ತೆ.

ಉಡುಪಿ: ಮೂಲತಃ ಹಾವೇರಿ ಜಿಲ್ಲೆ ಹಾನ್‌ಗಲ್ ತಾಲೂಕು ಕುಂಬಾರಿ ಓಣಿ ನಿವಾಸಿಯಾದ ಹುಲಗೆಪ್ಪ ಬಂಗಾರಿ (32) ಎಂಬ ವ್ಯಕ್ತಿಯು ಕೆಲಸಕ್ಕಾಗಿ ಕಟಪಾಡಿಗೆ ಬಂದಿದ್ದು, ಅಕ್ಟೋಬರ್ 12 ರಿಂದ ನಾಪತ್ತೆಯಾಗಿರುತ್ತಾರೆ. 5 ಅಡಿ 10 ಇಂಚು ಎತ್ತರ, ಎಣ್ಣೆ ಕಪ್ಪು ಮೈ ಬಣ್ಣ ಹೊಂದಿದ್ದು, ಕನ್ನಡ ಮತ್ತು ಹಿಂದಿ ಭಾಷೆ ಮಾತನಾಡುತ್ತಾನೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕಾಪು ಪೊಲೀಸ್ ಠಾಣೆ ದೂ.ಸಂಖ್ಯೆ: 0820-2551033, ಕಾಪು ವೃತ್ತ ನಿರೀಕ್ಷಕರ ಕಛೇರಿ ದೂ.ಸಂಖ್ಯೆ: 0820-2572333, ಪೊಲೀಸ್ ಉಪಾಧೀಕ್ಷಕರ ಕಛೇರಿ ದೂ.ಸಂಖ್ಯೆ: […]

ವಿಶ್ವಕರ್ಮ ಅಮರ ಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ

ಉಡುಪಿ: ಅಮರಶಿಲ್ಪಿ ಜಕಣಾಚಾರಿ ಅವರು ತಮ್ಮ ಕೈಚಳಕದ ಮೂಲಕ ಕೆತ್ತನೆ ಮಾಡಿದ ಶಿಲ್ಪ ಕಲಾಕೃತಿಗಳು ಇಂದು ಇಡೀ ವಿಶ್ವದ ಪ್ರವಾಸಿಗರ ಗಮನ ಸೆಳೆಯುತ್ತಿದ್ದು, ದೇಶದ ಅಭಿವೃದ್ಧಿಗೆ ವಿಶ್ವಕರ್ಮರ ಕೊಡುಗೆ ಅಪಾರ ಎಂದು ಶಾಸಕ ಯಶ್ ಪಾಲ್. ಎ ಸುವರ್ಣ ಹೇಳಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ವಿಶ್ವಕರ್ಮ […]