ಡಾ.ತಲ್ಲೂರು ಶಿವರಾಮ ಶೆಟ್ಟಿ ಅವರಿಗೆ ‘ವಿಶ್ವೇಶ್ವರಯ್ಯ ರಾಷ್ಟ್ರೀಯ ಸಾಹಿತ್ಯ ಪ್ರಶಸ್ತಿ’ ಪ್ರದಾನ

ಉಡುಪಿ: ಬೆಂಗಳೂರಿನ ಭಾರತರತ್ನ ಸರ್. ಎಂ. ವಿಶ್ವೇಶ್ವರಯ್ಯ ಇಂಜೀನಿಯರಿಂಗ್ ಪ್ರತಿಷ್ಠಾನ ಟ್ರಸ್ಟ್ ವತಿಯಿಂದ ಸಮಗ್ರ ಸಾಹಿತ್ಯ ಸೇವೆ ಮತ್ತು ಜೀವಮಾನ ಸಾಧನೆಗಾಗಿ ಕೊಡಮಾಡುವ ಪ್ರತಿಷ್ಠಿತ ‘ವಿಶ್ವೇಶ್ವರಯ್ಯ ರಾಷ್ಟ್ರೀಯ ಸಾಹಿತ್ಯ ಪ್ರಶಸ್ತಿ’ ಯನ್ನು ಉಡುಪಿಯ ತಲ್ಲೂರು ಫ್ಯಾಮಿಲಿ ಟ್ರಸ್ಟಿನ ಪ್ರವರ್ತಕ ಹಾಗೂ ಲೇಖಕರೂ ಆಗಿರುವ ಡಾ.ತಲ್ಲೂರು ಶಿವರಾಮ ಶೆಟ್ಟಿ ಅವರಿಗೆ ಶನಿವಾರ ಪ್ರದಾನ ಮಾಡಲಾಯಿತು. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ಪಕ್ಕದ ಸಂಸ ಬಯಲು ರಂಗಮಂದಿರದಲ್ಲಿ ನಡೆದ ಕೆಂಪೇಗೌಡ ಕರ್ನಾಟಕ ಪ್ರಾದೇಶಿಕ ಸಾಂಸ್ಕೃತಿಕ ಕಲಾ ಉತ್ಸವದ ಸಂದರ್ಭದಲ್ಲಿ ಈ ಪ್ರಶಸ್ತಿ […]

ಉಡುಪಿ: ಶಿಕ್ಷಣ ಸಚಿವ ಮಧು ಬಂಗಾರಪ್ಪ ರಾಜೀನಾಮೆಗೆ ಆಗ್ರಹಿಸಿ ABVP ಪ್ರತಿಭಟನೆ

ಉಡುಪಿ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಉಡುಪಿ ನಗರ ವತಿಯಿಂದ ಚೆಕ್ ಬೌನ್ಸ್ ವಂಚನೆ ಪ್ರಕರಣದಲ್ಲಿ ಶಿಕ್ಷೆಗೆ ಒಳಗಾಗಿರುವ ಶಿಕ್ಷಣ ಸಚಿವ ಮಧುಬಂಗಾರಪ್ಪ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಅಜ್ಜರಕಾಡಿನ ಹುತಾತ್ಮರ ಸ್ಮಾರಕದ ಬಳಿ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾ ಸಂಚಾಲಕರಾದ ಗಣೇಶ್ ಪೂಜಾರಿ ಮಾತನಾಡಿ ಭಾರತದ ಎಲ್ಲಾ ಸಮಸ್ಯೆಗಳಿಗೆ ಶಿಕ್ಷಣವೊಂದೇ ಪರಿಹಾರ ಎಂದು ನಂಬಿರುವ ನಾವುಗಳು ನ್ಯಾಯಾಲಯದಿಂದ ಶಿಕ್ಷೆಗೆ ಒಳಗಾಗಿರುವ ವ್ಯಕ್ತಿ ಶಿಕ್ಷಣ ಸಚಿವನಾಗಿ ಮುಂದುವರೆಯುವುದು ವಿಪರ್ಯಾಸದ ಸಂಗತಿ ಎಂದು ಹೇಳಿದರು. ನಗರ ಕಾರ್ಯದರ್ಶಿ […]

ಕುಂದಾಪುರ: ವಿಪರೀತ ಮಾತ್ರೆ ಸೇವನೆ – ಯುವಕ ಸಾವು.

ಕುಂದಾಪುರ: ಕುಂದಾಪುರ ತಾಲೂಕಿನ ಹಂಗಳೂರಿನಲ್ಲಿ ಮೂರ್ಛ ರೋಗಕ್ಕೆ ವಿಪರೀತ ಮಾತ್ರೆ ಸೇವಿಸಿ, ಅಸ್ವಸ್ಥಗೊಂಡಿದ್ದ ಸಚಿನ್(27) ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ ಘಟನೆ ನಡೆದಿದೆ. ಮೂರ್ಛ ರೋಗದಿಂದ ಬಳಲುತ್ತಿದ್ದ ಅವರು ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ. ಡಿಸೆಂಬರ್ 29ರಂದು ವಿಪರೀತ ಮಾತ್ರೆ ತೆಗೆದುಕೊಂಡಿದ್ದ ಅವರನ್ನು ಮಂಗಳೂರಿನ ವೆಸ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ಅವರ ಮಾವ ರಾಜು ನೀಡಿದ ದೂರಿನಂತೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಿಟ್ ಎಂಡ್ ರನ್ ಕಾನೂನು: ರಸ್ತೆ ತಡೆ ನಡೆಸಿ ವಿರೋಧ ವ್ಯಕ್ತಪಡಿಸುತ್ತಿರುವ ಟ್ರಕ್ ಚಾಲಕರು

ನವದೆಹಲಿ: ಭಾರತೀಯ ದಂಡ ಸಂಹಿತೆಯನ್ನು ಬದಲಿಸಲಿರುವ ಹೊಸ ಭಾರತೀಯ ನ್ಯಾಯ ಸಂಹಿತೆಯಡಿ, ನಿರ್ಲಕ್ಷ್ಯದ ಚಾಲನೆಯಿಂದ ಗಂಭೀರವಾದ ರಸ್ತೆ ಅಪಘಾತವನ್ನು ಉಂಟುಮಾಡಿ ಓಡಿಹೋಗುವ(ಹಿಟ್ ಎಂಡ್ ರನ್ ಪ್ರಕರಣ) ಚಾಲಕರಿಗೆ 10 ವರ್ಷಗಳವರೆಗೆ ಶಿಕ್ಷೆ ವಿಧಿಸುವ ನಿಬಂಧನೆಯನ್ನು ಸೇರಿಸಲಾಗಿದೆ. ಈ ಕಾನೂನನ್ನು ವಿರೋಧಿಸಿ ದೇಶದ ಹಲವು ರಾಜ್ಯಗಳಲ್ಲಿ ಟ್ರಕ್‌ಗಳು ಮತ್ತು ಟ್ಯಾಂಕರ್‌ಗಳು ಸೇರಿದಂತೆ ವಾಣಿಜ್ಯ ವಾಹನಗಳ ಚಾಲಕರು ವಿರೋಧ ವ್ಯಕ್ತಪಡಿಸಿದ್ದಾರೆ. ಹೊಸ ಕಾನೂನಿನ ಪ್ರಕಾರ, ಹಿಟ್ ಎಂಡ್ ರನ್ ಪ್ರಕರಣಗಳಿಗೆ 10 ವರ್ಷಗಳ ಜೈಲು ಶಿಕ್ಷೆ ಮತ್ತು 7 ಲಕ್ಷ […]

ಮಲ್ಪೆ: ಮೀನುಗಾರನೋರ್ವ ಸ್ಕೂಟರ್ ಸಮೇತ ಬಂದರಿನ ನೀರಿಗೆ ಬಿದ್ದು ಸಾವು..!

ಮಲ್ಪೆ: ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಆಕಸ್ಮಿಕವಾಗಿ ಮೀನುಗಾರನೋರ್ವ ಸ್ಕೂಟರ್ ಸಮೇತ ದಕ್ಕೆ ನೀರಿಗೆ ಬಿದ್ದ ಘಟನೆ ನಡೆದಿದೆ. ನೀರಿಗೆ ಬಿದ್ದ ವ್ಯಕ್ತಿ ಮುಳುಗಡೆಗೊಂಡು ಕಣ್ಮರೆಯಾಗಿದ್ದರು. ಇವರು ತಮಿಳುನಾಡು ಮೂಲದ ಮೀನುಗಾರನಾಗಿದ್ದು, ಮಲ್ಪೆಯ ಬೋಟು ಒಂದರಲ್ಲಿ ಕಾರ್ಮಿಕನಾಗಿ ದುಡಿಯುತ್ತಿದ್ದರು. ನೀರಿಗೆ ಬಿದ್ದ ಮಾಹಿತಿ ತಿಳಿದು ತತ್‌ಕ್ಷಣ ಈಶ್ವ‌ರ್ ಮಲ್ಪೆ ಅವರು ಧಾವಿಸಿ ಬಂದು ನೀರಿಗೆ ಧುಮುಕಿ ಎಲ್ಲ ಕಡೆ ಜಾಲಾಡಿದರೂ ಆತನ ದೇಹ ಸಿಕ್ಕಿರಲಿಲ್ಲ. ಆದರೆ ಆತನ ಸ್ಕೂಟರ್ ಪತ್ತೆಯಾಗಿದ್ದು ಹಗ್ಗದ ಸಹಾಯದಿಂದ ಮೇಲಕ್ಕೆತ್ತಲಾಯಿತು. ಇಂದು ಮೀನುಗಾರನ ಮೃತದೇಹ […]