ಕಸ್ತೂರ್ಬಾ ಆಸ್ಪತ್ರೆಯ ಕಾರ್ಪೊರೇಟ್ ಕ್ರಿಕೆಟ್ ಲೀಗ್ (ಕೆಎಚ್ – ಸಿಸಿಎಲ್) 2024ರ ಜರ್ಸಿ ಬಿಡುಗಡೆ

ಮಣಿಪಾಲ: ಕಸ್ತೂರ್ಬಾ ಹಾಸ್ಪಿಟಲ್ ಕಾರ್ಪೊರೇಟ್ ಕ್ರಿಕೆಟ್ ಲೀಗ್ (KH-CCL) ನ 3 ನೇ ಆವೃತ್ತಿಯು ಜನವರಿ 5 ರಿಂದ ಜನವರಿ 07 ರವರೆಗೆ ಎಂಡ್ ಪಾಯಿಂಟ್ ಮೈದಾನ, ಮಾಹೆ ಮಣಿಪಾಲದಲ್ಲಿ ನಡೆಯಲಿದೆ. ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಿಂದ ಆಯೋಜಿಸಲ್ಪಟ್ಟಿರುವ ಈ ಕ್ರಿಕೆಟ್ ಲೀಗ್ ಕಾರ್ಪೊರೇಟ್ ಕಂಪನಿಗಳು, ಬ್ಯಾಂಕ್‌ಗಳು, ವೈದ್ಯಕೀಯ ಸಂಘಗಳು, ಆಸ್ಪತ್ರೆಗಳು ಮತ್ತು ಮಾಧ್ಯಮ ಪಾಲುದಾರರನ್ನು ಪೂರೈಸುತ್ತದೆ. ಈ ಕಾರ್ಯಕ್ರಮಕ್ಕೆ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಗುರುರಾಜ ಗಂಟಿಹೊಳೆ ಅವರು ಆಟಗಾರರ ಜರ್ಸಿಯನ್ನು ಅಧಿಕೃತವಾಗಿ ಬಿಡುಗಡೆ ಮಾಡಿದರು. […]

ಉಡುಪಿ: ಯುವನಿಧಿ ಯೋಜನೆಗೆ ಸೇವಾಸಿಂಧು ಮೂಲಕ ಅರ್ಜಿ ಸಲ್ಲಿಸಿ ಯೋಜನೆಯ ಲಾಭ ಪಡೆಯಿರಿ – ಜಿಲ್ಲಾಧಿಕಾರಿ

ಉಡುಪಿ: ಸರ್ಕಾರದ ಮಹತ್ತರ ಯೋಜನೆಯಾದ ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭಗೊಂಡಿದ್ದು, 2022-23 ನೇ ಸಾಲಿನಲ್ಲಿ ಪದವಿ ಅಥವಾ ಡಿಪ್ಲೋಮಾ ಪಡೆದವರು ಸೇವಾ ಸಿಂಧು ಮೂಲಕ ಜಾಲತಾಣದಲ್ಲಿ ಅರ್ಜಿ ಸಲ್ಲಿಸಿ ಇದರ ಲಾಭ ಪಡೆಯಬಹುದಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಇಂದು ವರ್ಚುವಲ್ ಮೂಲಕ ಜಿಲ್ಲೆಯಲ್ಲಿ ಯುವನಿಧಿ ಯೋಜನೆಯ ಅನುಷ್ಠಾನಗೊಳಿಸುವ ಕುರಿತು ಏರ್ಪಡಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಲ್ಲಿ ಒಂದಾದ ಯುವನಿಧಿ ಯೋಜನೆ ಯುವ ಜನತೆಯ […]

ಉಡುಪಿ: ಪಿಜಿಯೊಂದರಲ್ಲಿ ವಾಸವಾಗಿದ್ದ ಯುವತಿ ನಾಪತ್ತೆ

ಉಡುಪಿ: ಉಡುಪಿ ತಾಲೂಕು 76 ಬಡಗಬೆಟ್ಟು ಗ್ರಾಮದ ಪಿಜಿಯೊಂದರಲ್ಲಿ ವಾಸವಾಗಿದ್ದ ಯೋಗಿತಾ (20) ಎಂಬ ಯುವತಿಯು ಜನವರಿ 2 ರಂದು ಪಿಜಿಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 157 ಸೆಂ.ಮೀ ಎತ್ತರ, ಎಣ್ಣೆಕಪ್ಪು ಮೈಬಣ್ಣ, ದಪ್ಪ ಮೈಕಟ್ಟು, ದುಂಡುಮುಖ ಹೊಂದಿದ್ದು, ಕನ್ನಡ ಮತ್ತು ತೆಲುಗು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಹೆಚ್ಚಿನ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

ಉಡುಪಿ: ಕೊರಂಗ್ರಪಾಡಿ ಗ್ರಾಮದ ನಿವಾಸಿ ನಾಪತ್ತೆ

ಉಡುಪಿ: ಉಡುಪಿ ತಾಲೂಕು ಕೊರಂಗ್ರಪಾಡಿ ಗ್ರಾಮದ ನಿವಾಸಿ ಪ್ರಸನ್ನ (43) ಎಂಬ ವ್ಯಕ್ತಿಯು 2021 ರ ಅಕ್ಟೋಬರ್ 26 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ ಎತ್ತರ, ಸಪೂರ ಮೈಕಟ್ಟು, ಗೋಧಿ ಮೈಬಣ್ಣ, ಕೋಲು ಮುಖ ಹೊಂದಿದ್ದು, ಕನ್ನಡ, ತುಳು ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಹೆಚ್ಚಿನ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಉಡುಪಿ ನಗರ ಪೊಲೀಸ್ ನಿರೀಕ್ಷಕರ ಪ್ರಕಟಣೆ ತಿಳಿಸಿದೆ.

ಹಲವು ವೈವಿಧ್ಯತೆಗಳಿಗೆ ಸಾಕ್ಷಿಯಾದ “ಉಡುಪಿ ಉತ್ಸವ”

ಉಡುಪಿ: ನ್ಯಾಶನಲ್ ಕನ್ಸ್ಯೂಮರ್ ಫೇರ್ (ಎನ್ ಸಿಎಫ್) ವತಿಯಿಂದ ಕರಾವಳಿ ಬೈಪಾಸ್ ಬಳಿಯ ರಾ.ಹೆ. 66ರ ಸನಿಹದ ಶಾರದಾ ಹೋಟೆಲ್ ಸಮೀಪದ 10 ಎಕರೆ ವಿಶಾಲವಾದ ಜಾಗದಲ್ಲಿ ಆರಂಭಗೊಂಡ ಬೃಹತ್ ವಸ್ತು ಪ್ರದರ್ಶನ, ಮನೋರಂಜನೆ, ಸಾಂಸ್ಕೃತಿಕ ಮೇಳಗಳನ್ನು ಒಳಗೊಂಡ ಉಡುಪಿ ಉತ್ಸವದಲ್ಲಿ ನೀರೊಳಗಿನ ಮೀನು ಸುರಂಗ ಪ್ರದರ್ಶನ ಜನಾಕರ್ಷಣೀಯ ಕೇಂದ್ರ ಬಿಂದುವಾಗಿದೆ. ಇಲ್ಲಿ ಆಟವಾಡಲು ಇಟಾಲಿಯನ್ ಟೊರಾಟೊರಾ, ಡ್ರ್ಯಾಗನ್ ಕಾರ್, ತ್ರಿಡಿ ಸಿನಿಮಾ, ಜಾಯಿಂಗ್ ವ್ಹೀಲ್, ಡ್ರ್ಯಾಗನ್ ವ್ಹೀಲ್, ಬ್ರೇಕ್ ಡ್ಯಾನ್ಸ್, ಮಿನಿ ಟ್ರೈನ್, ಹಿಪ್ಟೋಸ್ಲೈಡ್, ಸಿಗ್ […]