ಡಾ.ತಲ್ಲೂರು ಶಿವರಾಮ ಶೆಟ್ಟಿ ಅವರಿಗೆ ‘ವಿಶ್ವೇಶ್ವರಯ್ಯ ರಾಷ್ಟ್ರೀಯ ಸಾಹಿತ್ಯ ಪ್ರಶಸ್ತಿ’ ಪ್ರದಾನ
ಉಡುಪಿ: ಬೆಂಗಳೂರಿನ ಭಾರತರತ್ನ ಸರ್. ಎಂ. ವಿಶ್ವೇಶ್ವರಯ್ಯ ಇಂಜೀನಿಯರಿಂಗ್ ಪ್ರತಿಷ್ಠಾನ ಟ್ರಸ್ಟ್ ವತಿಯಿಂದ ಸಮಗ್ರ ಸಾಹಿತ್ಯ ಸೇವೆ ಮತ್ತು ಜೀವಮಾನ ಸಾಧನೆಗಾಗಿ ಕೊಡಮಾಡುವ ಪ್ರತಿಷ್ಠಿತ `ವಿಶ್ವೇಶ್ವರಯ್ಯ ರಾಷ್ಟ್ರೀಯ ಸಾಹಿತ್ಯ ಪ್ರಶಸ್ತಿ ‘ ಯನ್ನು ಉಡುಪಿಯ ತಲ್ಲೂರು ಫ್ಯಾಮಿಲಿ ಟ್ರಸ್ಟಿನ ಪ್ರವರ್ತಕ ಹಾಗೂ ಲೇಖಕರೂ ಆಗಿರುವ ಡಾ.ತಲ್ಲೂರು ಶಿವರಾಮ ಶೆಟ್ಟಿ ಅವರಿಗೆ ಶನಿವಾರ ಪ್ರದಾನ ಮಾಡಲಾಯಿತು. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ಪಕ್ಕದ ಸಂಸ ಬಯಲು ರಂಗಮಂದಿರದಲ್ಲಿ ನಡೆದ ಕೆಂಪೇಗೌಡ ಕರ್ನಾಟಕ ಪ್ರಾದೇಶಿಕ ಸಾಂಸ್ಕೃತಿಕ ಕಲಾ ಉತ್ಸವದ ಸಂದರ್ಭದಲ್ಲಿ ಈ […]
ಮಂಗಳೂರು: ಜ. 14-15 ರಂದು ಬಿಕರ್ನಕಟ್ಟೆ ಬಾಲ ಯೇಸುವಿನ ವಾರ್ಷಿಕ ಮಹೋತ್ಸವ
ಮಂಗಳೂರು : ಬಾಲ ಯೇಸುವಿನ ಪುಣ್ಯಕ್ಷೇತ್ರ ಕಾರ್ಮೆಲ್ ಹಿಲ್ ಬಿಕರ್ನಕಟ್ಟೆ ಇಲ್ಲಿಯ ವಾರ್ಷಿಕ ಮಹೋತ್ಸವವನ್ನು ಜನವರಿ 14 ಹಾಗೂ 15 ರಂದು ಅದ್ದೂರಿಯಿಂದ ಆಚರಿಸಲಾಗುವುದು ಎಂದು ಗುರುಕುಲ ಮುಖ್ಯಸ್ಥ ವಂದನೀಯ ಮೆಲ್ವಿನ್ ಡಿ ಕುನ್ಹಾ ತಿಳಿಸಿದರು. ಅವರು ನಗರದ ಪ್ರೆಸ್ ಕ್ಲಬ್ ನಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು. ವಾರ್ಷಿಕ ಮಹೋತ್ಸವ ಸಂಭ್ರಮದ ಬಲಿ ಪೂಜೆಗಳು ಜನವರಿ 14ರಂದು ಸಂಜೆ 6 ಘಂಟೆಗೆ ಮಹೋತ್ಸವ ಸಂಭ್ರಮದ ಬಲಿ ಪೂಜೆಯನ್ನು ಜೈಪುರ ಧರ್ಮ ಕ್ಷೇತ್ರದ ನಿವೃತ್ತ ಧರ್ಮಾಧ್ಯಕ್ಷ ಅತೀ ವಂದನೀಯ […]
ಮಕ್ಕಳು ಹೂ ಕಿತ್ತದ್ದಕ್ಕೆ ಅಂಗನವಾಡಿ ಸಹಾಯಕಿಯ ಮೂಗು ಕತ್ತರಿಸಿದ ಭೂಪ: ಮಹಿಳೆ ಸ್ಥಿತಿ ಚಿಂತಾಜನಕ
ಬೆಳಗಾವಿ: ಅಂಗನವಾಡಿ ಮಕ್ಕಳು ಹೂ ಕಿತ್ತುಕೊಂಡರು ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬ ಅಂಗನವಾಡಿ ಸಹಾಯಕಿಯ ಮೂಗು ಕತ್ತರಿಸಿರುವ ಅಮಾನವೀಯ ಘಟನೆಯೊಂದು ಬೆಳಗಾವಿ ತಾಲೂಕಿನ ಬಸುರ್ತೆ ಗ್ರಾಮದಲ್ಲಿ ನಡೆದಿದೆ. ಸುಗಂಧಾ ಮೋರೆ (50) ಹಲ್ಲೆಗೊಳಗಾದ ಅಂಗನವಾಡಿ ಸಹಾಯಕಿ. ಮನೆ ಮಾಲೀಕ ಕಲ್ಯಾಣಿ ಮೋರೆ ಮೂಗು ಕತ್ತರಿಸಿರುವ ಆರೋಪಿ. ಗಂಭೀರವಾಗಿ ಗಾಯಗೊಂಡಿರುವ ಸುಗಂಧಾ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಂಗನವಾಡಿ ಮಕ್ಕಳು ಪಕ್ಕದ ಮನೆಯ ಮುಂದೆ ಬೆಳೆದಿದ್ದ ಹೂ ಕಿತ್ತರು ಎಂಬ ಕ್ಷುಲ್ಲಕ ಕಾರಣಕ್ಕೆ ಅಂಗನವಾಡಿ ಸಹಾಯಕಿಗೆ ಅವಾಚ್ಯವಾಗಿ ನಿಂದಿಸಿ, […]
ಕೆಯುಡಬ್ಲ್ಯುಜೆ ಬ್ರ್ಯಾಂಡ್ ಮಂಗಳೂರು ರೋಹನ್ ಕಪ್ ಟ್ರೋಫಿ ಅನಾವರಣ
ಮಂಗಳೂರು: ಬಂದರು, ವಿಮಾನಯಾನ, ರೈಲ್ವೇ, ಅತ್ಯುತ್ತಮ ಸಾರಿಗೆ ವ್ಯವಸ್ಥೆಯನ್ನೊಳಗೊಂಡ ದಕ್ಷಿಣ ಕನ್ನಡ ಜಿಲ್ಲೆಯು ಶಿಕ್ಷಣ, ಆರೋಗ್ಯ, ಧಾರ್ಮಿಕ, ಉದ್ಯಮ, ಸಾಂಸ್ಕೃತಿಕ ಕ್ಷೇತ್ರದಲ್ಲೂ ಮುಂದುವರಿದಿದ್ದು, ಈ ರೀತಿಯಾಗಿ ಸಮಗ್ರ ಅಭಿವೃದ್ಧಿ ಕಂಡ ನಗರ ದೇಶದ ಬೇರೆಲ್ಲೂ ಕಾಣಲು ಸಾಧ್ಯವಿಲ್ಲ. ಈ ವಿಭಿನ್ನತೆಯಿಂದ ದಕ್ಷಿಣ ಕನ್ನಡ ಜಿಲ್ಲೆ ದೇಶಕ್ಕೆ ಮಾದರಿಯಾಗಿದೆ ಎಂದು ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲು ಹೇಳಿದರು. ನಗರದ ಓಷಿಯನ್ ಪರ್ಲ್ ಹೊಟೇಲ್ ನಲ್ಲಿ ಮಂಗಳವಾರ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ […]
ಶಿಶುಗೀತೆಗಳ ಪುಸ್ತಕ ‘ಶೆಫಿನ್ಸ್ ರೈಮ್ಸ್ 01’ ಹಾಗೂ ಯೂಟ್ಯೂಬ್ ಚಾನೆಲ್ ಬಿಡುಗಡೆ: ಕನ್ನಡ ಮಾಧ್ಯಮ ಶಾಲೆ ಉಳಿಸಲು ಶೆಫಿನ್ಸ್ ಪ್ರಯೋಗ
ಉಡುಪಿ ಜ. 02: ‘ಸ್ಫೊಕನ್ ಇಂಗ್ಲಿಷ್ ಕಲಿಸುವ ಮೂಲಕ ಕನ್ನಡ ಮಾಧ್ಯಮ ಶಾಲೆ ಉಳಿಸಿ’ ಆಂದೋಲನಕ್ಕೆ ಇನ್ನಷ್ಟು ಶಕ್ತಿತುಂಬುವ ಉದ್ದೇಶದಿಂದ ಶಿಶುಗೀತೆಗಳ ಪುಸ್ತಕ ‘ಶೆಫಿನ್ಸ್ ರೈಮ್ಸ್ 01’ ಮತ್ತು ಈ ಗೀತೆಗಳ ಯೂ ಟ್ಯೂಬ್ ಚಾನೆಲನ್ನುಉಡುಪಿಯ ಕುಂತಳನಗರ ಭಾರತೀ ಹಿರಿಯ ಪ್ರಾಥಮಿಕ ಶಾಲೆಯ 1ನೇ ತರಗತಿಯ ಪುಟಾಣಿಗಳಾದ ಸಮೃದ್ಧಿ ಮತ್ತುಮಾನ್ವಿಕ್ ಇವರು ಬಿಡುಗಡೆಗೊಳಿಸಿದರು. ಈ ಪುಸ್ತಕವು ಉಡುಪಿಯ ಶೆಫಿನ್ಸ್ ಎಜುಕೇಶನಲ್ ಅಂಡ್ ಚಾರಿಟೇಬಲ್ ಟ್ರಸ್ಟ್ಮಕ್ಕಳಿಗಾಗಿ ಬಿಡುಗಡೆಗೊಳಿಸುತ್ತಿರುವ ಪ್ರಪ್ರಥಮ ಶಿಶುಗೀತೆಗಳ ಪುಸ್ತಕವಾಗಿದ್ದು, ಇದರಲ್ಲಿ ಕನ್ನಡ, ಕಂಗ್ಲಿಷ್ ಮತ್ತು ಇಂಗ್ಲಿಷ್ […]