ಉಡುಪಿ: ಹಿರಿಯ ಬಿಜೆಪಿ ಮುಖಂಡ, ಶಾರದಾ ಇಂಟರ್ನ್ಯಾಷನಲ್ ಹೋಟೇಲ್ ಮಾಲೀಕ ಬಿ.ಸುಧಾಕರ್ ಶೆಟ್ಟಿ ನಿಧನ
ಉಡುಪಿ: ಹಿರಿಯ ಬಿಜೆಪಿ ಮುಖಂಡ, ಶಾರದಾ ಇಂಟರ್ನ್ಯಾಷನಲ್ ಹೋಟೇಲ್ ಮಾಲೀಕ ಬಿ.ಸುಧಾಕರ್ ಶೆಟ್ಟಿ(72) ಇಂದು ಬೆಳಗ್ಗೆ ಉಡುಪಿಯ ಗಾಂಧಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಸುಧಾಕರ್ ಶೆಟ್ಟಿ ಹಲವು ವರ್ಷಗಳಿಂದ ಹೊಟೇಲ್ ಉದ್ಯಮ ನಡೆಸುತ್ತಿದ್ದರು. 2009ರಿಂದ 2012ರವರೆಗೆ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಅವರು, ಉಡುಪಿ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ 1999ರಲ್ಲಿ ಯು.ಆರ್.ಸಭಾಪತಿ ವಿರುದ್ಧ ಸೋಲು ಕಂಡಿದ್ದರು. 2004ರ ಚುನಾವಣೆಯಲ್ಲಿ ಟಿಕೆಟ್ ಬಿಜೆಪಿಯಿಂದ ಟಿಕೆಟ್ ನಿರಾಕರಿಸಿದ ಹಿನ್ನೆಲೆಯಲ್ಲಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. 2013ರ ಚುನಾವಣೆಯಲ್ಲಿ ಹಾಲಿ […]
ಕನಿಷ್ಠ ತಾಪಮಾನ ದಾಖಲಿಸಿದ ರಾಷ್ಟ್ರ ರಾಜಧಾನಿ: 15.6 ಡಿಗ್ರಿ ತಾಪಮಾನಕ್ಕೆ ನಡುಗಿದ ದೆಹಲಿಗರು
ನವದೆಹಲಿ: ಹೊಸ ವರ್ಷದ ಮುನ್ನಾ ದಿನದಿಂದಲೂ ರಾಷ್ಟ್ರೀಯ ರಾಜಧಾನಿಯಲ್ಲಿ ಚಳಿ ಹೆಚ್ಚುತ್ತಿದ್ದು, ಮನೆ ಮತ್ತು ಕೆಲಸದ ಸ್ಥಳಗಳಲ್ಲಿ ಜನರು ಚಳಿಯಿಂದ ನಡುಗುತ್ತಿದ್ದಾರೆ. ರಾಜಧಾನಿಯು ಬುಧವಾರದಂದು 15.6 ಡಿಗ್ರಿ ಸೆಲ್ಸಿಯಸ್‌ನ ಕನಿಷ್ಠ ತಾಪಮಾನದೊಂದಿಗೆ ಋತುವಿನ ಅತ್ಯಂತ ತಂಪಾದ ದಿನವನ್ನು ದಾಖಲಿಸಿದೆ. ಹಿಮಾವೃತ ಗಾಳಿ ಮತ್ತು ಎತ್ತರದ ಪ್ರದೇಶಗಳಲ್ಲಿ ಭಾರೀ ಮಂಜಿನ ಕಾರಣದಿಂದ ರಾಜಧಾನಿಯಲ್ಲಿ ತಾಪಮಾನ ಇಳಿಕೆಯಾಗಿದೆ. ಡಿಸೆಂಬರ್ 31 ರಿಂದ ಪ್ರತಿ ಮೂರು ಗಂಟೆಗಳಿಗೊಮ್ಮೆ ತೆಗೆದುಕೊಳ್ಳಲಾದ ತಾಪಮಾನಗಳ ವಿಶ್ಲೇಷಣೆಯು ನಗರವು ಅತ್ಯಂತ ತಂಪಾಗಿದೆ ಎಂದು ತೋರಿಸುತ್ತಿವೆ. ಬೆಳಿಗ್ಗೆ ಮತ್ತು […]
ಕರಾವಳಿ ಕರ್ನಾಟಕದಿಂದ ಅಯೋಧ್ಯೆಗೆ ನೇರ ರೈಲು ಸೌಲಭ್ಯ ಒದಗಿಸಲು ಸಂಸದ ದ್ವಯರ ಮನವಿ
ಮಂಗಳೂರು: ಜನವರಿ 22 ರಂದು ರಾಮಮಂದಿರ ಉದ್ಘಾಟನೆಗೆ ಅಯೋಧ್ಯಾ ನಗರಿ ಸಿದ್ಧವಾಗುತ್ತಿರುವ ಹಿನ್ನೆಲೆಯಲ್ಲಿ ಕರಾವಳಿ ಕರ್ನಾಟಕದಿಂದ ಅಯೋಧ್ಯೆಗೆ ನೇರ ರೈಲು ಸೌಲಭ್ಯವನ್ನು ಒದಗಿಸುವಂತೆ ಕೇಂದ್ರವನ್ನು ಸಂಸದರಾದ ನಳಿನ್ ಕುಮಾರ್ ಕಟೀಲ್ ಮತ್ತು ಶೋಭಾ ಕರಂದ್ಲಾಜೆ ಕೋರಿದ್ದಾರೆ. ಯಾತ್ರಾ ಕೇಂದ್ರಕ್ಕೆ ಭಕ್ತರ ಭೇಟಿಗೆ ಅನುಕೂಲವಾಗುವಂತೆ ಅಯೋಧ್ಯೆಗೆ ಸಾರ್ವಜನಿಕ ಸಾರಿಗೆ ಸಂಪರ್ಕ-ವಾಯು ಮತ್ತು ರೈಲು-ಸಂಪರ್ಕವನ್ನು ಕೇಂದ್ರ ಸರ್ಕಾರವು ಸಕ್ರಿಯವಾಗಿ ಪ್ರೋತ್ಸಾಹಿಸುತ್ತಿರುವುದರಿಂದ, ಸಂಸದರು ಇತ್ತೀಚೆಗೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಕರ್ನಾಟಕ ಕರಾವಳಿಯಿಂದಲೂ ಒಂದು ಸೇವೆಯನ್ನು ಮಂಜೂರು ಮಾಡುವಂತೆ ಪತ್ರ […]
ಉಭಯ ಜಿಲ್ಲೆಗಳಲ್ಲಿ ಉತ್ತಮ ಮಳೆ: ಜ.10 ರವರೆಗೆ ಮಳೆ ಸಾಧ್ಯತೆ
ಮಂಗಳೂರು/ಉಡುಪಿ: ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಉಭಯ ಜಿಲ್ಲೆಯ ಹಲವು ಕಡೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಬುಧವಾರ ಇಡೀ ದಿನ ಮೋಡ ಕವಿದ ವಾತಾವರಣವಿದ್ದು ಬೆಳಗ್ಗೆ ತುಂತುರು ಮಳೆಯಾಗಿತ್ತು. ಗುರುವಾರ ಬೆಳಿಗ್ಗೆ ಉತ್ತಮ ಮಳೆಯಾಗಿದೆ. ರಾಜ್ಯದಲ್ಲಿ ಒಂದು ವಾರ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜನವರಿ 4 ರಿಂದ 10 ರವರೆಗೆ ದಕ್ಷಿಣ ಒಳನಾಡು ಮತ್ತು ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾದರೆ, ಜನವರಿ 8 ರಿಂದ […]