ವಿಕಲಚೇತನರ ರಿಯಾಯಿತಿ ಬಸ್ ಪಾಸ್: ಅರ್ಜಿ ಆಹ್ವಾನ
ಉಡುಪಿ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮಂಗಳೂರು ವಿಭಾಗದಿಂದ ವಿಕಲಚೇತನರ ರಿಯಾಯಿತಿ ಬಸ್ ಪಾಸ್ ಅನ್ನು ಪಡೆಯಲು ಮತ್ತು ನವೀಕರಿಸಲು ಸೇವಾಸಿಂಧು ಪೋರ್ಟಲ್ https://sevasindhuservices.karnataka.gov.in ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. 2023 ರಲ್ಲಿ ವಿತರಿಸಿದ ಬಸ್‌ಪಾಸ್‌ಗಳ ಅವಧಿಯು 2023 ರ ಡಿಸೆಂಬರ್ 31 ರಂದು ಮುಕ್ತಾಯಗೊಂಡಿದ್ದು, 2024 ನೇ ಜನವರಿ 15 ರಿಂದ ಹೊಸ ಪಾಸ್‌ಗಳನ್ನು ಪಡೆಯಲು ಮತ್ತು ನವೀಕರಿಸಲು ಕ್ರಮಕೈಗೊಳ್ಳಲಾಗಿರುತ್ತದೆ. 2023 ರಲ್ಲಿ ವಿತರಿಸಿರುವ ಬಸ್‌ಪಾಸ್ ಗಳನ್ನು 2024 ರ ಫೆಬ್ರವರಿ 29 ರ ವರೆಗೆ […]
ಜ. 12 ರಿಂದ 14 ರ ವರೆಗೆ ‘ತಪೋವನ ಸ್ವಾಸ್ಥ್ಯ ರಕ್ಷಣಂ’- ಮೂರು ದಿನಗಳ ಆರೋಗ್ಯ ಹಬ್ಬ…
ಮಣಿಪಾಲ: ತಪೋವನ ವತಿಯಿಂದ ಜ. 12 ರಿಂದ 14 ರ ವರೆಗೆ ಇಲ್ಲಿನ ಆದರ್ಶನಗರದ ಪ್ರಗತಿ ಪ್ರೈಡ್ ನಲ್ಲಿ ‘ತಪೋವನ ಸ್ವಾಸ್ಥ್ಯ ರಕ್ಷಣಂ’- ಮೂರು ದಿನಗಳ ಆರೋಗ್ಯ ಹಬ್ಬ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ವಿನೂತನ ಕಾರ್ಯಕ್ರಮದಲ್ಲಿ ಆಯೋಗ್ಯಕ್ಕೆ ಸಂಬಂಧಪಟ್ಟ ವೈದ್ಯಕೀಯ ಜ್ಯೋತಿಷ್ಯಾಸ್ತ್ರ, ಮನೆ ಮದ್ದು, ಆರೋಗ್ಯ ಮತ್ತು ಸ್ವಯಂ ಕಾಳಜಿ, ಒತ್ತಡ ನಿರ್ವಹಣೆ, ಧ್ವನಿ ಚಿಕಿತ್ಸೆ ಮುಂತಾದವುಗಳ ಬಗ್ಗೆ ಕಾರ್ಯಾಗಾರ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿರುವುದು. ಕನ್ನಡ ಸಾಹಿತ್ಯ ಮತ್ತು ಪಾಕಶಾಸ್ತ್ರ ಹಾಗೂ ಆರೋಗ್ಯ ಪ್ರವಾಸದ ಬಗ್ಗೆ […]
ಸುಗ್ರೀವಾಜ್ಞೆ ಮೂಲಕ ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ ಜಾರಿ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ರಾಜ್ಯಾದ್ಯಂತ ಅಂಗಡಿ ಮುಂಗಟ್ಟು, ವಾಣಿಜ್ಯ ಮಳಿಗೆ ಸೇರಿದಂತೆ ಎಲ್ಲಾ ರೀತಿಯ ನಾಮಫಲಕಗಳ ಮೇಲ್ಭಾಗದಲ್ಲಿ ಶೇ.60ರಷ್ಟು ಕನ್ನಡ ಬಳಕೆ ಕಡ್ಡಾಯ ಹಾಗೂ ಜಾಹೀರಾತು, ಸೂಚನಾ ಫಲಕಗಳಲ್ಲೂ ಕನ್ನಡಕ್ಕೆ ಆದ್ಯತೆ ನೀಡುವುದನ್ನು ಕಡ್ಡಾಯಗೊಳಿಸುವ ‘ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ತಿದ್ದುಪಡಿ ಕಾಯಿದೆಯನ್ನು’ ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲು ರಾಜ್ಯ ಸರ್ಕಾರ ಶುಕ್ರವಾರ ಮಹತ್ವದ ನಿರ್ಣಯ ಕೈಗೊಂಡಿದೆ. ಇತ್ತೀಚೆಗೆ ತಮ್ಮ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ ನಡೆಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸುಗ್ರೀವಾಜ್ಞೆ ಮೂಲಕ ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ ಜಾರಿ ಮಾಡುವುದಾಗಿ ತಿಳಿಸಿದ್ದರು. […]
ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಣಿಪಾಲ ವಲಯಮಟ್ಟದ ಪದಗ್ರಹಣ ಕಾರ್ಯಕ್ರಮ
ಉಡುಪಿ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಉಡುಪಿ ತಾಲ್ಲೂಕು ಮತ್ತು ಪ್ರಗತಿ ಬಂಧು ಸ್ವಸಹಾಯ ಸಂಘ ಒಕ್ಕೂಟ ಮಣಿಪಾಲ ವಲಯ ಹಾಗೂ ತಾಲ್ಲೂಕು ಜನಜಾಗೃತಿ ವೇದಿಕೆ ಇವರ ಸಂಯುಕ್ತ ಆಶ್ರಯದಲ್ಲಿ ವಲಯ ಮಟ್ಟದ ಸಾಮೂಹಿಕ ಸತ್ಯನಾರಾಯಣ ಪೂಜೆ ಮತ್ತು ಪದಗ್ರಹಣ ಕಾರ್ಯಕ್ರಮ ಶಿವಪಾಡಿಯ ಉಮಾಮಹೇಶ್ವರ ದೇವಸ್ಥಾನದಲ್ಲಿ ಇಂದು ನಡೆಯಿತು. ಬೆಳಿಗ್ಗೆ ಧಾರ್ಮಿಕ ವಿಧಿವಿಧಾನಗಳೊಂದಿಗೆ ಸತ್ಯನಾರಾಯಣ ಪೂಜೆ ನೆರವೇರಿತು. ಪದಗ್ರಹಣ ಕಾರ್ಯಕ್ರಮವನ್ನು ಉದ್ಘಾಟಿಸಿ ಉಡುಪಿ ತಾಲ್ಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷ ಸತ್ಯಾನಂದ ನಾಯಕ್ ಮಾತನಾಡಿ, ಯೋಜನೆಯ ಕಾರ್ಯಕ್ರಮ, ಗ್ರಾಮೀಣ […]
ಖಾಸಗಿ ಬಸ್ ಗಳಲ್ಲೂ ಶಕ್ತಿ ಯೋಜನೆ ಜಾರಿ ಕುರಿತು ಮನವಿ: 2 ತಿಂಗಳೊಳಗೆ ಪರಿಶೀಲನೆ ನಡೆಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ
ಬೆಂಗಳೂರು: ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಸೌಲಭ್ಯ ಒದಗಿಸಿರುವ ಶಕ್ತಿ ಯೋಜನೆಯನ್ನು ಖಾಸಗಿ ಬಸ್‌ಗಳಿಗೂ ವಿಸ್ತರಿಸುವ ಕುರಿತು 2 ತಿಂಗಳೊಳಗೆ ಪರಿಶೀಲನೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಶುಕ್ರವಾರ ಸೂಚನೆ ನೀಡಿದೆ. ಶಕ್ತಿ ಯೋಜನೆಯನ್ನು ಖಾಸಗಿ ಬಸ್‌ಗಳಿಗೂ ವಿಸ್ತರಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಉಡುಪಿ ಜಿಲ್ಲೆ ಕಾರ್ಕಳದ ಖಾಸಗಿ ಬಸ್ ನಿರ್ವಾಹಕ ಶರತ್‌ಕುಮಾರ್ ಶೆಟ್ಟಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಸ್ ಆರ್ ಕೃಷ್ಣ ಕುಮಾರ್ ಅವರ ನೇತೃತ್ವದ ಏಕಸದಸ್ಯ ಪೀಠ ವಿಚಾರಣೆ ನಡೆಸಿದೆ. […]