ಹಿರಿಯ ಸಾಹಿತಿ-ವಿದ್ವಾಂಸ ಪ್ರೊ.ಅಮೃತ ಸೋಮೇಶ್ವರ ನಿಧನ
ಮಂಗಳೂರು: ಕನ್ನಡದ ಖ್ಯಾತ ಸಾಹಿತಿ ಯಕ್ಷಗಾನ ಪ್ರಸಂಗ ಕರ್ತೃ ವಿದ್ವಾಂಸ ಪ್ರೊ.ಅಮೃತ ಸೋಮೇಶ್ವರ (89) ಇಂದು ಬೆಳಿಗ್ಗೆ ನಿಧನರಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಹಿರಿಯ ಕನ್ನಡ, ತುಳು ಸಾಹಿತಿಯಾಗಿ, ಸಂಶೋಧಕರಾಗಿ, ಯಕ್ಷಗಾನ ಪ್ರಸಂಗಕರ್ತರಾಗಿ, ಸಮಾಜಮುಖಿ ಚಂತನೆಯುಳ್ಳ ಸಹೃದಯಿ ವ್ಯಕ್ತಿಯಾಗಿದ್ದ ಇವರು ಎಲ್ಲರಿಗೆ ಪರಿಚಿತರಾಗಿದ್ದರು. ದಕ್ಷಿಣ ಕನ್ನಡ ಜಿಲ್ಲೆಯ ಕೋಟೆಕಾರು ಸಮೀಪದ ಅಡ್ಯ ಎಂಬಲ್ಲಿ 1935 ಸೆಪ್ಟಂಬರ್ 27 ರಂದು ಜನನ. ಕೋಟೆಕಾರಿನ ಸ್ಟೆಲ್ಲಾ ಮೇರಿ ಕಾನ್ವೆಂಟ್, ಆನಂದಾಶ್ರಮ, ಸೇಂಟ್ ಅಲೋಷಿಯಸ್ ಕಾಲೇಜು, ಮದರಾಸು ವಿಶ್ವವಿದ್ಯಾಲಯದಲ್ಲಿ ಶಿಕ್ಷಣ. ಅಲೋಷಿಯಸ್ […]
ಪೆರ್ಣಂಕಿಲ ಕ್ಷೇತ್ರದ ನೂತನ ಸಭಾಗೃಹ ಮತ್ತು ಭೋಜನಶಾಲೆಯ ಶಿಲಾನ್ಯಾಸ ಕಾರ್ಯಕ್ರಮ
ಉಡುಪಿ: ಶ್ರೀಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ ಪೆರ್ಣಂಕಿಲ ಕ್ಷೇತ್ರದ ಸಮಗ್ರ ಜೀರ್ಣೋದ್ಧಾರದ ಅಂಗವಾಗಿ ನೂತನ ಸಭಾಗೃಹ ಮತ್ತು ಭೋಜನಶಾಲೆಗೆ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶಿಲಾನ್ಯಾಸ ನೆರವೇರಿಸಿದರು. ವಿದ್ವಾನ್ ಮಧುಸೂಧನ ತಂತ್ರಿ ಇವರು ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ಮುಂಬೈಯ ಖ್ಯಾತ ವಕೀಲ ಬಿ.ಎನ್. ಪೂಜಾರಿ ಕಾಂತನಮಜಲು ಕಣಂಜಾರು, ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ, ಉಡುಪಿ ಶಾಸಕ ಯಶ್ ಪಾಲ್ ಸುವರ್ಣ, ಉದ್ಯಮಿ ಮುನಿಯಾಲು ಉದಯ ಕುಮಾರ್ ಶೆಟ್ಟಿ, ಮಾಜಿ ಶಾಸಕ ಲಾಲಾಜಿ ಆರ್ […]
ಯುವ ಸ್ಪಂದನ ಕೇಂದ್ರದಲ್ಲಿ ಯುವ ಪರಿವರ್ತಕರ ಹುದ್ದೆ ಖಾಲಿ
ಉಡುಪಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ಹಾಗೂ ಜನ ಆರೋಗ್ಯ ಕೇಂದ್ರ ಎಪಿಡೀಮೀಯಾಲಜಿ ವಿಭಾಗ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ ಬೆಂಗಳೂರು ಇದರ ಸಹಯೋಗದೊಂದಿಗೆ ಆರಂಭಿಸಲಾಗಿರುವ ಯುವ ಸ್ಪಂದನ ಕೇಂದ್ರದಲ್ಲಿ ಯುವ ಪರಿವರ್ತಕರ ಹುದ್ದೆಗೆ 21 ರಿಂದ 35 ವರ್ಷದೊಳಗಿನ ಯುವಕ- ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಪದವಿ ತೇರ್ಗಡೆ ಹೊಂದಿದ ಆಸಕ್ತ ಯುವಕ ಹಾಗೂ ಯುವತಿಯರು ಜನವರಿ 15 ರ ಸಂಜೆ 5 ಗಂಟೆಯ ಒಳಗಾಗಿ ಯುವ ಸಬಲೀಕರಣ ಮತ್ತು […]