ಕಾರ್ಕಳ: ಜ. 10 ರಂದು ತಾಲೂಕು ಮಟ್ಟದ ಪಿಂಚಣಿ ಅದಾಲತ್

ಕಾರ್ಕಳ: ಸಾಮಾಜಿಕ ಭದ್ರತಾ ಯೋಜನೆಗಳಾದ ಇಂದಿರಾಗಾಂಧಿ ರಾಷ್ಟ್ರೀಯ ವೃದ್ದಾಪ್ಯ ವೇತನ, ಸಂಧ್ಯಾ ಸುರಕ್ಷಾ ಯೋಜನೆ, ಅಂಗವಿಕಲ ವೇತನ, ನಿರ್ಗತಿಕ ವಿಧವಾ ವೇತನ, ಮೈತ್ರಿ ಯೋಜನೆ ಹಾಗೂ ಮನಸ್ವಿನಿ ಯೋಜನೆಗಳನ್ನು ಅನುಷ್ಠಾನಗೊಳಿಸುವ ಸಲುವಾಗಿ ಕಾರ್ಕಳ ತಾಲೂಕಿಗೆ ಸಂಬಂಧಿಸಿದ ಗ್ರಾಮಗಳ ತಾಲೂಕು ಮಟ್ಟದ ಪಿಂಚಣಿ ಅದಾಲತ್ ಕಾರ್ಯಕ್ರಮವು ಜನವರಿ 10 ರಂದು ಬೆಳಗ್ಗೆ 10 ಗಂಟೆಗೆ ಕಾರ್ಕಳ ತಾಲೂಕು ಕಛೇರಿಯಲ್ಲಿ, ಕುಂದಾಪುರ ಉಪ ವಿಭಾಗದ ಸಹಾಯಕ ಆಯುಕ್ತೆ ರಶ್ಮಿ ಎಸ್.ಆರ್ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಪಿಂಚಣಿ ಅದಾಲತ್ ನಲ್ಲಿ ಕಾರ್ಕಳ ತಾಲೂಕು […]

ಸತತ 4ನೇ ಬಾರಿ ಗೆದ್ದು ಬಾಂಗ್ಲಾ ಪ್ರಧಾನಿ ಪಟ್ಟ ಅಲಂಕರಿಸಿದ ಶೇಖ್ ಹಸೀನಾ

ಢಾಕಾ: ಬಾಂಗ್ಲಾದೇಶದಲ್ಲಿ ಜನವರಿ 7 ರಂದು ನಡೆದ 12 ನೇ ಸಾರ್ವತ್ರಿಕ ಚುನಾವಣೆಯಲ್ಲಿ ಪ್ರಮುಖ ವಿರೋಧ ಪಕ್ಷ ಬಾಂಗ್ಲಾದೇಶ ನ್ಯಾಷನಲ್ ಪಾರ್ಟಿ-ಬಿಎನ್‌ಪಿ ಮತದಾನ ಬಹಿಷ್ಕಾರದ ನಡುವೆ ಹಾಲಿ ಪ್ರಧಾನಿ ಶೇಖ್ ಹಸೀನಾ ಅವರ ನೇತೃತ್ವದ ಅವಾಮಿ ಲೀಗ್ (AL) ಪಕ್ಷ ಗೆಲುವು ಸಾಧಿಸಿದೆ. ತನ್ಮೂಲಕ ಸತತ ನಾಲ್ಕನೇ ಬಾರಿಗೆ ಶೇಖ್ ಹಸೀನಾ ಪ್ರಧಾನಿ ಗದ್ದುಗೆ ಏರಲಿದ್ದಾರೆ. ಭಾನುವಾರ ಮತದಾನ ಮುಕ್ತಾಯದ ಬಳಿಕ ನಡೆದ ಮತ ಎಣಿಕೆಯಲ್ಲಿ ಅವಾಮಿ ಲೀಗ್‌ ಆರಂಭಿಕ ಮುನ್ನಡೆ ಸಾಧಿಸಿದ್ದು, 224 ಸ್ಥಾನಗಳ ಪೈಕಿ […]

ಅಯೋಧ್ಯೆ ಶ್ರೀರಾಮಮಂದಿರ ಲೋಕಾರ್ಪಣೆ ದಿನ ಸಿದ್ದವಾಗಲಿದೆ 7000kg “ರಾಮ ಹಲ್ವಾ”

ಅಯೋಧ್ಯೆ: ಜನವರಿ 22ರಂದು ನಡೆಯಲಿರುವ ಅಯೋಧ್ಯೆ ಶ್ರೀರಾಮಮಂದಿರ ಉದ್ಘಾಟನೆಗೆ ಸಕಲ ಸಿದ್ಧತೆ ನಡೆಯುತ್ತಿದ್ದು, ಇಡೀ ದೇಶವೇ ಈ ಹಬ್ಬವನ್ನು ಸಂಭ್ರಮಪಡುವ ದಿನವಾಗಿದೆ. ಈ ಹಬ್ಬದ ಮೆರುಗನ್ನು ಹೆಚ್ಚಿಸಲು ಅಯೋಧ್ಯೆಯಲ್ಲಿ ಅಂತಾರಾಷ್ಟ್ರೀಯ ಖ್ಯಾತಿಯ ಬಾಣಸಿಗರೊಬ್ಬರು ವಿಶೇಷ ‘ರಾಮ ಹಲ್ವಾ’ ತಯಾರಿಸಲಿದ್ದಾರೆ. ಅಂತಾರಾಷ್ಟ್ರೀಯ ಖ್ಯಾತಿಯ ಬಾಣಸಿಗ, ನಾಗ್ಪುರ ಮೂಲದ ವಿಷ್ಣು ಮನೋಹರ್‌ ಅವರು ರಾಮಮಂದಿರ ಲೋಕಾರ್ಪಣೆ ದಿನ ವಿಶೇಷ ‘ರಾಮ ಹಲ್ವಾ’ತಯಾರಿಸಲಿದ್ದಾರೆ. ಸುಮಾರು 7 ಸಾವಿರ ಕೆ.ಜಿ. ರಾಮ ಹಲ್ವಾಗೆ 12 ಸಾವಿರ ಲೀಟರ್‌ ನೀರಿನ ಸಾಮರ್ಥ್ಯದ ಬೃಹತ್‌ ಕಡಾಯಿಯೊಂದನ್ನು ಕೂಡ […]

ಕರಾವಳಿಯ ಮೂರು ಜಿಲ್ಲೆಗಳಲ್ಲಿ ಮಳೆ ಮುಂದುವರಿಕೆ ಸಾಧ್ಯತೆ

ಉಡುಪಿ/ ಮಂಗಳೂರು: ಕರ್ನಾಟಕದ 19 ಜಿಲ್ಲೆಗಳಲ್ಲಿ ಇಂದು ಕೂಡ ಮಳೆ ಬೀಳುವ ಸಾಧ್ಯತೆ ಇದೆ. ಈ ಪೈಕಿ ಕರಾವಳಿಯ ಮೂರು ಜಿಲ್ಲೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ 13 ಜಿಲ್ಲೆಗಳಲ್ಲಿ ಕೆಲವು ಕಡೆಗಳಲ್ಲಿ ಸಾಧಾರಣದಿಂದ ಭಾರಿ ಮಳೆಯನ್ನು ನಿರೀಕ್ಷಿಸಬಹುದು. ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆ ನಿರೀಕ್ಷಿತವಾಗಿದ್ದು, ಉಳಿದ ಜಿಲ್ಲೆಗಳಲ್ಲಿ ಚಳಿ ಮತ್ತು ಒಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆಯ ಮಳೆ ಮುನ್ಸೂಚನೆ ವರದಿ ತಿಳಿಸಿದೆ. ಚಳಿಗಾಲವಾದ ಕಾರಣ ಹಲವೆಡೆ ಮುಂಜಾನೆ, ಬೆಳಗ್ಗೆ ಹೊತ್ತು ಮಂಜು ಮುಸುಕಿದ ವಾತಾವರಣ […]

ಪರಿಶಿಷ್ಟ ಜಾತಿ ಉಪಯೋಜನೆಯಡಿ ಯುವಕರಿಗಾಗಿ ವಿವಿಧ ತರಬೇತಿ

ಉಡುಪಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಉಪಯೋಜನೆ ಅಡಿ ಯುವ ಜನರನ್ನು ಸ್ವಾವಲಂಬಿಯನ್ನಾಗಿಸಲು ಜನವರಿ 24 ರಿಂದ ಫೆಬ್ರವರಿ 7 ರವರೆಗೆ ಈ ಕೆಳಗಿನಂತೆ ವಿವಿಧ ತರಬೇತಿ ಶಿಬಿರಗಳನ್ನು ಹಮ್ಮಿಕೊಳ್ಳಲಾಗಿದ್ದು, ಅರ್ಹ ಆಸಕ್ತ ಯುವಕ ಹಾಗೂ ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. 15 ರಿಂದ 29 ವರ್ಷ ಒಳಗಿನ ಪದವಿ ಮತ್ತು ಜರ್ನಲಿಸಂ ವಿದ್ಯಾರ್ಹತೆ ಹೊಂದಿರುವ ಯುವಕ-ಯುವತಿಯರಿಗೆ ಜನವರಿ 31 ರಿಂದ ಫೆಬ್ರವರಿ 7 ರ ವರೆಗೆ ನಿರೂಪಣಾ ಮತ್ತು […]