ಗಣರಾಜ್ಯೋತ್ಸವ ಅರ್ಥಪೂರ್ಣ ಆಚರಣೆಗೆ ಸಕಲ ಸಿದ್ಧತೆಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ

ಉಡುಪಿ: ಜಿಲ್ಲಾ ಮಟ್ಟದ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ವಿಜೃಂಭಣೆಯಿಂದ ಆಚರಿಸಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಗಣರಾಜ್ಯೋತ್ಸವ ಆಚರಣೆಯ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಪ್ರತೀ ವರ್ಷದಂತೆ ಈ ಬಾರಿಯೂ ಜನವರಿ 26 ರಂದು ನಗರದ ಅಜ್ಜರಕಾಡು ಮಹಾತ್ಮಗಾಂಧೀ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ಗಣರಾಜ್ಯೋತ್ಸವ ದಿನಾಚರಣೆಯನ್ನು ಆಚರಿಸುತ್ತಿದ್ದು, […]

ಉಡುಪಿ: ಶಿವಳ್ಳಿ ಗ್ರಾಮದ ನಿವಾಸಿ ನಾಪತ್ತೆ

ಉಡುಪಿ: ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ನಿವಾಸಿ ವೆಂಟೇಶ್ ನಾಗರಾಜ್ (32) ಎಂಬ ವ್ಯಕ್ತಿಯು 2022 ರ ಜುಲೈ 19 ರಂದು ಮನೆಯಿಂದ ಹೋದವರು ವಾಪಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 4 ಇಂಚು ಎತ್ತರ, ಎಣ್ಣೆ ಕಪ್ಪು ಮೈಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, ಕನ್ನಡ, ತಮಿಳು ಮತ್ತು ತೆಲುಗು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಉಡುಪಿ ನಗರ ಪೊಲೀಸ್ ನಿರೀಕ್ಷಕರ ಕಛೇರಿ ಪ್ರಕಟಣೆ ತಿಳಿಸಿದೆ.

ಉಡುಪಿ ಆತ್ರಾಡಿ: ಹೋಟೆಲ್ ಮ್ಯಾನೇಜರ್ ಹೃದಯಾಘಾತದಿಂದ ಮೃತ್ಯು

ಉಡುಪಿ: ಹೊಟೇಲ್ ಮ್ಯಾನೇಜರ್ ಓರ್ವರು ಹಠಾತ್ ಆಗಿ ಹೃದಯಾಘಾತದಿಂದ ಮೃತಪಟ್ಟ ಘಟನೆ ಸೋಮವಾರ ರಾತ್ರಿ ನಡೆದಿದೆ. ಮೃತರನ್ನು ಆತ್ರಾಡಿ ಪರೀಕ ನಿವಾಸಿ ಮಹೇಶ ಶೆಟ್ಟಿ(28) ಎಂದು ಗುರುತಿಸಲಾಗಿದೆ. ಇವರು ಮಂಗಳೂರಿನ ಹೆಸರಾಂತ ಹೋಟೇಲ್ ಲೊಂದರಲ್ಲಿ ಮ್ಯಾನೇಜರ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಅವರಿಗೆ ಸೋಮವಾರ ರಾತ್ರಿ ಹಠಾತ್ ಆಗಿ ಎದೆ ನೋವು ಕಾಣಿಸಿಕೊಂಡಿತ್ತು. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಮಹೇಶ್ ಅವರು ಇತ್ತೀಚೆಗೆ ಹೊಟೇಲ್ ಮ್ಯಾನೇಜೆಂಟ್ ಕೋರ್ಸ್ ಮುಗಿಸಿದ್ದರು. […]

ಉಡುಪಿ ಪುತ್ತಿಗೆ ಪರ್ಯಾಯ ಮಹೋತ್ಸವ: ಹೊರಕಾಣಿಕೆ ಮೆರವಣಿಗೆಗೆ ಅದ್ಧೂರಿ ಚಾಲನೆ

ಉಡುಪಿ: ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರ ಚತುರ್ಥ ಪರ್ಯಾಯೋತ್ಸವದ ಹೊರಕಾಣಿಕೆ ಮೆರವಣಿಗೆಗೆ ಉಡುಪಿ ಸಂಸ್ಕೃತ ಕಾಲೇಜಿನ ಬಳಿ ಇಂದು ಚಾಲನೆ ನೀಡಲಾಯಿತು. ಮಠದ ದಿವಾನ ನಾಗರಾಜ್ ಆಚಾರ್ಯ, ಪರ್ಯಾಯ ಸ್ವಾಗತ ಸಮಿತಿಯ ಕಾರ್ಯಾಧ್ಯಕ್ಷ ಕೆ. ರಘುಪತಿ ಭಟ್ ಹಾಗೂ ಪುತ್ತಿಗೆ ಮಠದ ಅಂತರಾಷ್ಟ್ರೀಯ ಕಾರ್ಯದರ್ಶಿ ಪ್ರಸನ್ನ ಆಚಾರ್ಯ ಅವರು ಸಾಂಪ್ರದಾಯಿಕ ಹೊರಕಾಣಿಕೆ ಮೆರವಣಿಗೆಗೆ ಚಾಲನೆ ನೀಡಿದರು. ಸಂಸ್ಕೃತಿ ಕಾಲೇಜಿನ ಬಳಿಯಿಂದ ಆರಂಭಗೊಂಡ ಮೆರವಣಿಗೆ ರಥಬೀದಿಯ ಮೂಲಕ ಪುತ್ತಿಗೆ ಮಠಕ್ಕೆ ಸಾಗಿಬಂತು. ತಟ್ಟಿರಾಯ, ನಾಸಿಕ್ ಬ್ಯಾಂಡ್, […]

ಉಡುಪಿ: ಆಡಳಿತಾಧಿಕಾರಿಗಳ ದುರಾಡಳಿತ ವಿರೋಧಿಸಿ ಬಿಜೆಪಿಯಿಂದ ಉಡುಪಿ ನಗರಸಭೆ ಕಚೇರಿಗೆ ಮುತ್ತಿಗೆ

ಉಡುಪಿ: ಉಡುಪಿ ನಗರಸಭೆಯ ಆಡಳಿತಾಧಿಕಾರಿಗಳ ದುರಾಡಳಿತ ಕಾರ್ಯವೈಖರಿಯನ್ನು ವಿರೋಧಿಸಿ ಉಡುಪಿ ನಗರ ಬಿಜೆಪಿ ನೇತೃತ್ವದಲ್ಲಿ ಇಂದು ಉಡುಪಿ ನಗರಸಭೆ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಯಿತು. ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ್ದ ಬಿಜೆಪಿ ಕಾರ್ಯಕರ್ತರು ಪೌರಾಯುಕ್ತರ ವಿರುದ್ಧ ದಿಕ್ಕಾರ ಕೂಗಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಶಾಸಕ ಯಶ್‌ಪಾಲ್ ಸುವರ್ಣ, ಕಳೆದ ಏಳು ತಿಂಗಳುಗಳಿಂದ ನಗರಸಭೆಯಲ್ಲಿ ಭ್ರಷ್ಟಾಚಾರ, ಕಳಪೆ ಕಾಮಗಾರಿ, ದುರಾಡಳಿತ ಹೆಚ್ಚಾಗಿದ್ದು, ಇದರ ವಿರುದ್ಧ ಜನ ರೋಸಿ ಹೋಗಿದ್ದಾರೆ. ಚುನಾಯಿತ ಜನಪ್ರತಿನಿಧಿಗಳ ಆಡಳಿತ ಇಲ್ಲದೆ ವಿವಿಧ ಸೇವೆ ಸವಲತ್ತುಗಳನ್ನು […]