ಉಡುಪಿ ಸಂತೆಕಟ್ಟೆ: ಮೆಡಿಕಲ್ ಶಾಪ್ ಗೆ ನುಗ್ಗಿದ ಶಾಲಾ ವಾಹನ

ಉಡುಪಿ: ಚಾಲಕನ ನಿಯಂತ್ರಣ ತಪ್ಪಿದ ಶಾಲಾ ವಾಹನವೊಂದು ಮೆಡಿಕಲ್ ಶಾಪ್ ಗೆ ನುಗ್ಗಿದ ಘಟನೆ ಉಡುಪಿ ಸಂತೆಕಟ್ಟೆಯಲ್ಲಿ ಇಂದು ಸಂಜೆ ನಡೆದಿದೆ. ಶಾಲಾ ವಾಹನ ಡಿಕ್ಕಿ ಹೊಡೆದ ರಭಸಕ್ಕೆ ಮೆಡಿಕಲ್ ಶಾಪ್ ನ ಗೋಡೆ ಸಂಪೂರ್ಣ ಹಾನಿಗೀಡಾಗಿದೆ.ಇನ್ನೇಷ್ಟೆ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.

ಶಿವಮೊಗ್ಗ ಯುವನಿಧಿ ಯೋಜನೆ ಚಾಲನೆ ಕಾರ್ಯಕ್ರಮಕ್ಕೆ ಜಿಲ್ಲೆಯ ವಿದ್ಯಾರ್ಥಿಗಳ ದುರ್ಬಳಕೆ: ಯಶ್ ಪಾಲ್ ಸುವರ್ಣ ಆಕ್ರೋಶ

ಉಡುಪಿ: ರಾಜ್ಯ ಸರ್ಕಾರದ ಯುವನಿಧಿ ಯೋಜನೆಯ ಚಾಲನೆಗೆ ಶಿವಮೊಗ್ಗದಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಕಡ್ಡಾಯವಾಗಿ ಭಾಗವಹಿಸುವಂತೆ ಉಡುಪಿ ಜಿಲ್ಲೆಯ ವಿದ್ಯಾರ್ಥಿಗಳು ಹಾಗೂ ಶಾಲೆ ಆಡಳಿತ ಮಂಡಳಿಗೆ ಒತ್ತಡ ಹೇರುತ್ತಿರುವ ರಾಜ್ಯ ಸರ್ಕಾರದ ಕ್ರಮಕ್ಕೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚುನಾವಣೆಯಲ್ಲಿ ಘೋಷಿಸಿರುವ ಯುವನಿಧಿ ಕಾರ್ಯಕ್ರಮವನ್ನು ಅಧಿಕಾರಕ್ಕೆ ಬಂದು ಸುಮಾರು 7 ತಿಂಗಳು ಕಳೆದರೂ ಅನುಷ್ಠಾನ ಮಾಡದ ರಾಜ್ಯ ಸರ್ಕಾರ ಇದೀಗ ಲೋಕಸಭಾ ಚುನಾವಣೆಯ ಹೊಸ್ತಿಲಲ್ಲಿ ಹಲವು ಕಠಿಣ […]

ಉಡುಪಿ ಪರ್ಯಾಯೋತ್ಸವದಲ್ಲಿ ಪ್ರವಾಸಿಗರ ವಾಸ್ತವ್ಯಕ್ಕೆ ಸಕಲ ಸಿದ್ಧತೆ..!

ಉಡುಪಿ: ಶ್ರೀಕೃಷ್ಣ ಮಠದಲ್ಲಿ ಜರಗುವ ಪ್ರಸಕ್ತ ಸಾಲಿನ ಪರ್ಯಾಯ ಮಹೋತ್ಸವದ ಹಿನ್ನೆಲೆ, ಜಿಲ್ಲೆಯ ಎಲ್ಲಾ ಹೋಟೆಲ್, ರೆಸಾರ್ಟ್, ಹೋಮ್ ಸ್ಟೇ ಹಾಗೂ ಪ್ರವಾಸಿ ಸ್ಥಳಗಳನ್ನು ದೀಪಾಲಂಕೃತಗೊಳಿಸುವುದರೊ೦ದಿಗೆ, ಜಿಲ್ಲೆಗೆ ಭೇಟಿ ನೀಡುವ ಪ್ರವಾಸಿಗರಿಗೆ ಯಾವುದೇ ರೀತಿಯಲ್ಲಿ ತೊಂದರೆ ಆಗದಂತೆ ಕೊಠಡಿಗಳನ್ನು ಕಾಯ್ದಿರಿಸಿ, ಸ್ವಚ್ಛತೆ, ಸುರಕ್ಷತೆ ಕಾಪಾಡುವುದರೊಂದಿಗೆ ಜಿಲ್ಲೆಯ ಪ್ರಸಿದ್ಧ ಊಟ ಉಪಹಾರಗಳನ್ನು ಒದಗಿಸಿ, ಬರುವಂತ ಪ್ರವಾಸಿಗರನ್ನು ಸತ್ಕರಿಸಿ ಶ್ರೀ ಕೃಷ್ಣ ಮಠದ ಪರ್ಯಾಯೋತ್ಸವಕ್ಕೆ ಮೆರಗನ್ನು ಒದಗಿಸುವಂತೆ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರ ಕಛೇರಿ ಪ್ರಕಟಣೆ ತಿಳಿಸಿದೆ.

ಉಡುಪಿ: ಅಂಬಲಪಾಡಿ ಶ್ರೀ ಲಕ್ಷ್ಮೀಜನಾರ್ದನ ದೇವಸ್ಥಾನಕ್ಕೆ ಪುತ್ತಿಗೆ ಶ್ರೀ ಭೇಟಿ

ಉಡುಪಿ: ಭಾವಿ ಪರ್ಯಾಯ ಪುತ್ತಿಗೆ ಮಠಾಧೀಶರಾದ ಸುಗುಣೇಂದ್ರತೀರ್ಥ ಶ್ರೀಪಾದರು ಉಡುಪಿಯ ಅಂಬಲಪಾಡಿ ಶ್ರೀ ಲಕ್ಷ್ಮೀಜನಾರ್ದನ ದೇವಸ್ಥಾನಕ್ಕೆ ಇಂದು ಭೇಟಿ ನೀಡಿ ದೇವರ ದರ್ಶನ ಮಾಡಿದರು. ದೇವಸ್ಥಾನದ ಧರ್ಮದರ್ಶಿ ಡಾ. ವಿಜಯ ಬಲ್ಲಾಳ್ ಅವರು ಆತ್ಮೀಯವಾಗಿ ಬರಮಾಡಿಕೊಂಡು, ಶ್ರೀಗಳಿಗೆ ಗೌರವಾರ್ಪಣೆ ಸಲ್ಲಿಸಿದರು.

ಭೂಮಿ ಹೊಂದಿರುವ ರೈತ ಮಹಿಳೆಯರಿಗೆ ಕಿಸಾನ್ ಸಮ್ಮಾನ್ ನಿಧಿ ದುಪ್ಪಟ್ಟು? ಮಧ್ಯಂತರ ಬಜೆಟ್ ನಲ್ಲಿ ಘೋಷಣೆ ಸಾಧ್ಯತೆ?

ನವದೆಹಲಿ: ಫೆಬ್ರವರಿ 1 ರಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸತತ ಆರನೇ ಬಾರಿಗೆ ಬಜೆಟ್ ಮಂಡಿಸಲಿದ್ದಾರೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಇದು ಸಾಮಾನ್ಯ ಬಜೆಟ್ ಆಗಿರದೆ ಮಧ್ಯಂತರ ಬಜೆಟ್ ಆಗಲಿದೆ. ಚುನಾವಣಾ ವರ್ಷದ ಬಜೆಟ್ ಆಗಿರುವುದರಿಂದ ಎಲ್ಲರ ಕಣ್ಣು ಅದರತ್ತ ನೆಟ್ಟಿದೆ. ಪ್ರತಿ ಬಾರಿಯಂತೆ, ದೇಶದ ಸಂಬಳ ಪಡೆಯುವ ಮತ್ತು ಮಧ್ಯಮ ವರ್ಗವು ಬಜೆಟ್‌ನಿಂದ ಹೆಚ್ಚಿನ ನಿರೀಕ್ಷೆಗಳನ್ನು ಹೊಂದಿದೆ. ಬಜೆಟ್‌ಗೂ ಮುನ್ನ ಮೋದಿ ಸರ್ಕಾರವು ಭೂಮಿ ಹೊಂದಿರುವ ರೈತ ಮಹಿಳೆಯರಿಗೆ ಪ್ರಧಾನ ಮಂತ್ರಿ ಕಿಸಾನ್ […]