ಅಫ್ಘಾನಿಸ್ತಾನದಲ್ಲಿ 6.1 ತೀವ್ರತೆಯ ಭೂಕಂಪ: ದೆಹಲಿಯಲ್ಲಿ ಕಂಪನದ ಅನುಭವ!
ನವದೆಹಲಿ: ದೆಹಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗುರುವಾರ ಭೂಕಂಪನದ ಅನುಭವವಾಗಿದೆ. ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರದ ಪ್ರಕಾರ, 6.1 ತೀವ್ರತೆಯ ಭೂಕಂಪದ ಕೇಂದ್ರಬಿಂದು ಅಫ್ಘಾನಿಸ್ತಾನದ ಸಮೀಪದಲ್ಲಿದೆ. ಮಧ್ಯಾಹ್ನ 2.50ಕ್ಕೆ ಕಂಪನದ ಅನುಭವವಾಗಿದೆ ಎಂದು ಅದು ಹೇಳಿದೆ. ಪಾಕಿಸ್ತಾನದ ಲಾಹೋರ್ ಮತ್ತು ಪೂಂಚ್ ಸೇರಿದಂತೆ ಜಮ್ಮು ಮತ್ತು ಕಾಶ್ಮೀರದ ಕೆಲವು ಭಾಗಗಳಲ್ಲಿ ಕಂಪನದ ಅನುಭವವಾಗಿದೆ. ಭೂಕಂಪದಿಂದ ಯಾವುದೇ ಪ್ರಾಣಹಾನಿ, ಆಸ್ತಿಪಾಸ್ತಿ ಹಾನಿಯಾದ ಬಗ್ಗೆ ತಕ್ಷಣಕ್ಕೆ ವರದಿಯಾಗಿಲ್ಲ.
ಚಿತ್ರಮಂದಿರಗಳಲ್ಲಿ ತೆರೆಕಾಣಲಿದೆ ‘ಹನುಮಾನ್’: ಪ್ರತಿ ಟಿಕೆಟ್‌ನಿಂದ 5 ರೂ ರಾಮಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡಿಕೆ
ಹೈದರಾಬಾದ್: ತೆಲುಗು ನಟ ತೇಜ ಸಜ್ಜ ಮತ್ತು ನಿರ್ದೇಶಕ ಪ್ರಶಾಂತ್ ವರ್ಮಾ ಅವರ ‘ಹನುಮಾನ್’ ಜನವರಿ 12 ರಂದು ಸಂಕ್ರಾಂತಿ ಸಂದರ್ಭದಲ್ಲಿ ಚಿತ್ರಮಂದಿರಗಳಲ್ಲಿ ಅದ್ಧೂರಿಯಾಗಿ ಬಿಡುಗಡೆಯಾಗಲಿದೆ. ಹೈದರಾಬಾದ್ ನಲ್ಲಿ ನಡೆದ ಚಿತ್ರದ ಬಿಡುಗಡೆ ಪೂರ್ವ ಸಮಾರಂಭದಲ್ಲಿ ಮೆಗಾಸ್ಟಾರ್ ಚಿರಂಜೀವಿ ಭಾಗವಹಿಸಿ ‘ಹನುಮಾನ್’ ನಿರ್ಮಾಪಕರು ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಪ್ರತಿ ಟಿಕೆಟ್‌ನಿಂದ ರೂ 5 ದೇಣಿಗೆ ನೀಡಲು ವಾಗ್ದಾನ ಮಾಡಿದ್ದಾರೆ ಮತ್ತು ತಂಡದ ವತಿಯಿಂದ ಈ ಸುದ್ದಿಯನ್ನು ತಿಳಿಸುವಂತೆ ಆಗ್ರಹಿಸಿದ್ದಾರೆ ಎಂದು ಮಾಹಿತಿ ನೀಡಿದ್ದರು. ಇಂದು ಚಿತ್ರದ […]
MRPL ನೇಮಕಾತಿ 2024: ಅಗ್ನಿಶಾಮಕ, ಕಾರ್ಯದರ್ಶಿ ಹಾಗೂ ವ್ಯವಸ್ಥಾಪಕ ಹುದ್ದೆಗಳು ಖಾಲಿ; ಮಾಸಿಕ ವೇತನ 220000/-
ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL) ನಲ್ಲಿ ಸಹಾಯಕ ಇಂಜಿನಿಯರ್ (ಅಗ್ನಿಶಾಮಕ), ಸಹಾಯಕ ಕಾರ್ಯನಿರ್ವಾಹಕ (ಕಾರ್ಯದರ್ಶಿ) ಮತ್ತು ವ್ಯವಸ್ಥಾಪಕ (ಸುರಕ್ಷತೆ) ಹುದ್ದೆಗಳು ಖಾಲಿ ಇವೆ. MRPL ನೇಮಕಾತಿ 2024 ರ ಅಧಿಕೃತ ಅಧಿಸೂಚನೆಯ ಪ್ರಕಾರ, ನಿಯೋಜಿಸಲಾದ ಹುದ್ದೆಗೆ ಗರಿಷ್ಠ ವಯಸ್ಸಿನ ಮಿತಿಯು 40 ವರ್ಷಗಳನ್ನು ಮೀರಿರಬಾರದು. ಸಾಮಾನ್ಯ, ಒಬಿಸಿ ಮತ್ತುಇ.ಡಬ್ಯೂ.ಎಸ್ ವರ್ಗದ ಅರ್ಜಿದಾರರಿಗೆ ಮರುಪಾವತಿಸಲಾಗದ ಅರ್ಜಿ ಶುಲ್ಕ 118 ರೂ. ಎಸ್‌ಸಿ, ಎಸ್‌ಟಿ, ಪಿಡಬ್ಲ್ಯೂಬಿಡಿ ಮತ್ತು ಮಾಜಿ ಸೈನಿಕ ವರ್ಗಗಳಿಗೆ ಅರ್ಜಿ ಶುಲ್ಕ ಪಾವತಿಯಿಂದ ವಿನಾಯಿತಿ […]
ಬೈಂದೂರು: ಎಟಿಎಂನಿಂದ ಹಣ ಡ್ರಾ ಮಾಡಿ ತೆಗೆದುಕೊಡುವುದಾಗಿ ನಂಬಿಸಿ ವಂಚನೆ.
ಬೈಂದೂರು: ಎಟಿಎಂನಿಂದ ಹಣ ತೆಗೆದುಕೊಡುವುದಾಗಿ ನಂಬಿಸಿ ಕಾರ್ಡ್ ಪಡೆದು ಬದಲಾಯಿಸಿ, ಹಣ ಡ್ರಾ ಮಾಡಿ ವಂಚಿಸುವ ಜಾಲವೊಂದು ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಕ್ರಿಯವಾಗಿರುವುದು ಬೆಳಕಿಗೆ ಬಂದಿದೆ. ಜ.9ರಂದು ಒಂದೇ ದಿನ ಈ ರೀತಿ ವಂಚನೆಗೆ ಒಳಗಾದವರು ನೀಡಿರುವ ದೂರಿನಂತೆ ಮೂರು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಜ.9ರಂದು ಬೆಳಗ್ಗೆ 10 ಗಂಟೆಗೆ ಶಿರೂರು ಮಾರ್ಕೆಟ್ ಬಳಿಯ ಕೆನರಾ ಬ್ಯಾಂಕ್ ಎಟಿಎಂನಲ್ಲಿ ಶಿರೂರಿನ ಚೈತ್ರಾ ಎಂಬವರಿಗೆ, ಬೆಳಗ್ಗೆ 10:15ಕ್ಕೆ ಶಿರೂರು ಅರ್ಬನ್ ಬ್ಯಾಂಕಿನ ಎಟಿಎಂನಲ್ಲಿ ಶಿರೂರಿನ ಬಲ್ಕೀಸ್ ಬಾನು […]
ಅಯೋಧ್ಯೆಯಲ್ಲಿ ಕನ್ನಡಿಗರಿಗಾಗಿ ಅತಿಥಿ ಗೃಹ ನಿರ್ಮಿಸಲು ರಾಜ್ಯ ಸರ್ಕಾರ ಸಿದ್ದತೆ
ಬೆಂಗಳೂರು: ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಾಣ ಕಾರ್ಯ ಅಂತಿಮ ಹಂತದಲ್ಲಿದ್ದು, ಇನ್ನೇನು ಕೆಲವೇ ದಿನಗಳಲ್ಲಿ ರಾಮಲಲ್ಲಾನ ಪ್ರಾಣಪ್ರತಿಷ್ಠೆ ಕಾರ್ಯ ನೆರವೇರಲಿದೆ. ದೇಶ ವಿದೇಶಗಳಿಂದ ಲಕ್ಷಾಂತರ ಭಕ್ತರು ಇನ್ನು ಮುಂದೆ ಅಯೋಧ್ಯೆಗೆ ಭೇಟಿ ನೀಡಲಿದ್ದು, ಎಲ್ಲಾ ರಾಜ್ಯಗಳೂ ಅತಿಥಿ ಗೃಹ ನಿರ್ಮಾಣ ಮಾಡುವತ್ತ ಚಿತ್ತ ಹರಿಸಿದೆ. ಕರ್ನಾಟಕ ಸರ್ಕಾರವು ಕೂಡ ರಾಜ್ಯದ ರಾಮ ಭಕ್ತರಿಗೆ ಅಯೋಧ್ಯೆಯಲ್ಲಿ ಕರ್ನಾಟಕ ಯಾತ್ರಿಗಳಿಗಾಗಿಯೇ ಅತಿಥಿ ಗೃಹ ನಿರ್ಮಾಣ ಮಾಡಲು ಮುಂದಾಗಿದೆ. ಅಯೋಧ್ಯೆಯಲ್ಲಿ ಕನ್ನಡಿಗರಿಗಾಗಿ ಅತಿಥಿ ಗೃಹ ನಿರ್ಮಿಸಲು ಅನುಮತಿ ನೀಡುವಂತೆ ರಾಜ್ಯದ […]