ಉಡುಪಿ: ಆಕಸ್ಮಿಕವಾಗಿ ಬಾವಿಗೆ ಬಿದ್ದ ವ್ಯಕ್ತಿಯ ರಕ್ಷಣೆ

ಉಡುಪಿ: ಉಡುಪಿ ಶ್ರೀಕೃಷ್ಣ ಮಠಕ್ಕೆ ಬಂದಿದ್ದ ಭಕ್ತರೊಬ್ಬರು ಆಕಸ್ಮಿಕವಾಗಿ ಬಾವಿಗೆ ಬಿದ್ದ ಘಟನೆ ವರದಿಯಾಗಿದೆ. ಬಾಗಲಕೋಟೆ ಮೂಲದ ಸಂತೋಷ್ ಎಂಬ ವ್ಯಕ್ತಿ ಬಾವಿಗೆ ಬಿದ್ದವರು. ಗುರುವಾರ ಸಾಯಂಕಾಲ ಶೀರಿಬೀಡು ಆವರಣದಲ್ಲಿರುವ ಬಾವಿಕಟ್ಟೆ ಮೇಲೆ ಕುಳಿತಿದ್ದ ಸಂತೋಷ್ ಆಯತಪ್ಪಿ ಬಾವಿಗೆ ಬಿದ್ದಿದ್ದಾರೆ. ಬಾವಿಯಲ್ಲಿ ಮುಳುಗುವಷ್ಟು ನೀರಿಲ್ಲದಿದ್ದ ಕಾರಣ ಸಂತೋಷ್‌ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಾವಿಗೆ ಬಿದ್ದ ಸಂತೋಷ್‌ನ ರಕ್ಷಣೆಗೆ ಸಾಮಾಜಿಕ ಕಾರ್ಯಕರ್ತ ನಿತ್ಯಾನಂದ ಒಳಕಾಡು ಧಾವಿಸಿದ್ದಾರೆ. ಬಳಿಕ ಬಾವಿಗೆ ಹಗ್ಗ ಇಳಿ ಬಿಟ್ಟು ಸ್ಥಳೀಯರ ಸಹಾಯದಿಂದ ಮೇಲಕ್ಕೆತ್ತಿದ್ದಾರೆ. ಬಾವಿಗೆ ರಭಸವಾಗಿ […]

ರಾಮಲಲ್ಲಾ ಪ್ರಾಣ ಪ್ರತಿಷ್ಠೆಗೂ ಮೊದಲು 11 ದಿನಗಳ ಅನುಷ್ಠಾನ ಕೈಗೊಳ್ಳಲಿರುವ ಪ್ರಧಾನಿ ಮೋದಿ

ಅಯೋಧ್ಯಾ: ಅಯೋಧ್ಯೆಯ ರಾಮಮಂದಿರದಲ್ಲಿ ಜನವರಿ 22 ರ ‘ಪ್ರಾಣ ಪ್ರತಿಷ್ಠೆ’ ಸಮಾರಂಭದ ಮೊದಲು 11 ದಿನಗಳ ಅನುಷ್ಠಾನ ಕೈಗೊಳ್ಳುವುದಾಗಿ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಘೋಷಿಸಿದ್ದಾರೆ. “ಅಯೋಧ್ಯೆಯಲ್ಲಿ ರಾಮಲಲ್ಲಾ ವಿಗ್ರಹದ ‘ಪ್ರಾಣ ಪ್ರತಿಷ್ಠೆ’ಗೆ ಕೇವಲ 11 ದಿನಗಳು ಉಳಿದಿವೆ. ಶುಭ ಸಮಾರಂಭಕ್ಕೆ ಸಾಕ್ಷಿಯಾಗುವ ಭಾಗ್ಯ ನನ್ನದು. ಸಮಾರಂಭದಲ್ಲಿ ಭಾರತದ ಜನರನ್ನು ಪ್ರತಿನಿಧಿಸಲು ದೇವರು ನನ್ನನ್ನು ಕೇಳಿದ್ದಾನೆ. ಇದನ್ನು ಗಮನದಲ್ಲಿಟ್ಟುಕೊಂಡು, ನಾನು ಇಂದಿನಿಂದ 11 ದಿನಗಳ ವಿಶೇಷ ಆಚರಣೆಯನ್ನು ಪ್ರಾರಂಭಿಸುತ್ತಿದ್ದೇನೆ. ನಾನು ನಿಮ್ಮೆಲ್ಲರ ಆಶೀರ್ವಾದವನ್ನು ಕೋರುತ್ತೇನೆ” ಎಂದು ಪ್ರಧಾನಿ […]

ಪುತ್ತಿಗೆ ಪರ್ಯಾಯ: ಜ 17 – 18 ರಂದು ಉಡುಪಿಯಲ್ಲಿ ವಾಹನ ಸಂಚಾರ ಈ ರೀತಿ ಇರಲಿದೆ

ಉಡುಪಿ: ಜಿಲ್ಲೆಯ ಶ್ರೀ ಕೃಷ್ಣ ಮಠದಲ್ಲಿ ನಡೆಯುವ ಪರ್ಯಾಯ ಮಹೋತ್ಸವದ ಹಿನ್ನೆಲೆ, ಉಡುಪಿ ನಗರ ವ್ಯಾಪ್ತಿಯಲ್ಲಿ ಜನವರಿ 17 ಮತ್ತು 18 ರಂದು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿರುವುದರಿಂದ ಸಾರ್ವಜನಿಕರಿಗೆ ಹಾಗೂ ಭಕ್ತಾದಿಗಳಿಗೆ ವಾಹನಗಳ ಸುಗಮ ಸಂಚಾರಕ್ಕೆ ಅನುಕೂಲವಾಗುವಂತೆ ಹಿನ್ನಲೆ ಮೋಟಾರು ವಾಹನ ಕಾಯ್ದೆ 1988 ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನ ನಿಯಮ 1989 ರ ನಿಯಮ 221 5(ಎ)ರ ಅನ್ವಯ ಈ ಕೆಳಕಂಡ ರಸ್ತೆಗಳಿಗೆ ಬದಲಿ ಮಾರ್ಗ ಹಾಗೂ ವಾಹನ ಸಂಚಾರ […]

ಜ 28 ರಂದು ಕಾನ್ಸ್ಟೇಬಲ್ ಹುದ್ದೆಗೆ ಲಿಖಿತ ಪರೀಕ್ಷೆ

ಉಡುಪಿ: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ (ಸಿಎಆರ್ ಮತ್ತು ಡಿಎಆರ್ – ಪುರುಷ ಮತ್ತು ತೃತೀಯ ಲಿಂಗ ಪುರುಷ) 3064 ಹುದ್ದೆಗಳಿಗೆ ಜನವರಿ 28 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 12.30 ರ ವರೆಗೆ ರಾಜ್ಯಾದ್ಯಂತ ಲಿಖಿತ ಪರೀಕ್ಷೆ ನಡೆಯಲಿದೆ. ಸದರಿ ಲಿಖಿತ ಪರೀಕ್ಷೆಗೆ ಅರ್ಹರಿರುವ ಅಭ್ಯರ್ಥಿಗಳಿಗೆ ಕರೆಪತ್ರದ ಮೂಲಕ ಮುಂಬರುವ ದಿನಗಳಲ್ಲಿ ಎಸ್.ಎಂ.ಎಸ್ ಮೂಲಕ ಮಾಹಿತಿ ನೀಡಲಾಗುವುದು ಹಾಗೂ ಕರೆಪತ್ರದ ಲಿಂಕ್ ಅನ್ನು ಸಹ ಕಳುಹಿಸಲಾಗುವುದು. ಅಭ್ಯರ್ಥಿಗಳು […]

ಬೆಳ್ತಂಗಡಿ: ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಖಾಸಗಿ ಕಾಲೇಜು ವಿದ್ಯಾರ್ಥಿ..!

ಬೆಳ್ತಂಗಡಿ: ಖಾಸಗಿ ಪದವಿ ಕಾಲೇಜೊಂದರ ವಿದ್ಯಾರ್ಥಿ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದಲ್ಲಿ ಗುರುವಾರ ನಡೆದಿದೆ. ಮಡಂತ್ಯಾರು ಮಾರಿಗುಡಿ ಹೊಸಮನೆ ನಿವಾಸಿ ಪ್ರಶಾಂತ್ ಬಾಳಿಗ ಎಂಬವರ ಪುತ್ರ ಪ್ರತೀಕ್ ಬಾಳಿಗ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಈತ ಪ್ರಥಮ ಬಿಎ ವಿದ್ಯಾರ್ಥಿಯಾಗಿದ್ದು, ಪ್ರಥಮ ಸೆಮಿಸ್ಟರ್ ಪರೀಕ್ಷೆ ಬರೆಯುತ್ತಿದ್ದು ಗುರುವಾರ ಪರೀಕ್ಷೆ ಇಲ್ಲದ ಕಾರಣ ಮನೆಯಲ್ಲೇ ಇದ್ದ ಎನ್ನಲಾಗಿದೆ. ಈ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.