ಉಡುಪಿ: ಖ್ಯಾತ ವಕೀಲ ಜಿ.ಮೋಹನ್ ದಾಸ್ ಶೆಟ್ಟಿ ಹೃದಯಾಘಾತದಿಂದ ನಿಧನ

ಉಡುಪಿ: ಜಿಲ್ಲೆಯ ಖ್ಯಾತ ವಕೀಲರಾದ ಜಿ ಮೋಹನ್ ದಾಸ್ ಶೆಟ್ಟಿ ಅವರು ಹೃದಯಾಘಾತದಿಂದ ಇಂದು ನಿಧನ ಹೊಂದಿದರು. ಮನೆಯಲ್ಲಿ ಇರುವಾಗ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಮೋಹನ್ ಶೆಟ್ಟಿ ಅವರ ನಿಧನಕ್ಕೆ ಉಡುಪಿ ಬಾರ್ ಕೌನ್ಸಿಲ್ ತೀವ್ರ ಸಂತಾಪ ವ್ಯಕ್ತಪಡಿಸಿದೆ.

ಐತಿಹಾಸಿಕ ಕೀಳಂಜೆ ಶ್ರೀ ಮಹಾವಿಷ್ಣು ಮಹಾಲಿಂಗೇಶ್ವರ ದೇವಸ್ಥಾನ: ಮುಷ್ಟಿ ಕಾಣಿಕೆ ಸಮರ್ಪಣೆ

ಉಡುಪಿ: ಪುರಾತನ ಪ್ರಸಿದ್ಧ 8 ನೇ ಶತಮಾನದ ಗಾಲವ ಋಷಿ ತಪಸ್ಸು ಮಾಡಿದ್ದ ಕೀಳಂಜೆ ಶ್ರೀ ಮಹಾವಿಷ್ಣು ಮಹಾಲಿಂಗೇಶ್ವರ ದೇವಸ್ಥಾನ ಹಾಗೂ ಹರಿಹರ ತೀರ್ಥದ ಸಮಗ್ರ ಜೀರ್ಣೋದ್ಧಾರ ಪ್ರಯುಕ್ತ ಮುಷ್ಟಿ ಕಾಣಿಕೆಯಾದಿ ಪ್ರಾಯಶ್ಚಿತ್ತ ಹೋಮಾದಿಗಳು ಉಡುಪಿ ಪೇಜಾವರ ಮಠದ ಶ್ರೀ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀ ಪಾದಂಗಳವರ ಆಶೀರ್ವಾದದೊಂದಿಗೆ ಜ.22 ರಿಂದ ಪ್ರಾರಂಭವಾಗಲಿದೆ. ಜ.22 ಸೋಮವಾರದಂದು ಬೆಳಿಗ್ಗೆ 8 ಗಂಟೆಗೆ ಸಾಮೂಹಿಕ ಪ್ರಾರ್ಥನೆ, ಗಣಹೋಮ, ಭದ್ರದೀಪ ಸಮರ್ಪಣೆ, ಮುಷ್ಟಿ ಕಾಣಿಕೆ, ಮೃತ್ಯುಂಜಯ ಹೋಮ ಹಾಗು ಇತರ ಹೋಮಗಳು […]

ಪೆಟ್ರೋಲಿಯಂ ಸಚಿವಾಲಯದ ನಿರ್ದೇಶಕ ಕುಶಾಗ್ರ ಮಿತ್ತಲ್ ಶ್ರೀಕೃಷ್ಣ ಮಠ ಭೇಟಿ

ಉಡುಪಿ: ಭಾರತ ಸರಕಾರದ ಪೆಟ್ರೋಲಿಯಂ ಸಚಿವಾಲಯದ ನಿರ್ದೇಶಕ(ಎಲ್.ಪಿ.ಜಿ) ಕುಶಾಗ್ರ ಮಿತ್ತಲ್ ಶ್ರೀಕೃಷ್ಣ ಮಠಕ್ಕಾಗಮಿಸಿ ದೇವರ ದರ್ಶನ ಪಡೆದುಕೊಂಡು ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಪರ್ಯಾಯ ಮಠ ದಿವಾನ ವರದರಾಜ ಭಟ್,ಬಾಲಾಜಿ ಎಚ್, ಪಿ. ಗ್ಯಾಸ್ ನ ರಾಘವೇಂದ್ರ ಆಚಾರ್ಯ ಉಪಸ್ಥಿತರಿದ್ದರು.

ಮಂಗಳೂರು: ಜ.14 ರಂದು ಕ್ರಿಶ್ಚಿಯನ್ ಸ್ಪೋರ್ಟ್ಸ್ ಎಸೋಸಿಯೇಷನ್ ವತಿಯಿಂದ ಬ್ಯಾಡ್ಮಿಂಟನ್ ಪ್ರೀಮಿಯರ್ ಲೀಗ್

ಮಂಗಳೂರು: ಜ.14 ರಂದು ಪೂರ್ವಾಹ್ನ 9 ಗಂಟೆಗೆ ಫಾದರ್ ಮುಲ್ಲರ್ ಒಳಾಂಗಣ ಕ್ರೀಡಾಂಗಣದಲ್ಲಿ ಕ್ರಿಶ್ಚಿಯನ್ ಸ್ಪೋರ್ಟ್ಸ್ ಎಸೋಸಿಯೇಷನ್ ಇವರ ವತಿಯಿಂದ ಕ್ರಿಶ್ಚಿಯನ್ ಬ್ಯಾಡ್ಮಿಂಟನ್ ಪ್ರೀಮಿಯರ್ ಲೀಗ್ ಆಯೋಜಿಸಲಾಗಿದೆ. ಇದು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ, ಕ್ರಿಶ್ಚಿಯನ್ ಸಮುದಾಯದವರ ಮಧ್ಯೆ ನಡೆಯುವ ಚೊಚ್ಚಲ ಪಂದ್ಯವಾಗಿದೆ. ಒಟ್ಟು 6 ತಂಡಗಳಿದ್ದು ಆಲ್ವಿನ್ ಪಿಂಟೊ ಮಾಲಕತ್ವದ ಉಡುಪಿಯ ರೊಯ್ ರೊಕರ್ಸ್, ವಲೇರಿಯನ್ ಪಾಯ್ಸ್ ಮಾಲಕತ್ವದ ಪಾಯ್ಸ್ ಶಟಲಾರ್ಸ್, ಜೆಸ್ಸನ್ ಮೋರಸ್ ಮಾಲಕತ್ವದ ಸ್ಪೋರ್ಟ್ಸ್ ಗ್ಯಾರೇಜ್, ಲವೀನಾ ಪಿಂಟೊ ಮಾಲಕತ್ವದ ರೆಡ್ […]

ಸುಬ್ರಹ್ಮಣ್ಯ: ಅನಾರೋಗ್ಯದಿಂದ ಪದವಿ ಕಾಲೇಜು ವಿದ್ಯಾರ್ಥಿನಿ ನಿಧನ

ಸುಬ್ರಹ್ಮಣ್ಯ: ಅನಾರೋಗ್ಯದಿಂದ ಪದವಿ ಕಾಲೇಜು ವಿದ್ಯಾರ್ಥಿನಿಯೋರ್ವರು ಮೃತಪಟ್ಟ ಘಟನೆ ಜ.11ರ ರಾತ್ರಿ ನಡೆದಿದೆ. ಕಡಬ ತಾಲೂಕಿನ ಎಡಮಂಗಲ ಗ್ರಾಮದ ಗಂಡಿತಡ್ಕ ನಿವಾಸಿ ರಾಮಚಂದ್ರ ನಾಯ್ಕ ಅವರ ಪುತ್ರಿ ತೃಪ್ತಿ (20) ಮೃತರು. ಅವರು ತಂದೆ, ತಾಯಿ, ಸಹೋದರಿಯನ್ನು ಅಗಲಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯದ ಪದವಿ ಕಾಲೇಜಿನ ದ್ವಿತೀಯ ಬಿಕಾಂ ವಿದ್ಯಾರ್ಥಿಯಾಗಿದ್ದ ತೃಪ್ತಿ ಅವರು ಕೆಲವು ದಿನಗಳ ಹಿಂದೆ ಅನಾರೋಗ್ಯಕ್ಕೆ ತುತ್ತಾಗಿದ್ದು, ಪುತ್ತೂರು ಆಸ್ಪತ್ರೆಗೆ ಕರೆದೊಯ್ದು, ಬಳಿಕ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫ‌ಲಕಾರಿಯಾಗದೆ ಗುರುವಾರ ರಾತ್ರಿ […]