ವಿಕಲಚೇತನರಿಗೆ ಬ್ಯಾಟರಿ ಚಾಲಿತ ವೀಲ್ ಚೇರ್ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
ಉಡುಪಿ: ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ರಾಜ್ಯದಲ್ಲಿ ಕನಿಷ್ಠ 10 ವರ್ಷಗಳಿಂದ ವಾಸವಿದ್ದು, ವಾರ್ಷಿಕ ಆದಾಯ ರೂ.2.00 ಲಕ್ಷ ಒಳಗಿರುವ, ಶೇ. 75 ಮತ್ತು ಅದಕ್ಕಿಂತ ಹೆಚ್ಚಿನ ದೈಹಿಕ ವಿಕಲತೆ ಹೊಂದಿದ ಅರ್ಹ ವಿಕಲಚೇತನರಿಂದ ಬ್ಯಾಟರಿ ಚಾಲಿತ ವೀಲ್ ಚೇರ್ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜನವರಿ 31 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ದೂ.ಸಂಖ್ಯೆ: 0820- 2574810, 0820-2574811, ಅಥವಾ ವಿಕಲಚೇತನರ […]
ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರ ಮಠದಲ್ಲಿ ಬಾಲ ಭೋಜನ
ಉಡುಪಿ: ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರ ಮಠದ ಪ್ರಥಮ ಪ್ರತಿಷ್ಠಾ ವರ್ಧಂತಿ ಅಂಗವಾಗಿ ಸ್ವಾಮಿ ಸನ್ನಿಧಿಯಲ್ಲಿ ಗಣೇಶ ಯಜ್ಞ ನಡೆಯಿತು. ಧಾರ್ಮಿಕ ಪೂಜಾ ವಿಧಾನಗಳನ್ನು ಪ್ರಧಾನ ಅರ್ಚಕ ರಮೇಶ ಸುಲಾಖೆ ನಡೆಸಿಕೊಟ್ಟರು. ಮಹಾ ಪೂಜೆಯ ಬಳಿಕ ಫಲ ಪೂಜೆ ಹಾಗೂ ಬಾಲ ಭೋಜನಕ್ಕೆ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರ ಮಠದ ಎಂ.ಡಿ ಟ್ರಸ್ಟಿ ಕೆ. ಕೆ ಅವರ್ಸೆಕರ್ ಮುಂಬೈ ಇವರು ಚಾಲನೆ ನೀಡಿ ಶುಭ ಹಾರೈಸಿದರು. ಸಾರ್ವಜನಿಕ ಅನ್ನಸಂತರ್ಪಣೆಯಲ್ಲಿ ಸಾವಿರಾರು ಭಕ್ತರು ಭೋಜನ ಪ್ರಸಾದ ಸ್ವೀಕರಿಸಿದರು. ಭಗವಾನ್ […]
ಜ.18 ರಂದು ಸಂಸದರಿಂದ ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಾಂಗಣದ ಸ್ವಚ್ಛತೆ
ಉಡುಪಿ: ಅಯೋಧ್ಯೆ ರಾಮಮಂದಿರದಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠೆಯ ಮಂಗಳ ಕಾರ್ಯದ ನಿಮಿತ್ತ ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಜನವರಿ 12 ರಿಂದ 22ರವರೆಗೆ ನಾವೆಲ್ಲರೂ ಸೇರಿ ದೇಶದ ತೀರ್ಥಕ್ಷೇತ್ರಗಳನ್ನು, ಮಂದಿರಗಳನ್ನು ಸ್ವಚ್ಛಗೊಳಿಸಬೇಕು ಎಂಬ ಕರೆಯನ್ನು ನೀಡಿದ್ದು, ಆ ಪ್ರಯುಕ್ತ ಜ.18 ರಂದು ಬೆಳಿಗ್ಗೆ 9.30ಕ್ಕೆ ಉಡುಪಿ ಜಿಲ್ಲೆಯ ಪ್ರಸಿದ್ಧ ಕ್ಷೇತ್ರವಾದ ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಾಂಗಣವನ್ನು ಕೇಂದ್ರ ಸಚಿವೆ ಹಾಗೂ ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆಯವರು ಉಡುಪಿಯ ಶಾಸಕ ಯಶಪಾಲ್ ಸುವರ್ಣ […]
ಜ.19 ರಿಂದ 25ರ ವರೆಗೆ “ಸಪ್ತಸಾಗರದಾಚೆ ಪುತ್ತಿಗೆ ಶ್ರೀಗಳ ದೈವಿಕ ಸಚಿತ್ರ ದಿನಚರಿ” ಛಾಯಾಚಿತ್ರ ಪ್ರದರ್ಶನ
ಉಡುಪಿ: ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥ ಸ್ವಾಮೀಜಿಗಳ ಚತುರ್ಥ ವಿಶ್ವಗೀತಾ ಪರ್ಯಾಯದ ಅಂಗವಾಗಿ “ಸಪ್ತಸಾಗರದಾಚೆ ಪುತ್ತಿಗೆ ಶ್ರೀಗಳ ದೈವಿಕ ಸಚಿತ್ರ ದಿನಚರಿ” ಛಾಯಾಚಿತ್ರ ಪ್ರದರ್ಶನ ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಜ. 18 ರಂದು ಉದ್ಘಾಟನೆಗೊಳ್ಳಲಿದೆ. ಕೊಡವೂರಿನ ಉಡುಪ ರತ್ನ ಪ್ರತಿಷ್ಠಾನದ ಸಹಯೋಗದೊಂದಿಗೆ ಈ ಛಾಯಾಚಿತ್ರ ಪ್ರದರ್ಶನ ಆಯೋಜಿಸಲಾಗಿದೆ. ಉದಯವಾಣಿ ಪತ್ರಿಕೆಯ ಹಿರಿಯ ಪತ್ರಿಕಾ ಛಾಯಾಗ್ರಾಹಕ ಆಸ್ಟ್ರೋ ಮೋಹನ್ ಅವರು ತಮ್ಮ ಅಮೆರಿಕ ಪ್ರವಾಸದಲ್ಲಿ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರ ಕುರಿತು ಸೆರೆಹಿಡಿದ ಛಾಯಾಚಿತ್ರಗಳನ್ನು ಇಲ್ಲಿ ಪ್ರಸ್ತುತ ಪಡಸಲಾಗುತ್ತಿದೆ. […]
ಆಂಧ್ರದ ಲೇಪಾಕ್ಷಿ ಮಂದಿರದಲ್ಲಿ ಪ್ರಧಾನಿ ಮೋದಿಗೆ ಪುತ್ತಿಗೆ ಪರ್ಯಾಯದ ಆಮಂತ್ರಣ
ಹೈದರಾಬಾದ್: ಐತಿಹಾಸಿಕ ಉಡುಪಿ ಶ್ರೀಕೃಷ್ಣ ಮಠದ ಪುತ್ತಿಗೆ ಪರ್ಯಾಯ ಮಹೋತ್ಸವದ ಆಹ್ವಾನ ಪತ್ರಿಕೆಯನ್ನು ಆಂಧ್ರಪ್ರದೇಶದ ಲೇಪಾಕ್ಷಿ ಮಂದಿರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನೀಡಲಾಯಿತು. 2008-10ರಲ್ಲಿ ಗುಜರಾತ್‌ನ ಮುಖ್ಯಮಂತ್ರಿಯಾಗಿದ್ದಾಗ ಸ್ವಾಮೀಜಿಯವರ 3ನೇ ಪರ್ಯಾಯದ ಸಂದರ್ಭದಲ್ಲಿ ತಾವು ಉಡುಪಿಗೆ ಭೇಟಿ ನೀಡಿದ್ದನ್ನು ಪ್ರಧಾನಿ ಸ್ಮರಿಸಿಕೊಂಡರು ಮತ್ತು ಸ್ವಾಮೀಜಿಗಳಿಗೆ ತಮ್ಮ ನಮಸ್ಕಾರಗಳನ್ನು ತಿಳಿಸಿದರು. ಮಂಗಳವಾರದಂದು ಆಂಧ್ರಪ್ರದೇಶದ ಲೇಪಾಕ್ಷಿಯಲ್ಲಿರುವ ವೀರಭದ್ರ ದೇವಸ್ಥಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದ ಸಂದರ್ಭದಲ್ಲಿ ಮಠದ ಪರವಾಗಿ ಅವರಿಗೆ ಆಹ್ವಾನ ಪತ್ರಿಕೆಯನ್ನು ನೀಡಿ ಆಮಂತ್ರಿಸಲಾಯಿತು. ಪ್ರಧಾನಿ […]