ಇರಾನ್-ಪಾಕಿಸ್ತಾನ ಮುಖಾಮುಖಿ: ಇರಾನ್ ಮೇಲೆ ಪ್ರತಿದಾಳಿ ನಡೆಸಿದ ಪಾಕಿಸ್ತಾನ

ಇಸ್ಲಾಮಾಬಾದ್:‌ ತನ್ನ ಭಯೋತ್ಪಾದಕ ನೆಲೆಗಳ ಮೇಲೆ ವಾಯುದಾಳಿ ನಡೆಸಿದ ಇರಾನ್‌ ಮೇಲೆ ಪ್ರತಿದಾಳಿ ಮಾಡುವ ಮೂಲಕ ಪಾಕಿಸ್ತಾನವು ಸೇಡು ತೀರಿಸಿಕೊಂಡಿದೆ. ಪಾಕಿಸ್ತಾನದಲ್ಲಿರುವ ಜೈಶ್‌ ಅಲ್‌ ಅದ್ಲ್‌ ಉಗ್ರ ಸಂಘಟನೆಯ ಎರಡು ನೆಲೆಗಳ ಮೇಲೆ ಇರಾನ್‌ ನಡೆಸಿದ ಕ್ಷಿಪಣಿ ದಾಳಿಗೆ ಪ್ರತಿಯಾಗಿ ಪಾಕಿಸ್ತಾನವೂ ವಾಯುದಾಳಿ ಮೂಲಕ ಪ್ರತ್ಯುತ್ತರ ನೀಡಿದೆ. ಇರಾನ್‌ನಲ್ಲಿರುವ ಬಲೂಚಿಸ್ತಾನ ಪ್ರತ್ಯೇಕತಾವಾದಿಗಳ ನೆಲೆಗಳ ಮೇಲೆ ಪಾಕಿಸ್ತಾನವು ಗುರುವಾರ (ಜನವರಿ 18) ವಾಯುದಾಳಿ ನಡೆಸಿದೆ. “ಪಾಕಿಸ್ತಾನ ಕೂಡ ಇರಾನ್‌ ಮೇಲೆ ವಾಯುದಾಳಿ ನಡೆಸಿದೆ. ಪ್ರತ್ಯೇಕ ಬಲೂಚಿಸ್ತಾನಕ್ಕೆ ಬೇಡಿಕೆ ಇಟ್ಟಿರುವ […]

ಉಡುಪಿ ಪುತ್ತಿಗೆ ಪರ್ಯಾಯ ಮಹೋತ್ಸವ ಸಂಭ್ರಮ: ಭವ್ಯ ಮೆರವಣಿಗೆಯಲ್ಲಿ ಸಹಸ್ರಾರು ಮಂದಿ ಭಕ್ತರು ಭಾಗಿ.

ಉಡುಪಿ: ಪುತ್ತಿಗೆ ಮಠದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಚತುರ್ಥ ಪರ್ಯಾಯ ಮಹೋತ್ಸವದ ವೈಭವದ ಮೆರವಣಿಗೆಯನ್ನು ಲಕ್ಷಾಂತರ ಮಂದಿ ಭಕ್ತರು ಕಣ್ತುಂಬಿಕೊಂಡರು. ಕಾಪು ದಂಡಯಾತ್ರೆ ಮಧ್ಯರಾತ್ರಿ ಸ್ನಾನ ಮುಗಿಸಿದ ಯತಿಗಳು, ಪಟ್ಟದ ದೇವರಿಗೆ ಪೂಜೆ ಸಲ್ಲಿಸಿ ಜೋಡುಕಟ್ಟೆ ಆಗಮಿಸಿದರು. ನಗರದ ಜೋಡುಕಟ್ಟೆಯಿಂದ ನಸುಕಿನ ವೇಳೆ 2:30ರ ಸುಮಾರಿಗೆ ಮೆರವಣಿಗೆ ಆರಂಭಗೊಂಡಿತು. ಪುತ್ತಿಗೆ ಮಠದ ಪಟ್ಟದ ದೇವರು, ವಿದ್ವಾಂಸರು, ನಾಡಿನ ಗಣ್ಯರು ಹಾಗೂ ಸಹಸ್ರಾರು ಭಕ್ತಾದಿಗಳೊಂದಿಗೆ ಕೋರ್ಟ್ ರಸ್ತೆ, ಹಳೆ ಡಯಾನ ಸರ್ಕಲ್, ಐಡಿ ಯಲ್ ಸರ್ಕಲ್, ತೆಂಕಪೇಟೆ ಮಾರ್ಗದ […]

ಪರಿಸರಕ್ಕಾಗಿ ನಾವು – ದ. ಕ, ಉಡುಪಿ ಜಿಲ್ಲಾ ಘಟಕದ ಮೊದಲ ಸಭೆ

ಮಂಗಳೂರು/ಉಡುಪಿ: ಅತಿಯಾದ ಕೈಗಾರಿಕೀಕರಣ, ನಗರೀಕರಣ ಮತ್ತು ಬದಲಾದ ಜೀವನ ಶೈಲಿಯ ಪರಿಣಾಮ ಹವಾಗುಣ ವೈಪರೀತ್ಯದ ತುರ್ತು ಸಮಸ್ಯೆ ಎದುರಾಗಿದೆ. ಈಗ ನಾವು ಎಚ್ಚೆತ್ತುಕೊಂಡು ಪರಿಸರದ ಸಮಸ್ಯೆಗಳಿಗೆ ಪರಿಹಾರಗಳನ್ನು ಕಂಡುಕೊಳ್ಳದಿದ್ದರೆ ಜೀವ ಸಂಕುಲದ ಅಳಿವು ಇನ್ನು ಕೆಲವು ದಶಕಗಳಲ್ಲಿ ನಿಶ್ಚಿತ ಎಂದು ಪರಿಸರ ತಜ್ಞರು ಎಚ್ಚರಿಸಿದ್ದಾರೆ. ಈ ದಿಸೆಯಲ್ಲಿ ಪರಿಸರ ಪರ ಕೆಲಸ ಮಾಡಲು ರಾಜ್ಯಾದ್ಯಂತ ವಿವಿಧ ಜಿಲ್ಲೆಗಳ ಪರಿಸರಕಾರ್ಯಕರ್ತರನ್ನು ಒಗ್ಗೂಡಿಸಿ ರಾಜ್ಯ ಮಟ್ಟದ ಒಕ್ಕೂಟ ಕಟ್ಟಲು ‘ಪರಿಸರಕ್ಕಾಗಿ ನಾವು’ ಎನ್ನುವರಾಜ್ಯ ಮಟ್ಟದ ಬಳಗ ರಚನೆಯಾಗಿದೆ. ಜೊತೆಗೆ ಪ್ರತಿ […]

ಪೂರ್ವ ಸ್ವಾಮ್ಯದ ವಾಹನ ವಿತರಕರ ಸಂಘದ ವತಿಯಿಂದ ಪಾನೀಯದ ವ್ಯವಸ್ಥೆ

ಉಡುಪಿ: ಪರ್ಯಾಯ ಮಹೋತ್ಸವದ ಹಿನ್ನೆಲೆಯಲ್ಲಿ ಬುಧವಾರದಂದು ನಡೆದ ಪುತ್ತಿಗೆ ಶ್ರೀಗಳ ಭವ್ಯ ಮೆರವಣಿಗೆಯಲ್ಲಿ ಭಾಗವಹಿಸಿದ ಭಕ್ತರಿಗೆ ಪೂರ್ವ ಸ್ವಾಮ್ಯದ ವಾಹನ ವಿತರಕರ ಸಂಘದ ವತಿಯಿಂದ ಪಾನೀಯದ ವ್ಯವಸ್ಥೆ ಮಾಡಲಾಗಿತ್ತು. ಸಂಘದ ಅಧ್ಯಕ್ಷ ಮೊಹಮ್ಮದ್ ಅಶ್ರಫ್ ಮತ್ತಿತರರು ಉಪಸ್ಥಿತರಿದ್ದರು.

ಪುತ್ತಿಗೆ ಶ್ರೀಗಳಿಂದ ಭಾರತೀಯ ಸಂಸ್ಕೃತಿಯನ್ನು ವಿಶ್ವಕ್ಕೆ ಪರಿಚಯಿಸುವ ಕೈಂಕರ್ಯ: ಲಕ್ಷ್ಮಿ ಹೆಬ್ಬಾಳ್ಕರ್

ಉಡುಪಿ : ಧಾರ್ಮಿಕ ಹಾಗೂ ಸಾಂಸ್ಕೃತಿಕವಾಗಿ ಉಡುಪಿಯ ಶ್ರೀಮಂತಿಕೆ ಇಡೀ ವಿಶ್ವಕ್ಕೇ ಮಾದರಿ. ಪುತ್ತಿಗೆ ಶ್ರೀಗಳು ವಿದೇಶಗಳಲ್ಲಿ ಶಾಖಾಮಠಗಳನ್ನು ಸ್ಥಾಪಿಸಿ, ವಿದೇಶಿಯರಿಗೆ ಭಾರತೀಯ ಸಂಸ್ಕೃತಿ ಬಗ್ಗೆ ಅರಿವು ಮೂಡಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಆರ್ ಹೆಬ್ಬಾಳ್ಕರ್ ಅಭಿಪ್ರಾಯಪಟ್ಟರು. ಉಡುಪಿಯ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಗುರುವಾರ ನಡೆದ ಶ್ರೀ ಪುತ್ತಿಗೆ ಪರ್ಯಾಯೋತ್ಸವ ಉದ್ಘಾಟನಾ ಕಾರ್ಯಕ್ರಮದಲ್ಲಿ […]