ಅಯೋಧ್ಯೆ ಶ್ರೀರಾಮ ಮಂದಿರದಲ್ಲಿ ಪೇಜಾವರ ಶ್ರೀಗಳಿಂದ 48 ದಿನಗಳ ಮಂಡಲೋತ್ಸವ ಆರಂಭ
ಉಡುಪಿ: ಅಯೋಧ್ಯೆಯ ನೂತನ ಮಂದಿರದಲ್ಲಿ ಶ್ರೀರಾಮನ ವಿಧ್ಯುಕ್ತ ಪ್ರತಿಷ್ಠಾಪನೆಯ ನಂತರ ಪೇಜಾವರ ಶ್ರೀಗಳ ನೇತೃತ್ವದಲ್ಲಿ ಇಂದಿನಿಂದ 48 ದಿನಗಳ ಮಂಡಲೋತ್ಸವ ಆರಂಭಗೊಂಡಿದೆ. ಪೇಜಾವರ ಶ್ರೀಗಳು ಮಂಗಳವಾರವೂ ವಿವಿಧ ಮಂತ್ರಗಳಿಂದ ಪ್ರತಿಮೆಗೆ ತತ್ವನ್ಯಾಸಾದಿಗಳನ್ನು ನೆರವೇರಿಸಿ ಕಲಶಪೂಜೆ, ಚಾಮರಸೇವೆ, ಮಂಗಳಾರತಿಗಳನ್ನು ನೆರವೇರಿಸಿ ಪೂಜೆ ಸಲ್ಲಿಸಿದರು. ಇದಕ್ಕೂ ಮೊದಲು ಪಿಲೂರ್ಣಪ್ರಜ್ಞ ವಿದ್ಯಾಪೀಠದ ಪ್ರಾಚಾರ್ಯ ವಿದ್ವಾನ್ ಸತ್ಯನಾರಾಯಣಾಚಾರ್ಯ, ವಿಷ್ಣುಮೂರ್ತಿ ಆಚಾರ್ಯ, ಶಶಾಂಖ ಭಟ್ ಲಕ್ಷ್ಮೀನಾರಾಯಣ ಭಟ್ ಮೊದಲಸದವರ ನೇತೃತ್ವದಲ್ಲಿ ವಿವಿಧ ಹೋಮಹವನಾದಿಗಳು ಕಲಶಾರಾಧನೆ ಇತ್ಯಾದಿಗಳು ನೆರವೇರಿದವು.
ಕಾರ್ಕಳ ಜ್ಞಾನಸುಧಾದಲ್ಲಿ ಶ್ರೀರಾಮೋತ್ಸವ; ಕರಸೇವಕ ನಾರಾಯಣ ಮಣಿಯಾಣಿಯವರಿಗೆ ಗೌರವ
ಕಾರ್ಕಳ: ಪುಣ್ಯ ಭೂಮಿ ಅಯೋಧ್ಯೆಯಲ್ಲಿ ಬಾಲರಾಮ ಪ್ರಾಣ ಪ್ರತಿಷ್ಠೆಯ ಪ್ರಯುಕ್ತ ಜ್ಞಾನಭಾರತ್ – ಬಾಲಸಂಸ್ಕಾರ ಹಾಗೂ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಸಹಯೋಗದಲ್ಲಿ ವಿಜೃಂಭಣೆಯಿಂದ ಜ್ಞಾನಸುಧಾ ಆವರಣದಲ್ಲಿ ನಡೆಯಿತು. ಅಯೋಧ್ಯೆಯ ಕರಸೇವೆಯಲ್ಲಿ ಕಾರ್ಕಳವನ್ನು ಪ್ರತಿನಿಧಿಸಿದ್ದ ಶ್ರೀ ನಾರಾಯಣ ಮಣಿಯಾಣಿಯವರನ್ನು ಟ್ರಸ್ಟಿನ ವತಿಯಿಂದ, ಸಮಸ್ತ ಕರಸೇವಕರ ಪರವಾಗಿ ಗೌರವಿಸಲಾಯಿತು. ಇತ್ತೀಚೆಗೆ ತೆಂಗಿನ ಮರದಿಂದ ಬಿದ್ದು ನಡೆದಾಡುವ ಸಾಮಥ್ರ್ಯ ಕಳೆದುಕೊಂಡ ಶ್ರೀ ಉದಯ್ ಸಾಣೂರು, ನರಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವ ಜೋಡುಕಟ್ಟೆಯ ಶ್ರೀ ಸುಧೀರ್ ಆಚಾರ್ಯ ಹಾಗೂ ಕಿಡ್ನಿ ವೈಫಲ್ಯಕ್ಕೊಳಗಾದ ನಿಟ್ಟೆಯ […]
ಜ.24: ಖ್ಯಾತ ಅಂತರಾಷ್ಟ್ರೀಯ ಜಾದೂಗಾರ ಕುದ್ರೋಳಿ ಗಣೇಶ್ ಬಳಗದವರಿಂದ ವಿಸ್ಮಯ ಜಾದೂ ಪ್ರದರ್ಶನ
ಉಡುಪಿ: ಉಡುಪಿಯಲ್ಲಿ ನಡೆಯುತ್ತಿರುವ ಪುತ್ತಿಗೆ ಪರ್ಯಾಯ ಮಹೋತ್ಸವದ ಸಾಂಸ್ಕ್ರತಿಕ ಸಪ್ತೋತ್ಸವದ ಸಮಾರೋಪದಲ್ಲಿ ಇಂಡಿಯಾಸ್ ಗಾಟ್ ಟ್ಯಾಲೆಂಟ್ ಫೈನಲಿಸ್ಟ್, ಸಚಿವರನ್ನೇ ಮಾಯ ಮಾಡಿದ ಖ್ಯಾತಿಯ ಅಂತರಾಷ್ಟ್ರೀಯ ಜಾದೂಗಾರ ಕುದ್ರೋಳಿ ಗಣೇಶ್ ಹಾಗೂ ಬಳಗದವರಿಂದ ವಿಸ್ಮಯ ಜಾದೂ ಪ್ರದರ್ಶನಗೊಳ್ಳಲಿದೆ. ಜನವರಿ 24 ಬುಧವಾರದಂದು ರಾತ್ರಿ 7.30 ಕ್ಕೆ ಶ್ರೀ ಕ್ರಷ್ಣ ಮಠದ ರಾಜಾಂಗಣದಲ್ಲಿ ಜಾದೂ, ಜಾನಪದ, ರಂಗಭೂಮಿ ಹಾಗೂ ಸಂಗೀತಗಳ ಸಮ್ಮಿಲನದ ವಿಸ್ಮಯ ಜಾದೂ ವಿನೂತನ ಜಾದೂ ತಂತ್ರಗಳೊಂದಿಗೆ ಪ್ರೇಕ್ಷಕರನ್ನು ರಂಜಿಸಲಿದೆ. ಇಂಡಿಯಾಸ್ ಗಾಟ್ ಟ್ಯಾಲೆಂಟ್ ರಿಯಾಲಿಟಿ ಶೋ ಮೂಲಕ […]
ಐತಿಹಾಸಿಕ ಕೀಳಂಜೆ ದೇವಸ್ಥಾನ: ಮುಷ್ಟಿ ಕಾಣಿಕೆ ಸಮರ್ಪಣೆ ಸಂಪನ್ನ
ಉಡುಪಿ: ಪುರಾತನ ಪ್ರಸಿದ್ಧ 8 ನೇ ಶತಮಾನದ ಗಾಲವ ಋಷಿ ತಪಸ್ಸು ಮಾಡಿದ್ದ ಕೀಳಂಜೆ ಶ್ರೀ ಮಹಾವಿಷ್ಣು ಮಹಾಲಿಂಗೇಶ್ವರ ದೇವಸ್ಥಾನ ಹಾಗೂ ಹರಿಹರ ತೀರ್ಥದ ಸಮಗ್ರ ಜೀರ್ಣೋದ್ಧಾರ ಪ್ರಯುಕ್ತ ಪ್ರಾಯಶ್ಚಿತ್ತ ಹೋಮಾದಿಗಳು ಉಡುಪಿ ಪೇಜಾವರ ಮಠದ ಶ್ರೀ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀ ಪಾದಂಗಳವರ ಆಶೀರ್ವಾದದೊಂದಿಗೆ ಜ.22 ಸೋಮವಾರದಂದು ಬೆಳಿಗ್ಗೆ 8 ಗಂಟೆಗೆ ಸಾಮೂಹಿಕ ಪ್ರಾರ್ಥನೆ, ಗಣಹೋಮ, ಭದ್ರದೀಪ ಸಮರ್ಪಣೆ, ಮುಷ್ಟಿ ಕಾಣಿಕೆ ಸಮರ್ಪಣೆ ಹಾಗೂ ಇತರ ಧಾರ್ಮಿಕ ವಿಧಿಗಳೊಂದಿಗೆ ಪ್ರಾರಂಭಗೊಂಡಿತು. ಅಂದು ಜೈನ ಮುನಿ ಗಾಲವ […]
ಉಡುಪಿ: ವೃದ್ಧರೊರ್ವರ ಶವ ಕೆರೆಯಲ್ಲಿ ಪತ್ತೆ..!
ಉಡುಪಿ: ಡಯಾನ ಚಿತ್ರಮಂದಿರ ಹತ್ತಿರದ ಮಜಲು ಕೆರೆಯಲ್ಲಿ ಇಂದು ವೃದ್ಧರೊರ್ವರ ಶವ ಪತ್ತೆಯಾಗಿದೆ. ಮೃತರನ್ನು ಕಸ್ತೂರ್ಬಾ ನಗರದ ನಿವಾಸಿ ಕೆ.ಎಸ್. ಸುಂದರ ರಾವ್ (83) ಎಂದು ಗುರುತಿಸಲಾಗಿದೆ. ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಸುಂದರ ಅವರು ಕೆರೆ ಬಳಿ ನಡೆದುಕೊಂಡು ಹೋಗುವಾಗ ಆಯತಪ್ಪಿ ಕೆರೆಗೆ ಬಿದ್ದಿರಬಹುದೆಂಬ ಶಂಕಿಸಲಾಗಿದೆ. ನಗರ ಪೋಲಿಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಮರಿಗೌಡ ಸ್ಥಳದಲ್ಲಿದ್ದು ಕಾನೂನು ಪ್ರಕ್ರಿಯೆ ನಡೆಸಿದರು. ಸಮಾಜಸೇವಕ ನಿತ್ಯಾನಂದ ಒಳಕಾಡುವರು ವೈದ್ಯಕೀಯ ಪರೀಕ್ಷಾ ಕೇಂದ್ರಕ್ಕೆ ಶವ ಸಾಗಿಸಲು ನೆರವಾದರು.