ಸಮಾಜದಲ್ಲಿ ಮಹಿಳೆಯರ ಸಬಲೀಕರಣಕ್ಕೆ ಪ್ರತಿಯೊಬ್ಬರೂ ಒತ್ತು ನೀಡಬೇಕು: ಶಾಸಕ ಯಶ್ ಪಾಲ್ ಸುವರ್ಣ

ಉಡುಪಿ: ಸಮಾಜದಲ್ಲಿ ಹೆಣ್ಣು ಮಕ್ಕಳು ಜನಿಸಿದಾಗ ಸಂಭ್ರಮ ಪಡುವುದರ ಜೊತೆಗೆ ಅವಳಿಗೆ ಉನ್ನತ ಶಿಕ್ಷಣ ನೀಡಬೇಕೆಂಬುದು ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆಯ ಮುಖ್ಯ ಗುರಿಯಾಗಿದ್ದು, ಇದನ್ನು ಸಕಾರಾತ್ಮಕಗೊಳಿಸಲು ಪ್ರತಿಯೊಬ್ಬರೂ ಕೈಜೋಡಿಸಬೇಕೆಂದು ಎಂದು ಶಾಸಕ ಯಶ್ ಪಾಲ್ ಎ ಸುವರ್ಣ ಹೇಳಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿ ಜಿಲ್ಲೆ ಇವರಸಹಯೋಗದೊಂದಿಗೆ […]

ಆಚಾರ್ಯಾಸ್ ಏಸ್: ಸಿಯಿಟಿ ನೀಟ್ ಕ್ರಾಶ್ ಕೋರ್ಸ್ ತರಬೇತಿ

ಉಡುಪಿ: ಒಂಬತ್ತು, ಹತ್ತು, ಪಿಯುಸಿ, ಸಿಯಿಟಿ, ಜೆಯಿಯಿ, ನೀಟ್ ಹಾಗೂ ಬ್ಯಾಂಕಿಂಗ್ ಪ್ರವೇಶ ಪರೀಕ್ಷೆಗಳಿಗೆ ಉತ್ಕೃಷ್ಟ ಗುಣಮಟ್ಟದ ತರಬೇತಿ ನೀಡಿ ಗರಿಷ್ಠ ಫಲಿತಾಂಶ ಪಡೆಯುತ್ತಿರುವ ಉಡುಪಿಯ ಪ್ರಸಿದ್ಧ ತರಬೇತಿ ಸಂಸ್ಥೆ ಆಚಾರ್ಯಾಸ್ ಏಸ್ ವತಿಯಿಂದ ಸಿಯಿಟಿ ಹಾಗೂ ನೀಟ್ ಪರೀಕ್ಷೆಗಳಿಗೆ 25 ದಿನಗಳ ನಿರಂತರ ಕ್ರಾಶ್ ಕೋರ್ಸ್ ತರಬೇತಿಯು ಇದೇ ಬರುವ ಮಾರ್ಚ ತಿಂಗಳಲ್ಲಿ ಆರಂಭವಾಗಲಿದೆ. ಏಪ್ರಿಲ್ 18,19,20 ರಂದು ಕರ್ನಾಟಕ ಸಿಯಿಟಿ ಪರೀಕ್ಷೆಯು ಜರಗಲಿದೆ. ಹಾಗೆಯೇ ದ್ವಿತೀಯ ಪಿಯುಸಿಯ ವಾರ್ಷಿಕ ಪರೀಕ್ಷೆಯು ಮಾರ್ಚ 23 ರಂದು […]

ರಾಮಧ್ವಜ ಹಾಕದ ಹಿನ್ನೆಲೆ ಬನ್ನಂಜೆ ನಾರಾಯಣಗುರು ಮಂದಿರದ ವಿರುದ್ದ ನಿಂದನೆ: ದೂರು ದಾಖಲು

ಉಡುಪಿ: ಅಯೋಧ್ಯೆಯಲ್ಲಿ ರಾಮಮಂದಿರದ ಉದ್ಘಾಟನಾ ಸಮಾರಂಭದ ದಿನದಂದು ಬನ್ನಂಜೆ ನಾರಾಯಣಗುರು ಮಂದಿರದಲ್ಲಿ ರಾಮಧ್ವಜ ಆಳವಡಿಸದ ಹಿನ್ನಲೆ ಮಂದಿರದ ಬಗ್ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ವಿಡಿಯೋ ಮಾಡಿದ ಅನಾಮಿಕ ವ್ಯಕ್ತಿ ವಿರುದ್ಧ ಮಂದಿರದ ಆಡಳಿತ ಮಂಡಳಿಯು ದೂರು ನೀಡಿದೆ. ಅಯೋಧ್ಯೆಯಲ್ಲಿ ರಾಮನ ಪ್ರಾಣ ಪ್ರತಿಷ್ಠೆಯ ದಿನ ಬನ್ನಂಜೆ ನಾರಾಯಣಗುರು ಮಂದಿರದಲ್ಲಿ ಧ್ವಜ ಹಾಕಿಲ್ಲಎಂದು ಆರೋಪಿಸಿ ಉಡುಪಿ ಬಿಲ್ಲವರ ಸೇವಾ ಸಂಘದ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿ ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೊ ವೈರಲ್ ಮಾಡಿರುವ ಕಿಡಿಗೇಡಿ ವಿರುದ್ಧ ಸೂಕ್ತ ಕಾನೂನು […]

ಪ.ಬಂಗಾಳ, ಪಂಜಾಬ್ ನಲ್ಲಿ “ಕೈ” ಕಿರಿಕಿರಿ: ಏಕಾಂಗಿ ಸ್ಪರ್ಧೆಗೆ ಮಮತಾ ಬ್ಯಾನರ್ಜಿ, ಭಗವಂತ್ ಮಾನ್ ಒಲವು

ಕೋಲ್ಕತ್ತಾ: ತೃಣಮೂಲ ಕಾಂಗ್ರೆಸ್ ಪ. ಬಂಗಾಳದ 42 ಲೋಕಸಭಾ ಸ್ಥಾನಗಳಿಗೆ ತನ್ನ ಸ್ವಂತ ಬಲದ ಮೇಲೆ ಚುನಾವಣೆಯನ್ನು ಎದುರಿಸಲಿದೆ ಮತ್ತು ಫಲಿತಾಂಶ ಪ್ರಕಟವಾದ ನಂತರವೇ ಕಾಂಗ್ರೆಸ್ ಜೊತೆ ಮೈತ್ರಿಯನ್ನು ಪರಿಗಣಿಸಲಿದೆ ಎಂದು ಉಗ್ರ ಮಮತಾ ಬ್ಯಾನರ್ಜಿ ಬುಧವಾರ ಘೋಷಿಸಿದ್ದಾರೆ. “ನಾನು ಕಾಂಗ್ರೆಸ್ ಜೊತೆ ಯಾವುದೇ ಚರ್ಚೆ ನಡೆಸಿಲ್ಲ. ಬಂಗಾಳದಲ್ಲಿ ನಾವು ಏಕಾಂಗಿಯಾಗಿ ಹೋರಾಡುತ್ತೇವೆ ಎಂದು ನಾನು ಯಾವಾಗಲೂ ಹೇಳುತ್ತೇನೆ. ನಾನು ಅವರಿಗೆ (ಕಾಂಗ್ರೆಸ್‌ಗೆ) ಹಲವು ಪ್ರಸ್ತಾವನೆಗಳನ್ನು ನೀಡಿದ್ದೆ. ಆದರೆ ಅವರು ತಿರಸ್ಕರಿಸಿದರು. (ಉಳಿದ) ದೇಶದಲ್ಲಿ ಏನು ಮಾಡಲಾಗುವುದು […]

ನಾಲ್ಕು ಮುದ್ದು ಮರಿಗಳಿಗೆ ಜನ್ಮವಿತ್ತ ನಮೀಬಿಯಾ ಚಿರತೆ ಜ್ವಾಲಾ; ಮೂರು ಮರಿಗಳ ತಾಯಿಯಾದ ಆಶಾ

ಭೋಪಾಲ್: ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ನಮೀಬಿಯಾದ ಚಿರತೆ ‘ಜ್ವಾಲಾ’ ನಾಲ್ಕು ಮರಿಗಳಿಗೆ ಜನ್ಮ ನೀಡಿದೆ ಎಂದು ಕೇಂದ್ರ ಪರಿಸರ ಸಚಿವ ಭೂಪೇಂದರ್ ಯಾದವ್ ಜನವರಿ 24 ರಂದು ಸ್ಪಷ್ಟ ಪಡಿಸಿದ್ದಾರೆ. ಮಂಗಳವಾರದಂದು ಚಿರತೆಯು ಮೂರು ಮರಿಗಳಿಗೆ ಜನ್ಮ ನೀಡಿದೆ ಎಂದು ಸಚಿವರು ಹೇಳಿದ್ದರು. ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿರುವ ಮುಂಚೂಣಿ ವನ್ಯಜೀವಿ ಯೋಧರು ‘ಜ್ವಾಲಾ’ ಚಿರತೆಯ ಅತಿ ಹತ್ತಿರ ಹೋಗಿ ನೋಡಿದಾಗ ನಾಲ್ಕು ಮರಿಗಳಿರುವುದು ಕಂಡುಬಂದಿದೆ ಎಂದು ಅವರು ಎಕ್ಸ್ ನಲ್ಲಿ ತಿಳಿಸಿದ್ದಾರೆ. ಅರಣ್ಯ ಅಧಿಕಾರಿಗಳ ಪ್ರಕಾರ, […]