ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಲ್ಲಿ ಯುವ ಪರಿವರ್ತಕರ ಹುದ್ದೆಗಾಗಿ ಅರ್ಜಿ ಆಹ್ವಾನ

ಉಡುಪಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ಹಾಗೂ ಜನ ಆರೋಗ್ಯ ಕೇಂದ್ರ ಎಪಿಡೀಮೀಯಾಲಜಿ ವಿಭಾಗ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ ಬೆಂಗಳೂರು ಇದರ ಸಹಯೋಗದೊಂದಿಗೆ ಆರಂಭಿಸಲಾಗಿರುವ ಯುವ ಸ್ಪಂದನ ಕೇಂದ್ರದಲ್ಲಿ ಯುವ ಪರಿವರ್ತಕರ ಹುದ್ದೆಗೆ 21 ರಿಂದ 35 ವರ್ಷದೊಳಗಿನ ಯುವಕ- ಯುವತಿಯರಿಗೆ ಅರ್ಜಿ ಆಹ್ವಾನಿಸಲಾಗಿದೆ. ಪದವಿ ತೇರ್ಗಡೆ ಹೊಂದಿದ ಆಸಕ್ತ ಯುವಕ ಹಾಗೂ ಯುವತಿಯರು ಫೆಬ್ರವರಿ 5 ರ ಸಂಜೆ 5 ಗಂಟೆಯ ಒಳಗಾಗಿ ಯುವ ಸಬಲೀಕರಣ ಮತ್ತು […]

ಫೆ. 1ರಿಂದ ಕುಮಾರಪರ್ವತ ಚಾರಣಕ್ಕೆ ನಿಷೇಧ: ನೀರಿನ ಕೊರತೆ ಹಿನ್ನೆಲೆ ಅರಣ್ಯ ಇಲಾಖೆ ನಿರ್ಧಾರ

ಸುಬ್ರಹ್ಮಣ್ಯ: ಚಾರಣಿಗರ ಅತಿ ನೆಚ್ಚಿನ ಪ್ರವಾಸಿ ತಾಣಗಳಲ್ಲಿ ಒಂದಾದ ಕುಮಾರಪರ್ವತ ಚಾರಣವನ್ನು ಫೆ. 1ರಿಂದ ಅಕ್ಟೋಬರ್‌ ತನಕ ಅಥವಾ ಮುಂದಿನ ಆದೇಶದ ತನಕ ನಿಷೇಧಿಸಿ ಅರಣ್ಯ ಇಲಾಖೆ ಆದೇಶ ಹೊರಡಿಸಿದೆ. ಜಿಲ್ಲೆಯಲ್ಲಿ ಬಿಸಿಲಿನ ಬೇಗೆ ಏರುಗತಿಯಲ್ಲಿದ್ದು ಈ ಬಾರಿ ಮಳೆ ಕೊರತೆಯಿಂದ ಪರ್ವತದಲ್ಲಿ ನೀರಿನ ಸಮಸ್ಯೆ ಎದುರಾಗಿರ್ವ ಹಿನ್ನೆಲೆಯಲ್ಲಿ ಚಾರಣಿಗರ ಹಿತದೃಷ್ಟಿಯಿಂದ ಚಾರಣ ನಿಷೇಧಿಸಲಾಗಿದೆ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ಮಾಧ್ಯಮಕ್ಕೆ ತಿಳಿಸಿದ್ದಾರೆ. ಈ ವರ್ಷದ ಕುಮಾರಪರ್ವತ ಚಾರಣದ ಅವಧಿ ಮುಗಿದಿದೆ. ಪರ್ವತದ ಹುಲ್ಲುಗಾವಲು ಸಂಪೂರ್ಣ ಒಣಗಿರುವುದರಿಂದ […]

ಫೆ.11 ರಂದು ಅತ್ತೂರು ಪರ್ಪಲೆಗಿರಿ ಕಲ್ಕುಡ ಸ-ಪರಿವಾರ ದೈವಗಳ ದೈವಸ್ಥಾನದ ಶಿಲಾನ್ಯಾಸ ಕಾರ್ಯಕ್ರಮ

ಕಾರ್ಕಳ: ಅತ್ತೂರು ಕೃಷ್ಣಗಿರಿ ಕಲ್ಕುಡ ದೈವಸ್ಥಾನ ಟ್ರಸ್ಟ್ (ರಿ) ಕಾರ್ಕಳ ಶ್ರೀ ಕ್ಷೇತ್ರ ಅತ್ತೂರು ಪರ್ಪಲೆಗಿರಿ (Atturu Parpalegiri) ಪುನರುತ್ಥಾನ ಸಮಿತಿಯ ನೇತೃತ್ವದಲ್ಲಿ ಜಗದ್ಗುರು ಅನಂತ ಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತಿ ಮಹಾಸ್ವಾಮೀಜಿಯವರ ಉಪಸ್ಥಿತಿಯಲ್ಲಿ ಕಲ್ಕುಡ ಸ-ಪರಿವಾರ ದೈವಗಳ ದೈವಸ್ಥಾನದ ಶಿಲಾನ್ಯಾಸ ಕಾರ್ಯಕ್ರಮ ಫೆ.11 ರಂದು ಬೆಳಿಗ್ಗೆ 9.30ಕ್ಕೆ ನಡೆಯಲಿದ್ದು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಪ್ರಕಟಣೆ ತಿಳಿಸಿದೆ.

ಬೆಳ್ತಂಗಡಿ ಪಟಾಕಿ ಕಾರ್ಖಾನೆ ಸ್ಫೋಟದಲ್ಲಿ ಮೂವರ ಸಾವು ಪ್ರಕರಣ: ಮಾಲೀಕನ ಬಂಧನ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಕುಕ್ಕೇಡಿ ಗ್ರಾಮದಲ್ಲಿರುವ ಸೈಯದ್ ಬಶೀರ್ ಎಂಬವರ ಪಟಾಕಿ ಕಾರ್ಖಾನೆಯಲ್ಲಿ ಸ್ಪೋಟ ಸಂಭವಿಸಿ ಮೂವರು ಕಾರ್ಮಿಕರು ಸಾವಿಗೀಡಾಗಿದ್ದು, ಸ್ಫೋಟದ ನಂತರ ಪರಾರಿಯಾಗಿದ್ದ ಮಾಲೀಕ ಸೈಯದ್ ಬಶೀರ್ ಅವರನ್ನು ಸುಳ್ಯದಲ್ಲಿ ಬಂಧಿಸಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸೈಯದ್ ಬಶೀರ್ ಎಂಬುವವರಿಗೆ ತಮ್ಮ ಅರ್ಧ ಎಕರೆ ಜಮೀನಿನಲ್ಲಿ ಪಟಾಕಿ ತಯಾರಿಸಲು ಪರವಾನಗಿ ನೀಡಲಾಗಿತ್ತು. 2011-2012ರಲ್ಲಿ ಪಡೆದ ಅವರ ಪರವಾನಗಿಯನ್ನು 2019 ರಲ್ಲಿ ನವೀಕರಿಸಲಾಗಿದ್ದು, ಮಾರ್ಚ್ 2024 ರವರೆಗೆ ಮಾನ್ಯವಾಗಿರುತ್ತದೆ ಎಂದು ದಕ್ಷಿಣ ಕನ್ನಡ ಪೊಲೀಸ್ […]