ಉಡುಪಿ ರಾಜಾಂಗಣದಲ್ಲಿ ಅಂತರಾಷ್ಟ್ರೀಯ ಜಾದೂಗಾರ ಕುದ್ರೋಳಿ ಗಣೇಶ್ ರವರ ಅದ್ಬುತ ಮಾಯಾ ಲೋಕ

ಉಡುಪಿ: ಉಡುಪಿ ಪುತ್ತಿಗೆ ಪರ್ಯಾಯ ಮಹೋತ್ಸವದ ಸಾಂಸ್ಕ್ರತಿಕ ಸಪ್ತೋತ್ಸವದ ಸಮಾರೋಪದದಲ್ಲಿ ಇಂಡಿಯಾಸ್ ಗಾಟ್ ಟ್ಯಾಲೆಂಟ್ ಫೈನಲಿಸ್ಟ್, ಸಚಿವರನ್ನೇ ಮಾಯ ಮಾಡಿದ ಖ್ಯಾತಿಯ ಅಂತರಾಷ್ಟ್ರೀಯ ಜಾದೂಗಾರ ಕುದ್ರೋಳಿ ಗಣೇಶ್ ಹಾಗೂ ಬಳಗದವರಿಂದ ವಿಸ್ಮಯ ಜಾದೂ ಪ್ರದರ್ಶನಗೊಂಡಿತು. ಶ್ರೀ ಕ್ರಷ್ಣ ಮಠದ ರಾಜಾಂಗಣದಲ್ಲಿ ಜಾದೂ, ಜಾನಪದ, ರಂಗಭೂಮಿ ಹಾಗೂ ಸಂಗೀತಗಳ ಸಮ್ಮಿಲನದ ವಿಸ್ಮಯ ಜಾದೂ ವಿನೂತನ ಜಾದೂ ತಂತ್ರಗಳೊಂದಿಗೆ ಪ್ರೇಕ್ಷಕರನ್ನು ಮಂತ್ರ ಮುಗ್ದರನ್ನಾಗಿಸಿದ ಕುದ್ರೋಳಿಯವರು ನಿರಂತರ ಮೂರು ಗಂಟೆ ರಾಜಾಂಗಣದಲ್ಲಿ ಮಾಯಾಲೋಕವನ್ನೇ ನಿರ್ಮಿಸಿದ್ದರು. 2000ಕ್ಕೂ ಮಿಕ್ಕಿ ಸೇರಿದ್ದ ಪೇಕ್ಷಕರು ಗಣೇಶ್ […]

ಕಾಪು: ವ್ಯಕ್ತಿ ನಾಪತ್ತೆ

ಉಡುಪಿ: ಕಾಪು ತಾಲೂಕು ಮೂಡಬೆಟ್ಟು ಶಂಕರಪುರ ನಿವಾಸಿ ಫ್ರಾನ್ಸಿಸ್ ರವಿ ಡಿಸೋಜಾ (55) ಎಂಬ ವ್ಯಕ್ತಿಯು ಕೆಲಸದ ನಿಮಿತ್ತ ಕುವೈತ್ ದೇಶದಲ್ಲಿ ವಾಸವಿದ್ದು, ಒಂದು ತಿಂಗಳ ರಜೆ ಮಂಜೂರಾದ ಹಿನ್ನೆಲೆ, ಊರಿಗೆ ತೆರಳುವುದಾಗಿ ತಿಳಿಸಿದ್ದು, ಜ. 9 ರಂದು ಕುವೈತ್‌ನಿಂದ ಮಸ್ಕತ್‌ಗೆ ಹೋಗುವ ವಿಮಾನದಲ್ಲಿ ಹೊರಟಿರುತ್ತಾರೆ. ಜ. 10 ರಂದು ಪತ್ನಿಗೆ ಕರೆ ಮಾಡಿ,ಮಸ್ಕತ್‌ನಿಂದ ದುಬೈಗೆ ಟಿಕೆಟ್ ಮಾಡಿಸಿದ್ದ ವಿಮಾನ ತಪ್ಪಿ ಹೋಗಿದ್ದು, ಬೇರೆ ಟಿಕೇಟ್ ಮಾಡಿಸುವಂತೆ ತಿಳಿಸಿರುತ್ತಾರೆ. ಅದರಂತೆ ಪತ್ನಿಯು ಟಿಕೆಟ್ ಬುಕ್ ಮಾಡಿಸಿದ್ದು, ಫ್ರಾನ್ಸಿಸ್ […]

ಉಡುಪಿ: ವ್ಯಕ್ತಿ ನಾಪತ್ತೆ

ಉಡುಪಿ: ನಗರದ ಕೊಡವೂರು ಕಲ್ಮಾಡಿ ಗ್ರಾಮದ ನಿವಾಸಿ ರವಿಕುಮಾರ್ (44) ಎಂಬ ವ್ಯಕ್ತಿಯು ಜನವರಿ 20 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 5 ಇಂಚು ಎತ್ತರ, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಮಲ್ಪೆ ಪೊಲೀಸ್ ಠಾಣೆ ದೂ.ಸಂಖ್ಯೆ: 0820-2537999, ಮಲ್ಪೆ ಪಿಎಸ್‌ಐ ಮೊ.ಸಂ: 9480805447 ಹಾಗೂ ಉಡುಪಿ ವೃತ್ತ ನಿರೀಕ್ಷಕರು ಮೊ.ನಂ: 9480805430 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಮಲ್ಪೆ […]

ಕಾರ್ಕಳ: ನೀರಿನ ಟ್ಯಾಂಕ್ ಕುಸಿದುಬಿದ್ದು ಬೆಳ್ಮಣ್ ಗ್ರಾಪಂ ಮಾಜಿ ಅಧ್ಯಕ್ಷೆ ಮೃತ್ಯು

ಉಡುಪಿ: ನೀರಿನ ಟ್ಯಾಂಕ್ ಕುಸಿದುಬಿದ್ದು ಬೆಳ್ಮಣ್ ಗ್ರಾಪಂ ಮಾಜಿ ಅಧ್ಯಕ್ಷೆ ಶ್ರೀಲತಾ (50) ಸ್ಥಳದಲ್ಲೇ ಮೃತಪಟ್ಟಿದ್ದು, ಅವರ ಮಗಳು ಪೂಜಾ ಎಂಬವರು ಗಂಭೀರವಾಗಿ ಗಾಯಗೊಂಡ ಕಾರ್ಕಳ ತಾಲೂಕಿನ ನಂದಳಿಕೆ ಗ್ರಾಮದ ಶ್ರೀಮಹಮ್ಮಾಯಿ ದೇವಸ್ಥಾನದಲ್ಲಿ ಜ.30ರಂದು ರಾತ್ರಿ 10:30ಕ್ಕೆ ನಡೆದಿದೆ. ನಂದಳಿಕೆ ಗ್ರಾಮದ ಶ್ರೀಮಹಮ್ಮಾಯಿ ದೇವಸ್ಥಾನದಲ್ಲಿ ನಡೆಯುವ ವರ್ಷಾವಧಿ ಮಾರಿಪೂಜೆಗೆ ಶ್ರೀಲತಾ ಹಾಗೂ ಅವರ ಮಗಳು ಪೂಜಾ ಹೋಗಿದ್ದರು. ರಾತ್ರಿ ದೇವಸ್ಥಾನದಲ್ಲಿ ಊಟ ಮಾಡಿ, ಊಟ ಮಾಡಿದ ಪ್ಲೇಟನ್ನು ದೇವಸ್ಥಾನದ ಹಿಂಭಾಗದ ನೀರಿನ ಟ್ಯಾಂಕ್‌ನ ಬಳಿ ಇಡಲು ಹೋದಾಗ […]

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ

ಬೆಳ್ತಂಗಡಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಬುಧವಾರ ಬೆಳಗ್ಗೆ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥ ಸ್ವಾಮಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ದ.ಕ.ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಅವರ ಪದಗ್ರಹಣ ಹಿನ್ನೆಲೆಯಲ್ಲಿ ಮಂಗಳೂರಿಗೆ ಆಗಮಿಸಿ ಅಡ್ಯಾರ್ ಗಾರ್ಡನ್ ನಲ್ಲಿ ನಡೆದ ಸಮಾರಂಭದಲ್ಲಿ ಪಾಲ್ಗೊಂಡು ನಿನ್ನೆ ರಾತ್ರಿ ಧರ್ಮಸ್ಥಳದಲ್ಲಿ ತಂಗಿದ್ದ ಅವರು ಇಂದು ಮುಂಜಾನೆ ದೇವಸ್ಥಾನಕ್ಕೆ ಭೇಟಿ ನೀಡಿದರು. ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಮೊದಲ ಬಾರಿಗೆ ಬೆಳ್ತಂಗಡಿ ಕ್ಷೇತ್ರಕ್ಕೆ ಆಗಮಿಸಿದ ಅವರಿಗೆ ಶಾಸಕ ಹರೀಶ್ […]